Homeಕರ್ನಾಟಕಅಪ್ಪು ಒಡನಾಟದ ನೆನಪುಗಳನ್ನು ಹಂಚಿಕೊಂಡ ಮಿಲನ ಸಿನಿಮಾ ನಟಿ ಪಾರ್ವತಿ ತಿರುವೊತು

ಅಪ್ಪು ಒಡನಾಟದ ನೆನಪುಗಳನ್ನು ಹಂಚಿಕೊಂಡ ಮಿಲನ ಸಿನಿಮಾ ನಟಿ ಪಾರ್ವತಿ ತಿರುವೊತು

- Advertisement -
- Advertisement -

“ಅವರೊಂದಿಗೆ ನಾನು ಎರಡು ಸಿನಿಮಾಗಳಲ್ಲಿ ಅಭಿನಯಿಸಿದ್ದೇನೆ. ಒಬ್ಬ ಮನುಷ್ಯ ಎಷ್ಟೊಂದು ಆಕರ್ಷಕ ಗುಣವನ್ನು ಹೊಂದಿರಬಲ್ಲ ಎಂಬುದನ್ನು ನೋಡಿದ್ದೇನೆ” ಎಂದು ಬಹುಭಾಷಾ ನಟಿ ಪಾರ್ವತಿ ತಿರುವೊತು ಹೇಳಿದ್ದಾರೆ.

ಮಿಲನ ಹಾಗೂ ಪೃಥ್ವಿ ಸಿನಿಮಾಗಳಲ್ಲಿ ಅಪ್ಪು ಅವರೊಂದಿಗೆ ನಾಯಕಿಯಾಗಿ ಅಭಿನಯಿಸಿದ್ದ ಮಲಯಾಳಂ ಚಿತ್ರರಂಗದ ಪ್ರಖ್ಯಾತ ನಟಿ ಪಾರ್ವತಿ ಅವರು ಅಪ್ಪು ಅವರೊಂದಿಗಿನ ಒಡನಾಟವನ್ನು ‘ದಿ ನ್ಯೂಸ್‌ ಮಿನಿಟ್‌’ನೊಂದಿಗೆ ಹಂಚಿಕೊಂಡಿದ್ದಾರೆ.

ಚಿತ್ರರಂಗದಲ್ಲಿ ಅಷ್ಟೇ ಅಲ್ಲದೆ ಜನಸಾಮಾನ್ಯರ ನಡುವೆ ವಿನಯವಂತರಾಗಿ ಬದುಕಿದ ಪುನೀತ್ ರಾಜ್‌ಕುಮಾರ್‌ ಅವರ ನೆನಪುಗಳು ಅಜರಾಮರವಾಗಿವೆ. ಅವರು ನಿಧನರಾದಾಗಿನಿಂದಲೂ ಅಭಿಮಾನಿಗಳು, ಕನ್ನಡ ಚಿತ್ರರಂಗ, ಬಹುಭಾಷೆಗಳ ನಟರು ದುಃಖ ತಪ್ತರಾಗಿದ್ದಾರೆ.

ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್: ಪುನೀತ್‌ರವರ ‘ಬೊಂಬೆ ಹೇಳುತೈತೆ’ ಹಾಡನ್ನು ಪಾಕ್ ಅಭಿಮಾನಿ ಹಾಡಿದ್ದು 2018 ರಲ್ಲಿ!

ಮಲಯಾಳಂ ಚಿತ್ರರಂಗದ ಬಹುತೇಕ ನಟ, ನಟಿಯರು ತೀವ್ರ ಸಂತಾಪ ಸೂಚಿಸಿದ್ದು, ‘ದಿ ನ್ಯೂಸ್ ಮಿನಿಟ್‌’ ಜೊತೆ ಮಾತನಾಡಿರುವ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಪಾರ್ವತಿ ತಿರುವೊತು ಅವರು, ಪುನೀತ್‌ ರಾಜ್‌ಕುಮಾರ್‌ ಅವರನ್ನು ಮೊದಲ ಬಾರಿಗೆ ಭೇಟಿಯಾದ ನೆನಪುಗಳನ್ನು ಮೆಲುಕು ಹಾಕಿದ್ದಾರೆ. ಸುಮಾರು 18 ವರ್ಷದವರಾಗಿದ್ದಾಗ ಮಿಲನ ಸಿನಿಮಾದ ಫೋಟೋಶೂಟ್‌ನಲ್ಲಿ ಪಾಲ್ಗೊಳ್ಳಲು ಹೋಗಿದ್ದಾಗ ಮೊದಲ ಬಾರಿಗೆ ಪುನೀತ್‌ ರಾಜ್‌ಕುಮಾರ್‌ ಅವರನ್ನು ಭೇಟಿಯಾದೆ ಎಂದಿದ್ದಾರೆ.

“ಸುಮಾರು 18-19 ವರ್ಷದವಳಾಗಿದ್ದಾಗ ಅವರನ್ನು ಮೊದಲ ಬಾರಿಗೆ ಭೇಟಿಯಾದೆ. ಮಿಲನ ಸಿನಿಮಾದ ಫೋಟೋ ಶೂಟ್‌ಗಾಗಿ ತೆರಳಿದ್ದಾಗ ಅವರು ಪರಿಚಯವಾದರು. ದಿಢೀರನೇ ಅವರು ಬಂದಾಗ, ‘ಅಪ್ಪು ಬಂದರು’, ‘ಅಪ್ಪು ಅಣ್ಣ ಬಂದರು’ ಎಂದರು. ಫೋಟೋಶೂಟ್‌ಗಾಗಿ ನನ್ನನ್ನು ಅವರು ಎಷ್ಟೊಂದು ಆರಾಮವಾಗಿಸಿದ್ದರು, ಸಿದ್ಧವಾಗಿಸಿದ್ದರು ಎಂಬುದನ್ನು ಈಗಲೂ ನೆನಪಿಸಿಕೊಳ್ಳಬಲ್ಲೆ” ಎಂದು ತಿಳಿಸಿದ್ದಾರೆ.

ಮಿಲನ ಸಿನಿಮಾದಲ್ಲಿ ಅಭಿನಯಿಸುವಾಗಿನ ಮತ್ತೊಂದು ಅನುಭವವನ್ನು ಹಂಚಿಕೊಂಡಿರುವ ಪಾರ್ವತಿ ಅವರು, “ಅವರು ತುಂಬಾ ನಗುತ್ತಿದ್ದರು. ಸಂಗತಿಗಳನ್ನು ಹಗುರಗೊಳಿಸಲು ಹೊಸ ದಾರಿಗಳನ್ನು ಹುಡುಕುತ್ತಿದ್ದರು. ಕಡಲು ಮತ್ತು ಶೀತಮಯ ಪ್ರದೇಶವಾದ ಸ್ವಿಡ್ಜರ್‌ಲ್ಯಾಂಡ್‌ನಲ್ಲಿ ಚಿತ್ರೀಕರಣ ನಡೆದಿತ್ತು. ಮತ್ತೊಂದು ಸಿನಿಮಾ ಪೃಥ್ವಿಯಲ್ಲಿ ನಾವು ಅಭಿನಯಿಸಿದೆವು” ಎಂದು ನೆನಪಿಸಿಕೊಂಡಿದ್ದಾರೆ.

ಇದನ್ನೂ ಓದಿರಿ: ಪುನೀತ್‌ ಫಿಟ್‌ನೆಟ್‌‌: ಡಾ.ದೇವಿ ಶೆಟ್ಟಿ ಹೆಸರಲ್ಲಿ ಫೇಕ್‌ ನ್ಯೂಸ್‌ ಹರಿದಾಟ

ಸಿನಿಮಾ ಹಾಗೂ ನಿಜ ಜೀವನದ ಆತ್ಮೀಯನ್ನು ಸ್ಮರಿಸಿರುವ ಪಾರ್ವತಿ ಅವರು, “ಕನ್ನಡದೊಂದಿಗೆ ಅವರು ನನಗೆ ಅನೇಕ ಸಲ ಸಹಾಯ ಮಾಡುತ್ತಿದ್ದರು. ಆದರೆ ನಾವು ಬಹುತೇಕ ಸಮಯ ಸಿನಿಮಾ ಹಾಗೂ ನಿಜ ಜೀವನದ ಕುರಿತು ಮಾತುನಾಡುತ್ತಿದ್ದೆವು. ಸೆಟ್‌‌ನಲ್ಲಿ ಎಲ್ಲರಿಗೂ ಅವಕಾಶ ನೀಡಲು ಅವರು ಎಚ್ಚರಿಕೆ ವಹಿಸುತ್ತಿದ್ದರು. ಅವರು ಸಮಯಪ್ರಜ್ಞೆಗೆ ಆದ್ಯತೆ ನೀಡುತ್ತಿದ್ದರು.  ಇತರರನ್ನು ಪ್ರಾಮಾಣಿಕವಾಗಿ ಪರಿಶೀಲಿಸುತ್ತಿದ್ದರು. ಹಾಸ್ಯ ಚಟಾಕಿಗಳನ್ನು ಸಿಡಿಸುತ್ತಿದ್ದರು. ಹಾಡುಗಳು ಮತ್ತು ನೃತ್ಯಗಳನ್ನು ಪ್ರದರ್ಶಿಸಲು ನನಗೆ ತುಂಬಾ ಸಹಾಯ ಮಾಡಿದರು” ಎಂದಿದ್ದಾರೆ.

“ಅತ್ಯುತ್ತಮ ಮನುಷ್ಯ ಇಷ್ಟೊಂದು ಕ್ರಿಯಾಶೀಲವಾಗಿರಲು, ಪ್ರೀತಿಯಿಂದ ಕೂಡಿರಲು, ಸರಳವಾಗಿರಲು ಸಾಧ್ಯವೆಂದು ನನಗೆ ತಿಳಿಯದು. ಕೆಲವು ಕಾರಣಗಳಿಂದಾಗಿ ನಮ್ಮ ಚಿತ್ರಗಳ ಕೆಲವು ಹಾಡುಗಳನ್ನು Instagram ನಲ್ಲಿ ಹಂಚಿಕೊಳ್ಳಬೇಕು ಅನಿಸಿತು. ಅವರ ಜೊತೆ ಮತ್ತೆ ಕೆಲಸ ಮಾಡುವುದು ಎಷ್ಟು ಅದ್ಭುತ ಎಂದು ನಾಲ್ಕು ದಿನಗಳ ಹಿಂದೆ ಅನಿಸಿತು” ಎಂದು ಅವರು ಹೇಳಿದ್ದಾರೆ.

“ರಾಜ್‌ಕುಮಾರ್‌ ಅವರ ಕುಟುಂಬ ಪ್ರೇಕ್ಷಕರಿಂದ ಸಂಪಾದಿಸಿದ ಪ್ರೀತಿ ಇದೆಯಲ್ಲ- ಪ್ರೀತಿ, ಗೌರವ, ಅಭಿಮಾನ ಮತ್ತು ಎಲ್ಲರೂ ನಮ್ಮವರೆಂಬ ಭಾವನೆ- ನಾನು ಅದನ್ನು ಅರ್ಥಮಾಡಿಕೊಂಡೆ. ಪುನೀತ್‌ ಅವರೊಂದಿಗೆ ಎರಡು ಸಿನಿಮಾಗಳಲ್ಲಿ ನಾನು ಅಭಿನಯಿಸಿದ್ದೇನೆ. ಒಬ್ಬ ಮನುಷ್ಯ ಎಷ್ಟೊಂದು ಆಕರ್ಷಕ ವ್ಯಕ್ತಿಯಾಗಿರಬಲ್ಲ ಎಂದು ತಿಳಿದುಕೊಂಡೆ” ಎಂದಿದ್ದಾರೆ.

“ಕಲೆ, ಪ್ರಸಿದ್ಧಿ ಎಲ್ಲವನ್ನು ಸಹಜವಾಗಿ ಸ್ವೀಕರಿಸಿ ಪುನೀತ್ ರಾಜ್‌ಕುಮಾರ್‌ ನಡೆದರು” ಎಂದು ಪಾರ್ವತಿ ತಿಳಿಸಿದ್ದಾರೆ.


ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್: ಜಿಮ್‌ನಲ್ಲಿ ಕುಸಿದು ಬೀಳುತ್ತಿರುವ ಈ ವಿಡಿಯೊ ‘ಪುನೀತ್‌ ರಾಜ್‌ಕುಮಾರ್‌’ ಅವರದಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...

ಮೊದಲ ಪತ್ನಿಗೆ ಮುಸ್ಲಿಂ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್

ಎರಡನೇ ಪತ್ನಿಯ ಮೇಲಿನ ಆರ್ಥಿಕ ಜವಾಬ್ದಾರಿ ಕುರಿತ ಮಹತ್ವದ ತೀರ್ಪಿನಲ್ಲಿ, ಮುಸ್ಲಿಂ ಪುರುಷನು ತನ್ನ ಮೊದಲ ಪತ್ನಿಗೆ ಜೀವನಾಂಶ ಪಾವತಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಎಲ್ಲ ಪತ್ನಿಯರನ್ನು ಸಮಾನವಾಗಿ...

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು...

ಎಸ್‌ಐಆರ್‌ನ ನಿಜವಾದ ಉದ್ದೇಶ ಎನ್‌ಆರ್‌ಸಿ : ಮಮತಾ ಬ್ಯಾನರ್ಜಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್‌) ಹಿಂದಿನ ಕೇಂದ್ರ ಸರ್ಕಾರದ ನಿಜವಾದ ಉದ್ದೇಶ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮಾಡುವುದು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ನವೆಂಬರ್...