Homeಮುಖಪುಟಬಿಹಾರ: ಎಸ್ಸಿ, ಎಸ್ಟಿ, ಒಬಿಸಿಗಳ ಮೀಸಲಾತಿಯಲ್ಲಿ 65% ಹೆಚ್ಚಳ ರದ್ದುಗೊಳಿಸಿದ ಹೈಕೋರ್ಟ್

ಬಿಹಾರ: ಎಸ್ಸಿ, ಎಸ್ಟಿ, ಒಬಿಸಿಗಳ ಮೀಸಲಾತಿಯಲ್ಲಿ 65% ಹೆಚ್ಚಳ ರದ್ದುಗೊಳಿಸಿದ ಹೈಕೋರ್ಟ್

- Advertisement -
- Advertisement -

ಬಿಹಾರದಲ್ಲಿ ದಲಿತರು, ಹಿಂದುಳಿದ ವರ್ಗಗಳು ಮತ್ತು ಬುಡಕಟ್ಟು ಜನಾಂಗದವರಿಗೆ ಸರ್ಕಾರಿ ಉದ್ಯೋಗಗಳು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಕೋಟಾಗಳನ್ನು 50ರಿಂದ 65%ಕ್ಕೆ ಹೆಚ್ಚಿಸಿ ಜಾರಿಗೆ ತಂದ ಮೀಸಲಾತಿ ಹೆಚ್ಚಳವನ್ನು ಪಾಟ್ನಾ ಹೈಕೋರ್ಟ್ ಗುರುವಾರ ರದ್ದುಗೊಳಿಸಿದೆ.

ಮುಖ್ಯ ನ್ಯಾಯಮೂರ್ತಿ ಕೆ ವಿನೋದ್ ಚಂದ್ರನ್ ನೇತೃತ್ವದ ವಿಭಾಗೀಯ ಪೀಠವು ನವೆಂಬರ್ 2023ರಲ್ಲಿ ನಿತೀಶ್ ಕುಮಾರ್ ಸರ್ಕಾರ ತಂದ ಮೀಸಲಾತಿ ಹೆಚ್ಚಳದ ಕುರಿತ ಅರ್ಜಿ ವಿಚಾರಣೆ ನಡೆಸಿದೆ. ಅರ್ಜಿದಾರರ ಪರ ವಾದ ಮಂಡಿಸಿದ ವಕೀಲರಾದ  ರಿತಿಕಾ ರಾಣಿ, ಮೀಸಲಾತಿ ಹೆಚ್ಚಳಕ್ಕೆ ಕಾನೂನು ತಿದ್ದುಪಡಿಗಳು ಸಂವಿಧಾನದ ಉಲ್ಲಂಘನೆ ಎಂದು ಕೋರ್ಟ್‌ನಲ್ಲಿ ವಾದಿಸಿದ್ದಾರೆ.

ಎರಡೂ ಕಡೆಯ ಅರ್ಜಿಗಳ ವಿಚಾರಣೆಯ ನಂತರ ನ್ಯಾಯಾಲಯವು ತನ್ನ ತೀರ್ಪನ್ನು ಮಾರ್ಚ್‌ನಲ್ಲಿ ಕಾಯ್ದಿರಿಸಿತ್ತು. ಇಂದು ಅಂತಿಮ ಆದೇಶ ಹೊರ ಬಂದಿದೆ ಮತ್ತು  ಅರ್ಜಿದಾರರ ಅರ್ಜಿಯನ್ನು ನ್ಯಾಯಾಲಯವು ಪುರಸ್ಕರಿಸಿದೆ.

ನಿತೀಶ್ ಕುಮಾರ್ ಸರ್ಕಾರ ಕಳೆದ ವರ್ಷ ನವೆಂಬರ್ 21ರಂದು ರಾಜ್ಯ ಸರ್ಕಾರಿ ಉದ್ಯೋಗಗಳು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ವಂಚಿತ ಜಾತಿಗಳಾದ ದಲಿತರು, ಹಿಂದುಳಿದ ವರ್ಗಗಳು ಮತ್ತು ಬುಡಕಟ್ಟು ಜನಾಂಗದವರಿಗೆ ಸರ್ಕಾರಿ ಉದ್ಯೋಗಗಳು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಮೀಸಲಾತಿಯನ್ನು 50ರಿಂದ 65%ಕ್ಕೆ ಹೆಚ್ಚಿಸುವ ಗೆಜೆಟ್ ಅಧಿಸೂಚನೆಗಳನ್ನು ಹೊರಡಿಸಿತ್ತು.

ಬಿಹಾರದಲ್ಲಿ ದೇಶದಲ್ಲೇ ಮೊದಲ ಬಾರಿಗೆ ನಿತೀಶ್‌ ಕುಮಾರ್‌ ಸರಕಾರವು ಜಾತಿಗಣತಿ ವರದಿಯನ್ನು ಬಿಡುಗಡೆ ಮಾಡಿತ್ತು. ಇದರಲ್ಲಿ ಹೆಚ್ಚು ಹಿಂದುಳಿದ ವರ್ಗದ ಜನರು(ಇಬಿಸಿ), ಹಿಂದುಳಿದ ವರ್ಗದ ಜನರು (ಒಬಿಸಿಗಳು) ಮತ್ತು ಪರಿಶಿಷ್ಟ ಜಾತಿಗಳು (ಎಸ್‌ಸಿ) ಜನರು ಒಟ್ಟು ಬಿಹಾರದ ಜನಸಂಖ್ಯೆಯ 84 ಪ್ರತಿಶತದಷ್ಟು ಇದ್ದಾರೆ ಎಂದು ವರದಿ ತಿಳಿಸಿದೆ. ಈ ವರದಿಯು ಸ್ವಾತಂತ್ರ್ಯಾ ನಂತರ ಬಿಡುಗಡೆಯಾದ ಮೊದಲ ಜಾತಿಗಣತಿ ವರದಿಯಾಗಿದೆ.

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಜಾತಿ ಆಧಾರಿತ ಮೀಸಲಾತಿಯನ್ನು 50% ರಿಂದ 65%ಕ್ಕೆ ಹೆಚ್ಚಿಸುವ ಮಸೂದೆಯನ್ನು ಆ ಬಳಿಕ ಬಿಹಾರ ವಿಧಾನಸಭೆಯಲ್ಲಿ ಸರ್ವಾನುಮತದಿಂದ ಅಂಗೀಕರಿಸಲಾಗಿತ್ತು.

ಇದನ್ನು ಓದಿ: ಹಿಮಾಚಲ ಪ್ರದೇಶ: ಪ್ರಾಣಿ ವಧೆ ಆರೋಪದಲ್ಲಿ ಮುಸ್ಲಿಂ ವ್ಯಕ್ತಿಯ ಅಂಗಡಿ ಧ್ವಂಸಗೊಳಿಸಿದ ಹಿಂದುತ್ವವಾದಿಗಳು

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...