Homeಕರ್ನಾಟಕಪತಂಜಲಿ ಜಟಾಪಟಿ: ಆರ್‌.ಅಶೋಕ್‌ಗೆ ಸವಾಲ್ ಹಾಕಿದ ದಿನೇಶ್ ಗುಂಡೂರಾವ್

ಪತಂಜಲಿ ಜಟಾಪಟಿ: ಆರ್‌.ಅಶೋಕ್‌ಗೆ ಸವಾಲ್ ಹಾಕಿದ ದಿನೇಶ್ ಗುಂಡೂರಾವ್

- Advertisement -
- Advertisement -

ಬಾಬಾ ರಾಮ್‌ದೇವ್ ಮತ್ತು ಆಚಾರ್ಯ ಬಾಲಕೃಷ್ಣ ಮಾಲಕತ್ವದ ‘ಪತಂಜಲಿ ಕಂಪನಿಯ’ ಉತ್ಪನ್ನಗಳ ವಿಚಾರದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮತ್ತು ಪ್ರತಿಪಕ್ಷ ನಾಯಕ ಆರ್‌. ಅಶೋಕ್ ನಡುವೆ ಜಟಾಪಟಿ ಜೋರಾಗಿದೆ.

ಸುಪ್ರೀಂ ಕೋರ್ಟ್ ಪತಂಜಲಿ ಉತ್ಪನ್ನಗಳ ಗುಣಮಟ್ಟಕ್ಕೆ ಸಂಬಂಧಪಟ್ಟಂತೆ ಬಾಬಾ ರಾಮ್‌ದೇವ್‌ ಮತ್ತು ಆಚಾರ್ಯ ಬಾಲಕೃಷ್ಣ ಅವರನ್ನು ತರಾಟೆಗೆ ತೆಗೆದುಕೊಂಡಿರುವ ಹಿನ್ನೆಲೆ, ಕರ್ನಾಟಕದಲ್ಲಿ ಎಲ್ಲಾ ಪತಂಜಲಿ ಉತ್ಪನ್ನಗಳ ಗುಣಮಟ್ಟ ಪರೀಕ್ಷೆ ನಡೆಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದರು.

ಸಚಿವರ ಈ ಹೇಳಿಕೆಯ ವರದಿಯನ್ನು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದ ಪ್ರತಿಪಕ್ಷ ನಾಯಕ ಆರ್‌. ಅಶೋಕ್, “ಈ ಹಲಾಲ್ ಕಟ್ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು, ಬಿಸಿನೆಸ್ ಗಳು ಬೆಳೆದರೆ ಸಹಿಸೋದೇ ಇಲ್ಲ. ಸಮಸ್ತ ಭಾರತೀಯರ ಅಚ್ಚುಮೆಚ್ಚಿನ ಬ್ರ್ಯಾಂಡ್ ಆಗಿ ಬೆಳೆಯುತ್ತಿರುವ ಬಾಬಾ ರಾಮದೇವ್ ಅವರ ಪತಂಜಲಿ ಮೇಲೆ ಈಗ ಕಾಂಗ್ರೆಸ್ ಸರ್ಕಾರದ ವಕ್ರದೃಷ್ಟಿ ಬಿದ್ದಿದೆ. ಮಾನ್ಯ ದಿನೇಶ್ ಗುಂಡೂರಾವ್ ಅವರೇ, ಪತಂಜಲಿ ಉತ್ಪನ್ನಗಳ ಮೇಲೆ ನಿಮಗೇಕಿಷ್ಟು ದ್ವೇಷ?” ಎಂದು ಪ್ರಶ್ನಿಸಿದ್ದರು.

“ಪತಂಜಲಿ ಹಲಾಲ್ ಅಲ್ಲ ಅಂತಲೇ? ಪತಂಜಲಿ ಕೇಸರಿ ಬಟ್ಟೆ ತೊಡುವ ಯೋಗಗುರು ಶ್ರೀ ಬಾಬಾ ರಾಮ್ ದೇವ್ ಅವರದ್ದು ಅಂತಲೇ? ಪತಂಜಲಿ ಆತ್ಮನಿರ್ಭರ ಭಾರತದ ಪ್ರತೀಕ ಅಂತಲೇ? ಈ ದ್ವೇಷ ರಾಜಕಾರಣವೇ ಕಾಂಗ್ರೆಸ್ ಪಕ್ಷವನ್ನ ಸುಡಲಿದೆ. ಈ ನಿಮ್ಮ ಹಲಾಲ್ ಮಮಕಾರವೇ ನಿಮ್ಮನ್ನ ನಾಶ ಮಾಡಲಿದೆ” ಎಂದಿದ್ದರು.

ಅಶೋಕ್ ಅವರ ಪೋಸ್ಟ್‌ಗೆ ತಿರುಗೇಟು ಕೊಟ್ಟಿರುವ ಸಚಿವ ದಿನೇಶ್ ಗುಡೂರಾವ್, “ತಪ್ಪು ಜಾಹೀರಾತು ಮೂಲಕ ದೇಶದ ಜನರ ಆರೋಗ್ಯದ ಜೊತೆ ಚೆಲ್ಲಾಟವಾಡಿದ್ದ ಪತಂಜಲಿಯ ಬಾಬಾ ರಾಮ್‌ದೇವ್ ಹಾಗೂ ಬಾಲಕೃಷ್ಣರವರಿಗೆ ಸುಪ್ರೀಂ ಕೋರ್ಟ್ ತೆರೆದ ನ್ಯಾಯಾಲಯದಲ್ಲಿ ಛೀಮಾರಿ ಹಾಕಿ ನೀರಿಳಿಸಿದೆ. ಜೊತೆಗೆ ಈ ಇಬ್ಬರೂ ತಾವು ಮಾಡಿದ್ದ ತಪ್ಪಿಗೆ ಬೇಷರತ್ ಕ್ಷಮೆ ಯಾಚಿಸಿದ್ದರೂ ಸುಪ್ರೀಂ ಅವರ ಕ್ಷಮೆಯನ್ನು ಮಾನ್ಯ ಮಾಡಿಲ್ಲ. ಅದರರ್ಥ, ಪತಂಜಲಿ ಎಂಬ ಸಂಸ್ಥೆ ಜನರ ಅರೋಗ್ಯದ ಜೊತೆ ಆಡಿರುವ ಚೆಲ್ಲಾಟ ಕ್ಷಮೆಗೂ ಅರ್ಹವಲ್ಲ ಎಂಬುದು ಸುಪ್ರೀಂ ಅಭಿಪ್ರಾಯ ಎಂದು ಹೇಳಿದ್ದಾರೆ.

“ಇದೇ ಕಾರಣಕ್ಕಾಗಿ ರಾಜ್ಯದಲ್ಲಿ ಪತಂಜಲಿ ಉತ್ಪನ್ನಗಳ ಗುಣಮಟ್ಟ ಪರೀಕ್ಷಿಸಲು ಆದೇಶಿಸಿದ್ದೇನೆ.
ಇಷ್ಟಕ್ಕೇ ತುರಿಕೆ ರೋಗ ಬಂದಂತೆ ವರ್ತಿಸುತ್ತಿರುವ ವಿಪಕ್ಷ ನಾಯಕ ಆರ್‌.ಅಶೋಕ್‌ ಅವರೇ, ನನಗೆ ಪತಂಜಲಿ ಉತ್ಪನ್ನಗಳ ಬಗ್ಗೆ ಯಾಕಿಷ್ಟು ದ್ವೇಷ ಎಂದು ಪ್ರಶ್ನಿಸಿದ್ದಾರೆ. ಅವರ ಪ್ರಶ್ನೆಗೆ ನಾನು ಉತ್ತರಿಸುವೆ, ನನ್ನ ಪ್ರಶ್ನೆಗಳಿಗೆ ಅವರು ಉತ್ತರಿಸಲಿ. ಇದು ಸವಾಲು‌.! ಎಂದಿದ್ದಾರೆ.

ಏನಿದು ಪತಂಜಲಿ ಪ್ರಕರಣ?

ಪತಂಜಲಿಯ ದಾರಿ ತಪ್ಪಿಸುವ ಜಾಹೀರಾತುಗಳಿಗಾಗಿ ಕಂಪನಿಯ ಸಂಸ್ಥಾಪಕರಾದ ಬಾಬಾ ರಾಮ್‌ದೇವ್ ಮತ್ತು ಆಚಾರ್ಯ ಬಾಲಕೃಷ್ಣ ಅವರು ಸಲ್ಲಿಸಿದ ಮತ್ತೊಂದು ಕ್ಷಮಾ ಅರ್ಜಿಯನ್ನೂ ತಿರಸ್ಕರಿಸಿದ ಸುಪ್ರೀಂ ಕೋರ್ಟ್, “ನಾವು ಕುರುಡರಲ್ಲ, ಈ ಪ್ರಕರಣದಲ್ಲಿ ಉದಾರವಾಗಿರಲು ಬಯಸುವುದಿಲ್ಲ” ಎಂದು ಇತ್ತೀಚೆಗೆ ಹೇಳಿದೆ.

ಇಷ್ಟು ದಿನ ಪತಂಜಲಿ ವಿರುದ್ಧ ಕ್ರಮಕೈಗೊಳ್ಳದ ಉತ್ತರಾಖಂಡ್ ರಾಜ್ಯದ ಔಷಧಿ ಪರವಾನಿಗಿ ಪ್ರಾಧಿಕಾರವನ್ನು ಕೋರ್ಟ್ ತರಾಟೆಗೆ ತೆಗೆದುಕೊಂಡಿದ್ದು, ಈ ವಿಷಯದಲ್ಲಿ ಕೇಂದ್ರದ ಉತ್ತರದಿಂದ ತೃಪ್ತರಾಗಿಲ್ಲ ಎಂದು ಅಸಮಾಧಾನ ಹೊರ ಹಾಕಿದೆ.

ಇದನ್ನೂ ಓದಿ : ರಾಜ್ಯದಲ್ಲಿ ‘ಆಪರೇಷನ್ ಕಮಲ’ಕ್ಕೆ ಯತ್ನ: ಸಿಎಂ ಸಿದ್ದರಾಮಯ್ಯ; ಕಾಂಗ್ರೆಸ್‌ ಶಾಸಕರಿಗೆ ಬಿಜೆಪಿಯಿಂದ 50ಕೋಟಿ ರೂ. ಆಫರ್‌?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

2ಜಿ ತರಂಗಾಂತರ ತೀರ್ಪಿನ ಸ್ಪಷ್ಟನೆ ಕೋರಿದ್ದ ಕೇಂದ್ರದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ ರಿಜಿಸ್ಟ್ರಿ

0
2ಜಿ ತರಂಗಾಂತರ ಹಂಚಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ 2012ರಲ್ಲಿ ನೀಡಿರುವ ತೀರ್ಪಿನ ಸ್ಪಷ್ಟನೆ ಕೋರಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸ್ವೀಕರಿಸಲು ಸುಪ್ರೀಂ ಕೋರ್ಟ್‌ನ ರಿಜಿಸ್ಟ್ರಾರ್ ನಿರಾಕರಿಸಿದ್ದಾರೆ. ಕೆಲ ಸಂದರ್ಭಗಳಲ್ಲಿ ಸಾರ್ವಜನಿಕ ಹರಾಜು ಹೊರತುಪಡಿಸಿ...