Homeಮುಖಪುಟಬಿಹಾರ ಸರ್ಕಾರದ ಜಾತಿ ಗಣತಿಗೆ ಮಧ್ಯಂತರ ತಡೆ ನೀಡಿದ ಪಾಟ್ನಾ ಹೈಕೋರ್ಟ್

ಬಿಹಾರ ಸರ್ಕಾರದ ಜಾತಿ ಗಣತಿಗೆ ಮಧ್ಯಂತರ ತಡೆ ನೀಡಿದ ಪಾಟ್ನಾ ಹೈಕೋರ್ಟ್

- Advertisement -
- Advertisement -

ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಬಿಹಾರ ಸರ್ಕಾರ ನಡೆಸುತ್ತಿದ್ದ ಜಾತಿ ಆಧಾರಿತ ಗಣತಿಗೆ ಪಾಟ್ನಾ ಹೈಕೋರ್ಟ್ ಮಧ್ಯಂತರ ತಡೆ ನೀಡಿದ್ದು, ಮುಂದಿನ ವಿಚಾರಣೆಯನ್ನು ಜುಲೈ 03ಕ್ಕೆ ನಿಗಧಿಗೊಳಿಸಿದೆ.

ಬಿಹಾರದ ಮಹಾಘಟಬಂಧನ ಸರ್ಕಾರ ರಾಜ್ಯದಲ್ಲಿ ಜಾತಿ ಗಣತಿ ನಡೆಸುವ ನಿರ್ಧಾರ ಕೈಗೊಂಡಿತ್ತು. ಎರಡು ಹಂತಗಳಲ್ಲಿ ಮನೆ ಮನೆ ಸರ್ವೇ ನಡೆಸುತ್ತಿದ್ದು ಜನವರಿಯಲ್ಲಿ ಮೊದಲ ಹಂತದ ಜಾತಿಗಣತಿ ಮುಗಿದಿದ್ದು, ಈ ಏಪ್ರಿಲ್-ಮೇ ತಿಂಗಳಿನಲ್ಲಿ ಎರಡನೇ ಹಂತದ ಗಣತಿ ನಡೆಯುತ್ತಿತ್ತು. ಈ ಯೋಜನೆಗೆ ಸುಮಾರು 500 ಕೋಟಿ ರೂ ಮೀಸಲಿಡಲಾಗಿದೆ.

ಆದರೆ ಜಾತಿ ಗಣತಿ ನಡೆಸುವ ಅಧಿಕಾರ ಕೇಂದ್ರ ಸರ್ಕಾರಕ್ಕೆ ಮಾತ್ರ ಇದೆ. ಬಿಹಾರ ಸರ್ಕಾರ ಈ ಗಣತಿಯಲ್ಲಿ ಸೂಕ್ತ ನಡಾವಳಿಗಳನ್ನು ಪಾಲಿಸುತ್ತಿಲ್ಲ ಎಂದು ಆರೋಪಿಸಿ ನಿತೀಶ್ ಕುಮಾರ್ ನೇತೃತ್ವದ ಸರ್ಕಾರದ ಜಾತಿ ಆಧಾರಿತ ಸಮೀಕ್ಷೆಯನ್ನು ಪ್ರಶ್ನಿಸಿ ಯೂತ್ ಫಾರ್ ಈಕ್ವಾಲಿಟಿ ಸೇರಿದಂತೆ ಮೂರು ಅರ್ಜಿಗಳನ್ನು ಸಲ್ಲಿಸಲಾಗಿತ್ತು.

ಮುಖ್ಯ ನ್ಯಾಯಮೂರ್ತಿ ಕೆ ವಿನೋದ್ ಚಂದ್ರನ್ ಮತ್ತು ನ್ಯಾಯಮೂರ್ತಿ ಮಧುರೇಶ್ ಪ್ರಸಾದ್ ಅವರ ವಿಭಾಗೀಯ ಪೀಠವು ರಾಜ್ಯ ಸರ್ಕಾರವು ಅಂತಹ ಸಮೀಕ್ಷೆಯನ್ನು ನಿಯೋಜಿಸಲು ತನ್ನ ಅಧಿಕಾರವನ್ನು ಮೀರಿದೆ ಎಂದು ಕಂಡುಬಂದಲ್ಲಿ ಅರ್ಜಿದಾರರಿಗೆ ಮಧ್ಯಂತರ ಪರಿಹಾರವನ್ನು ನೀಡುವುದಾಗಿ ಬುಧವಾರವಷ್ಟೇ ಹೇಳಿತ್ತು.

ಕಾನೂನಿನ ಸರಿಯಾದ ಪ್ರಕ್ರಿಯೆಯನ್ನು ಅನುಸರಿಸದಿಲ್ಲದಿದ್ದರೆ ಅಥವಾ ಪ್ರತಿಕ್ರಿಯಿಸಿದವರ ಗೌಪ್ಯತೆಯ ಉಲ್ಲಂಘನೆಯಾಗಿದ್ದರೆ ನಾವು ನಿಮಗೆ ಮಧ್ಯಂತರ ಪರಿಹಾರವನ್ನು ನೀಡುತ್ತೇವೆ, ಇಲ್ಲದಿದ್ದರೆ ನಾವು ರಾಜ್ಯ ಸರ್ಕಾರಕ್ಕೆ ಜಾತಿ ಗಣತಿ ಮುಂದುವರೆಯಲು ಅವಕಾಶ ನೀಡುತ್ತೇವೆ” ಎಂದು ನ್ಯಾಯಮೂರ್ತಿ ಚಂದ್ರನ್ ಹೇಳಿದ್ದರು. ಆದರೆ ಇಂದು ತೀರ್ಪು ನೀಡಿದ್ದು ಜಾತಿ ಗಣತಿಗೆ ಮಧ್ಯಂತರ ತಡೆ ನೀಡಲಾಗಿದೆ.

ಸಮೀಕ್ಷೆಗೆ ವಿರೋಧ ವ್ಯಕ್ತಪಡಿಸಿರುವುದಕ್ಕೆ ಬಿಹಾರ ಸಿಎಂ ನಿತೀಶ್ ಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ಜನರ ಸಾಮಾಜಿಕ – ಆರ್ಥಿಕ ಸ್ಥಿತಿಗತಿ ತಿಳಿದುಕೊಳ್ಳಲು ಜಾತಿ ಸಮೀಕ್ಷೆ ನಡೆಸಲಾಗುತ್ತಿದೆ. ಇದರಿಂದಾಗಿ ನೀತಿಗಳನ್ನು ರೂಪಿಸಲು ಮತ್ತು ಕಾರ್ಯಕ್ರಮಗಳನ್ನು ಆಯೋಜಿಸಲು ಸಹಾಯವಾಗುತ್ತದೆ. ಈ ಸಮೀಕ್ಷೆಯು ಬಡ ವ್ಯಕ್ತಿಗಳ ಸಂಖ್ಯೆ ಮತ್ತು ಅವರನ್ನು ಮುಖ್ಯವಾಹಿನಿಗೆ ತರಲು ಅಗತ್ಯವಿರುವ ಕಾರ್ಯಕ್ರಮಗಳನ್ನು ರೂಪಿಸಲು ಅನುಕೂಲವಾಗುತ್ತದೆ” ಎಂದಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಜಾತಿ ಗಣತಿ ಬೇಡಿಕೆಯನ್ನು ತಿರಸ್ಕರಿಸಿದ್ದು, ಇದು ತನ್ನ ನೀತಿಗೆ ವಿರುದ್ಧವಾಗಿದೆ ಮತ್ತು ಇದು ಸಾಮಾಜಿಕ ವಿಘಟನೆ ಮತ್ತು ಜಾತಿ ದ್ವೇಷಗಳಿಗೆ ಕಾರಣವಾಗುತ್ತದೆ ಎಂದು ಹೇಳಿದೆ.

ಜಾತಿ ಗಣತಿಯು ರಾಜಕೀಯ ಮತ್ತು ಅಧಿಕಾರಶಾಹಿಯಲ್ಲಿ ಮೇಲ್ಜಾತಿಗಳ ಪ್ರಾಬಲ್ಯವನ್ನು ಬಹಿರಂಗಪಡಿಸಬಹುದು ಮತ್ತು ಜಾತಿ ಹೊರತುಪಡಿಸಿ ಹಿಂದೂ ಮತಗಳನ್ನು ಕ್ರೋಢೀಕರಿಸುವ ಅದರ ಪ್ರಯತ್ನಗಳನ್ನು ದುರ್ಬಲಗೊಳಿಸಬಹುದು ಎಂದು ಬಿಜೆಪಿ ಪಕ್ಷವು ಹೆದರುತ್ತಿದೆ ಎಂದು ಆರೋಪಿಸಲಾಗಿದೆ.

“ಜಾತಿ ಗಣತಿ ಮಾಡದ ಹೊರತು, ಸಮಾಜದ ಯಾವ ಭಾಗಕ್ಕೆ ಹೆಚ್ಚಿನ ಬೆಂಬಲ ನೀಡಬೇಕು ಎಂಬುದು ತಿಳಿಯುವುದಿಲ್ಲ. ‘ಗಣತಿ ನಡೆಸುವುದು ತಾರತಮ್ಯದ ನಿರ್ಧಾರ’ ಎಂದು ಹೇಳಿದ್ದ ಅರ್ಜಿಯನ್ನು ಸುಪ್ರೀಕೋರ್ಟ್‌ ವಜಾಗೊಳಿಸಿದೆ. ಇದು ನಮಗೆ ಸಂದ ಜಯ” ಎಂದು ಈ ಹಿಂದೆ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್‌ ಹೇಳಿದ್ದರು.

ಇದನ್ನೂ ಓದಿ: ಜಾತಿಗಣತಿಗೆ ಸರ್ಕಾರಗಳು ಹಿಂಜರಿಯುತ್ತಿರುವುದೇಕೆ? ಕರ್ನಾಟಕದ ವರದಿ ಬಿಡುಗಡೆಯಾಗಿಲ್ಲವೇಕೆ?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ರೋಹಿತ್‌ ವೇಮುಲಾ ಪ್ರಕರಣ ಮರುತನಿಖೆ ನಡೆಸುವಂತೆ ತೆಲಂಗಾಣ ಸಿಎಂಗೆ ಭೇಟಿ ಮಾಡಿದ ರಾಧಿಕಾ ವೇಮುಲಾ

0
ಹೈದರಾಬಾದ್ ವಿಶ್ವವಿದ್ಯಾಲಯದ ಪಿಎಚ್‌ಡಿ ವಿದ್ಯಾರ್ಥಿ ರೋಹಿತ್ ವೇಮುಲಾ ಸಾವಿನ ಪ್ರಕರಣದಲ್ಲಿ ತೆಲಂಗಾಣ ಪೊಲೀಸರು ಪ್ರಕರಣದ ಮುಕ್ತಾಯದ ವರದಿಯನ್ನು ಕೋರ್ಟ್‌ಗೆ ಸಲ್ಲಿಸಿದ್ದರು, ಇದೀಗ ಪ್ರಕರಣದ ಮರು ತನಿಖೆ ನಡೆಸುವಂತೆ ರೋಹಿತ್ ವೇಮುಲಾ ತಾಯಿ ರಾಧಿಕಾ...