Homeಮುಖಪುಟಸಂಸತ್‌ ಅಧಿವೇಶನ: ಅನ್ನದಾತರಿಗಾಗಿ ಸೂರ್ಯೋದಯ ಎಂದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ

ಸಂಸತ್‌ ಅಧಿವೇಶನ: ಅನ್ನದಾತರಿಗಾಗಿ ಸೂರ್ಯೋದಯ ಎಂದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ

- Advertisement -
- Advertisement -

ಸೋಮವಾರದಿಂದ (ನ.29) ಸಂಸತ್ತಿನ ಚಳಿಗಾಲದ ಅಧಿವೇಶನ ಆರಂಭವಾಗಿದೆ. ವಿವಾದಿತ ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಮಸೂದೆಯನ್ನು ಮಂಡನೇ ಮಾಡಲಾಗುತ್ತದೆ ಎಂದು ಒಕ್ಕೂಟ ಸರ್ಕಾರ ತಿಳಿಸಿದೆ. ಈ ಹಿನ್ನೆಲೆ ಟ್ವೀಟ್ ಮಾಡಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಇಂದಿನ ಸಂಸತ್ತಿನಲ್ಲಿ ಅನ್ನದಾತರ ಹೆಸರಿನಲ್ಲಿ ಸೂರ್ಯೋದಯವಾಗಲಿದೆ ಎಂದಿದ್ದಾರೆ.

ಇಂದು ಸಂಸತ್ತಿನಲ್ಲಿ ಬಿಜೆಪಿ ನೇತೃತ್ವದ ಒಕ್ಕೂಟ ಸರ್ಕಾರದೊಂದಿಗೆ ಕೃಷಿ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ತಮ್ಮ ಪಕ್ಷವನ್ನು ಸಜ್ಜುಗೊಳಿಸಿದ್ದಾರೆ. ತಮ್ಮ ಸಂಸದರಿಗೆ ಇಂದು ಕಡ್ಡಾಯವಾಗಿ ಹಾಜರಾಗುವಂತೆ ಪ್ರತಿಪಕ್ಷ ಕಾಂಗ್ರೆಸ್ ವಿಪ್ ಜಾರಿಗೊಳಿಸಿದೆ.

ರೈತರು ಕಳೆದ ಒಂದು ವರ್ಷದಿಂದ ಪ್ರತಿಭಟನೆ ನಡೆಸುತ್ತಿದ್ದು, ನವೆಂಬರ್‍ 19 ರಂದು ಪ್ರಧಾನಿ ನರೇಂದ್ರ ಮೋದಿ ಕೇಂದ್ರ ಸರ್ಕಾರವು ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವುದಾಗಿ ಘೋಷಿಸಿದ್ದಾರೆ. ಆದರೆ, ಸಂಸತ್ತಿನಲ್ಲಿ ಕೃಷಿ ಕಾನೂನುಗಳನ್ನು ಅಧೀಕೃತವಾಗಿ ರದ್ದುಪಡಿಸಬೇಕು, ಸರ್ಕಾರವು MSP ಜೊತೆಗೆ ರೈತರ ಇತರ ಸಮಸ್ಯೆಗಳನ್ನು ಚರ್ಚಿಸಬೇಕು ಎಂದು ರೈತ ನಾಯಕರು ತಿಳಿಸಿದ್ದರು. ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ.

ಇದನ್ನೂ ಓದಿ: ರೈತ ಹೋರಾಟವನ್ನು ತಕ್ಷಣಕ್ಕೆ ಹಿಂಪಡೆಯುವುದಿಲ್ಲ: ರಾಕೇಶ್ ಟಿಕಾಯತ್

ಸಂಸತ್ತಿನ 25 ದಿನಗಳ ಚಳಿಗಾಲದ ಅಧಿವೇಶನದಲ್ಲಿ ವಿವಾದಿತ ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಮಸೂದೆ ಸೇರಿದಂತೆ 36 ಮಸೂದೆಗಳನ್ನು ಅಂಗೀಕರಿಸುವ ನಿರೀಕ್ಷೆಯಿದೆ. ಪೆಗಾಸಸ್ ಕಣ್ಗಾವಲು ಪ್ರಕರಣ ಮತ್ತು ಬೆಲೆ ಏರಿಕೆ ಸೇರಿ ಹಲವು ವಿಷಯಗಳನ್ನು ಮುಂದಿಟ್ಟುಕೊಂಡು ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಪ್ರತಿಪಕ್ಷಗಳು ಸಜ್ಜಾಗಿರುವ ಸಾಧ್ಯತೆಯಿದೆ.


ಇದನ್ನೂ ಓದಿ: ಚಳಿಗಾಲದ ಸಂಸತ್‌ ಅಧಿವೇಶನದಲ್ಲಿ ಮಂಡನೆಯಾಗಲಿವೆ 26 ಹೊಸ ಮಸೂದೆ: ಇಲ್ಲಿದೆ ಸಂಕ್ಷಿಪ್ತ ವಿವರ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಧಾನಿ ಮೋದಿ ವಿರುದ್ಧ ಕ್ರಮ ಕೈಗೊಳ್ಳುವಂತೆ ನಾಗರಿಕ ಸಂಸ್ಥೆಗಳು, ಕಾಳಜಿಯುಳ್ಳ ನಾಗರಿಕರಿಂದ ಚುನಾವಣಾ ಆಯೋಗಕ್ಕೆ...

0
ರಾಜಸ್ಥಾನದಲ್ಲಿ ಭಾನುವಾರ (ಏ.21) ನಡೆದ ಚುನಾವಣಾ ರ‍್ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಸುಳ್ಳು ಸುದ್ದಿ ಮತ್ತು ದ್ವೇಷ ಹರಡಿದ್ದಾರೆ. ಈ ಹಿನ್ನೆಲೆ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ನಾಗರಿಕ ಸಂಸ್ಥೆಗಳು...