Homeಮುಖಪುಟಪಾಟ್ನಾ | ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪ್ರಶಾಂತ್ ಕಿಶೋರ್ ಬಂಧನ

ಪಾಟ್ನಾ | ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪ್ರಶಾಂತ್ ಕಿಶೋರ್ ಬಂಧನ

- Advertisement -
- Advertisement -

ಬಿಹಾರ ಲೋಕಸೇವಾ ಆಯೋಗ (ಬಿಪಿಎಸ್‌ಸಿ) ಡಿಸೆಂಬರ್ 13ರಂದು ನಡೆಸಿದ್ದ ಪರೀಕ್ಷೆಯನ್ನು ರದ್ದುಪಡಿಸಲು ಒತ್ತಾಯಿಸಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ‘ಜನ ಸೂರಜ್‌’ ಪಕ್ಷದ ಸ್ಥಾಪಕ ಪ್ರಶಾಂತ್ ಕಿಶೋರ್ ಅವರನ್ನು ಇಂದು (ಜ.6) ಮುಂಜಾನೆ ಪೊಲೀಸರು ಬಂಧಿಸಿದ್ದಾರೆ.

ವರದಿಗಳ ಪ್ರಕಾರ, ಪೊಲೀಸರು ಪ್ರಶಾಂತ್ ಅವರನ್ನು ಬಂಧಿಸಿ ಕರೆದೊಯ್ದ ಬಳಿಕ, ಅವರ ಬೆಂಬಲಿಗರನ್ನು ಪ್ರತಿಭಟನಾ ಸ್ಥಳದಿಂದ ಹೊರ ಕಳಿಸಿದ್ದಾರೆ. ಪ್ರಶಾಂತ್ ಅವರನ್ನು ಪೊಲೀಸರು ವೈದ್ಯಕೀಯ ಪರೀಕ್ಷೆಗಾಗಿ ಪಾಟ್ನಾ ಏಮ್ಸ್‌ಗೆ ಕರೆದೊಯ್ದಿದ್ದಾರೆ ಎಂದು ಅವರ ಬೆಂಬಲಿಗರು ಹೇಳಿದ್ದಾರೆ.

ಪಿಟಿಐ ಸುದ್ದಿ ಸಂಸ್ಥೆ ಜೊತೆ ಮಾತನಾಡಿರುವ ಪಾಟ್ನಾ, ಜಿಲ್ಲಾ ಮ್ಯಾಜಿಸ್ಟ್ರೇಟ್ (ಡಿಎಂ) ಚಂದ್ರಶೇಖರ್ ಸಿಂಗ್ ಅವರು, “ಹೌದು, ಗಾಂಧಿ ಮೈದಾನದಲ್ಲಿ ಧರಣಿ ಕುಳಿತಿದ್ದ ಪ್ರಶಾಂತ್ ಕಿಶೋರ್ ಮತ್ತು ಅವರ ಬೆಂಬಲಿಗರನ್ನು ಸೋಮವಾರ ಬೆಳಗ್ಗೆ ಪೊಲೀಸರು ಬಂಧಿಸಿದ್ದಾರೆ” ಎಂದು ತಿಳಿಸಿದ್ದಾರೆ.

“ಪ್ರಶಾಂತ್ ಕಿಶೋರ್ ಮತ್ತು ಬೆಂಬಲಿಗರು ನಿರ್ಬಂಧಿತ ಜಾಗದಲ್ಲಿ ಧರಣಿ ನಡೆಸುತ್ತಿದ್ದರು. ಈ ಕಾರಣಕ್ಕೆ ಬಂಧಿಸಲಾಗಿದೆ. ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು” ಎಂದು ಡಿಎಂ ಮಾಹಿತಿ ನೀಡಿದ್ದಾರೆ.

ಗಾಂಧಿ ಮೈದಾನದ ಮಹಾತ್ಮ ಗಾಂಧಿ ಪುತ್ಥಳಿ ಬಳಿಯ ನಿರ್ಬಂಧಿತ ಜಾಗದಲ್ಲಿ ಪ್ರಶಾಂತ್ ಕಿಶೋರ್ ಮತ್ತು ಬೆಂಬಲಿಗರು ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸಿದ್ದಕ್ಕಾಗಿ ಪಾಟ್ನಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ವರದಿಗಳು ಹೇಳಿವೆ.

ಡಿಸೆಂಬರ್ 13ರಂದು ನಡೆದಿದ್ದ ಬಿಪಿಎಸ್‌ಸಿ ಪರೀಕ್ಷೆಯನ್ನು ರದ್ದುಗೊಳಿಸುವಂತೆ ಪ್ರತಿಭಟನೆ ನಡೆಸುತ್ತಿದ್ದ ನಾಗರಿಕ ಸೇವಾ ಆಕಾಂಕ್ಷಿಗಳಿಗೆ ಬೆಂಬಲ ವ್ಯಕ್ತಪಡಿಸಿ ಜನವರಿ 2ರಿಂದ ಪ್ರಶಾಂತ್ ಕಿಶೋರ್ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದರು.

ಆದರೆ, ಡಿಸೆಂಬರ್ 13ರಂದು ನಡೆದ ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆಯಾದ ಆರೋಪ ಕೇಳಿ ಬಂದಿದ್ದ ಹಿನ್ನೆಲೆ, ಆಯ್ದ ಅಭ್ಯರ್ಥಿಗಳಿಗೆ ಮರುಪರೀಕ್ಷೆ ನಡೆಸುವಂತೆ ಬಿಪಿಎಸ್‌ಸಿ ಆದೇಶಿಸಿತ್ತು.

ಅದರಂತೆ, ಜನವರಿ 4ರಂದು ರಾಜ್ಯದ 22 ಕೇಂದ್ರಗಳಲ್ಲಿ ಮರುಪರೀಕ್ಷೆ ನಡೆದಿದೆ. ಒಟ್ಟು 12,012 ಅಭ್ಯರ್ಥಿಗಳಲ್ಲಿ, ಸುಮಾರು 8,111 ಮಂದಿ ಮರು ಪರೀಕ್ಷೆಗಾಗಿ ತಮ್ಮ ಪ್ರವೇಶ ಕಾರ್ಡ್‌ಗಳನ್ನು (ಹಾಲ್‌ ಟಿಕೆಟ್‌) ಡೌನ್‌ಲೋಡ್ ಮಾಡಿಕೊಂಡಿದ್ದರು. ಆದರೆ, ಮರುಪರೀಕ್ಷೆಗೆ 5,943 ಅಭ್ಯರ್ಥಿಗಳು ಮಾತ್ರ ಹಾಜರಾಗಿದ್ದರು.

ಯಾವುದೇ ಸಮಸ್ಯೆಗಳಿಲ್ಲದೆ ಎಲ್ಲಾ ಕೇಂದ್ರಗಳಲ್ಲಿ ಬಹಳ ಯಶಸ್ವಿಯಾಗಿ ಮರು ಪರೀಕ್ಷೆ ನಡೆಸಲಾಗಿದೆ ಎಂದು ಬಿಪಿಎಸ್‌ಸಿ ಹೇಳಿದೆ.

ಇದನ್ನೂ ಓದಿ : ಒಡಿಶಾ | ಮೇಕೆ ಕಳವು ಆರೋಪ; ದಲಿತ ಯುವಕರ ಮೇಲೆ ಹಲ್ಲೆ, ಚಪ್ಪಲಿ ಹಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...