ಸೆಬಿ ಅಧ್ಯಕ್ಷೆ ಮಾಧಬಿ ಪುರಿ ಬುಚ್ ಅವರು ಗುರುವಾರ ಸಂಸತ್ತಿನ ಸಾರ್ವಜನಿಕ ಲೆಕ್ಕಪತ್ರ ಸಮಿತಿ ಸಭೆಗೆ ಗೈರಾಗಿದ್ದು, ಸಭೆಯನ್ನು ಮುಂದೂಡಲಾಗಿದೆ. ಈ ನಡುವೆ ಸಮಿತಿಯ ಮುಖ್ಯಸ್ಥ ಕೆ.ಸಿ. ವೇಣುಗೋಪಾಲ್ ಅವರು ಏಕಪಕ್ಷೀಯ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದಾರೆ ಎಂದು ಆರೋಪಿಸಿ ಎನ್‌ಡಿಎ ಸದಸ್ಯರು ಲೋಕಸಭೆ ಸ್ಪೀಕರ್‌ಗೆ ಪತ್ರ ಬರೆದಿದ್ದಾರೆ. ಸಂಸದೀಯ ಸಮಿತಿ
“ಬೆಳಿಗ್ಗೆ 9.30 ಕ್ಕೆ ಬುಚ್ ಅವರಿಂದ ಸಮಿತಿಗೆ ಮಾಹಿತಿ ಬಂದಿದ್ದು, ಅತ್ಯಗತ್ಯ ಕಾರಣಕ್ಕೆ ಅವರು ಮತ್ತು ಅವರ ತಂಡವು ಸಮಿತಿಯ ಮುಂದೆ ಹಾಜರಾಗಲು ಸಾಧ್ಯವಾಗುವುದಿಲ್ಲ ಎಂದು ಹೇಳಿದ್ದಾರೆ” ಎಂದು ವೇಣುಗೋಪಾಲ್ ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ. ತನ್ನ ಮೇಲಿನ ಸಮನ್ಸ್‌ನಗೆ ವಿನಾಯಿತಿ ನೀಡುವಂತೆ ಬುಚ್ ಅವರ ಕೋರಿಕೆಯನ್ನು ಈ ಹಿಂದೆ ಸಮಿತಿ ನಿರಾಕರಿಸಿತ್ತು ಎಂದು ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
“ಮಹಿಳೆಯೊಬ್ಬರ ಕೋರಿಕೆಯನ್ನು ಪರಿಗಣಿಸಿ, ಇಂದಿನ ಸಭೆಯನ್ನು ಇನ್ನೊಂದು ದಿನಕ್ಕೆ ಮುಂದೂಡುವುದು ಉತ್ತಮ ಎಂದು ನಾವು ಭಾವಿಸಿದ್ದೇವೆ” ಎಂದು ವೇಣುಗೋಪಾಲ್ ಅವರು ಹೇಳಿದ್ದಾರೆ. ಈ ವೇಳೆ ಇತರ ವಿರೋಧ ಪಕ್ಷದ ಸದಸ್ಯರೊಂದಿಗೆ ಅವರು ಅಲ್ಲಿಂದ ನಿರ್ಗಮಿಸಿದ್ದಾರೆ. ಸಭೆ ಪ್ರಾರಂಭವಾದ ಕೆಲವೇ ನಿಮಿಷಗಳ ನಂತರ ಆಡಳಿತ ಮೈತ್ರಿಕೂಟ ಮತ್ತು ಇಂಡಿಯಾ ಒಕ್ಕೂಟದ ಸಂಸದರ ನಡುವೆ ಚಕಮಕಿ ನಡೆದಿದೆ ಎಂದು ವರದಿಯಾಗಿದೆ. ಸಂಸದೀಯ ಸಮಿತಿ
ಸಭೆ ಪ್ರಾರಂಭವಾಗಲು ಎರಡು ಗಂಟೆಗಳ ಅವಧಿಯಲ್ಲಿ ಬುಚ್ ತನ್ನ ನಿರ್ಧಾರದ ಬಗ್ಗೆ ಸಮಿತಿಗೆ ತಿಳಿಸುವುದು ಸಂಸದೀಯ ಸಮಿತಿಯ ತಿರಸ್ಕಾರಕ್ಕೆ ಸಮಾನವಾಗಿದೆ ಎಂದು ವಿರೋಧ ಪಕ್ಷದ ಸದಸ್ಯರೊಬ್ಬರು ಆರೋಪಿಸಿದ್ದಾರೆ. ಈ ನಡುವೆ ಕಾಂಗ್ರೆಸ್‌ನ ಹಿರಿಯ ನಾಯಕ ವೇಣುಗೋಪಾಲ್ ಅವರು ತಮ್ಮ ಅಭಿಪ್ರಾಯಗಳನ್ನು ಹೇಳಲು ಬಿಡುತ್ತಿಲ್ಲ ಎಂದು ಬಿಜೆಪಿ ಸದಸ್ಯರು ಆರೋಪಿಸಿದ್ದಾರೆ.
ಸಮಿತಿಯ ಸದಸ್ಯ ಮತ್ತು ಬಿಜೆಪಿ ಸಂಸದ ರವಿಶಂಕರ್ ಪ್ರಸಾದ್ ಸುದ್ದಿಗಾರರೊಂದಿಗೆ ಮಾತನಾಡಿ, ಹಲವು ಸ್ಥಾಯಿ ಸಮಿತಿಗಳು ವಿವಿಧ ಸಂಸ್ಥೆಗಳ ಕಾರ್ಯಕ್ಷಮತೆಯನ್ನು ಪರಿಶೀಲಿಸುತ್ತವೆ ಎಂದು ಅವರು ಹೇಳಿದ್ದಾರೆ.
ಉದಾಹರಣೆಗೆ ಸೆಕ್ಯುರಿಟೀಸ್ ಅಂಡ್ ಎಕ್ಸ್ಚೇಂಜ್ ಬೋರ್ಡ್ ಆಫ್ ಇಂಡಿಯಾ (SEBI) ಮತ್ತು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಕೆಲಸವನ್ನು ಹಣಕಾಸು ಸಮಿತಿಯು ಪರಿಶೀಲಿಸುತ್ತದೆ. ಸಂವಹನ ಮತ್ತು ಮಾಹಿತಿ ತಂತ್ರಜ್ಞಾನ ಸಮಿತಿಯು ಭಾರತೀಯ ಟೆಲಿಕಾಂ ನಿಯಂತ್ರಣ ಪ್ರಾಧಿಕಾರವನ್ನು ಪರಿಶೀಲಿಸುತ್ತದೆ” ಎಂದು ಅವರು ಹೇಳಿದ್ದಾರೆ.
“ನಮ್ಮ ಮುಖ್ಯ ಆಕ್ಷೇಪವೆಂದರೆ ಅವರು (ವೇಣುಗೋಪಾಲ್) ಇತರ ಸದಸ್ಯರನ್ನು ಸಂಪರ್ಕಿಸದೆ ಸ್ವಯಂ ಪ್ರೇರಿತ ವಿಷಯಗಳ ಆಯ್ಕೆಯನ್ನು ಮಾಡುತ್ತಿದ್ದಾರೆ. ಅವರು ಸಿದ್ಧಪಡಿಸಿದ ಪಟ್ಟಿಯ ಬಗ್ಗೆ ಯಾರಿಗೂ ಸುಳಿವು ಇರಲಿಲ್ಲ” ಎಂದು ರವಿಶಂಕರ್ ಪ್ರಸಾದ್ ಅವರು ಹೇಳಿದ್ದಾರೆ.
ವೇಣುಗೋಪಾಲ್ ವಿರುದ್ಧ ತಮ್ಮ ಪ್ರತಿಭಟನೆಯನ್ನು ದಾಖಲಿಸಲು ಎನ್‌ಡಿಎ ಸದಸ್ಯರು ಸ್ಪೀಕರ್ ಓಂ ಬಿರ್ಲಾ ಅವರನ್ನು ಭೇಟಿಯಾಗಿದ್ದಾರೆ. ಬುಚ್ ಅವರು ಅದಾನಿಗೆ ಸಹಾಯ ಮಾಡಿದ್ದಾರೆ ಎಂದು ಹಿಂಡೆನ್ ಬರ್ಗ್ ವರದಿಯ ನಂತರ ಅವರ ವಿರುದ್ಧ ಭಾರಿ ಭ್ರಷ್ಟಾಚಾರದ ಆರೋಪಗಳು ಕೇಳಿಬಂದಿತ್ತು.
ಇದನ್ನೂ ಓದಿ: ಚನ್ನಪಟ್ಟಣ ಉಪ ಚುನಾವಣೆ: ಕಾಂಗ್ರೆಸ್‌ನಿಂದ ನಾಮಪತ್ರ ಸಲ್ಲಿಸಿದ ಯೋಗೇಶ್ವರ್, ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್
ಚನ್ನಪಟ್ಟಣ ಉಪ ಚುನಾವಣೆ: ಕಾಂಗ್ರೆಸ್‌ನಿಂದ ನಾಮಪತ್ರ ಸಲ್ಲಿಸಿದ ಯೋಗೇಶ್ವರ್, ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್


