Homeಮುಖಪುಟಪಾದ್ರಿಯಿಂದ ಮುಸ್ಲಿಂ ವಿರೋಧಿ ಭಾಷಣ - ಪ್ರಾರ್ಥನಾ ಸಭೆಯಿಂದ ಹೊರನಡೆದ ಕ್ರೈಸ್ತ ಸನ್ಯಾಸಿನಿಯರು!

ಪಾದ್ರಿಯಿಂದ ಮುಸ್ಲಿಂ ವಿರೋಧಿ ಭಾಷಣ – ಪ್ರಾರ್ಥನಾ ಸಭೆಯಿಂದ ಹೊರನಡೆದ ಕ್ರೈಸ್ತ ಸನ್ಯಾಸಿನಿಯರು!

- Advertisement -
- Advertisement -

ಕೇರಳದ ಪಾಲಾ ಬಿಷಪ್‌ ಜೋಸೆಫ್‌‌‌ ಕಲ್ಲರಂಗಟ್ ಅವರ ಮುಸ್ಲಿಂ ವಿರೋಧಿ ಹೇಳಿಕೆ ರಾಜ್ಯದಾದ್ಯಂತ ಚರ್ಚೆಯಾಗುತ್ತಿರುವ ಸಮಯದಲ್ಲೆ, ಕೊಟ್ಟಾಯಂನ ಕುರವಿಲಂಗಾಡ್‌‌ನ ಮತ್ತೊಬ್ಬ ಕ್ರಿಶ್ಚಿಯನ್ ಧರ್ಮಗುರುವೊಬ್ಬರು ಮುಸ್ಲಿಂ ವಿರೋಧಿ ಹೇಳಿಕೆ ನೀಡಿದ್ದಾರೆಂದು ಅಲ್ಲಿನ ನಾಲ್ವರು ಕ್ರೈಸ್ತ ಸನ್ಯಾಸಿನಿಯರು ಆರೋಪಿಸಿದ್ದಾರೆ. ಅವರ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ ಸನ್ಯಾಸಿನಿಯರು ಪಾರ್ಥನಾ ಸಭೆಯಿಂದ ಹೊರ ನಡೆದ ಘಟನೆ ನಡೆದಿದೆ.

ಸೆಪ್ಟೆಂಬರ್ 13 ರ ಭಾನುವಾರದಂದು ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಸನ್ಯಾಸಿನಿಯರು, “ಸೈಂಟ್‌ ಪ್ರಾನ್ಸಿಸ್‌‌ ಚರ್ಚಿನ ಪ್ರಾರ್ಥನಾ ಸಭೆಯಲ್ಲಿ ಅಲ್ಲಿನ ಪಾದ್ರಿಯಾದ ರಾಜೀವ್, ಮುಸ್ಲಿಮರ ವಿರುದ್ದ ದ್ವೇಷ ಭಾಷಣ ಮಾಡಿದ್ದಾರೆ” ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಕೋಮುದ್ವೇಷ ಬಿತ್ತುವ ವರದಿಗಳಿಂದ ದೇಶಕ್ಕೆ ಕೆಟ್ಟ ಹೆಸರು: ಸುಪ್ರೀಂ ಆತಂಕ

‘ಮುಸ್ಲಿಂ ವಿರೋಧಿ ಭಾಷಣ ಈ ಹಿಂದೆಯು ಮಾಡಿದ್ದರು’- ಸನ್ಯಾಸಿನಿಯರ ಆರೋಪ

ಪಾದ್ರಿ ರಾಜೀವ್ ಅವರು ಈ ಹಿಂದೆ ಕೂಡಾ ಮುಸ್ಲಿಂ ವಿರೋಧಿ ಬಾಷಣ ಮಾಡಿದ್ದರು ಎಂದು ಸನ್ಯಾಸಿನಿಯರು ಹೇಳಿದ್ದಾರೆ. ಜೊತೆಗೆ, ‘ಲವ್ ಜಿಹಾದ್’ ಮತ್ತು ‘ಮಾದಕದ್ರವ್ಯ ಜಿಹಾದ್’ ಕುರಿತ ಮಾರ್ ಜೋಸೆಫ್ ಕಲ್ಲರಂಗಟ್ ಅವರ ಹೇಳಿಕೆಗಳನ್ನು ಬೆಂಬಲಿಸದಂತೆ ಜನರನ್ನು ಅವರು ಕೇಳಿಕೊಂಡಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಸನ್ಯಾಸಿನಿ ಅನುಪಮಾ, “ಇಂದಿನ (ಸೆಪ್ಟೆಂಬರ್ 12) ಪ್ರಾರ್ಥನೆಯ ಸಮಯದಲ್ಲಿ ಕೋಮುವಾದದ ಬೀಜ ಬಿತ್ತಿದ್ದ ಪಾಲ ಬಿಷಪ್ ಅವರನ್ನು ಬೆಂಬಲಿಸಿ ರಾಜೀವ್‌ ಭಾಷಣ ಮಾಡಿದ್ದಾರೆ. ರಾಜೀವ್ ತಮ್ಮ ಭಾಷಣದಲ್ಲಿ ಮುಸ್ಲಿಮರು ಓಡಿಸುವ ಆಟೋಗಳಲ್ಲಿ ಓಡಾಡದಂತೆ ಮತ್ತು ಅವರಿಂದ ತರಕಾರಿಗಳಂತಹ ವಸ್ತುಗಳನ್ನು ಕೊಳ್ಳದಂತೆ ಹೇಳಿದರು. ಅವರು ಇಂತಹ ಹೇಳಿಕೆಗಳನ್ನು ನೀಡುವುದು ಇದೇ ಮೊದಲಲ್ಲ. ಈ ಹಿಂದೆಯೂ ಅವರು ಮುಸ್ಲಿಮರ ಬಗ್ಗೆ ಇದೇ ರೀತಿಯ ಹೇಳಿಕೆ ನೀಡಿದ್ದರು. ಆದರೆ ಇಂದು, ನಾವು ಪ್ರತಿಕ್ರಿಯಿಸದೇ ಇರಲು ಸಾಧ್ಯವಿಲ್ಲ. ಅದಕ್ಕಾಗಿ ನಾವು ಅಲ್ಲಿಂದ ಹೊರಬಂದೆವು” ಎಂದು ಹೇಳಿದ್ದಾರೆ.

“ಕ್ರಿಸ್ತ ನಮಗೆ ಕಲಿಸಿದ ವಿಷಯವೇನೆಂದರೆ ಎಲ್ಲರನ್ನೂ ಪ್ರೀತಿಸುವುದಾಗಿದೆಯೆ ಹೊರತು ಕೋಮುವಾದವನ್ನು ಬಿತ್ತುವುದಲ್ಲ. ಕ್ರಿಸ್ತ ನಮಗೆ ಏನನ್ನು ಬೋಧಿಸಿದ್ದಾರೋ ಅದಕ್ಕೆ ವಿರುದ್ಧವಾದ ವಿಷಯಗಳನ್ನು ಪಾದ್ರಿ ಹೇಳುತ್ತಿದ್ದಾಗ ನಮಗೆ ಅದನ್ನು ನೋಡಿ ಸುಮ್ಮನಿರಲಾಗಿಲ್ಲ, ಅದಕ್ಕಾಗಿ ನಾವು ಪ್ರತಿಕ್ರಿಯಿಸಿದ್ದೇವೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಬಹುಜನ ಭಾರತ; ದಲಿತ ದ್ವೇಷವನ್ನು ಪ್ರತಿಭೆಯಿಂದ ಗೆದ್ದವರು ಪಲ್ವಂಕರ್ ಸೋದರರು

ಮುಸ್ಲಿಂ ವಿರೋಧಿ ಮತ್ತು ಕೋಮುವಾದಿ ಹೇಳಿಕೆ ನೀಡಿದ್ದಕ್ಕಾಗಿ ಪಾದ್ರಿ ರಾಜೀವ್ ಅವರ ವಿರುದ್ದ ಪ್ರಕರಣ ದಾಖಲಾಗಿರುವುದು ಇನ್ನೂ ವರದಿಯಾಗಿಲ್ಲ.

ವಿಶೇಷವೇನೆಂದರೆ, ಇದೇ ಸನ್ಯಾಸಿನಿಯರು ಈ ಹಿಂದೆ ಅತ್ಯಾಚಾರ ಪ್ರಕರಣದ ಆರೋಪಿ ಬಿಷಪ್ ಫ್ರಾಂಕೊ ಮುಲಕ್ಕಲ್ ಅವರನ್ನು ಬಂಧಿಸುವಂತೆ ಬಹಿರಂಗವಾಗಿ ಪ್ರತಿಭಟನೆ ನಡೆಸಿದ್ದರು.

2018 ರಲ್ಲಿ ಕೊಚ್ಚಿಯಲ್ಲಿ ಬಿಷಪ್ ಫ್ರಾಂಕೊ ಅವರನ್ನು ಬಂಧಿಸುವಂತೆ ಒತ್ತಾಯಿಸಿ ಸನ್ಯಾಸಿನಿಯರು ಬಹಿರಂಗ ಪ್ರತಿಭಟನೆ ನಡೆಸಿದ್ದರು. ಅತ್ಯಾಚಾರ ಸಂತ್ರಸ್ತೆಯ ಬೆಂಬಲಕ್ಕೆ ನಿಂತಿದ್ದ ಇವರು ಐತಿಹಾಸಿಕ ಪ್ರತಿಭಟನೆ ನಡೆಸಿದ್ದರು. ಇದರ ಪರಿಣಾಮವಾಗಿ, ಮೂರು ದಿನಗಳ ವಿಚಾರಣೆಯ ನಂತರ 2018 ರ ಸೆಪ್ಟೆಂಬರ್‌ನಲ್ಲಿ ಬಿಷಪ್‌ ಫ್ರಾಂಕೊ ಅವರನ್ನು ಬಂಧಿಸಲಾಗಿತ್ತು.

ಇದನ್ನೂ ಓದಿ: ದ್ವೇಷ ಭಾಷಣ ಆರೋಪ: ಜಾಮಿಯಾ ಶೂಟರ್ ಬಂಧನ

ವಿವಾದಕ್ಕೆ ಕಾರಣವಾದ ಪಾಲಾ ಬಿಷಪ್‌ ಜೋಸೆಫ್‌‌‌ ಕಲ್ಲರಂಗಟ್ ಹೇಳಿಕೆ

ಸೆಪ್ಟೆಂಬರ್ 9 ರ ಬುಧವಾರದಂದು ಪಾಲಾ ಬಿಷಪ್‌ ಜೋಸೆಫ್‌‌‌ ಕಲ್ಲರಂಗಟ್ ಅವರು ಚರ್ಚ್‌ನಲ್ಲಿನ ಸಭೆಯೊಂದನ್ನು ಉದ್ದೇಶಿಸಿ ಮಾತನಾಡುತ್ತಾ, “ಕೇರಳದಲ್ಲಿ ಮುಸ್ಲಿಮೇತರರು ರಾಜ್ಯದಲ್ಲಿ ‘ಮಾದಕ ದ್ರವ್ಯ ಜಿಹಾದ್‌‌’ಗೆ ಒಳಗಾಗುತ್ತಿದ್ದಾರೆ. ‘ಮಾದಕದ್ರವ್ಯ ಜಿಹಾದ್’ ಮಾಡುವ ಮೂಲಕ ಮುಸ್ಲಿಮರಲ್ಲದವರ, ವಿಶೇಷವಾಗಿ ಯುವಜನರನ್ನು ಮಾದಕ ವ್ಯಸನಕ್ಕೆ ತುತ್ತಾಗುವಂತೆ ಮಾಡಿ ಅವರ ಜೀವನವನ್ನು ಹಾಳುಮಾಡಲಾಗುತ್ತಿದೆ” ಎಂದು ಅವರು ಹೇಳಿದ್ದರು.

ಆದರೆ ಈ ಹೇಳಿಕೆಗೆ ಅವರು ಯಾವುದೇ ಪುರಾವೆಗಳನ್ನು ನೀಡಿರಲಿಲ್ಲ. ಇವರ ಹೇಳಿಕೆ ವರದಿಯಾಗುತ್ತಿದ್ದಂತೆ ರಾಜ್ಯದಲ್ಲಿ ಭಾರಿ ಚರ್ಚೆ ನಡೆಯುತ್ತಿದೆ. ಕೇರಳದ ಅನೇಕ ಗಣ್ಯರು ಬಿಷಪ್ ಅವರ ಹೇಳಿಕೆಯನ್ನು ವಿರೋಧಿಸಿದ್ದರು ಮತ್ತು ಅವರ ವಿರುದ್ದ ಪ್ರಕರಣವು ದಾಖಲಾಗಿತ್ತು.

ಈ ಬಗ್ಗೆ ಪ್ರತಿಕ್ರಿಯಿಸಿದ್ದ ಮುಖ್ಯಮಂತ್ರಿ ಪಿಣರಾಯಿ ವಿಜಯನ್, “ಮಾದಕದ್ರವ್ಯಕ್ಕೆ ಧಾರ್ಮಿಕ ಬಣ್ಣ ನೀಡುವ ಅಗತ್ಯವಿಲ್ಲ ಮತ್ತು ಜವಾಬ್ದಾರಿಯುತ ಸ್ಥಾನದಲ್ಲಿರುವ ಜನರು ಧಾರ್ಮಿಕ ವಿಭಜನೆಯನ್ನು ಮಾಡಬಾರದು” ಎಂದು ಹೇಳಿದ್ದರು.

ಪ್ರತಿಪಕ್ಷದ ನಾಯಕ ವಿಡಿ ಸತೀಶನ್ ಅವರು ಕೂಡಾ ಬಿಷಪ್ ಅವರ ಈ ಹೇಳಿಕೆಯನ್ನು ಖಂಡಿಸಿದ್ದರು. “ಅಪರಾಧಗಳಿಗೆ ಧರ್ಮ, ಜಾತಿ ಅಥವಾ ಲಿಂಗವಿಲ್ಲ ಮತ್ತು ಇದಕ್ಕಾಗಿ ಒಂದು ನಿರ್ದಿಷ್ಟ ಧರ್ಮವನ್ನು ಆರೋಪಿಸುವುದು ತಪ್ಪು” ಎಂದು ಅವರು ಹೇಳಿದ್ದರು.

ಇದನ್ನೂ ಓದಿ: #SaveLakshadweep-ಬಿಜೆಪಿಯ ದ್ವೇಷ ರಾಜಕೀಯಕ್ಕೆ ಹೊಸ ಬಲಿ; ಲಕ್ಷದ್ವೀಪದಲ್ಲಿ ಏನಾಗುತ್ತಿದೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...