HomeUncategorizedಸಂಸತ್ ಅಧಿವೇಶನದ ಪ್ರಶ್ನೋತ್ತರ ಅವಧಿ ರದ್ದು ಖಂಡಿಸಿ ಪತ್ರ ಬರೆದ 800 ತಜ್ಞರು

ಸಂಸತ್ ಅಧಿವೇಶನದ ಪ್ರಶ್ನೋತ್ತರ ಅವಧಿ ರದ್ದು ಖಂಡಿಸಿ ಪತ್ರ ಬರೆದ 800 ತಜ್ಞರು

ಸಾಂಕ್ರಾಮಿಕ ರೋಗದ ಮಧ್ಯೆಯು ಹಲವಾರು ರಾಜ್ಯಗಳು ತಮ್ಮ ಅಧಿವೇಶನವನ್ನು ನಡೆಸುತ್ತಿವೆ. ಆದರೆ ಅವುಗಳಲ್ಲಿ ಯಾವುದೇ ರಾಜ್ಯಗಳು ಪ್ರಶ್ನೋತ್ತರ ಸಮಯವನ್ನು ರದ್ದುಗೊಳಿಸಿಲ್ಲ

- Advertisement -
- Advertisement -

ಸಂಸತ್ತಿನ ಪ್ರಶ್ನೋತ್ತರ ಅವಧಿ ರದ್ದುಗೊಳಿಸಿರುವುದನ್ನು ಮತ್ತು ಶೂನ್ಯ ವೇಳೆಯ ಅವಧಿಯನ್ನು ಕಡಿತಗೊಳಿಸಿರುವುದನ್ನು ವಿರೋಧಿಸಿ ಮತ್ತು ಅವುಗಳನ್ನು ಪೂರ್ಣಪ್ರಮಾಣದಲ್ಲಿ ನಡೆಸುವಂತೆ ಕೋರಿ, ದೇಶದಾದ್ಯಂತ 800 ಕ್ಕೂ ಹೆಚ್ಚು ಶಿಕ್ಷಣ ತಜ್ಞರು, ಸಾಮಾಜಿಕ ಕಾರ್ಯಕರ್ತರು, ರಾಜಕಾರಣಿಗಳು ಹಾಗೂ ವಿದ್ಯಾರ್ಥಿಗಳು ಸೇರಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಮತ್ತು ರಾಜ್ಯಸಭಾ ಅಧ್ಯಕ್ಷ ಎಂ.ವೆಂಕಯ್ಯ ನಾಯ್ಡು ಅವರಿಗೆ ಪತ್ರ ಬರೆದಿದ್ದಾರೆ.

ಜನರು ತಮ್ಮ ಪ್ರತಿನಿಧಿಗಳ ಮೂಲಕ ಸರ್ಕಾರವನ್ನು ಪ್ರಶ್ನಿಸಲು, ಸಂಸತ್ತಿನ ಈ ಪ್ರಶ್ನೋತ್ತರ ಅವಧಿಯನ್ನು ಬಿಟ್ಟರೆ ಬೇರೆ ಯಾವುದೇ ಪ್ರತ್ಯೇಕ ವೇದಿಕೆ ಇಲ್ಲ ಎಂದು ಓಂ ಬಿರ್ಲಾ ಮತ್ತು ವೆಂಕಯ್ಯ ನಾಯ್ಡು ಅವರಿಗೆ ಬರೆದ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಅಸಾಧಾರಣ ಸಂದರ್ಭದಲ್ಲಿ ಮಾತ್ರ ಪ್ರಶ್ನೋತ್ತರ ಸಮಯವನ್ನು ರದ್ದುಗೊಳಿಸಲು ಸಾಧ್ಯ. ಅದಾಗ್ಯೂ ಎರಡೂ ಸದನಗಳು ಸರ್ವಾನುಮತದಿಂದ ಒಪ್ಪಿಕೊಂಡಾಗ ಮಾತ್ರ ಇದು ಸಾಧ್ಯ ಎಂದು ಪತ್ರದಲ್ಲಿ ಹೇಳಲಾಗಿದೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.

ಮಾಜಿ ಅಧಿಕಾರಿ ಜವಾಹರ್ ಸಿರ್ಕಾರ್, ಇತಿಹಾಸಕಾರ ಮೃದುಲಾ ಮುಖರ್ಜಿ, ಶಿಕ್ಷಣ ತಜ್ಞರಾದ ಜೋಯಾ ಹಸನ್ ಮತ್ತು ಜಯತಿ ಘೋಷ್, ಸಿಪಿಐನಿಂದ ಅನ್ನಿ ರಾಜಾ, ಸಿಪಿಐ (ಎಂ)ನ ಹನ್ನನ್ ಮೊಲ್ಲಾ ಮತ್ತು ಆರ್‌ಟಿಐ ಕಾರ್ಯಕರ್ತ ವೆಂಕಟೇಶ್ ನಾಯಕ್ ಸೇರಿದಂತೆ ಇತರರು ಈ ಪತ್ರಕ್ಕೆ ಸಹಿ ಮಾಡಿದ್ದಾರೆ.

ಇದನ್ನೂ ಓದಿ: ನಮ್ಮ ಪ್ರಜಾಪ್ರಭುತ್ವ ಪಾಕಿಸ್ತಾನಕ್ಕಿಂತ ದುರ್ಬಲವಾಗಬಾರದು: ಒಂದು ಆಶಯ

“ಪ್ರಶ್ನೋತ್ತರ ಅವಧಿಯನ್ನು ರದ್ದುಗೊಳಿಸಿ, ಈ ಅಧಿಕಾರವನ್ನು ಚಲಾಯಿಸಲಾಗಿದ್ದ ಅಪರೂಪದ ಹಿಂದಿನ ನಿದರ್ಶನಗಳು ಇವೆ. ಆದರೆ ಆಗ ಅಸಾಧಾರಣ ಸನ್ನಿವೇಶಗಳಲ್ಲಿ ಮಾತ್ರ ರದ್ದುಗೊಳಿಸಲಾಗಿತ್ತು. ಚೀನೀಯರ ಆಕ್ರಮಣ (1962), ತುರ್ತು ಪರಿಸ್ಥಿತಿ (1975 ಮತ್ತು 1976) ಮತ್ತು ವಿಶ್ವಾಸ ಮತ ಚಲಾಯಿಸುವ ಉದ್ದೇಶದಿಂದ ವಿಶೇಷ ಅಧಿವೇಶನಗಳನ್ನು ಕರೆದಾಗ(ನವೆಂಬರ್ 1990 ಮತ್ತು ಜುಲೈ 2008) ಇದು ರದ್ದುಗೊಂಡಿತ್ತು” ಎಂದು ಅವರು ಪತ್ರದಲ್ಲಿ ಹೇಳಿದ್ದಾರೆ.

ಆದರೆ ಪ್ರಸ್ತುತ ಪರಿಸ್ಥಿತಿ ಚೆನ್ನಾಗಿಯೇ ಇದ್ದರೂ ಪ್ರಜಾಪ್ರಭುತ್ವವನ್ನು ಮುನ್ನಡೆಸಲು ಸಹಾಯ ಮಾಡುವ ಪ್ರಶ್ನೆಯ ಅವಧಿಯನ್ನು ರದ್ದುಗೊಳಿಸಲಾಗಿದೆ ಎಂದು ಪತ್ರದಲ್ಲಿ ಆರೋಪಿಸಲಾಗಿದೆ.

ಸಾಂಕ್ರಾಮಿಕ ರೋಗದ ಮಧ್ಯೆಯು ಹಲವಾರು ರಾಜ್ಯಗಳು ತಮ್ಮ ಅಧಿವೇಶನವನ್ನು ನಡೆಸುತ್ತಿವೆ. ಆದರೆ ಅವುಗಳಲ್ಲಿ ಯಾವುದೇ ರಾಜ್ಯಗಳು ಪ್ರಶ್ನೋತ್ತರ ಸಮಯವನ್ನು ರದ್ದುಗೊಳಿಸಿಲ್ಲ ಎಂದು ಅವರು ಉಲ್ಲೇಖಿಸಿದ್ದಾರೆ. ಉದಾಹರಣೆಗೆ, ಇತ್ತೀಚೆಗೆ ಮಿಜೋರಾಂ, ಅರುಣಾಚಲ ಪ್ರದೇಶ, ಹರಿಯಾಣ ಮತ್ತು ಚತ್ತೀಸ್‌ಗಢದ ರಾಜ್ಯ ಸಭೆಗಳು ತಮ್ಮ ಅಧಿವೇಶನಗಳನ್ನು ಪ್ರಶ್ನೆ ಅವಧಿಯೊಂದಿಗೆ ಪೂರ್ಣಗೊಳಿಸಿದವು ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಹಾಗಾಗಿ, ಈ ರಾಜ್ಯಗಳಂತೆಯೇ ಸಂಸತ್ತೂ ಸಹ ಪ್ರಶ್ನೋತ್ತರ ಅವಧಿಯನ್ನು ರದ್ದುಗೊಳಿಸದೇ ಅಧಿವೇಶನದ ಪೂರ್ಣ ಕಾರ್ಯವಿಧಾನವನ್ನು ಅಳವಡಿಸಿಕೊಳ್ಳಬೇಕು ಎಂದು ಹೇಳಿದ್ದಾರೆ.

“ಸರ್ಕಾರದ ಕಾರ್ಯಚಟುವಟಿಕೆಯಲ್ಲಿ ಪಾರದರ್ಶಕತೆ ಪ್ರಜಾಪ್ರಭುತ್ವದಲ್ಲಿ ಪಾಲಿಸಬೇಕಾದ ಆದರ್ಶವಾಗಿದೆ. ಪ್ರಶ್ನೆಗಳಿಗೆ ಉತ್ತರಿಸಲು ಸರ್ಕಾರ ಮುಕ್ತವಾಗಿದೆ. ಪ್ರಸ್ತುತ ಸಂದರ್ಭದಂತೆ, ತೊಂದರೆಗೊಳಗಾದ ಸಮಯದಲ್ಲಿ ಸರ್ಕಾರದ ಆತ್ಮವಿಶ್ವಾಸವನ್ನು ಹೆಚ್ಚಿಸಲು ಸಹ ಸಹಾಯ ಮಾಡುತ್ತದೆ” ಎಂದು ಅವರು ಹೇಳಿದರು.

ಕೊರೊನಾ ಬಿಕ್ಕಟ್ಟಿನ ನಡುವೆ ಸೆಪ್ಟೆಂಬರ್ 14 ರಿಂದ ಪ್ರಾರಂಭವಾಗುವ ಸಂಸತ್ತಿನ ಮಾನ್ಸೂನ್ ಅಧಿವೇಶನದಲ್ಲಿ ಪ್ರಶ್ನೋತ್ತರ ಸಮಯವನ್ನು ರದ್ದುಗೊಳಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ವಿರೋಧ ಪಕ್ಷದ ಸಂಸದರು ಸೇರಿದಂತೆ ಅನೇಕರು ವಿರೋಧಿಸಿದ್ದಾರೆ.

ಲೋಕಸಭೆಯ ಅಧಿವೇಶನ ಮೊದಲ ದಿನ ಬೆಳಿಗ್ಗೆ 9 ರಿಂದ ಮಧ್ಯಾಹ್ನ 1 ರವರೆಗೆ ನಡೆಯಲಿದ್ದು, ಅಧಿವೇಶನ ಮುಗಿಯುವ ಅಕ್ಟೋಬರ್ 1 ರವರೆಗೆ ಮಧ್ಯಾಹ್ನ 3 ರಿಂದ ಸಂಜೆ 7 ರವರೆಗೆ ನಡೆಯಲಿದೆ. ರಾಜ್ಯಸಭೆಯ ಅಧಿವೇಶನ ಮೊದಲ ದಿನ ಮಧ್ಯಾಹ್ನ 3 ರಿಂದ ಸಂಜೆ 7 ರವರೆಗೆ ಮತ್ತು ಉಳಿದ ದಿನಗಳಲ್ಲಿ ಬೆಳಿಗ್ಗೆ 9 ರಿಂದ ಮಧ್ಯಾಹ್ನ 1 ರವರೆಗೆ ನಡೆಯಲಿದೆ. ವಾರಾಂತ್ಯಗಳು ಸಹ ಕೆಲಸದ ದಿನಗಳಾಗಿವೆ.


ಇದನ್ನೂ ಓದಿ: ಸಂಸತ್ ಅಧಿವೇಶನ: ಪ್ರಶ್ನೆಯ ಸಮಯ ರದ್ದುಗೊಳಿಸಿದ ಕೇಂದ್ರದ ವಿರುದ್ಧ ಆಕ್ರೋಶ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಸಿಲಿನ ತಾಪವಿದ್ದರೂ ಬಿಜೆಪಿ ಒತ್ತಡದಿಂದ ಬಂಗಾಳದಲ್ಲಿ 7 ಹಂತದ ಚುನಾವಣೆ: ಅಭಿಷೇಕ್ ಬ್ಯಾನರ್ಜಿ

0
ಪಶ್ಚಿಮ ಬಂಗಾಳದಲ್ಲಿ ಸಾಕಷ್ಟು ಬಿಸಿಲಿನ ತಾಪವಿದ್ದರೂ, ಏಳು ಹಂತಗಳಲ್ಲಿ ಲೋಕಸಭೆ ಚುನಾವಣೆ ಆಯೋಜಿಸುವಂತೆ ಬಿಜೆಪಿ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ ಎಂದು ಟಿಎಂಸಿಯ ನಾಯಕ ಅಭಿಷೇಕ್ ಬ್ಯಾನರ್ಜಿ ಮಂಗಳವಾರ ಆರೋಪಿಸಿದ್ದಾರೆ. ಟಿಎಂಸಿಯ ಡಾರ್ಜಿಲಿಂಗ್ ಅಭ್ಯರ್ಥಿ ಗೋಪಾಲ್...