Homeಮುಖಪುಟನೇಪಾಳದಲ್ಲಿ ಪ್ರಯಾಣಿಕರಿದ್ದ ವಿಮಾನ ಪತನ; 41 ಜನರ ಮೃತದೇಹಗಳು ಪತ್ತೆ

ನೇಪಾಳದಲ್ಲಿ ಪ್ರಯಾಣಿಕರಿದ್ದ ವಿಮಾನ ಪತನ; 41 ಜನರ ಮೃತದೇಹಗಳು ಪತ್ತೆ

- Advertisement -
- Advertisement -

ನೇಪಾಳದ ಪೋಖರಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 72 ಆಸನಗಳ ಪ್ರಯಾಣಿಕ ವಿಮಾನವು ರನ್‌ವೇಯಲ್ಲಿ ಪತನಗೊಂಡಿದೆ ಎಂದು ಸುದ್ದಿ ಸಂಸ್ಥೆ ಎಎನ್‌ಎ ವರದಿ ಮಾಡಿದೆ. ಪತನಗೊಂಡಿರುವ ಯೇತಿ ಏರ್‌ಲೈನ್ಸ್  ಕಠ್ಮಂಡುವಿನಿಂದ ಪೊಖರಾಗೆ ಹೊರಟಿತ್ತು. ಕಾಸ್ಕಿ ಜಿಲ್ಲೆಯ ಪೊಖರಾದಲ್ಲಿ ಪತನಗೊಂಡಿದೆ ಎಂದು ವರದಿಯಾಗಿದೆ.

ಈ ಬಗ್ಗೆ ಯೇತಿ ಏರ್‌ಲೈನ್ಸ್ ವಕ್ತಾರ ಸುದರ್ಶನ್ ಬರ್ತೌಲಾ ಮಾಹಿತಿ ನೀಡಿದ್ದು, “ವಿಮಾನದಲ್ಲಿ ಒಟ್ಟು 68 ಪ್ರಯಾಣಿಕರು ಮತ್ತು ನಾಲ್ವರು ಸಿಬ್ಬಂದಿ ಇದ್ದರು. ಇದು ಹಳೆಯ ವಿಮಾನ ನಿಲ್ದಾಣ ಮತ್ತು ಪೋಖರಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ನಡುವೆ ಪತನಗೊಂಡಿದೆ. 41 ಜನರ ಮೃತದೇಹಗಳು ಪತ್ತೆಯಾಗಿವೆ” ಎಂದು ತಿಳಿಸಿದ್ದಾರೆ.

ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಅಪಘಾತ ನಡೆದ ಸ್ಥಳದಲ್ಲಿ ಹೊಗೆಯು ಆಕಾಶದೆತ್ತರಕ್ಕೆ ಹಾರಿದೆ.

ಘಟನೆ ಬಗ್ಗೆ ಮಾತನಾಡಿರುವ ಸ್ಥಳೀಯ ಅಧಿಕಾರಿ ಗುರುದತ್ತ ಧಾಕಲ್ ಅವರು, “ವಿಮಾನದ ಅವಶೇಷಗಳು ಬೆಂಕಿಗಾಹುತಿಯಾಗಿದ್ದು, ಪ್ರಯಾಣಿಕರ ರಕ್ಷಣೆಗೆ ಕಾರ್ಯಕರ್ತರು ಬೆಂಕಿಯನ್ನು ನಂದಿಸಲು ಪ್ರಯತ್ನಿಸುತ್ತಿದ್ದಾರೆ” ಎಂದು ತಿಳಿಸಿದ್ದಾರೆ.

“ಎಲ್ಲಾ ಏಜೆನ್ಸಿಗಳು ಈಗಾಗಲೇ ಘಟನಾ ಸ್ಥಳಕ್ಕೆ ತಲುಪಿದ್ದು, ಬೆಂಕಿಯನ್ನು ನಂದಿಸಲು ಪ್ರಯತ್ನಿಸುತ್ತಿದ್ದಾರೆ. ಬೆಂಕಿಯನ್ನು ನಂದಿಸುವುದರ ಜೊತೆಗೆ ಪ್ರಯಾಣಿಕರನ್ನು ರಕ್ಷಿಸಲು ಗಮನಹರಿಸಲಾಗುತ್ತಿದೆ” ಎಂದು ಗುರುದತ್ತ ಧಾಕಲ್ ಹೇಳಿದರು.

ಪ್ರಯಾಣಿಕರ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಸದ್ಯಕ್ಕೆ ವಿಮಾನ ನಿಲ್ದಾಣವನ್ನು ಕ್ಲೋಸ್ ಮಾಡಲಾಗಿದೆ. ಇನ್ನೂ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ..

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಹಾಸನ ಲೈಂಗಿಕ ದೌರ್ಜನ್ಯ ಪ್ರಕರಣ: ಸಂತ್ರಸ್ತೆಯರಿಗೆ ಸಹಾಯವಾಣಿ ಆರಂಭಿಸಿದ ಎಸ್‌ಐಟಿ

0
ಹಾಸನದ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತರಿಗಾಗಿ ವಿಶೇಷ ತನಿಖಾ ತಂಡ (ಎಸ್‌ಐಟಿ) ಸಹಾಯವಾಣಿ ತೆರೆದಿದೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಎಸ್‌ಐಟಿ ಮುಖ್ಯಸ್ಥ ಬಿ.ಕೆ ಸಿಂಗ್, "ಹಾಸನ ಜಿಲ್ಲೆಯಲ್ಲಿ ನಡೆದ ಲೈಂಗಿಕ ದೌರ್ಜನ್ಯ...