Homeಕರೋನಾ ತಲ್ಲಣಪಾಟ್ನಾ ಆಸ್ಪತ್ರೆಯಲ್ಲಿ ರೋಗಿಗಳು ಮತ್ತು ಮೃತ ದೇಹಗಳು ಒಂದೇ ವಾರ್ಡ್‌ನಲ್ಲಿವೆ!

ಪಾಟ್ನಾ ಆಸ್ಪತ್ರೆಯಲ್ಲಿ ರೋಗಿಗಳು ಮತ್ತು ಮೃತ ದೇಹಗಳು ಒಂದೇ ವಾರ್ಡ್‌ನಲ್ಲಿವೆ!

ಬಿಹಾರ ಆರೋಗ್ಯ ಸಚಿವ ಮಂಗಲ್ ಪಾಂಡೆ 'ಇದು ಕಳವಳಕ್ಕೆ ಕಾರಣವಾಗಿದೆ' ಎಂದು ಹೇಳಿದರು. ಆದರೆ "ಕೊರೊನಾ ಸೋಂಕಿಗೆ ಬಲಿಯಾದವರ ದೇಹಗಳನ್ನು ಹೇಗೆ ವಿಲೇವಾರಿ ಮಾಡುವುದು ಎಂಬ ಪ್ರೋಟೋಕಾಲ್ಗಳನ್ನು ನಾವು ಅನುಸರಿಸಬೇಕಾಗಿದೆ" ಎಂದು ಹೇಳಿದರು.

- Advertisement -
- Advertisement -

ಕೊರೊನಾ ರೋಗಿಗಳಿಗಾಗಿ ಮೀಸಲಾದ ಬಿಹಾರದ ರಾಜಧಾನಿಯ ಪ್ರಮುಖ ಆಸ್ಪತ್ರೆಯಾದ ಪಾಟ್ನಾದ ನಳಂದ ವೈದ್ಯಕೀಯ ಕಾಲೇಜು, ಆಸ್ಪತ್ರೆಯಲ್ಲಿ ರೋಗಿಗಳು ಮತ್ತು ಮೃತ ದೇಹಗಳು ಒಂದೇ ವಾರ್ಡ್‌ನಲ್ಲಿರುವ ವಿಡಿಯೋ ವೈರಲ್ ಆಗಿದ್ದು, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹುಟ್ಟುಹಾಕಿದೆ.

ವೈರಲ್ ಆದ ವೀಡಿಯೊ ಸಾಂಕ್ರಾಮಿಕ ರೋಗಕ್ಕೆ ಬಲಿಯಾದ ದೇಹಗಳ ನಿರ್ವಹಣೆಯ ಕುರಿತು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಈ ಕುರಿತು ಪ್ರತಿಕ್ರಿಯಿಸಿದ ಬಿಹಾರ ಆರೋಗ್ಯ ಸಚಿವ ಮಂಗಲ್ ಪಾಂಡೆ ‘ಇದು ಕಳವಳಕ್ಕೆ ಕಾರಣವಾಗಿದೆ’ ಎಂದು ಹೇಳಿದ್ದಾರೆ. ಆದರೆ “ಕೊರೊನಾ ಸೋಂಕಿಗೆ ಬಲಿಯಾದವರ ದೇಹಗಳನ್ನು ಹೇಗೆ ವಿಲೇವಾರಿ ಮಾಡುವುದು ಎಂಬ ಪ್ರೋಟೋಕಾಲ್‌ಗಳನ್ನು ನಾವು ಅನುಸರಿಸಬೇಕಾಗಿದೆ” ಎಂದಿದ್ದಾರೆ.

ಎರಡು ದಿನಗಳಲ್ಲಿ ಎರಡನೇ ಗೊಂದಲದ ವೀಡಿಯೊ ಇದಾಗಿದೆ. ಆಸ್ಪತ್ರೆಯ ವಾರ್ಡ್‌ಗಳಲ್ಲಿ ರೋಗಿಗಳು ಹಾಸಿಗೆಗಳ ಮೇಲೆ ಮಲಗಿದ್ದಾರೆ. ಅದರ ಪಕ್ಕದಲ್ಲೇ ಮೃತ ದೇಹಗಳೂ ಇವೆ. ಕುಟುಂಬದ ಸದಸ್ಯರೂ ಅಲ್ಲಿಯೇ ಇರುವುದು ವೀಡಿಯೋದಲ್ಲಿ ಕಂಡುಬಂದಿದೆ.

ಇತ್ತೀಚಿನ ವೀಡಿಯೊದಲ್ಲಿ, ಅದನ್ನು ಚಿತ್ರೀಕರಿಸುತ್ತಿರುವ ವ್ಯಕ್ತಿಯು ಆಸ್ಪತ್ರೆಯ ಕಾರಿಡಾರ್‌ನಲ್ಲಿ ಬಿದ್ದರುವ ದೇಹವನ್ನು ತೋರಿಸುತ್ತಾ, “ಇದು ಮೊದಲ ದೇಹ” ಎಂದು ಕ್ಯಾಮೆರಾವನ್ನು ರೋಗಿಗಳಿಂದ ತುಂಬಿದ ಕೋಣೆಗೆ ಕರೆದೊಯ್ಯುತ್ತಾರೆ.

ಅವನು ನೆಲದ ಮೇಲೆ ಮಲಗಿರುವ ಮಹಿಳೆಯನ್ನು ‘ಆಂಟಿ ನೀವು ಯಾವಾಗಿನಿಂದ ಇಲ್ಲಿದ್ದೀರಿ?, ಆ ಮೃತ ದೇಹ ಎಷ್ಟು ಹೊತ್ತಿನಿಂದ ಅಲ್ಲಿದೆ’ ಎಂದು ಪ್ರಶ್ನಿಸಿದ್ದಾರೆ.

“ಯಾರಾದರೂ ಬಂದಿದ್ದಾರೆಯೇ? ಅದನ್ನು ಯಾವಾಗ ತೆಗೆದುಕೊಳ್ಳಲಾಗುವುದು ಎಂದು ಯಾರಾದರೂ ಹೇಳಿದ್ದಾರಾ?” ವೀಡಿಯೋ ಮಾಡಿದವನು ಕೇಳುತ್ತಾನೆ. “ಇಲ್ಲ” ಎಂದು ಮಹಿಳೆ ದುಗುಡದ ಧ್ವನಿಯಲ್ಲಿ ಹೇಳುತ್ತಾಳೆ.

ಕಳೆದ ಎರಡು ದಿನಗಳಲ್ಲಿ, ಶವಗಳನ್ನು ತೆಗೆದುಕೊಂಡು ಹೋಗಲು ಕುಟುಂಬದ ಸದಸ್ಯರು NMCH ಆಡಳಿತದಿಂದ 12 ಗಂಟೆಗಳ ಕಾಲ ಕಾಯಬೇಕಾಗಿದೆ.

ಈ ಕುರಿತು ಪ್ರಶ್ನಿಸಿದಾಗ, “ಶವಗಳನ್ನು ಸಂಬಂಧಿಸಿದವರಿಗೆ ಹಸ್ತಾಂತರಿಸುವ ಜವಾಬ್ದಾರಿ ಜಿಲ್ಲಾಡಳಿತದ್ದು. ಅದು ಸಂಜೆ ವೇಳೆ ಶವ ನೀಡುವುದಾಗಿ ತಿಳಿಸಿದೆ. ಏಕೆಂದರೆ ಹಗಲಿನ ವೇಳೆ ಅಂತ್ಯ ಕ್ರಿಯೆ ನಡೆಸಲು ಹಲವಾರು ಕಡೆ ಸ್ಥಳೀಯರು ವಿರೋಧಿಸುತ್ತಿದ್ದಾರೆ. ಹಾಗಾಗಿ ತಡವಾಗುತ್ತಿದೆ” ಎಂಬ ಸಮರ್ಥನೆ ಬಂದಿದೆ.

ಬಿಹಾರದಲ್ಲಿ ಕೊರೊನಾ ಸಂಬಂಧಿತ ಸಾವುಗಳ ಸಂಖ್ಯೆ ಹೆಚ್ಚಾಗುತ್ತಿದೆ. ಇದುವರೆಗೆ 27,000 ಕೊರೊನಾ ಪ್ರಕರಣಗಳನ್ನು ದಾಖಲಿಸಿದೆ.

ಆಸ್ಪತ್ರೆ ನಿರ್ವಹಣೆಯನ್ನು ಸುವ್ಯವಸ್ಥಿತಗೊಳಿಸಲು ರಾಜ್ಯದಾದ್ಯಂತ ಹಲವಾರು ಅಧಿಕಾರಿಗಳನ್ನು ರಾಜ್ಯ ಸರ್ಕಾರವು ನಿಯೋಜಿಸಲಾಗಿದೆ, ಆದರೆ ಪರಿಸ್ಥಿತಿ ಬದಲಾಗದೆ ಉಳಿದಿದೆ ಎಂದು ಹಲವರು ಅಭಿಪ್ರಾಯಪಟ್ಟಿದ್ದಾರೆ.

ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಕೋವಿಡ್ ಬಿಕ್ಕಟ್ಟನ್ನು ಸರಿಯಾಗಿ ನಿರ್ವಹಿಸಿಲ್ಲ ಎಂಬ ಆರೋಪವನ್ನು ತನಿಖೆ ಮಾಡಲು ಕೇಂದ್ರದ ಮೂರು ಸದಸ್ಯರ ತಂಡವನ್ನು ಭಾನುವಾರ ಕಳುಹಿಸಲಾಗಿದೆ.


ಇದನ್ನೂ ಓದಿ: ಬಿಹಾರ: ರಾಜ್ಯದ 8 ಜಿಲ್ಲೆಗಳ 3 ಲಕ್ಷ ಜನರು ಪ್ರವಾಹ ಪೀಡಿತರು..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...