Homeಅಂಕಣಗಳುಕರ್ನಾಟಕ ವಿಧಾನಸಭಾ ಕ್ಷೇತ್ರಗಳ ಸಮೀಕ್ಷೆ:ಪಾವಗಡ: ಈ ಬಾರಿಯೂ ವೆಂಕಟರಮಣಪ್ಪ - ತಿಮ್ಮರಾಯಪ್ಪ ಕುಟುಂಬದ ನಡುವೆಯೇ ಹಣಾಹಣಿ

ಪಾವಗಡ: ಈ ಬಾರಿಯೂ ವೆಂಕಟರಮಣಪ್ಪ – ತಿಮ್ಮರಾಯಪ್ಪ ಕುಟುಂಬದ ನಡುವೆಯೇ ಹಣಾಹಣಿ

- Advertisement -
- Advertisement -

ಆಂಧ್ರ ಪ್ರದೇಶದ ಗಡಿಗೆ ಅಂಟಿಕೊಂಡಿರುವ, ಹೆಚ್ಚಾಗಿ ತೆಲುಗು ಭಾಷಿಕರೆ ಇರುವ ತುಮಕೂರು ಜಿಲ್ಲೆಯ ಹಿಂದುಳಿದ ತಾಲ್ಲೂಕು ಎನಿಸಿಕೊಂಡ ಪಾವಗಡ ವಿಧಾನಸಭಾ ಕ್ಷೇತ್ರದಲ್ಲಿ ರಾಜಕೀಯ ಬಿರುಸು ಪಡೆದಿದೆ. ಚಿತ್ರದುರ್ಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಪಾವಗಡ ಮೀಸಲು ಕ್ಷೇತ್ರದಲ್ಲಿ ಕಾಂಗ್ರೆಸ್‌ ಪಕ್ಷದ ಹಿರಿಯ ನಾಯಕ, ಮಾಜಿ ಸಚಿವ ವೆಂಕಟರಮಣಪ್ಪನವರು ಸದ್ಯ ಶಾಸಕರಾಗಿದ್ದಾರೆ. ನಾಲ್ಕು ಬಾರಿ ಶಾಸಕರಾಗಿರುವ ಅವರು ಈ ಬಾರಿ ಸ್ಪರ್ಧೆಯಿಂದ ಹಿಂದೆ ಸರಿದಿದ್ದು ತಮ್ಮ ಪುತ್ರ ಹೆಚ್.ವಿ ವೆಂಕಟೇಶ್‌ರವರಿಗೆ ಕಾಂಗ್ರೆಸ್ ಟಿಕೆಟ್ ಸಿಗುವಂತೆ ನೋಡಿಕೊಂಡಿದ್ದಾರೆ. ಕಳೆದ ಚುನಾವಣೆಯಲ್ಲಿ ಕೂದಲೆಳೆ ಅಂತರದಲ್ಲಿ ಸೋಲು ಕಂಡ ಜೆಡಿಎಸ್ ಪಕ್ಷದ ತಿಮ್ಮರಾಯಪ್ಪನವರು ಮತ್ತೆ ಕಣಕ್ಕೆ ಧುಮುಕಿದ್ದಾರೆ. ಕ್ಷೇತ್ರದ ಸ್ಥಿತಿಗತಿ ಹೀಗಿದೆ.

ಇದುವರೆಗೂ ಪಾವಗಡದಲ್ಲಿ 15 ಚುನಾವಣೆಗಳು ನಡೆದಿವೆ. ಅದರಲ್ಲಿ 10 ಬಾರಿ ಕಾಂಗ್ರೆಸ್ ಪಕ್ಷವೇ ಜಯ ಗಳಿಸಿದೆ. ಜೆಡಿಎಸ್ ಎರಡು ಬಾರಿ, ಜನತಾದಳ ಮತ್ತು ಜನತಾ ಪಕ್ಷ ತಲಾ ಒಮ್ಮೆ ಮತ್ತು ಒಂದು ಬಾರಿ ಪಕ್ಷೇತರ ಅಭ್ಯರ್ಥಿ ಜಯ ಗಳಿಸಿದ್ದಾರೆ. ಈ ಕ್ಷೇತ್ರದ ವಿಶೇಷವೆಂದರೆ ಇಲ್ಲಿ ಯಾರೂ ಸಹ ಸತತವಾಗಿ ಎರಡನೇ ಬಾರಿ ಗೆಲ್ಲಲು ಸಾಧ್ಯವಾಗಿಲ್ಲ.

1951ರಲ್ಲಿ ಮೈಸೂರು ಸಂಸ್ಥಾನದ ಭಾಗವಾಗಿದ್ದಾಗ ಪಾವಗಡ ದ್ವಿಸದಸ್ಯತ್ವ ಹೊಂದಿತ್ತು. ಎರಡೂ ಸ್ಥಾನಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿತ್ತು. 1978ರಲ್ಲಿ ಇಂದಿರಾ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲುವವರೆಗೂ ಕಾಂಗ್ರೆಸ್ ಪಾರುಪತ್ಯ ಮೆರೆದಿತ್ತು. ಆದರೆ 1983ರಲ್ಲಿ ಮೊದಲ ಬಾರಿಗೆ ಪಕ್ಷೇತರ ಅಭ್ಯರ್ಥಿ ಉಗ್ರನರಸಿಂಹಪ್ಪ ಗೆಲುವು ಕಂಡರು. 1985ರಲ್ಲಿ ಸೋಮ್ಲಾ ನಾಯ್ಕ್ ಜನತಾ ಪಕ್ಷದಿಂದ ಆಯ್ಕೆಯಾಗಿದ್ದರು.

1989ರಲ್ಲಿ ವೆಂಕಟರಮಣಪ್ಪನವರು ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಗೆಲುವು ಸಾಧಿಸಿದರು. 1994ರಲ್ಲಿ ಸೋಮ್ಲಾ ನಾಯಕ್ ಜನತಾದಳದಿಂದ ಜಯ ಕಂಡರೆ 1999ರಲ್ಲಿ ಮತ್ತೆ ವೆಂಕಟರಮಣಪ್ಪನವರು ಕಾಂಗ್ರೆಸ್‌ನಿಂದ ಆರಿಸಿಬಂದರು. 2004ರಲ್ಲಿ ಜೆಡಿಎಸ್‌ನ ಕೆ.ಎಂ ತಿಮ್ಮರಾಯಪ್ಪನವರು ಗೆದ್ದುಬಂದರು. 2008ರಲ್ಲಿ ವೆಂಕಟರಮಣಪ್ಪನವರ ಬದಲು ಡಾ.ಗಾಯಿತ್ರಿ ದೇವಿ ಎಂಬುವವರಿಗೆ ಕಾಂಗ್ರೆಸ್ ಟಿಕೆಟ್ ನೀಡಿತು. ಸೋಮ್ಲಾ ನಾಯ್ಕ್ ಬಿಜೆಪಿ ಸೇರಿ ಅಭ್ಯರ್ಥಿಯಾದರು. ಜೆಡಿಎಸ್‌ನಿಂದ ತಿಮ್ಮರಾಯಪ್ಪನವರು ಕಣಕ್ಕಿಳಿದಿದ್ದರು. ಆದರೆ ವೆಂಕಟರಮಣಪ್ಪನವರು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಜಯ ಕಂಡು ಮೂರನೇ ಬಾರಿಗೆ ಶಾಸಕರಾದರು. ಆ ಚುನಾವಣೆಯಲ್ಲಿ ಕಾಂಗ್ರೆಸ್ ನಾಲ್ಕನೇ ಸ್ಥಾನಕ್ಕೆ ಕುಸಿದಿತ್ತು!

2013ರ ಚುನಾವಣೆಯಲ್ಲಿ ವೆಂಕಟರಮಣಪ್ಪನವರ ಬದಲಿಗೆ ಅವರ ಪುತ್ರ ಹೆಚ್.ವಿ ವೆಂಕಟೇಶ್‌ ಕಾಂಗ್ರೆಸ್ ಅಭ್ಯರ್ಥಿಯಾದರು. ಜೆಡಿಎಸ್‌ನಿಂದ ತಿಮ್ಮರಾಯಪ್ಪನವರು ಕಣಕ್ಕಿಳಿದರು. ಇಬ್ಬರ ನಡುವಿನ ಪೈಪೋಟಿಯಲ್ಲಿ ತಿಮ್ಮರಾಯಪ್ಪನವರು 4,863 ಮತಗಳ ಅಂತರದಲ್ಲಿ ಗೆದ್ದು ಎರಡನೇ ಭಾರಿಗೆ ಶಾಸಕರಾದರು.

2018ರಲ್ಲಿ ಕಾಂಗ್ರೆಸ್‌ನಿಂದ ಮತ್ತೆ ವೆಂಕಟರಮಣಪ್ಪನವರು ಕಣಕ್ಕಿಳಿದರು. ಜೆಡಿಎಸ್‌ನ ತಿಮ್ಮರಾಯಪ್ಪನವರು ಎದುರಾಳಿಯಾಗಿದ್ದರು. ಇವರಿಬ್ಬರ ನಡುವಿನ ಜಿದ್ದಾಜಿದ್ದಿನ ಹೋರಾಟದಲ್ಲಿ ವೆಂಕಟರಮಣಪ್ಪನವರು 72,974 ಮತಗಳನ್ನು ಪಡೆದರೆ ತಿಮ್ಮರಾಯಪ್ಪನವರು 72,565 ಮತಗಳನ್ನು ಪಡೆದು ಕೇವಲ 409 ಮತಗಳ ಅಂತರದಿಂದ ಸೋಲುಂಡರು. ವೆಂಕಟರಮಣಪ್ಪ ನಾಲ್ಕನೇ ಬಾರಿಗೆ ಶಾಸಕರಾಗಿ, ಸಚಿವರೂ ಆಗಿದ್ದರು.

ಒಟ್ಟು 2 ಲಕ್ಷ ಮತಗಳಿರುವ ಪಾವಗಡ ಪ.ಜಾ ಮೀಸಲು ಕ್ಷೇತ್ರವಾಗಿದೆ. ಪರಿಶಿಷ್ಟ ಜಾತಿಯ 55,000 ಮತಗಳಿದ್ದರೆ, ಪರಿಶಿಷ್ಟ ಪಂಗಡ 35,000 ಮತಗಳಿವೆ. 10,000 ಮುಸ್ಲಿಂ ಮತಗಳು ಇವೆ ಎನ್ನಲಾಗಿದೆ.

ಹಾಲಿ ಪರಿಸ್ಥಿತಿ

ವೆಂಕಟರಮಣಪ್ಪನವರು ಯಾವುದೇ ಅಹಂ ಇಲ್ಲದೆ ಎಲ್ಲರ ಕೈಗೆ ಸಿಗುತ್ತಾರೆ. ಜನರ ಕೆಲಸಗಳನ್ನು ಮಾಡಿಕೊಡುತ್ತಾರೆ. ಎಲ್ಲರ ಫೋನ್ ತೆಗೆಯುತ್ತಾರೆ ಎಂಬ ಮಾತುಗಳು ಕೇಳಿಬರುತ್ತವೆ. ಆದರೆ ತಮ್ಮ ಊರಿಗೆ ರಸ್ತೆ ಕೇಳಿದ ಯುವಕನ ಕಪಾಳಕ್ಕೆ ಹೊಡೆದಿದ್ದರು, 4 ದಶಕಗಳಿಂದ ಕಾಂಗ್ರೆಸ್‌ನಲ್ಲಿ ಅವರೊಬ್ಬರೆ ಅಧಿಕಾರದಲ್ಲಿದ್ದಾರೆ ಎಂಬ ಆರೋಪಗಳು ಸಹ ಅವರ ಮೇಲಿವೆ. ಅವರ ಕುಟುಂಬ ಸದಸ್ಯರಿಗೆ ಈ ಬಾರಿ ಕಾಂಗ್ರೆಸ್ ಟಿಕೆಟ್ ಕೊಡಬಾರದು ಎಂಬ ಒತ್ತಾಯವನ್ನು ಸ್ಥಳೀಯ ಕಾಂಗ್ರೆಸ್ ನಾಯಕರು ಹೈಕಮಾಂಡ್ ಮುಂದಿಟ್ಟಿದ್ದರು. ಆದರೆ ಅದಕ್ಕೆ ಸೊಪ್ಪು ಹಾಕದ ಕಾಂಗ್ರೆಸ್ ಅವರು ಪುತ್ರ ಹೆಚ್.ವಿ ವೆಂಕಟೇಶ್‌ರವರನ್ನು ಕಾಂಗ್ರೆಸ್ ಅಭ್ಯರ್ಥಿಯನ್ನಾಗಿಸಿದೆ.

ಜೆಡಿಎಸ್ ಪಕ್ಷವು ಮಾಜಿ ಶಾಸಕ ತಿಮ್ಮರಾಯಪ್ಪನವರಿಗೆ ಮತ್ತೊಂದು ಅವಕಾಶ ನೀಡಿದೆ. ಅವರು ಕ್ಷೇತ್ರದ ಸಂಪ್ರದಾಯದಂತೆ ಈ ಬಾರಿ ಜನ ತನ್ನನ್ನು ಆಯ್ಕೆ ಮಾಡುತ್ತಾರೆ ಎಂದು ನಂಬಿ ಕೆಲಸ ಮಾಡುತ್ತಿದ್ದಾರೆ.

ಕೃಷ್ಣ ನಾಯ್ಕ್ ಎಂಬುವವರು ಬಿಜೆಪಿ ಅಭ್ಯರ್ಥಿಯಾಗಿದ್ದಾರೆ. ಜನಾರ್ದನ ರೆಡ್ಡಿಯ ಕೆಆರ್‌ಪಿಪಿ ಪಕ್ಷದಿಂದ ನೇರಳೇಕುಂಟೆ ನಾಗೇಂದ್ರ ಕುಮಾರ್ ಕಣಕ್ಕಿಳಿದಿದ್ದಾರೆ.

2023ರ ಸಾಧ್ಯತೆಗಳು

ಜೆಡಿಎಸ್ ಪಕ್ಷದ ತಿಮ್ಮರಾಯಪ್ಪ ಅವರು ಪರಿಶಿಷ್ಟ ಜಾತಿಯ ಎಡಗೈ ಸಮುದಾಯದವರಾಗಿದ್ದಾರೆ. ಕಾಂಗ್ರೆಸ್‌ನ ಹೆಚ್.ವಿ ವೆಂಕಟೇಶ್ ಬೋವಿ ಸಮುದಾಯಕ್ಕೆ ಸೇರಿದ್ದಾರೆ. ಕೆಆರ್‌ಪಿಪಿ ಪಕ್ಷದ ನಾಗೇಂದ್ರ ಕುಮಾರ್ ಸಹ ಬೋವಿ ಸಮುದಾಯದವರೆ ಆಗಿದ್ದಾರೆ. ಇನ್ನು ಬಿಜೆಪಿ ಅಭ್ಯರ್ಥಿ ಕೃಷ್ಣ ನಾಯ್ಕ್ ಲಂಬಾಣಿ ಸಮುದಾಯಕ್ಕೆ ಸೇರಿದ್ದಾರೆ. ಆದರೆ ನೇರ ಪೈಪೋಟಿ ಇರುವುದು ಜೆಡಿಎಸ್‌ನ ತಿಮ್ಮರಾಯಪ್ಪ ಮತ್ತು ಕಾಂಗ್ರೆಸ್‌ನ ಹೆಚ್.ವಿ ವೆಂಕಟೇಶ್‌ರವರ ನಡುವೆ. ಇಲ್ಲಿ ಒಮ್ಮೆ ಗೆದ್ದವರು ಮುಂದಿನ ಚುನಾವಣೆಯಲ್ಲಿ ಗೆದ್ದ ಇತಿಹಾಸವಿಲ್ಲ. ಆದರೆ ಹಾಲಿ ಅಭ್ಯರ್ಥಿಗಳಿಬ್ಬರೂ ತಮ್ಮ ಹಿಂದಿನ ಚುನಾವಣೆಯಲ್ಲಿ ಸೋಲು ಕಂಡವರೆ ಆಗಿದ್ದು, ಜನ ಯಾರನ್ನು ಆಯ್ಕೆ ಮಾಡುತ್ತಾರೆ ಎಂಬುದು ಫಲಿತಾಂಶದ ದಿನವೇ ತಿಳಿಯಬಹುದಾಗಿದೆ.

ಇದನ್ನೂ ಓದಿ; ಕೆ.ಆರ್.ನಗರ ಕ್ಷೇತ್ರ ಸಮೀಕ್ಷೆ: ಅನುಕಂಪದಲ್ಲಿ `ರವಿ’ ಮೂಡುವರೇ? ಪ್ರಭಾವದಲ್ಲಿ `ಸಾರಾ’ ಗೆಲ್ಲುವರೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...