Homeಮುಖಪುಟಟಿಕೆಟ್‌ ಕೈತಪ್ಪಿದಕ್ಕೆ 'ಮತದಾನ' ಮಾಡದ ಬಿಜೆಪಿ ಸಂಸದ: ಶೋಕಾಸ್ ನೋಟಿಸ್ ಜಾರಿ

ಟಿಕೆಟ್‌ ಕೈತಪ್ಪಿದಕ್ಕೆ ‘ಮತದಾನ’ ಮಾಡದ ಬಿಜೆಪಿ ಸಂಸದ: ಶೋಕಾಸ್ ನೋಟಿಸ್ ಜಾರಿ

- Advertisement -
- Advertisement -

ಕೇಂದ್ರದ ಮಾಜಿ ಸಚಿವ ಹಾಗೂ ಸಂಸದ ಜಯಂತ್ ಸಿನ್ಹಾ ಮತದಾನ ಮಾಡಲು ವಿಫಲರಾದ ಹಿನ್ನೆಲೆಯಲ್ಲಿ ಬಿಜೆಪಿ ಅವರ ವಿರುದ್ಧ ಕ್ರಮ ಕೈಗೊಂಡಿದ್ದು, ಎರಡು ದಿನಗಳಲ್ಲಿ ಉತ್ತರ ನೀಡುವಂತೆ ಶೋಕಾಸ್ ನೋಟಿಸ್ ಜಾರಿ ಮಾಡಿದೆ.

ಜಾರ್ಖಂಡ್‌ನ ಹಜಾರಿಬಾಗ್ ಕ್ಷೇತ್ರದ ಹಾಲಿ ಸಂಸದರಾಗಿರುವ ಜಯಂತ್ ಸಿನ್ಹಾ ಬದಲಿಗೆ ಈ ಬಾರಿ ಮನೀಷ್ ಜೈಸ್ವಾಲ್ ಅವರಿಗೆ ಟಿಕೆಟ್‌ ನೀಡಲಾಗಿತ್ತು. ಇದರಿಂದ ಮುನಿಸಿಕೊಂಡಿದ್ದ ಜಯಂತ್ ಸಿನ್ಹಾ ಸಂಘಟನಾ ಕೆಲಸ ಮತ್ತು ಚುನಾವಣಾ ಪ್ರಚಾರದಲ್ಲಿ ಭಾಗವಹಿಸದೆ ದೂರ ಉಳಿದುಕೊಂಡು ಅಸಮಾಧಾನವನ್ನು ಹೊರಹಾಕಿದ್ದರು. ನಿನ್ನೆ ನಡೆದ ಚುನಾವಣೆಯಲ್ಲಿ ಕನಿಷ್ಠ ಪಕ್ಷ ಮತದಾನವನ್ನು ಕೂಡ ಅವರು ಮಾಡಿರಲಿಲ್ಲ. ಇದರಿಂದ ಬಿಜೆಪಿ ಇದೀಗ ಜಯಂತ್ ಸಿನ್ಹಾ ವಿರುದ್ಧ ಶಿಸ್ತು ಕ್ರಮಕ್ಕೆ ಮುಂದಾಗಿ ನೊಟೀಸ್‌ ನೀಡಿದೆ.

‘ಹಜಾರಿಬಾಗ್ ಲೋಕಸಭಾ ಕ್ಷೇತ್ರದಿಂದ ಮನೀಶ್ ಜೈಸ್ವಾಲ್ ಅವರನ್ನು ಅಭ್ಯರ್ಥಿಯಾಗಿ ಪಕ್ಷ ಘೋಷಿಸಿದಾಗಿನಿಂದ ನೀವು ಸಂಘಟನಾ ಕೆಲಸ ಮತ್ತು ಚುನಾವಣಾ ಪ್ರಚಾರದಲ್ಲಿ ಆಸಕ್ತಿ ವಹಿಸಿಲ್ಲ. ನಿಮ್ಮ ಮತವನ್ನು ಚಲಾಯಿಸಬೇಕು ಎಂದು ನಿಮಗೆ ಅನಿಸಲಿಲ್ಲ. ನಿಮ್ಮ ನಡವಳಿಕೆಯಿಂದ ಪಕ್ಷದ ವರ್ಚಸ್ಸಿಗೆ ಧಕ್ಕೆಯಾಗಿದೆ’ ಎಂದು ಬಿಜೆಪಿ ಜಯಂತ್ ಸಿನ್ಹಾ ಅವರಿಗೆ ಕಳುಹಿಸಿದ ನೋಟಿಸ್‌ನಲ್ಲಿ ಹೇಳಿದೆ. ಈ ಬಗ್ಗೆ ಜಯಂತ್ ಸಿನ್ಹಾ ಅವರು ತಮ್ಮ ನಿಲುವನ್ನು ಎರಡು ದಿನಗಳಲ್ಲಿ ವಿವರಿಸುವಂತೆ ಸೂಚಿಸಲಾಗಿದೆ.

ಮಾರ್ಚ್ 2ರಂದು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದ ಜಯಂತ್ ಸಿನ್ಹಾ, ಭಾರತ ಮತ್ತು ವಿಶ್ವಾದ್ಯಂತ ಜಾಗತಿಕ ಹವಾಮಾನ ಬದಲಾವಣೆ ವಿರುದ್ಧದ ಹೋರಾಟದ ಬಗ್ಗೆ ಗಮನ ಹರಿಸಲು ಬಯಸಿರುವುದರಿಂದ ತಮ್ಮನ್ನು ಚುನಾವಣೆಗೆ ಸಂಬಂಧಿಸಿದ ನೇರ ಕರ್ತವ್ಯಗಳಿಂದ ಬಿಡುಗಡೆ ಮಾಡಬೇಕು ಎಂದು ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಆಗ್ರಹಿಸಿದ್ದರು.

ಇದರ ಬೆನ್ನಲ್ಲಿ ಬಿಜೆಪಿ ಜೈಸ್ವಾಲ್ ಅವರನ್ನು ಜಾರ್ಖಂಡ್ ನ ಹಝಾರಿಬಾಗ್ ಕ್ಷೇತ್ರದ ಅಭ್ಯರ್ಥಿಯಾಗಿ ಬಿಜೆಪಿ ಘೋಷಿಸಿತ್ತು. ಯಶ್ವಂತ್ ಸಿನ್ಹಾ ಹಾಗೂ ಅವರ ಪುತ್ರ ಜಯಂತ್ ಸಿನ್ಹಾ ಈ ಕ್ಷೇತ್ರಗಳನ್ನು ಮೊದಲು ಪ್ರತಿನಿಧಿಸಿದ್ದರು.

ನಿನ್ನೆ (ಮೇ 20) ಐದನೇ ಹಂತದ ಲೋಕಸಭಾ ಚುನಾವಣೆಯ ವೇಳೆ ಜಾರ್ಖಂಡ್‌ನ ಮೂರು ಕ್ಷೇತ್ರಗಳಲ್ಲಿ ಮತದಾನ ನಡೆದಿದೆ. ಹಜಾರಿಬಾಗ್‌ನಲ್ಲಿ ಅತಿ ಹೆಚ್ಚು ಶೇಕಡಾ 64.32 ಮತದಾನವಾಗಿದೆ, ನಂತರ ಚತ್ರಾದಲ್ಲಿ 62.96 ಶೇಕಡಾ ಮತದಾನವಾಗಿದೆ ಮತ್ತು ಕೊಡೆರ್ಮಾದಲ್ಲಿ 61.86 ಶೇಕಡಾ ಮತದಾನವಾಗಿದೆ.

ಇದನ್ನು ಓದಿ: ಬಿಜೆಪಿ ವಿರುದ್ಧ ಕ್ರಮ ತೆಗೆದುಕೊಳ್ಳಲು ವಿಫಲ; ಚು.ಆಯೋಗವನ್ನು ತರಾಟೆಗೆ ತೆಗೆದುಕೊಂಡ ಕಲ್ಕತ್ತಾ ಹೈಕೋರ್ಟ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...