Homeಮುಖಪುಟಸಂಸತ್‌ ಭವನವನ್ನು ಸಾಂವಿಧಾನಿಕ ಮೌಲ್ಯಗಳಿಂದ ನಿರ್ಮಿಸಬೇಕೇ ಹೊರತು ಗರ್ವದ ಇಟ್ಟಿಗೆಗಳಿಂದಲ್ಲ: ರಾಹುಲ್ ಗಾಂಧಿ

ಸಂಸತ್‌ ಭವನವನ್ನು ಸಾಂವಿಧಾನಿಕ ಮೌಲ್ಯಗಳಿಂದ ನಿರ್ಮಿಸಬೇಕೇ ಹೊರತು ಗರ್ವದ ಇಟ್ಟಿಗೆಗಳಿಂದಲ್ಲ: ರಾಹುಲ್ ಗಾಂಧಿ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರ ನೂತನ ಸಂಸತ್ತಿನ ಸಂಕೀರ್ಣ ಉದ್ಘಾಟನೆಯನ್ನು ಬಹಿಷ್ಕರಿಸಲು 19 ವಿರೋಧ ಪಕ್ಷಗಳು ನಿರ್ಧರಿಸಿದ್ದು, ಅಧ್ಯಕ್ಷ ದ್ರೌಪದಿ ಮುರ್ಮು ಅವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸದಿರುವುದು ದೇಶದ ಅತ್ಯುನ್ನತ ಸಾಂವಿಧಾನಿಕ ಹುದ್ದೆಗೆ ಮಾಡಿದ “ಅಪಮಾನ” ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ಹೇಳಿದ್ದಾರೆ.

ಸಂಸತ್‌ ಭವನವನ್ನು ಸಾಂವಿಧಾನಿಕ ಮೌಲ್ಯಗಳಿಂದ ನಿರ್ಮಿಸಬೇಕೇ ಹೊರತು ಗರ್ವದ ಇಟ್ಟಿಗೆಗಳಿಂದಲ್ಲ ಎಂದು ರಾಹುಲ್ ಗಾಂಧಿ ಹೇಳಿದರು.

ಪ್ರಧಾನಿ ನರೇಂದ್ರ ಮೋದಿಯವರು ನೂತನ ಸಂಸತ್ ಭವನವನ್ನು ಲೋಕಾರ್ಪಣೆ ಮಾಡುವ ಸಮಾರಂಭವನ್ನು ಕಾಂಗ್ರೆಸ್, ಆಮ್ ಆದ್ಮಪಾರ್ಟಿ (ಎಎಪಿ), ತೃಣ ಮೂಲ ಕಾಂಗ್ರೆಸ್ (ಟಿಎಂಸಿ) ಸೇರಿದಂತೆ 19 ವಿರೋಧ ಪಕ್ಷಗಳು ಬಹಿಷ್ಕರಿಸಿವೆ. ಇದರ ಬೆನ್ನಲ್ಲೇ ರಾಹುಲ್ ಹೇಳಿಕೆ ನೀಡಿದ್ದಾರೆ.

”ರಾಷ್ಟ್ರಪತಿಯವರನ್ನು ಉದ್ಘಾಟನೆಗೆ ಕರೆತರದಿರುವುದು ಅಥವಾ ಅವರಿಗೆ ಆಹ್ವಾನ ನೀಡದಿರುವುದು ದೇಶದ ಅತ್ಯುನ್ನತ ಸಾಂವಿಧಾನಿಕ ಹುದ್ದೆಗೆ ಮಾಡುವ ಅವಮಾನ. ಸಂಸತ್‌ ಭವನವನ್ನು ಸಾಂವಿಧಾನಿಕ ಮೌಲ್ಯಗಳಿಂದ ನಿರ್ಮಿಸಬೇಕೇ ಹೊರತು ಗರ್ವದ ಇಟ್ಟಿಗೆಗಳಿಂದಲ್ಲ” ಎಂದು ರಾಹುಲ್ ಟ್ವಿಟ್ ಮಾಡಿದ್ದಾರೆ.

ಪ್ರಧಾನಿ ಮೋದಿ ಅವರು ನೂತನ ಸಂಸತ್‌ ಕಟ್ಟಡವನ್ನು ಮೇ 28 ರಂದು (ಶುಕ್ರವಾರ) ಉದ್ಘಾಟಿಸಲಿದ್ದಾರೆ.

ಇದನ್ನು ವಿರೋಧಿಸಿರುವ ವಿರೋಧ ಪಕ್ಷಗಳು, ”ರಾಷ್ಟ್ರಪತಿಯವರು ದೇಶದ ಮುಖ್ಯಸ್ಥರಷ್ಟೇ ಅಲ್ಲ, ಅವರು ಸಂಸತ್ತಿನ ಅವಿಭಾಜ್ಯ ಅಂಗವಾಗಿದ್ದಾರೆ. ಹಾಗಾಗಿ ಪ್ರಧಾನಿ ಬದಲು ರಾಷ್ಟ್ರಪತಿಯವವರೇ ಸಂಸತ್ ಭವನದ ಲೋಕಾರ್ಪಣೆ ಮಾಡಬೇಕು” ಎಂದು ಆಗ್ರಹಿಸಿವೆ.

ಕಾಂಗ್ರೆಸ್, ಎಡಪಕ್ಷಗಳು, ಆಮ್ ಆದ್ಮಿ ಪಕ್ಷ ಮತ್ತು ತೃಣಮೂಲ ಕಾಂಗ್ರೆಸ್ ಸೇರಿದಂತೆ 19 ವಿರೋಧ ಪಕ್ಷಗಳು, ಹೊಸ ಕಟ್ಟಡದಲ್ಲಿ ಯಾವುದೇ ಸಾಂವಿಧಾನಿಕ ಮೌಲ್ಯವನ್ನು ಕಾಣಲಾಗುವುದಿಲ್ಲ ಎಂದು ಪ್ರತಿಪಾದಿಸಿ ಉದ್ಘಾಟನಾ ಸಮಾರಂಭದಿಂದ ಹೊರಗುಳಿಯುವುದಾಗಿ ಹೇಳಿವೆ.

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರ ಆಹ್ವಾನದ ಮೇರೆಗೆ ಮೋದಿ ಅವರು ಮೇ 28 ರಂದು ಹೊಸ ಸಂಸತ್ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ.

”ರಾಷ್ಟ್ರಪತಿಗಳು ಭಾರತದಲ್ಲಿ ರಾಷ್ಟ್ರದ ಮುಖ್ಯಸ್ಥರು ಮಾತ್ರವಲ್ಲ, ಅವರು ಸಂಸತ್ತಿನ ಅವಿಭಾಜ್ಯ ಅಂಗವಾಗಿದ್ದಾರೆ. ರಾಷ್ಟ್ರಪತಿಗಳೇ ಕಟ್ಟಡ ಉದ್ಘಾಟನೆ ಮಾಡಬೇಕೇ ಹೊರತು ಪ್ರಧಾನಿಯಲ್ಲ” ಎಂದು ಎಂದು ವಿರೋಧ ಪಕ್ಷಗಳು ವಾದಿಸಿವೆ.

ಇದನ್ನೂ ಓದಿ: ನೂತನ ಸಂಸತ್ ಭವನದ ಉದ್ಘಾಟನಾ ಸಮಾರಂಭ ಬಹಿಷ್ಕರಿಸಿದ ವಿರೋಧ ಪಕ್ಷಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಆಸ್ಕರ್‌ 2026 : ಮೈಕೆಲ್ ಬಿ. ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ, ಒನ್ ಬ್ಯಾಟಲ್ ಆಫ್ಟರ್ ಅನದರ್‌ಗೆ ಅತ್ಯುತ್ತಮ ಚಿತ್ರ ಪ್ರಶಸ್ತಿ

ಪ್ರತಿಷ್ಠಿತ 98ನೇ ಅಕಾಡೆಮಿ ಪ್ರಶಸ್ತಿ (ಆಸ್ಕರ್ 2026) ಸಮಾರಂಭ ಲಾಸ್ ಏಂಜಲೀಸ್‌ನ ಡಾಲ್ಬಿ ಥಿಯೇಟರ್‌ನಲ್ಲಿ ಮಾರ್ಚ್ 15ರಂದು (ಭಾರತೀಯ ಕಾಲಮಾನ ಮಾರ್ಚ್ 16) ನಡೆಯಿತು. ಖ್ಯಾತ ಹಾಸ್ಯನಟ ಕೋನನ್ ಒಬ್ರೇನ್ ಅವರು ಈ ಕಾರ್ಯಕ್ರಮವನ್ನು ನಡೆಸಿಕೊಟ್ಟರು....

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...