Homeಮುಖಪುಟರಾಹುಲ್ ಗಾಂಧಿ ಲೋಕಸಭಾ ಭಾಷಣ: ಬಿಜೆಪಿಯಿಂದ ಟೀಕೆ, ಕಾಂಗ್ರೆಸ್‌ನಿಂದ ಶ್ಲಾಘನೆ

ರಾಹುಲ್ ಗಾಂಧಿ ಲೋಕಸಭಾ ಭಾಷಣ: ಬಿಜೆಪಿಯಿಂದ ಟೀಕೆ, ಕಾಂಗ್ರೆಸ್‌ನಿಂದ ಶ್ಲಾಘನೆ

- Advertisement -
- Advertisement -

ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಕಿರಣ್ ರಿಜಿಜು ಸೇರಿದಂತೆ ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕರು ಸಂಸತ್ತಿನಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಮಾಡಿದ್ದ ಭಾಷಣಕ್ಕೆ ಟೀಕೆ ವ್ಯಕ್ತಪಡಿಸುತ್ತಿದ್ದಾರೆ. ಕಾಂಗ್ರೆಸ್‌ ತಮ್ಮ ನಾಯಕನ ಮಾತನ್ನು ಆಲಿಸುವಂತೆ ತಿಳಿಸಿದೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ದೇಶದಲ್ಲಿ ಶ್ರೀಮಂತರು ಮತ್ತು ಬಡವರ ನಡುವೆ ಹೆಚ್ಚುತ್ತಿರುವ ಅಸಮಾನತೆ, ಹೆಚ್ಚುತ್ತಿರುವ ನಿರುದ್ಯೋಗ, ಪೆಗಾಸಸ್‌ ಪ್ರಕರಣದ ಬಗ್ಗೆ ಒಕ್ಕೂಟ ಸರ್ಕಾರವನ್ನು ಟೀಕಿಸಿದ್ದರು. ಬಿಜೆಪಿಗರು ರಾಜನ ಕಲ್ಪನೆ ಮುನ್ನಲೆಗೆ ತರುವ ಮೂಲಕ ಭಾರತದ ರಾಜ್ಯಗಳ ಒಕ್ಕೂಟದ ಕಲ್ಪನೆಯನ್ನು ನಾಶಪಡಿಸುತ್ತಿದ್ದಾರೆ ಎಂದು ಆರೋಪಿಸಿದ್ದರು.

ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ರಾಹುಲ್ ಗಾಂಧಿ ಮಾತುಗಳಿಗೆ ಕಿಡಿಕಾರಿದ್ದಾರೆ. ” ರಾಹುಲ್ ಗಾಂಧಿ, ಭಾರತವು ಒಂದು ರಾಷ್ಟ್ರವಲ್ಲ ಎಂದು ಹೇಳುವ ಗೊಂದಲಮಯ ಮತ್ತು ಬುದ್ದಿಹೀನ ನಾಯಕ. ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾಹುಲ್ ಗಾಂಧಿ ರಾಜ ಎಂದು ಸೂಚಿಸಿದ್ದಾರೆ. ಆದರೆ, ಪ್ರಧಾನಿ ಮೋದಿ ಜನರ ಹೃದಯವನ್ನು ಗೆದ್ದಿದ್ದಾರೆ ಮತ್ತು ಪ್ರಜಾಸತ್ತಾತ್ಮಕವಾಗಿ ಚುನಾಯಿತ ಜನಪ್ರಿಯ ನಾಯಕರಾಗಿದ್ದಾರೆ. ರಾಹುಲ್ ಗಾಂಧಿ ತಮ್ಮ ರಾಜವಂಶದಿಂದಾಗಿ ಕಾಂಗ್ರೆಸ್ ನಾಯಕ ಮತ್ತು ಸಂಸದರಾಗಿದ್ದಾರೆ” ಎಂದು ಟೀಕೆ ಮಾಡಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್: ಪ್ರತಿಭಟನಾ ಮೆರವಣಿಗೆಯ ವಿಡಿಯೊವನ್ನು, ‘RSS ದಾಳಿಗೆ ಹೆದರಿ ವಲಸೆ ಹೋಗುತ್ತಿರುವ ಮುಸ್ಲಿಮರು’ ಎಂದು ವೈರಲ್‌

ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಟ್ವೀಟ್ ಮಾಡಿ, “ಭಾರತದ ಕಾನೂನು ಮಂತ್ರಿಯಾಗಿ ಮಾತ್ರವಲ್ಲದೆ ಒಬ್ಬ ಸಾಮಾನ್ಯ ಪ್ರಜೆಯಾಗಿಯೂ ಸಹ ನಾನು ಭಾರತದ ನ್ಯಾಯಾಂಗ ಮತ್ತು ಚುನಾವಣಾ ಆಯೋಗದ ಬಗ್ಗೆ ರಾಹುಲ್ ಗಾಂಧಿ ಹೇಳಿರುವುದನ್ನು ಖಂಡಿಸುತ್ತೇನೆ. ಇವು ನಮ್ಮ ಪ್ರಜಾಪ್ರಭುತ್ವದ ಪ್ರಮುಖ ಸಂಸ್ಥೆಗಳು. ರಾಹುಲ್ ಗಾಂಧಿ ಕೂಡಲೇ ಜನತೆ, ನ್ಯಾಯಾಂಗ ಮತ್ತು ಚುನಾವಣಾ ಆಯೋಗದ ಕ್ಷಮೆಯಾಚಿಸಬೇಕು” ಎಂದಿದ್ದಾರೆ.

ವಿದೇಶಾಂಗ ಸಚಿವ ಎಸ್. ಜೈಶಂಕರ್ ಕೂಡ ರಾಹುಲ್ ಗಾಂಧಿ ಅವರ ’ಬಿಜೆಪಿ ಚೀನಾ ಮತ್ತು ಪಾಕಿಸ್ತಾನವನ್ನು ಒಟ್ಟಿಗೆ ತಂದಿದೆ’ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದು, “ಕೆಲವು ಇತಿಹಾಸದ ಪಾಠಗಳು ಕ್ರಮಬದ್ಧವಾಗಿವೆ” ಎಂದಿದ್ದಾರೆ.

1963 ರಲ್ಲಿ ಕಾಂಗ್ರೆಸ್ ಸರ್ಕಾರವು ಅಧಿಕಾರದಲ್ಲಿದ್ದಾಗ ಪಾಕಿಸ್ತಾನವು ಶಾಕ್ಸ್‌ಗಾಮ್ ಕಣಿವೆಯನ್ನು ಚೀನಾಕ್ಕೆ ಅಕ್ರಮವಾಗಿ ಹಸ್ತಾಂತರಿಸಿತು.1970 ರ ದಶಕದಲ್ಲಿ ಚೀನಾ ಪಿಒಕೆ ಮೂಲಕ ಕಾರಕೋರಂ ಹೆದ್ದಾರಿಯನ್ನು ನಿರ್ಮಿಸಿತು. 2013 ರಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಕೇಂದ್ರದಲ್ಲಿ ಅಧಿಕಾರದಲ್ಲಿದ್ದಾಗ ಸಿಪಿಇಸಿಯನ್ನು ಪ್ರಾರಂಭಿಸಲಾಯಿತು ಎಂದು ತಿರುಗೇಟು ನೀಡಿದ್ದಾರೆ.

ಇದನ್ನೂ ಓದಿ: BJP ಪ್ರತಿ ವರ್ಷ ನೀಡುತ್ತೇವೆ ಎಂದ 2 ಕೋಟಿ ಉದ್ಯೋಗದಲ್ಲಿ ಎಷ್ಟು ಜನರಿಗೆ ಉದ್ಯೋಗ ಸಿಕ್ಕಿದೆ?: ಮಲ್ಲಿಕಾರ್ಜುನ ಖರ್ಗೆ

ಬಿಜೆಪಿ ನಾಯಕರ ಟೀಕೆಗಳಿಗೆ ಕಾಂಗ್ರೆಸ್ ನಾಯಕರು ತಿರುಗೇಟು ನೀಡುತ್ತಿದ್ದಾರೆ. ರಾಹುಲ್ ಗಾಂಧಿಯವರ ಭಾಷಣಕ್ಕೆ ಯಾವುದೇ ಪ್ರಾಮುಖ್ಯತೆಯನ್ನು ನೀಡುವುದಿಲ್ಲ ಎನ್ನುವ ಬಿಜೆಪಿ ನಾಯಕರು ಎಲ್ಲರೂ ಏಕೆ ಪ್ರತಿಕ್ರಿಯೆ ನೀಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

ಮಾಜಿ ಸಚಿವ ರಾಜೀವ್ ಶುಕ್ಲಾ ಟ್ವೀಟ್ ಮಾಡಿ, ” ಬಿಜೆಪಿಯ ಉನ್ನತ ನಾಯಕರು ರಾಹುಲ್ ಗಾಂಧಿಯವರ ಭಾಷಣಕ್ಕೆ ಯಾವುದೇ ಪ್ರಾಮುಖ್ಯತೆಯನ್ನು ನೀಡುವುದಿಲ್ಲ ಎನ್ನುತ್ತಾರೆ. ಆದರೆ, ಎಲ್ಲಾ ಮಂತ್ರಿಗಳು ಅವರ ಭಾಷಣಕ್ಕೆ ಏಕೆ ಪ್ರತಿಕ್ರಿಯಿಸುತ್ತಿದ್ದಾರೆ. ಇದರರ್ಥ ಅವರು ವಿಚಲಿತರಾಗಿದ್ದಾರೆ ಮತ್ತು ಅವರ ಇಂದಿನ ಭಾಷಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದಾರೆ” ಎಂದು ಹೇಳಿದ್ದಾರೆ.

 

ಸಂಸದ ಶಶಿ ತರೂರ್‌ ಕೂಡ ರಾಹುಲ್ ಗಾಂಧಿ ಭಾಷಣವನ್ನು ಪವರ್‌ ಫುಲ್‌ ಮೆಸೇಜ್ ಎಂದಿದ್ದಾರೆ. “ಕಾಂಗ್ರೆಸ್ ದೇಶವು ಅದರ ಆಂತರಿಕ ಏಕತೆ, ಶಕ್ತಿ ಮತ್ತು ಅದರ ಬಾಹ್ಯ ರಾಷ್ಟ್ರೀಯ ಭದ್ರತೆ ಎರಡರಲ್ಲೂ ದುರ್ಬಲಗೊಂಡಿದೆ ಎಂದು ಹೇಳುತ್ತಿದ್ದೇವೆ. ಇದು ಅತ್ಯಂತ ಶಕ್ತಿಯುತ ಮತ್ತು ಪ್ರಮುಖ ಸಂದೇಶವಾಗಿದೆ. ಭಾರತ ಮತ್ತು ಪಾಕಿಸ್ತಾನದ ನಡುವಿನ ಯುದ್ಧದ ಪರಿಸ್ಥಿತಿಯ ಲಾಭವನ್ನು ಚೀನಾ ಪಡೆಯದಂತೆ ಮಾಜಿ ಪ್ರಧಾನಿ ಇಂದಿರಾಗಾಂಧಿ ಯಾವಾಗಲೂ ನೋಡಿಕೊಂಡಿದ್ದರು. ಆದ್ದರಿಂದ ರಾಹುಲ್ ಗಾಂಧಿಯವರ ಮಾತುಗಳನ್ನು ಆಲಿಸುವುದು ಬಹಳ ಮುಖ್ಯ ಎಂದು ನಾನು ಭಾವಿಸುತ್ತೇನೆ” ಎಂದು ಕಾಂಗ್ರೆಸ್ ಸಂಸದರು ಹೇಳಿದ್ದಾರೆ.

ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ಚರ್ಚೆಯಲ್ಲಿ ಭಾಗವಹಿಸಿದ್ದ ರಾಹುಲ್ ಗಾಂಧಿ, “ಈಗ ಎರಡು ವಿಭಿನ್ನ ಭಾರತಗಳಿವೆ, ಒಂದು ಶ್ರೀಮಂತರ ಭಾರತ ಮತ್ತು ಇನ್ನೊಂದು ಬಡವರದ್ದು. ಇವೆರಡರ ನಡುವಿನ ಅಂತರ ಹೆಚ್ಚುತ್ತಿದೆ. ಬಿಜೆಪಿಯು ಭಾರತವನ್ನು ದುರ್ಬಲಗೊಳಿಸುತ್ತಿದೆ ಎಂದು ಆರೋಪಿಸಿದ್ದಾರೆ.

ಒಕ್ಕೂಟ ಸರ್ಕಾರದ ನೀತಿಗಳು, ಕೇಂದ್ರಿಕರಣ, ನಿರುದ್ಯೋಗ, ಬಡತನ, ಪೆಗಾಸಸ್‌ ಪ್ರಕರಣ ಸೇರಿದಂತೆ ಹಲವು ವಿಷಯಗಳ ಮೇಲೆ ಮೋದಿ ನೇತೃತ್ವದ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟೀಕೆ ಮಾಡಿದ್ದಾರೆ.


ಇದನ್ನೂ ಓದಿ: ಇಲ್ಲಿ ಎರಡು ವಿಭಿನ್ನ ಭಾರತಗಳಿವೆ, ಒಂದು ಶ್ರೀಮಂತರದ್ದು, ಇನ್ನೊಂದು ಬಡವರದ್ದು: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇಂದಿರಾ ಗಾಂಧಿ ಯವರ ಪೀರೇಡನಲ್ಲಿ ಜೋಶಿಯವರ ಹೋಲಗಳೆನಾದರು ಹೋಗಿರಬಹುದು ಅದಕ್ಕೆ ರಾಹುಲ್ ಗಾಂಧಿ ಮಾತಾಡಿದರೆ ಇವರು ಉರಕೂಳತಾರೆ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...