Homeಮುಖಪುಟಸಂಸತ್ತಿನ ಚಳಿಗಾಲದ ಅಧಿವೇಶನ : ಎಸ್‌ಐಆರ್ ಕುರಿತು ತುರ್ತು ಚರ್ಚೆಗೆ ಒತ್ತಾಯಿಸಿ ನಿಲುವಳಿ ಸೂಚನೆ ಮಂಡಿಸಿದ...

ಸಂಸತ್ತಿನ ಚಳಿಗಾಲದ ಅಧಿವೇಶನ : ಎಸ್‌ಐಆರ್ ಕುರಿತು ತುರ್ತು ಚರ್ಚೆಗೆ ಒತ್ತಾಯಿಸಿ ನಿಲುವಳಿ ಸೂಚನೆ ಮಂಡಿಸಿದ ಕಾಂಗ್ರೆಸ್

- Advertisement -
- Advertisement -

ಸೋಮವಾರ (ಡಿಸೆಂಬರ್ 1) ಸಂಸತ್ತಿನ ಚಳಿಗಾಲದ ಅಧಿವೇಶನ ಆರಂಭಕ್ಕೂ ಮುನ್ನವೇ, ದೇಶದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕುರಿತು ತುರ್ತು ಚರ್ಚೆ ನಡೆಸಬೇಕೆಂದು ಕೋರಿ ಕಾಂಗ್ರೆಸ್ ನಿಲುವಳಿ ಸೂಚನೆ ಮಂಡಿಸಿದೆ.

ಕಾಂಗ್ರೆಸ್ ಸಂಸದರಾದ ಕೆ.ಸಿ ವೇಣುಗೋಪಾಲ್, ಮಾಣಿಕಂ ಟ್ಯಾಗೋರ್, ಗೌರವ್ ಗೊಗೊಯ್, ವಿಜಯ್ ಕುಮಾರ್, ರೇಣುಕಾ ಚೌಧರಿ ನಿಲುವಳಿ ಸೂಚನೆ ಮಂಡಿಸಿದ್ದಾರೆ ಎಂದು ವರದಿಯಾಗಿದೆ.

ಎಸ್‌ಐಆರ್ ಪ್ರಕ್ರಿಯೆ ‘ಪೂರ್ವ ಯೋಜಿತ ಅಲ್ಲ ಮತ್ತು ಏಕಪಕ್ಷೀಯ’ ಎಂದು ಸಂಸದರು ಹೇಳಿದ್ದಾರೆ. ಬೂತ್ ಮಟ್ಟದ ಅಧಿಕಾರಿಗಳ (ಬಿಎಲ್‌ಒ) ಮೇಲೆ ತೀವ್ರ ಒತ್ತಡ ಹೇರಲಾಗಿದ್ದು, ಇದು ಅವರ ಸಾವಿಗೆ ಕಾರಣವಾಗುತ್ತಿದೆ ಎಂದು ಆರೋಪಿಸಿದ್ದಾರೆ.

ನಿಲುವಳಿ ಸೂಚನೆ ಮಂಡಿಸುವ ಮುನ್ನ ಸುದ್ದಿ ಸಂಸ್ಥೆ ಎಎನ್‌ಐ ಜೊತೆ ಮಾತನಾಡಿರುವ ಸಂಸದ ಮಾಣಿಕಂ ಟ್ಯಾಗೋರ್, ಬಿಎಲ್‌ಒಗಳ ಸರಣಿ ಆತ್ಮಹತ್ಯೆಗಳನ್ನು ಎತ್ತಿ ತೋರಿಸಿದ್ದು, ಚುನಾವಣಾ ಆಯೋಗ ಎಸ್‌ಐಆರ್ ಹೆಸರಿನಲ್ಲಿ ಮತಗಳ್ಳತನ ನಡೆಸುತ್ತಿದೆ ಎಂದು ಹೇಳಿದ್ದಾರೆ.

ಎಸ್‌ಐಆರ್ ಬಗ್ಗೆ ಚರ್ಚೆ ನಡೆಯಬೇಕು ಎಂಬುವುದು ನಮ್ಮ ಆಗ್ರಹವಾಗಿದೆ. ಏಕೆಂದರೆ, ಇದು ಪ್ರಜಾಪ್ರಭುತ್ವದ ಮೇಲಿನ ದಾಳಿಯಾಗಿದೆ. ಎಸ್‌ಐಆರ್ ನಡೆಯುತ್ತಿರುವ 12 ರಾಜ್ಯಗಳಲ್ಲಿ ಬಿಎಲ್‌ಒಗಳು ಸಾಯುತ್ತಿದ್ದಾರೆ, ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ಎಂದು ಟ್ಯಾಗೋರ್ ತಿಳಿಸಿದ್ದಾರೆ.

ನಿಲುವಳಿ ಸೂಚನೆ ಮಂಡಿಸಿದವರಲ್ಲಿ ಒಬ್ಬರಾದ ಸಂಸದ ವಿಜಯ್ ಕುಮಾರ್ ವಸಂತ್ ಮಾತನಾಡಿ, ಎಸ್‌ಐಆರ್ ಪ್ರಕ್ರಿಯೆ ತುಂಬಾ ಕಳಪೆಯಾಗಿ ನಡೆಯುತ್ತಿದೆ. ಸಾಕಷ್ಟು ಸಮಾಲೋಚನೆ ನಡೆಸದೆ, ಬೆಂಬಲ ಪಡೆಯದೆ ಎಸ್ಐಆರ್ ಮಾಡಲಾಗುತ್ತಿದೆ ಎಂದಿದ್ದಾರೆ.

ಬಿಎಲ್‌ಒ ಸಾವುಗಳ ಕುರಿತು ತನಿಖೆ ಮಾಡಲು ಅಥವಾ ದತ್ತಾಂಶ ಬಿಡುಗಡೆ ಮಾಡಲು ಚುನಾವಣಾ ಆಯೋಗ ವಿಫಲವಾಗಿದೆ. ಇದು ‘ಸಾಂಸ್ಥಿಕ ಕ್ರೌರ್ಯ’. ಅಲ್ಲದೆ, ಪುನರಾವರ್ತಿತ ಪರಿಶೀಲನೆಯು ಸಾರ್ವಜನಿಕರ ಗೊಂದಲಕ್ಕೆ ಕಾರಣವಾಗುತ್ತಿದೆ. ಜನ ಮತ್ತು ಪ್ರಜಾಪ್ರಭುತ್ವ ವಿರುದ್ದ ಎಸ್‌ಐಆರ್ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.

ಎಸ್‌ಐಆರ್ ರದ್ದುಗೊಳಿಸಬೇಕು. ಬಿಎಲ್‌ಒಗಳ ಸಾವುಗಳ ಕುರಿತು ತನಿಖೆ ನಡೆಸಬೇಕು. ಅವರ ಕುಟುಂಬಗಳಿಗೆ ಪರಿಹಾರ ನೀಡಬೇಕು. ಚುನಾವಣಾ ಕಾರ್ಯವಿಧಾನಗಳನ್ನು ಸುಧಾರಿಸಬೇಕು ಮತ್ತು ಚುನಾವಣಾ ಆಯೋಗ ತನ್ನ ಕ್ರಮಗಳನ್ನು ವಿವರಿಸಲು ಸಮನ್ಸ್ ಜಾರಿ ಮಾಡಬೇಕು ಎಂದು ಸಂಸದರು ಒತ್ತಾಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಸಾಲಾ ಬಾಂಡ್ ಪ್ರಕರಣ : ಕೇರಳ ಸಿಎಂ ಪಿಣರಾಯಿ ವಿಜಯನ್‌ಗೆ ಶೋಕಾಸ್ ನೋಟಿಸ್ ನೀಡಿದ ಇಡಿ

ಕೆಐಐಎಫ್‌ಬಿ ಮಸಾಲಾ ಬಾಂಡ್ ಪ್ರಕರಣದಲ್ಲಿ ಕೇರಳ ಸಿಎಂ ಪಿಣರಾಯಿ ವಿಜಯನ್, ಮಾಜಿ ಹಣಕಾಸು ಸಚಿವ ಥಾಮಸ್ ಐಸಾಕ್ ಮತ್ತು ಮುಖ್ಯಮಂತ್ರಿಗಳ ಕಾರ್ಯದರ್ಶಿ ಕೆ.ಎಂ ಅಬ್ರಹಾಂ ಅವರಿಗೆ ಜಾರಿ ನಿರ್ದೇಶನಾಲ 466 ಕೋಟಿ ರೂ.ಗಳ...

ತಮಿಳುನಾಡಿನಲ್ಲಿ ಎರಡು ಬಸ್ಸುಗಳು ಡಿಕ್ಕಿ:10ಕ್ಕೂ ಹೆಚ್ಚು ಜನರ ಸಾವು, 20 ಜನರಿಗೆ ಗಂಭೀರ ಗಾಯಗಳಾಗಿವೆ

ಚೆನ್ನೈ: ಶಿವಗಂಗಾ ಜಿಲ್ಲೆಯ ಕುಮ್ಮಂಗುಡಿ ಬಳಿ ಭಾನುವಾರ ಸಂಜೆ ಎರಡು ತಮಿಳುನಾಡು ಸರ್ಕಾರಿ ಬಸ್‌ಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 10 ಜನರು ಸಾವನ್ನಪ್ಪಿ, 20 ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು...

ನಾಳೆಯಿಂದ ಸಂಸತ್ ಚಳಿಗಾಲದ ಅಧಿವೇಶನ | ಸುಗಮ ಕಲಾಪಕ್ಕೆ ಸಹಕಾರ ಕೋರಿದ ಆಡಳಿತ : ಎಸ್‌ಐಆರ್ ಚರ್ಚೆ ಮುಂದಿಟ್ಟ ಪ್ರತಿಪಕ್ಷಗಳು

ನಾಳೆಯಿಂದ (ಡಿಸೆಂಬರ್ 1) ಸಂಸತ್ತಿನ ಚಳಿಗಾಲದ ಅಧಿವೇಶನ ಪ್ರಾರಂಭಗೊಳ್ಳಲಿದೆ. ಅದಕ್ಕೂ ಮುನ್ನ ಇಂದು (ನವೆಂಬರ್ 30) ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ನೇತೃತ್ವದಲ್ಲಿ ಸರ್ವಪಕ್ಷಗಳ ಸಭೆ ನಡೆದಿದೆ. ಸಭೆಯಲ್ಲಿ ಸುಗಮ...

ಅರೆಭಾಷೆಯಂತಹ ಪ್ರಾದೇಶಿಕ ಭಾಷೆಗಳು ಕನ್ನಡವನ್ನು ಶ್ರೀಮಂತಗೊಳಿಸಿವೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಕನ್ನಡ ಭಾಷೆ ರಾಜ್ಯದ ಅಸ್ಮಿತೆಯ ತಳಹದಿಯಾಗಿದ್ದರೆ, ಅರೆಭಾಷೆಯಂತಹ ಪ್ರಾದೇಶಿಕ ಭಾಷೆಗಳು ಕನ್ನಡವನ್ನು ಶ್ರೀಮಂತಗೊಳಿಸಿವೆ ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.  ನವೆಂಬರ್ 30ರಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕರ್ನಾಟಕ ಅರೆ ಭಾಷೆ ಸಂಸ್ಕೃತಿ ಮತ್ತು...

ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಯುವಕ: ಮನನೊಂದು 22 ವರ್ಷದ ಯುವತಿ ಆತ್ಮಹತ್ಯೆ 

ಮದುವೆಯಾಗುವುದಾಗಿ ನಂಬಿಸಿದ್ದ ಯುವಕ, ಯುವತಿಗೆ ಮಾನಸಿಕ-ದೈಹಿಕ ಹಲ್ಲೆ ನಡೆಸಿದ್ದು, ಆತನ ಲೈಂಗಿಕ ಕಿರುಕುಳಕ್ಕೆ ಬೇಸತ್ತ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಇಂಜಿನಿಯರಿಂಗ್ ಪದವೀಧರೆ...

ಮಹಾರಾಷ್ಟ್ರ : ಪ್ರಮುಖ ನಾಯಕ ಅನಂತ್ ಸೇರಿದಂತೆ 10 ಮಂದಿ ಮಾವೋವಾದಿಗಳು ಶರಣಾಗತಿ

ಮಹಾರಾಷ್ಟ್ರದ ಗೊಂಡಿಯಾ ಜಿಲ್ಲೆಯಲ್ಲಿ ಶುಕ್ರವಾರ (ನ.28) ಪ್ರಮುಖ ಮಾವೋವಾದಿ ನಾಯಕ ವಿಕಾಸ್ ನಾಗಪುರೆ ಅಲಿಯಾಸ್ ನವಜ್ಯೋತ್ ಅಲಿಯಾಸ್ ಅನಂತ್ ಮತ್ತು ಇತರ 10 ಮಂದಿ ಪೊಲೀಸರ ಮುಂದೆ ಶರಣಾಗಿದ್ದಾರೆ. ಅನಂತ್ ನಿಷೇಧಿತ ಕಮ್ಯುನಿಸ್ಟ್ ಪಾರ್ಟಿ...

ಎಸ್‌ಐಆರ್ : 12 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಗಡುವು ವಿಸ್ತರಿಸಿದ ಚು. ಆಯೋಗ

ಒಂಬತ್ತು ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌)ಯಲ್ಲಿ ಮತದಾರರು ಎಣಿಕೆ ನಮೂನೆಗಳನ್ನು ಸಲ್ಲಿಸುವ ಗಡುವನ್ನು ಡಿಸೆಂಬರ್ 4 ರಿಂದ 11ಕ್ಕೆ ಚುನಾವಣಾ ಆಯೋಗ...

ಗೆಳತಿಗೆ ಬೇರೊಬ್ಬ ವ್ಯಕ್ತಿಯೊಂದಿಗೆ ವಿವಾಹ: 18ವರ್ಷದ ಪದವಿಪೂರ್ವ ವಿದ್ಯಾರ್ಥಿ ಆತ್ಮಹತ್ಯೆ

ತನ್ನ ಗೆಳತಿ ಬೇರೊಬ್ಬ ವ್ಯಕ್ತಿಯನ್ನು ಮದುವೆಯಾದ ಕಾರಣ ನವೆಂಬರ್ 29, ಶನಿವಾರ ಹೈದರಾಬಾದ್‌ನಲ್ಲಿ ಪದವಿಪೂರ್ವ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಘಟನೆ ಸುರರಾಮ್ ಪೊಲೀಸ್ ವ್ಯಾಪ್ತಿಯಲ್ಲಿ ನಡೆದಿದೆ. ಮೃತನನ್ನು 18 ವರ್ಷದ ಅಭಿಲಾಷ್ ಎಂದು...

ಅರ್ಫಾಝ್‌ನ ಮನೆ ಕೆಡವಿದ ಆಡಳಿತ : ತನ್ನ ಜಾಗ ಉಡುಗೊರೆಯಾಗಿ ಕೊಟ್ಟ ಕುಲ್ದೀಪ್ ಶರ್ಮಾ

ಅರ್ಫಾಝ್ ಎಂಬ ಪತ್ರಕರ್ತನ ಮನೆಯನ್ನು ಆಡಳಿತ ಕೆಡವಿದಾಗ, ತನ್ನ ಜಾಗವನ್ನು ಉಡುಗೊರೆಯಾಗಿ ಕೊಟ್ಟ ಜಮ್ಮು ಕಾಶ್ಮೀರದ ಸಾಮಾಜಿಕ ಹೋರಾಟಗಾರ ಕುಲ್ದೀಪ್ ಶರ್ಮಾ ನಡೆಗೆ ದೇಶದಾದ್ಯಂತ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಜಮ್ಮುವಿನ ಜ್ಯುವೆಲ್ ಪ್ರದೇಶದ ನಿವಾಸಿ...

ತೆಲಂಗಾಣದಲ್ಲಿ ಭೀಕರ ಅಗ್ನಿ ಅವಘಡ, ಕೊಂಡಗಟ್ಟು ಪ್ರದೇಶದಲ್ಲಿ 20ಕ್ಕೂ ಹೆಚ್ಚು ಅಂಗಡಿಗಳು ಭಸ್ಮ

ಹೈದರಾಬಾದ್: ತೆಲಂಗಾಣದಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಕೊಂಡಗಟ್ಟು ಪ್ರದೇಶದಲ್ಲಿ ಇಪ್ಪತ್ತಕ್ಕೂ ಹೆಚ್ಚು ಅಂಗಡಿಗಳು ಸುಟ್ಟು ಭಸ್ಮವಾಗಿವೆ. ಶನಿವಾರ ತಡರಾತ್ರಿ ಬೆಂಕಿ ಕಾಣಿಸಿಕೊಂಡಿದ್ದು, ಕೊಂಡಗಟ್ಟು ಬೆಟ್ಟಗಳ ತಪ್ಪಲಿನಲ್ಲಿರುವ ಅಂಗಡಿಗಳ ಸಾಲಿಗೆ ಬೆಂಕಿ ವ್ಯಾಪಿಸಿದ್ದು, ತೀವ್ರ...