Homeಮುಖಪುಟಪ್ರಧಾನಿ ಮೋದಿ ಕುರಿತ 'ದಿ ವೈರ್'ನ ವಿಡಂಬನಾತ್ಮಕ ಅನಿಮೇಷನ್‌ಗೆ ಸಾಮಾಜಿಕ ಮಾಧ್ಯಮಗಳಲ್ಲಿ ನಿರ್ಬಂಧ

ಪ್ರಧಾನಿ ಮೋದಿ ಕುರಿತ ‘ದಿ ವೈರ್’ನ ವಿಡಂಬನಾತ್ಮಕ ಅನಿಮೇಷನ್‌ಗೆ ಸಾಮಾಜಿಕ ಮಾಧ್ಯಮಗಳಲ್ಲಿ ನಿರ್ಬಂಧ

- Advertisement -
- Advertisement -

ಸುದ್ದಿ ಸಂಸ್ಥೆ ‘ದಿ ವೈರ್’ ಪೋಸ್ಟ್ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿಯವರ ವಿಡಂಬನಾತ್ಮಕ ಅನಿಮೇಷನ್ ಅನ್ನು ಸಾಮಾಜಿಕ ಮಾಧ್ಯಮ ವೇದಿಕೆಗಳಾದ ಇನ್‌ಸ್ಟಾಗ್ರಾಮ್, ಫೇಸ್‌ಬುಕ್ ಮತ್ತು ಎಕ್ಸ್ ನಿರ್ಬಂಧಿಸಿವೆ.

ಸೋಮವಾರ (ಫೆ.10) ಸಂಜೆ ಸುಮಾರು ಎರಡು ಗಂಟೆಗಳ ಕಾಲ ವೈರ್‌ನ ಇನ್‌ಸ್ಟಾಗ್ರಾಮ್ ಖಾತೆ ಭಾರತದಲ್ಲಿ ಕಾಣಿಸುತ್ತಿರಲಿಲ್ಲ ಎಂದು ವರದಿಯಾಗಿದೆ.

“ಈ ಪೇಜ್ ಭಾರತದಲ್ಲಿ ‘ಲಭ್ಯವಿಲ್ಲ’, ಏಕೆಂದರೆ ಈ ವಿಷಯವನ್ನು ನಿರ್ಬಂಧಿಸಲು ಬಂದಿರುವ ‘ಕಾನೂನಾತ್ಮಕ ವಿನಂತಿಗೆ’ ಪ್ಲಾಟ್‌ಫಾರ್ಮ್ ಬದ್ಧವಾಗಿದೆ” ಎಂಬ ಸಂದೇಶವನ್ನು ವೈರ್ ಪೇಜ್‌ಗೆ ಭೇಟಿ ನೀಡಿದವರು ನೋಡಿದ್ದಾರೆ ಎಂದು ವರದಿಗಳು ಉಲ್ಲೇಖಿಸಿವೆ.

ಭಾರತದಿಂದ ಹೊರಗಿರುವ ಬಳಕೆದಾರರು ಮತ್ತು ವಿಪಿಎನ್ ಬಳಸುವವರಿಗೆ ಮಾತ್ರ ಪೇಜ್ ಕಾಣಿಸುತ್ತಿತ್ತು ಎಂದು ದಿ ವೈರ್ ವರದಿ ಹೇಳಿದೆ.

ದಿ ವೈರಲ್ ಶನಿವಾರ (ಫೆ.7) ಸಂಜೆ ಸುಮಾರು 6:30ಕ್ಕೆ ತನ್ನ ಇನ್‌ಸ್ಟಾಗ್ರಾಮ್, ಫೇಸ್‌ಬುಕ್ ಮತ್ತು ಎಕ್ಸ್ ಪ್ಲಾಟ್‌ಫಾರ್ಮ್‌ಗಳಿಗೆ ಅಪ್ಲೋಡ್ ಮಾಡಿದ್ದ 52 ಸೆಕೆಂಡ್‌ಗಳ ಅನಿಮೇಟೆಡ್ ವಿಡಿಯೋವನ್ನು ಮೂರೂ ವೇದಿಕೆಗಳಲ್ಲಿ ನಿರ್ಬಂಧಿಸಲಾಗಿದೆ. ಮಂಗಳವಾರ ಮಧ್ಯಾಹ್ನ 3 ಗಂಟೆಯ ವೇಳೆಗೆ ವೈರ್‌ನ ಇನ್‌ಸ್ಟಾಗ್ರಾಮ್ ಖಾತೆ ಮರುಸ್ಥಾಪಿಸಲಾಗಿದೆ. ಆದರೆ, ಅಪ್ಲೋಡ್ ಮಾಡಲಾಗಿದ್ದ ವಿಡಂಬನಾತ್ಮಕ ಅನಿಮೇಷನ್ ಮಾತ್ರ ಮೂರೂ ಪ್ಲಾಟ್‌ಫಾರ್ಮ್‌ಗಳಲ್ಲಿ ಕಾಣಿಸುತ್ತಿಲ್ಲ ಎನ್ನಲಾಗಿದೆ.

ಮಾಜಿ ಸೇನಾ ಮುಖ್ಯಸ್ಥ ಎಂ.ಎಂ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆಯ ಬಗ್ಗೆ ಸಂಸತ್ತಿನಲ್ಲಿ ಕೇಳಿದ ಪ್ರಶ್ನೆಗಳಿಗೆ ಉತ್ತರಿಸದೆ ತಪ್ಪಿಸಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ವೈರ್‌ನ ಅನಿಮೇಷನ್ ವಿಡಂಬನೆ ಮಾಡಿತ್ತು.

ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ತನ್ನ ಖಾತೆಯನ್ನು ನಿರ್ಬಂಧಿಸಲು ನಿರ್ದಿಷ್ಟವಾಗಿ ಆದೇಶಿಸಿಲ್ಲ ಎಂದು ತನಗೆ ತಿಳಿಸಿದೆ ಎಂದು ಸೋಮವಾರ ‘ದಿ ವೈರ್’ ಹೇಳಿದೆ.

ಆದಾಗ್ಯೂ, ಸಚಿವಾಲಯ ಕೇವಲ 52 ಸೆಕೆಂಡ್‌ಗಳ ವಿಡಂಬನಾತ್ಮಕ ಕಾರ್ಟೂನ್ ಅನ್ನು ನಿರ್ಬಂಧಿಸುವಂತೆ ಮೆಟಾ ಸಂಸ್ಥೆಗೆ ಸೂಚಿಸಿತ್ತು. ಕಂಪನಿ ತಪ್ಪಾಗಿ ಇಡೀ ಇನ್‌ಸ್ಟಾಗ್ರಾಮ್ ಖಾತೆಯನ್ನೇ ನಿರ್ಬಂಧಿಸಿದೆ ಎಂಬ ವಿಷಯ ತನಗೆ ಅನಧಿಕೃತ ಮೂಲಗಳಿಂದ ತಿಳಿದುಬಂದಿದೆ ಎಂದು ದಿ ವೈರ್ ತಿಳಿಸಿದೆ.

ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ನಿರ್ದಿಷ್ಟ ವಿಷಯ ಅಥವಾ ಪೋಸ್ಟ್ ಅನ್ನು ನಿರ್ಬಂಧಿಸುವ ಮೊದಲು ಕೇಂದ್ರ ಸರ್ಕಾರ ಪೋಸ್ಟ್ ಮಾಡಿದವರಿಗೆ ಮುಂಚಿತವಾಗಿ ಮಾಹಿತಿ ನೀಡುವುದು ಕಡ್ಡಾಯವಾಗಿದೆ. ಆದರೆ, ಈ ವಿಷಯಕ್ಕೆ ಸಂಬಂಧಿಸಿದಂತೆ ತನಗೆ ಯಾವುದೇ ರೀತಿಯ ಲಿಖಿತ ಮಾಹಿತಿ ಬಂದಿಲ್ಲ ಎಂದು ‘ದಿ ವೈರ್’ ಹೇಳಿಕೊಂಡಿದೆ.

ಬುಧವಾರ (ಫೆ.11) ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಾಕಿರುವ ದಿ ವೈರ್ ಸಂಪಾದಕ ಸಿದ್ಧಾರ್ಥ್ ವರದರಾಜನ್, “ನಮ್ಮ ಕಾರ್ಟೂನ್ ಮೇಲೆ ನರೇಂದ್ರ ಮೋದಿಯವರು ಹೇರಿರುವ ಅಸಂಬದ್ಧ ಮತ್ತು ಸರ್ವಾಧಿಕಾರಿ ಧೋರಣೆಯ ನಿಷೇಧದ ವಿರುದ್ಧ ನಾವು ಹೋರಾಡುತ್ತಿದ್ದೇವೆ. ‘ದಿ ವೈರ್’ ಮತ್ತು ತಮ್ಮ ವಾಕ್ ಸ್ವಾತಂತ್ರ್ಯ ಹಾಗೂ ನಗುವಿನ ಹಕ್ಕನ್ನು ಪ್ರೀತಿಸುವ ಸಾರ್ವಜನಿಕರು ಈ ಹೋರಾಟದಲ್ಲಿ ಗೆಲ್ಲಲು ದಯವಿಟ್ಟು ಉದಾರವಾಗಿ ದೇಣಿಗೆ ನೀಡಿ” ಎಂದು ಬರೆದುಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...