Homeಮುಖಪುಟಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

- Advertisement -
- Advertisement -

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ ವಿವಾದಗಳನ್ನು ಸುಪ್ರೀಂ ಕೋರ್ಟ್ ವಿಶೇಷ ಲೋಕ ಅದಾಲತ್‌ಗೆ ಒಪ್ಪಿಸಿದೆ. “ಸಮಾಧಾನ್ ಸಮಾರೋಹ್” ಎಂಬ ಹೆಸರಿನ ಈ ವಿಶೇಷ ಲೋಕ ಅದಾಲತ್ ಆಗಸ್ಟ್ 21ರಿಂದ 23ರವರೆಗೆ ಸುಪ್ರೀಂ ಕೋರ್ಟ್ ಆವರಣದಲ್ಲಿ ನಡೆಯಲಿದೆ.

ಮೂರು ವಿವಾದಗಳನ್ನು ‘ಸುಪ್ರೀಂ ಕೋರ್ಟ್ ಆಕ್ಷನ್ ಫಾರ್ ಮೀಡಿಯೇಟೆಡ್ ಅಡ್ಜುಡಿಕೇಶನ್ ಆಂಡ್ ಡಿಸ್ಪ್ಯೂಟ್ಸ್ ಹಾರ್ಮೋನೈಸೇಶನ್ ಅಕ್ರಾಸ್ ನೇಷನ್-ಸಮಾಧಾನ್ ಸಮಾರೋಹ್ 2026’ ಅಡಿಯಲ್ಲಿ ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳುವ ಸಾಧ್ಯತೆಗಳನ್ನು ಪರಿಶೀಲಿಸುವಂತೆ ಸುಪ್ರೀಂ ಕೋರ್ಟ್ (ಆಡಳಿತಾತ್ಮಕ ವಿಭಾಗ) ಸಂಬಂಧಪಟ್ಟ ಪಕ್ಷಗಾರರಿಗೆ ಪತ್ರ ಬರೆದಿದೆ ಎಂದು livelaw.in ವರದಿ ಮಾಡಿದೆ.

ಈ “ಸಮಾಧಾನ್ ಸಮಾರೋಹ್”ವು ಮುಕ್ತ ಸಂವಾದ ಮತ್ತು ಮಾತುಕತೆಯ ಮೂಲಕ ಪರಿಹಾರ ಕಂಡುಕೊಳ್ಳಲು ನೆರವಾಗುವ ಒಂದು ವೇದಿಕೆಯಾಗಿದೆ. ಆದರೆ, ಯಾವುದೇ ಅಂತಿಮ ನಿರ್ಧಾರ ಅಥವಾ ರಾಜಿ ಸಂಧಾನವು ಸಂಪೂರ್ಣವಾಗಿ ಇದರಲ್ಲಿ ಭಾಗಿಯಾಗಿರುವ ಪಕ್ಷಗಾರರ ಪರಸ್ಪರ ಒಪ್ಪಿಗೆಯನ್ನು ಅವಲಂಬಿಸಿರುತ್ತದೆ.

ವರದಿಗಳ ಪ್ರಕಾರ, ಉಭಯ ಪಕ್ಷಗಳೂ (ಹಿಂದೂ-ಮುಸ್ಲಿಂ) ಮಧ್ಯಸ್ಥಿಕೆಯ ಮೂಲಕ ರಾಜಿ ಸಂಧಾನ ಮಾಡಿಕೊಳ್ಳುವುದನ್ನು ವಿರೋಧಿಸಿದ್ದು, ಈ ವಿಷಯವನ್ನು ಕಾನೂನು ಅರ್ಹತೆಯ ಆಧಾರದ ಮೇಲೆ ನ್ಯಾಯಾಲಯದ ಹೋರಾಟದ ಮೂಲಕವೇ ಬಗೆಹರಿಸಿಕೊಳ್ಳಲು ನಿರ್ಧರಿಸಿದ್ದಾರೆ.

ಜ್ಞಾನವಾಪಿ ವಿವಾದದ ಮುಸ್ಲಿಂ ಪಕ್ಷಗಾರರಾದ ಅಂಜುಮನ್ ಇಂತೇಜಾಮಿಯಾ ಮಸೀದಿ ಸಮಿತಿಯು ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪವನ್ನು ತಿರಸ್ಕರಿಸಿರುವುದಾಗಿ ಅಧಿಕೃತ ಹೇಳಿಕೆಯನ್ನು ಬಿಡುಗಡೆ ಮಾಡಿದೆ.

“ವಿವಿಧ ನ್ಯಾಯಾಲಯಗಳಲ್ಲಿ ಬಾಕಿ ಇರುವ ಲಕ್ಷಾಂತರ ಪ್ರಕರಣಗಳ ಹೊರೆಯನ್ನು ಕಡಿಮೆ ಮಾಡಲು, ಗೌರವಾನ್ವಿತ ಸುಪ್ರೀಂ ಕೋರ್ಟ್ ಪರಸ್ಪರ ಒಪ್ಪಿಗೆಯ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಲು ‘ಸಮಾಧಾನ್ ಸಮಾರೋಹ್‌’ ಅನ್ನು ಪ್ರಾರಂಭಿಸಿದೆ. ಇದರಲ್ಲಿ, ಜಿಲ್ಲಾ ನ್ಯಾಯಾಲಯ, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ಮಟ್ಟದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಪರಸ್ಪರ ಒಪ್ಪಿಗೆಯ ಆಧಾರದ ಮೇಲೆ ವಿಶೇಷ ಲೋಕ ಅದಾಲತ್ ಮೂಲಕ ಇತ್ಯರ್ಥಪಡಿಸಬೇಕಾಗಿದೆ. ಜ್ಞಾನವಾಪಿ ಮಸೀದಿಯಂತಹ ಅತ್ಯಂತ ಸೂಕ್ಷ್ಮ ಪ್ರಕರಣಗಳನ್ನೂ ಇದರಲ್ಲಿ ಸೇರಿಸಲಾಗಿದೆ. ಜ್ಞಾನವಾಪಿ ಮಸೀದಿ ಪ್ರಕರಣವು ಸುದ್ದಿಯಲ್ಲಿ ಪ್ರಮುಖವಾಗಿ ಪ್ರಸ್ತಾಪವಾಗಿರುವುದರಿಂದ ಸಾಮಾನ್ಯ ಮುಸ್ಲಿಮರಲ್ಲಿ ಚರ್ಚೆಯ ವಿಷಯವಾಗಿದೆ. ಈ ಆಹ್ವಾನವು ಕಡ್ಡಾಯವಾಗಿ ಪಾಲಿಸಬೇಕಾದದ್ದಲ್ಲ ಎಂಬುದನ್ನು ಇಲ್ಲಿ ಉಲ್ಲೇಖಿಸುವುದು ಮುಖ್ಯವಾಗಿದೆ, ಆದ್ದರಿಂದ ಅಂಜುಮನ್ ಇಂತೇಜಾಮಿಯಾ ಮಸೀದಿಯು ಈ ಸಮಾಧಾನ ಸಮಾರೋಹದಲ್ಲಿ ಯಾವುದೇ ಮಟ್ಟದಲ್ಲೂ ಭಾಗವಹಿಸದಿರಲು ನಿರ್ಧರಿಸಿದೆ” ಎಂದು ಜ್ಞಾನವಾಪಿ ಪಕ್ಷಗಾರರು ಹೇಳಿರುವುದಾಗಿ livelaw.in ವರದಿ ಮಾಡಿದೆ.

ವಿವಾದಗಳ ಬಗ್ಗೆ

ಸಂಭಾಲ್ ಮಸೀದಿ

ಅಲಹಾಬಾದ್ ಹೈಕೋರ್ಟ್‌ನ 2025 ಮೇ 19ರ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಡೆಸುತ್ತಿದೆ. ಹೈಕೋರ್ಟ್ ತನ್ನ ತೀರ್ಪಿನಲ್ಲಿ, ಸಂಭಾಲ್‌ನಲ್ಲಿರುವ ಶಾಹಿ ಜಾಮಾ ಮಸೀದಿಗೆ ಸಂಬಂಧಿಸಿದ ಸಿವಿಲ್ ದಾವೆಗೆ ಆರಾಧನಾ ಸ್ಥಳಗಳ (ವಿಶೇಷ ನಿಬಂಧನೆಗಳು) ಕಾಯ್ದೆ 1991ರ ಅಡಿಯಲ್ಲಿ ಯಾವುದೇ ತಡೆಯಿಲ್ಲ ಮತ್ತು ಈ ದಾವೆಯ ವಿಚಾರಣೆಯನ್ನು ಮುಂದುವರಿಸಬಹುದು ಎಂದು ಆದೇಶಿಸಿತ್ತು.

ಮಸೀದಿಯನ್ನು 1526ರಲ್ಲಿ ಕಲ್ಕಿ ದೇವರಿಗೆ ಸಮರ್ಪಿತವಾಗಿದ್ದ ದೇವಸ್ಥಾನವನ್ನು ಭಾಗಶಃ ಧ್ವಂಸಗೊಳಿಸಿ ನಿರ್ಮಿಸಲಾಗಿದೆ ಎಂದು ಪ್ರತಿಪಾದಿಸಿ ಎಂಟು ಜನ ಹಿಂದೂ ವಾದಿಗಳು ಈ ದಾವೆಯನ್ನು ಹೂಡಿದ್ದಾರೆ. ಅವರು ಪ್ರಾಚೀನ ಸ್ಮಾರಕಗಳು ಮತ್ತು ಪುರಾತತ್ವ ನಿವೇಶನಗಳು ಹಾಗೂ ಅವಶೇಷಗಳ ಕಾಯ್ದೆ, 1958ರ ಅಡಿಯಲ್ಲಿ ಸಂರಕ್ಷಿತ ಸ್ಮಾರಕವಾಗಿರುವ ಈ ಸ್ಥಳಕ್ಕೆ ಪ್ರವೇಶಾವಕಾಶವನ್ನು ಕೋರಿದ್ದಾರೆ.

ವಿಚಾರಣಾ ನ್ಯಾಯಾಲಯ ಮಸೀದಿಯ ಆವರಣದ ಸ್ಥಳೀಯ ತನಿಖೆ ನಡೆಸಲು ಅಡ್ವೊಕೇಟ್ ಕಮಿಷನರ್ ಒಬ್ಬರನ್ನು ನೇಮಿಸಿತ್ತು, ಇದು ನವೆಂಬರ್ 2024ರಲ್ಲಿ ಕೋಮು ಹಿಂಸಾಚಾರಕ್ಕೆ ಕಾರಣವಾಗಿತ್ತು. ಸಮೀಕ್ಷೆಯ ಆದೇಶವನ್ನು ವಿರೋಧಿಸಿ ಮಸೀದಿ ಸಮಿತಿಯು ಸಲ್ಲಿಸಿದ್ದ ಅರ್ಜಿ ಹೈಕೋರ್ಟ್‌ನಲ್ಲಿ ಬಾಕಿ ಇರುವಾಗ, ಸುಪ್ರೀಂ ಕೋರ್ಟ್ ನಂತರ ವಿಚಾರಣಾ ನ್ಯಾಯಾಲಯದ ಪ್ರಕ್ರಿಯೆಗಳಿಗೆ ತಡೆಯಾಜ್ಞೆ ನೀಡಿತ್ತು. ಪ್ರಸ್ತುತ, ಮಸೀದಿಯ ವಿರುದ್ಧ ಹಿಂದೂ ವಾದಿಗಳು ಹೂಡಿರುವ ದಾವೆಗೆ ಸಂಬಂಧಿಸಿದಂತೆ ಯಥಾಸ್ಥಿತಿ ಕಾಯ್ದುಕೊಳ್ಳುವ ಆದೇಶ ಜಾರಿಯಲ್ಲಿದೆ.

ಜ್ಞಾನವಾಪಿ ಮಸೀದಿ

ಜ್ಞಾನವಾಪಿ ಪ್ರಕರಣದಲ್ಲಿ, ಆರಾಧನಾ ಸ್ಥಳಗಳ (ವಿಶೇಷ ನಿಬಂಧನೆಗಳು) ಕಾಯ್ದೆ 1991ರ ಅಡಿಯಲ್ಲಿ ಜ್ಞಾನವಾಪಿ ವಿವಾದಕ್ಕೆ ಸಂಬಂಧಿಸಿದ ಸಿವಿಲ್ ದಾವೆಗಳ ವಿಚಾರಣೆಗೆ ಯಾವುದೇ ತಡೆಯಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಅಂಜುಮನ್ ಇಂತೇಜಾಮಿಯಾ ಮಸೀದಿ ಸಮಿತಿಯು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಡೆಸುತ್ತಿದೆ.

ಆಗಸ್ಟ್ 15, 1947ರಂದು ಇದ್ದಂತೆ ಈ ಸಂಕೀರ್ಣದ ಧಾರ್ಮಿಕ ಸ್ವರೂಪವನ್ನು ವಾರಣಾಸಿ ಸಿವಿಲ್ ನ್ಯಾಯಾಲಯವು ನಿರ್ಧರಿಸಬೇಕಾಗಿದೆ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ವಿಚಾರಣಾ ನ್ಯಾಯಾಲಯ ಪ್ರಸ್ತುತ ಮಾಲೀಕತ್ವ, ಧಾರ್ಮಿಕ ಸ್ವರೂಪ ಮತ್ತು ಪೂಜಾ ಹಕ್ಕುಗಳಿಗೆ ಸಂಬಂಧಿಸಿದ ದಾವೆಯ ವಿಚಾರಣೆಯನ್ನು ನಡೆಸುತ್ತಿದೆ.

ಹೈಕೋರ್ಟ್ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ (ಎಎಸ್‌ಐ) ಜ್ಞಾನವಾಪಿ ಸಂಕೀರ್ಣದ ಸಮೀಕ್ಷೆಯನ್ನು ಮುಂದುವರಿಸಲು ಅನುಮತಿ ನೀಡಿತ್ತು. ಮಸೀದಿ ನಿರ್ಮಾಣಕ್ಕೂ ಮುನ್ನ ಆ ಸ್ಥಳದಲ್ಲಿ ದೇವಸ್ಥಾನವಿತ್ತು ಎಂದು ಎಎಸ್‌ಐ ವರದಿ ತಿಳಿಸಿತ್ತು. ನಂತರ ವಿಚಾರಣಾ ನ್ಯಾಯಾಲಯವು ವ್ಯಾಸ್ ತೆಹಖಾನಾದಲ್ಲಿ (ಜ್ಞಾನವಾಪಿ ಮಸೀದಿಯ ದಕ್ಷಿಣದ ನೆಲಮಾಳಿಗೆ) ಪೂಜೆ ಸಲ್ಲಿಸಲು ಅನುಮತಿ ನೀಡಿತ್ತು.

ನಂತರ, ಸುಪ್ರೀಂ ಕೋರ್ಟ್ ಮಸೀದಿಯಲ್ಲಿ ನಮಾಝ್ ಮತ್ತು ನೆಲಮಾಳಿಗೆಯಲ್ಲಿ ಪೂಜೆ ನಡೆಸುವುದಕ್ಕೆ ಸಂಬಂಧಿಸಿದಂತೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಆದೇಶಿಸಿತ್ತು.

ಶ್ರೀ ಕೃಷ್ಣ ಜನ್ಮಭೂಮಿ – ಶಾಹಿ ಇದ್ಗಾ

ಕೃಷ್ಣ ಜನ್ಮಭೂಮಿ ಶಾಹಿ ಇದ್ಗಾ ಮಸೀದಿ ವಿವಾದದಲ್ಲಿ, ಭಗವಾನ್ ಕೃಷ್ಣನ ಜನ್ಮಸ್ಥಳವಾಗಿದ್ದ ದೇವಸ್ಥಾನವನ್ನು ಮೊಘಲ್ ಚಕ್ರವರ್ತಿ ಔರಂಗಜೇಬನು ಧ್ವಂಸಗೊಳಿಸಿ ಈ ಶಾಹಿ ಇದ್ಗಾ ಮಸೀದಿಯನ್ನು ನಿರ್ಮಿಸಿದ್ದಾನೆ ಎಂದು ಪ್ರತಿಪಾದಿಸಿರುವ ವಾದಿಗಳು, ಮಸೀದಿಯನ್ನು ಅಲ್ಲಿಂದ ತೆರವುಗೊಳಿಸುವಂತೆ ಕೋರಿದ್ದಾರೆ. ವಾದಿಗಳು ಆ ಸ್ಥಳದಲ್ಲಿ ಮಸೀದಿ ಮುಂದುವರಿಯಲು ಅನುಮತಿ ನೀಡಿದ್ದ 1968ರ ರಾಜಿ ತೀರ್ಪನ್ನು ಪ್ರಶ್ನಿಸಿದ್ದಾರೆ.

ಈ ವಿಷಯಕ್ಕೆ ಸಂಬಂಧಿಸಿದಂತೆ ಒಟ್ಟು 18 ದಾವೆಗಳಿದ್ದು, ಅಲಹಾಬಾದ್ ಹೈಕೋರ್ಟ್ ಅವುಗಳನ್ನು ತನ್ನ ವ್ಯಾಪ್ತಿಗೆ ವರ್ಗಾಯಿಸಿಕೊಂಡಿದೆ. ಇವುಗಳಲ್ಲಿ ಒಂದು ದಾವೆಯನ್ನು ದೇವರ ಹೆಸರಿನಲ್ಲಿ ‘ಭಗವಾನ್ ಶ್ರೀಕೃಷ್ಣ ವಿರಾಜಮಾನ್’ ಪರವಾಗಿ ಆಪ್ತ ಸ್ನೇಹಿತನ ಮೂಲಕ ದಾಖಲಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...