Homeಮುಖಪುಟಪತಂಜಲಿಯ ಪತನ ಶುರು: 'ಸೋನ್ ಪಾಪ್ಡಿ'ಯಿಂದ ಮೂವರಿಗೆ ಜೈಲು ಶಿಕ್ಷೆ

ಪತಂಜಲಿಯ ಪತನ ಶುರು: ‘ಸೋನ್ ಪಾಪ್ಡಿ’ಯಿಂದ ಮೂವರಿಗೆ ಜೈಲು ಶಿಕ್ಷೆ

- Advertisement -
- Advertisement -

ಪತಂಜಲಿ ನವರತ್ನ ಎಲೈಚಿ ಸೋನ್ ಪಾಪ್ಡಿ(ಸಾಂಪ್ರದಾಯಿಕ ಸಿಹಿತಿಂಡಿ) ಗುಣಮಟ್ಟದ ಪರೀಕ್ಷೆಯಲ್ಲಿ ವಿಫಲವಾದ ಹಿನ್ನೆಲೆ ಉತ್ತರಾಖಂಡದ ನ್ಯಾಯಾಲಯವು ಪತಂಜಲಿ ಆಯರ್ವೇದ ಲಿಮಿಟೆಡ್‍ನ ಸಹಾಯಕ ವ್ಯವಸ್ಥಾಪಕ ಸೇರಿದಂತೆ ಮೂರು ಮಂದಿಗೆ ಆರು ತಿಂಗಳ ಜೈಲು ಶಿಕ್ಷೆ ವಿಧಿಸಿದೆ.

ಉತ್ಪನ್ನದ ಬಗ್ಗೆ ಕಳವಳ ವ್ಯಕ್ತವಾದ ಹಿನ್ನೆಲೆ 2019ರ ಸೆಪ್ಟಂಬರ್‌ನಲ್ಲಿ ಪಿಥೋರಗಢದ ಜಿಲ್ಲಾ ಆಹಾರ ಸುರಕ್ಷತಾ ಅಧಿಕಾರಿ ಬೆರಿನಾಗ್ ಮಾರುಕಟ್ಟೆಯ ಅಂಗಡಿಯಿಂದ ಮಾದರಿಗಳನ್ನು ಸಂಗ್ರಹಿಸಿದ್ದರು. ಉಧಾಮ್‍ಸಿಂಗ್‍ನಗರ ಜಿಲ್ಲೆಯ ರುದ್ರಾಪುರದ ರಾಜ್ಯ ಆಹಾರ ಮತ್ತು ಔಷಧ ಪರೀಕ್ಷಾ ಪ್ರಯೋಗಾಲಯದಲ್ಲಿ 2019ರ ಮೇ 18ರಂದು ಗುಣಮಟ್ಟ ಪರೀಕ್ಷೆ ನಡೆದಿತ್ತು. ಪರೀಕ್ಷಾ ಫಲಿತಾಂಶಗಳು ಕಳಪೆ ಗುಣಮಟ್ಟವನ್ನು ಬಹಿರಂಗಪಡಿಸಿದ್ದವು, ನಂತರ ಜಿಲ್ಲಾ ಆಹಾರ ಸುರಕ್ಷತಾ ಅಧಿಕಾರಿ ಮೂವರ ವಿರುದ್ಧ ಪ್ರಕರಣಗಳನ್ನು ದಾಖಲಿಸಿದ್ದರು.

ಪಿಥೋರಗಢ್‌ನ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಸಂಜಯ್ ಸಿಂಗ್ ಅವರು ಪತಂಜಲಿ ಫುಡ್ ಅಂಡ್ ಹರ್ಬಲ್ ಪಾರ್ಕ್, ಲಕ್ಸಾರ್‌ನ ಸಹಾಯಕ ಜನರಲ್ ಮ್ಯಾನೇಜರ್ ಅಭಿಷೇಕ್ ಕುಮಾರ್, ಕನ್ಹಾ ಜಿ ಡಿಸ್ಟ್ರಿಬ್ಯೂಟರ್ ಪ್ರೈವೇಟ್ ಲಿಮಿಟೆಡ್ ರಾಮನಗರದ ಸಹಾಯಕ ವ್ಯವಸ್ಥಾಪಕ ಅಜಯ್ ಜೋಶಿ ಮತ್ತು ಸ್ಟೋರ್‌ ಕೀಪರ್‌ ಲೀಲಾಧರ್ ಪಾಠಕ್ ಅವರಿಗೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯಿದೆ 2006ರ ಸೆಕ್ಷನ್ 59ರ ಅಡಿಯಲ್ಲಿ 6 ತಿಂಗಳ ಕಾಲ ಜೈಲು ಶಿಕ್ಷೆಯನ್ನು ವಿಧಿಸಿದೆ.

ನ್ಯಾಯಾಲಯವು ಪತಂಜಲಿ ಆಯುರ್ವೇದ ಲಿಮಿಟೆಡ್ ಮತ್ತು ಅಜಯ್ ಜೋಶಿಗೆ ತಲಾ 10,000 ರೂ. ದಂಡ ವಿಧಿಸಿದರೆ, ಅಭಿಷೇಕ್ ಕುಮಾರ್ 25,000 ರೂ. ಮತ್ತು ಪಾಠಕ್‌ಗೆ 5,000 ರೂ.ದಂಡವನ್ನು ಕೂಡ ವಿಧಿಸಿದೆ.

ಮೂವರು ಆರೋಪಿಗಳು ತಮ್ಮ ಶಿಕ್ಷೆಯನ್ನು ಪೂರೈಸಲು ವಿಫಲವಾದರೆ, ಹೆಚ್ಚುವರಿ ಜೈಲು ಶಿಕ್ಷೆಯನ್ನು ಅನುಭವಿಸಬೇಕಾಗುತ್ತದೆ ಎಂದು ಮುಖ್ಯ ಜುಡಿಷಿಯಲ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಹೇಳಿದೆ.

ದಾರಿತಪ್ಪಿಸುವ ಜಾಹೀರಾತು ಪ್ರಕರಣದಲ್ಲಿ ಪತಂಜಲಿ ಸಿಲುಕಿರುವ ಹಿನ್ನೆಲೆಯಲ್ಲಿ ಈ ಬೆಳವಣಿಗೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಯೋಗ ಗುರು ಬಾಬಾ ರಾಮ್‌ದೇವ್ ಮತ್ತು ಇತರರಿಗೆ ನೀಡಿರುವ ನ್ಯಾಯಾಂಗ ನಿಂದನೆ ನೋಟಿಸ್‌ಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ತನ್ನ ಆದೇಶವನ್ನು ಕಾಯ್ದಿರಿಸಿದೆ.

ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ (IMA) 2022ರಲ್ಲಿ ಪತಂಜಲಿಯ ಜಾಹೀರಾತುಗಳಲ್ಲಿ “ಸುಳ್ಳು” ಮತ್ತು “ದಾರಿ ತಪ್ಪಿಸುವ” ಅಂಶಗಳನ್ನು ಹೊಂದಿದೆ ಎಂದು ಸುಪ್ರೀಂಕೋರ್ಟ್ ಮೊರೆ ಹೋಗಿತ್ತು. ಅಲೋಪತಿ ಔಷಧಗಳ ಕುರಿತು ಅಪಪ್ರಚಾರ ಮಾಡುತ್ತಿರುವ ಕಾರಣ ಬಾಬಾ ರಾಮದೇವ್‌ ಮತ್ತು ಪತಂಜಲಿ ಆಯುರ್ವೇದ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ನಡೆಸುತ್ತಿದೆ. ಹಲವು ಕಾಯಿಲೆಗಳ ಚಿಕಿತ್ಸೆ ಮತ್ತು ಔಷಧಿಗಳಿಗೆ ಸಂಬಂಧಿಸಿದಂತೆ ಸುಳ್ಳು ಮತ್ತು ತಪ್ಪುದಾರಿಗೆಳೆಯುವ ಜಾಹೀರಾತುಗಳನ್ನು ಪತಂಜಲಿ ಆರ್ಯುವೇದ ನೀಡುತ್ತಿರುವುದರ ವಿರುದ್ಧ ನವೆಂಬರ್‌ನಲ್ಲಿಯೇ ಸುಪ್ರೀಂ ಕೋರ್ಟ್‌ ಎಚ್ಚರಿಕೆ ನೀಡಿತ್ತು.

ಇದನ್ನು ಓದಿ: ಲೋಕಸಭೆ ಚುನಾವಣೆ: ಮುಸ್ಲಿಂ ಸಮುದಾಯಕ್ಕೆ ಕಡಿಮೆ ಪ್ರಾತನಿಧ್ಯ ನೀಡಿದ ರಾಜಕೀಯ ಪಕ್ಷಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...