Homeಮುಖಪುಟಪಕ್ಷದ ಬಹಿರಂಗ ಟೀಕೆ; ಐಟಿ ಸೆಲ್ ಮುಖ್ಯಸ್ಥನನ್ನು ಉಚ್ಚಾಟಿಸಿದ ಕೇರಳ ಕಾಂಗ್ರೆಸ್

ಪಕ್ಷದ ಬಹಿರಂಗ ಟೀಕೆ; ಐಟಿ ಸೆಲ್ ಮುಖ್ಯಸ್ಥನನ್ನು ಉಚ್ಚಾಟಿಸಿದ ಕೇರಳ ಕಾಂಗ್ರೆಸ್

- Advertisement -
- Advertisement -

ಕೇರಳದ ಪಾಲಕ್ಕಾಡ್ ವಿಧಾನಸಭಾ ಕ್ಷೇತ್ರದ ಮುಂಬರುವ ಉಪಚುನಾವಣೆಯಲ್ಲಿ ಅಭ್ಯರ್ಥಿ ಆಯ್ಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕತ್ವವನ್ನು ಸಾರ್ವಜನಿಕವಾಗಿ ಟೀಕಿಸಿದ್ದಕ್ಕಾಗಿ ಪಕ್ಷದ ಡಿಜಿಟಲ್ ಮೀಡಿಯಾ ಸೆಲ್ ಸಂಚಾಲಕ ಪಿ ಸರಿನ್ ಅವರನ್ನು ಉಚ್ಚಾಟಿಸಿದೆ. ಪಕ್ಷದಿಂದ ಉಚ್ಷಾಟಿಸಲ್ಪಟ್ಟ ಸರಿನ್ ಈಗ ರಾಜ್ಯದ ಆಡಳಿತಾರೂಢ ಎಲ್‌ಡಿಎಫ್‌ ಬೆಂಬಲಿತ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ ಎಂಬ ಊಹಾಪೋಹಗಳಿವೆ.ಪಕ್ಷದ ಬಹಿರಂಗ ಟೀಕೆ

“ನನಗೆ ಅವಕಾಶ ಸಿಕ್ಕರೆ, ನಾನು ಎಡ ಪಂಥೀಯರೊಂದಿಗೆ ನಿಂತು ಜನರ ಸೇವೆ ಮಾಡಲು ಸಿದ್ಧನಿದ್ದೇನೆ. ನನಗೆ ಜಾಗವಿದೆಯೇ ಎಂದು ನಾನು ಎಲ್‌ಡಿಎಫ್‌ಗೆ ಕೇಳಿದ್ದೇನೆ. ಅವರ ಪ್ರತಿಕ್ರಿಯೆಗಾಗಿ ನಾನು ಕಾಯುತ್ತಿದ್ದೇನೆ” ಎಂದು ಸರಿನ್ ಗುರುವಾರ ಮಾಧ್ಯಮಗಳಿಗೆ ಹೇಳಿದ್ದಾರೆ.ಪಕ್ಷದ ಬಹಿರಂಗ ಟೀಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಕೇರಳದ ಪ್ರತಿಪಕ್ಷದ ನಾಯಕ ವಿಡಿ ಸತೀಶನ್ ಟೀಕಿಸಿದ ಅವರು, “ಕೇರಳದಲ್ಲಿ ಕಾಂಗ್ರೆಸ್ ಅವನತಿಗೆ ಅವರೇ ಜವಾಬ್ದಾರರು. ಸತೀಶನ್ ಅವರು ಪಕ್ಷವನ್ನು ಹೈಜಾಕ್ ಮಾಡಿದ್ದು, ಪಕ್ಷದ ಕಾರ್ಯಕರ್ತರನ್ನು ವಂಚಿಸಿದ್ದಾರೆ” ಎಂದು ಆರೋಪಿಸಿದ್ದಾರೆ.

ಬುಧವಾರದಂದು ಸರಿನ್ ಅವರು ಪತ್ರಿಕಾಗೋಷ್ಠಿ ನಡೆಸಿ ಪಕ್ಷದ ನಾಯಕತ್ವವನ್ನು ಕಟುವಾಗಿ ಟೀಕಿಸಿದ್ದರು. ಅದರಲ್ಲೂ ಮುಖ್ಯವಾಗಿ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ರಾಹುಲ್ ಮಂಕೂಟತಿಲ್ ಅವರನ್ನು ಪಾಲಕ್ಕಾಡ್‌ನಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಸುವ ಪಕ್ಷದ ನಿರ್ಧಾರವನ್ನು ಅವರು ಖಂಡಿಸಿದ್ದರು.

ಪಕ್ಷದ ಅಭ್ಯರ್ಥಿ ರಾಹುಲ್‌ಗಿಂತ ಉಪಚುನಾವಣೆಯಲ್ಲಿ ಗೆಲ್ಲುವ ಉತ್ತಮ ಅವಕಾಶ ನನಗಿದೆ ಎಂದು ಪ್ರತಿಪಾದಿಸಿದ ಅವರು, ಕಾಂಗ್ರೆಸ್ ತನ್ನ ಅಭ್ಯರ್ಥಿ ಆಯ್ಕೆಯನ್ನು ಮರುಪರಿಶೀಲಿಸದಿದ್ದರೆ ಹರಿಯಾಣದಂತೆಯೇ ಇಲ್ಲಿಯೂ ಭವಿಷ್ಯದಲ್ಲಿ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಗುರುವಾರ ಅಧಿಕೃತ ಉಚ್ಚಾಟನೆ ಪತ್ರವನ್ನು ಹೊರಡಿಸುವ ಮೂಲಕ ಸರಿನ್ ಅವರ ಭಿನ್ನಾಭಿಪ್ರಾಯಕ್ಕೆ ಕಾಂಗ್ರೆಸ್ ಪ್ರತಿಕ್ರಿಯಿಸಿದೆ. “ಗಂಭೀರ ಪಕ್ಷ ವಿರೋಧಿ ಚಟುವಟಿಕೆಗಳು ಮತ್ತು ಅಶಿಸ್ತಿನ ಕಾರಣದಿಂದ ಸರಿನ್ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ತೆಗೆದುಹಾಕಲಾಗಿದೆ” ಕೆಪಿಸಿಸಿ ಅಧ್ಯಕ್ಷ ಕೆ ಸುಧಾಕರನ್ ಅವರು ಹೇಳಿದ್ದಾರೆ.

ಆದಾಗ್ಯೂ, ಸರಿನ್ ಅವರು ತಮ್ಮ ರಾಜಕೀಯ ಭವಿಷ್ಯದ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದು, “ಕಾಂಗ್ರೆಸ್‌ಗೆ ಕೇರಳದಲ್ಲಿ ಬಿಜೆಪಿಯನ್ನು ಎದುರಿಸಲು ಸಾಧ್ಯವಿಲ್ಲ. ಅದನ್ನು ಎಡಪಕ್ಷಗಳು ಮಾಡಬಲ್ಲುದು” ಎಂದು ಪ್ರತಿಪಾದಿಸಿದ್ದಾರೆ.

ರಾಹುಲ್ ಮಂಕೂಟತಿಲ್ ಅವರನ್ನು ಟೀಕಿಸಿದ ಅವರು, “ಕೇವಲ ಸಾಮಾಜಿಕ ಮಾಧ್ಯಮದ ರೀಲ್‌ಗಳನ್ನು ಪೋಸ್ಟ್ ಮಾಡುವುದು ಮತ್ತು ಜೈಲಿಗೆ ಹೋಗುವುದು ಒಬ್ಬ ವ್ಯಕ್ತಿ ಚುನಾವಣೆಯಲ್ಲಿ ಸ್ಪರ್ಧಿಸುವ ಮಾನದಂಡವಲ್ಲ” ಎಂದು ಹೇಳಿದ್ದಾರೆ. ಅಷ್ಟೆ ಅಲ್ಲದೆ, ಎಲ್‌ಡಿಎಫ್‌ನ ಭಿನ್ನಮತೀಯ ಶಾಸಕ ಪಿವಿ ಅನ್ವರ್ ಮತ್ತು ಬಿಜೆಪಿಯ ಸದಸ್ಯರು ಕೂಡಾ ತಮ್ಮನ್ನು ಅವರೊಂದಿಗೆ ಸೇರಲು ಸಂಪರ್ಕಿಸಿದ್ದಾರೆ ಎಂದು ಸರಿನ್ ಹೇಳಿದ್ದಾರೆ.

ಇದನ್ನೂ ಓದಿ: FACT CHECK : ವ್ಯಕ್ತಿಯೊಬ್ಬರು ಕೇಸರಿ ಬಟ್ಟೆ ಹೊದ್ದು ಮಲಗಿದ್ದಕ್ಕೆ ಮುಸ್ಲಿಮರು ಥಳಿಸಿದ್ದಾರೆ ಎಂಬುವುದು ಸುಳ್ಳು

FACT CHECK : ವ್ಯಕ್ತಿಯೊಬ್ಬರು ಕೇಸರಿ ಬಟ್ಟೆ ಹೊದ್ದು ಮಲಗಿದ್ದಕ್ಕೆ ಮುಸ್ಲಿಮರು ಥಳಿಸಿದ್ದಾರೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...