Homeಮುಖಪುಟಪವನ್ ಕಲ್ಯಾಣ್ ಹುಟ್ಟುವ ಮೊದಲೆ ಹಿಂದಿ ಹೇರಿಕೆ ವಿರುದ್ಧ ಕಾನೂನು ತಂದಿದ್ದೇವೆ - ಡಿಎಂಕೆ ತಿರುಗೇಟು

ಪವನ್ ಕಲ್ಯಾಣ್ ಹುಟ್ಟುವ ಮೊದಲೆ ಹಿಂದಿ ಹೇರಿಕೆ ವಿರುದ್ಧ ಕಾನೂನು ತಂದಿದ್ದೇವೆ – ಡಿಎಂಕೆ ತಿರುಗೇಟು

- Advertisement -
- Advertisement -

ತಮಿಳು ಚಲನಚಿತ್ರಗಳನ್ನು ವಾಣಿಜ್ಯ ಉದ್ದೇಶಗಳಿಗಾಗಿ ಹಿಂದಿಗೆ ಡಬ್ ಮಾಡಲು ಅವಕಾಶ ನೀಡುವಾಗ ಹಿಂದಿ ಹೇರಿಕೆಯನ್ನು ತಮಿಳುನಾಡು ಜನರು ಯಾಕೆ ವಿರೋಧಿಸುತ್ತಿದ್ದಾರೆ ಎಂದು ಪ್ರಶ್ನಿಸಿದ್ದ ನಟ, ರಾಜಕಾರಣಿ ಪವನ್ ಕಲ್ಯಾಣ್ ಅವರಿಗೆ ಡಿಎಂಕೆ ತಿರುಗೇಟು ನೀಡಿದ್ದು, ಪವನ್ ಕಲ್ಯಾಣ್ ಹುಟ್ಟುವ ಮೊದಲೆ ತಮಿಳುನಾಡು ಹಿಂದಿ ವಿರುದ್ಧ ಕಾನೂನು ತಂದು, ದ್ವಿಭಾಷ ಸೂತ್ರವನ್ನು ಅಳವಡಿಕೊಂಡಿದ್ದೆವು ಎಂದು ಹೇಳಿದೆ.

ಡಿಎಂಕೆ ವಕ್ತಾರ ಡಾ. ಸೈಯದ್ ಹಫೀಜುಲ್ಲಾ ಅವರು ಪವನ್ ಕಲ್ಯಾಣ್ ಅವರ ಹೇಳಿಕೆಗೆ ತಿರುಗೇಟು ನೀಡಿ, ಭಾಷಾ ನೀತಿಗಳ ಕುರಿತು ಮತ್ತು ತಮಿಳುನಾಡಿನ ನಿಲುವಿನ ಕುರಿತು ಅವರಿಗೆ “ಟೊಳ್ಳು ತಿಳುವಳಿಕೆ” ಇದೆ ಎಂದು ಬಣ್ಣಿಸಿದ್ದಾರೆ. ತಮಿಳುನಾಡು ಹಿಂದಿ ಅಥವಾ ಇತರ ಯಾವುದೇ ಭಾಷೆಯನ್ನು ಕಲಿಯುವ ವ್ಯಕ್ತಿಗಳನ್ನು ಎಂದಿಗೂ ವಿರೋಧಿಸಿಲ್ಲ, ಆದರೆ ತನ್ನ ಜನರ ಮೇಲೆ ಹಿಂದಿ ಅಥವಾ ಯಾವುದೇ ಭಾಷೆಯನ್ನು ಹೇರುವುದನ್ನು ವಿರೋಧಿಸುತ್ತದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ತಮ್ಮ ಪಕ್ಷವಾದ ಜನಸೇನಾ ಸ್ಥಾಪನೆಯ ದಿನದಂದು ಮಾತನಾಡಿದ ಪವನ್ ಕಲ್ಯಾಣ್, ತಮಿಳುನಾಡಿನ ನಿಲುವಿನಲ್ಲಿ ವಿರೋಧಾಭಾಸವಿದೆ ಎಂದು ಹೇಳಿದ್ದರು. “ತಮಿಳುನಾಡು ಹಿಂದಿ ಭಾಷೆಯನ್ನು ನಿರಂತರವಾಗಿ ತಿರಸ್ಕರಿಸುತ್ತಿದೆ. ತಮಗೆ ಅದು ಬೇಡ ಎಂದು ಹೇಳುತ್ತಿದೆ. ಆದರೆ, ನನ್ನ ಮನಸ್ಸಿನಲ್ಲಿ ಒಂದು ಆಲೋಚನೆ ಸುಳಿಯಿತು – ಹಾಗಿದ್ದಲ್ಲಿ, ಅವರು ತಮಿಳು ಚಲನಚಿತ್ರಗಳನ್ನು ಹಿಂದಿಯಲ್ಲಿ ಏಕೆ ಡಬ್ ಮಾಡುತ್ತಾರೆ?” ಎಂದು ಕೇಳಿದ್ದಾರೆ.

“ಅವರು ಉತ್ತರ ಪ್ರದೇಶ, ಬಿಹಾರ ಮತ್ತು ಛತ್ತೀಸ್‌ಗಢದಂತಹ ಹಿಂದಿ ಮಾತನಾಡುವ ರಾಜ್ಯಗಳ ಹಣ ಬೇಕಾಗಿದೆ ಮತ್ತು ಬಿಹಾರದ ಕಾರ್ಮಿಕರನ್ನು ಅವರು ಅವಲಂಬಿಸಿದ್ದಾರೆ. ಆದರೂ, ಅವರು ಹಿಂದಿಯನ್ನು ತಿರಸ್ಕರಿಸುವುದಾಗಿ ಹೇಳಿಕೊಳ್ಳುತ್ತಾರೆ. ಇದು ಹೇಗೆ ನ್ಯಾಯ?” ಅವರು ಹೇಳಿದ್ದಾರೆ. ಪವನ್ ಕಲ್ಯಾಣ್ ಹುಟ್ಟುವ ಮೊದಲೆ

ತಮ್ಮ ಸ್ವಂತ ಅನುಭವಗಳನ್ನು ನೆನಪಿಸಿಕೊಂಡ ಪವನ್ ಕಲ್ಯಾಣ್ ಅವರು ತಮಿಳುನಾಡಿನ ಚೆನ್ನೈನಲ್ಲಿ ತಾನು ಅಧ್ಯಯನ ಮಾಡುತ್ತಿದ್ದಾಗ ತಾರತಮ್ಯವನ್ನು ಎದುರಿಸಿದ್ದೇನೆ ಎಂದು ಅನುಭವ ಹಂಚಿಕೊಂಡಿದ್ದಾರೆ. “ಕೋಪ ಬಂದಾಲೆಲ್ಲಾ ಭಾರತವೇನು ಕತ್ತರಿಸುವ ಕೇಕ್ ತುಂಡೆ? ಯಾರಾದರೂ ಭಾರತದ ಸಮಗ್ರತೆಯನ್ನು ದುರ್ಬಲಗೊಳಿಸಲು ಪ್ರಯತ್ನಿಸಿದರೆ, ಅದನ್ನು ರಕ್ಷಿಸಲು ನನ್ನಂತಹ ಕೋಟ್ಯಂತರ ಜನರು ಎದ್ದು ನಿಲ್ಲುತ್ತಾರೆ.” ಎಂದು ಹೇಳಿದ್ದಾರೆ.

ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಹಿರಿಯ ಡಿಎಂಕೆ ನಾಯಕ ಟಿಕೆಎಸ್ ಇಳಂಗೋವನ್, ಹಿಂದಿ ಹೇರಿಕೆ ವಿರುದ್ಧ ತಮಿಳುನಾಡಿನಲ್ಲಿ ದೀರ್ಘಕಾಲದ ವಿರೋಧವಿದೆ ಎಂದು ನೆನಪಿಸಿಕೊಂಡಿದ್ದಾರೆ.

“ನಾವು 1938 ರಿಂದ ಹಿಂದಿಯನ್ನು ವಿರೋಧಿಸುತ್ತಿದ್ದೇವೆ… ನಟರ ಹೇಳಿಕಯಿಂದ ಅಲ್ಲ, ಶಿಕ್ಷಣ ತಜ್ಞರ ಸಲಹೆಗಳ ಆಧಾರದ ಮೇಲೆ ತಮಿಳುನಾಡು ಯಾವಾಗಲೂ ದ್ವಿಭಾಷಾ ಸೂತ್ರವನ್ನು ಅನುಸರಿಸುತ್ತದೆ ಎಂದು ನಾವು ರಾಜ್ಯ ವಿಧಾನಸಭೆಯಲ್ಲಿ ಕಾನೂನು ಅಂಗೀಕರಿಸಿದ್ದೇವೆ. ಈ ಮಸೂದೆಯನ್ನು 1968 ರಲ್ಲಿ ಅಂಗೀಕರಿಸಲಾಯಿತು, ಆಗ ಪವನ್ ಕಲ್ಯಾಣ್ ಜನಿಸಿಯೆ ಇರಲಿಲ್ಲ.” ಎಂದು ಹೇಳಿದ್ದಾರೆ.

“ಅವರಿಗೆ ತಮಿಳುನಾಡಿನ ರಾಜಕೀಯ ತಿಳಿದಿಲ್ಲ. ಜನರನ್ನು ತರಬೇತಿ ಮಾಡಲು ಮಾತೃಭಾಷೆಯಲ್ಲಿ ನೀಡುವ ಶಿಕ್ಷಣವು ಅತ್ಯುತ್ತಮ ಮಾರ್ಗವೆಂದು ನಾವು ನಂಬುತ್ತೇವೆ, ಆದ್ದರಿಂದ ನಾವು ಹಿಂದಿಯನ್ನು ವಿರೋಧಿಸುತ್ತಿರುವುದು ಇದೇ ಮೊದಲಲ್ಲ. ಪವನ್ ಕಲ್ಯಾಣ್ ಅವರ ಹೇಳಿಕೆಗಳು ರಾಜಕೀಯ ಪ್ರೇರಿತವಾಗಿವೆ. ಬಿಜೆಪಿ ಸರ್ಕಾರದಿಂದ ಏನಾದರೂ ಪಡೆಯಲು ಬೇಕಾಗಿ ಹೇಗಾದರೂ ಮಾಡಿ ಬಿಜೆಪಿಯನ್ನು ಬೆಂಬಲಿಸಲು ಬಯಸುತ್ತಾರೆ” ಎಂದು ಅವರು ಹೇಳಿದ್ದಾರೆ.

ಡಿಎಂಕೆ ಸಂಸದೆ ಕನಿಮೋಳಿ ಅವರು ಪವನ್ ಕಲ್ಯಾಣ್ ಈ ಹಿಂದೆ ಹಿಂದಿ ಹೇರಿಕೆಯನ್ನು ಈ  ಟೀಕಿಸಿದ್ದ ಅವರ ಟ್ವೀಟ್‌ಗಳನ್ನು ಮರುಹಂಚಿಕೊಂಡಿದ್ದಾರೆ. ಈ ಟ್ವೀಟ್ ಅಲ್ಲಿ ಅವರು, ತಂತ್ರಜ್ಞಾನವು ಈಗ ಭಾಷೆಯ ಅಡೆತಡೆಗಳನ್ನು ಮೀರಿ ಚಲನಚಿತ್ರಗಳನ್ನು ಆನಂದಿಸಲು ನಮಗೆ ಅವಕಾಶ ಮಾಡಿಕೊಟ್ಟಿದೆ ಎಂದು ಕನಿಮೋಳಿ ಹೇಳಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಬಿಜೆಪಿ ನಾಯಕನನ್ನು ಬೆನ್ನಟ್ಟಿ ಗುಂಡಿಕ್ಕಿ ಹತ್ಯೆ; ವಿಡಿಯೊ ವೈರಲ್

ಬಿಜೆಪಿ ನಾಯಕನನ್ನು ಬೆನ್ನಟ್ಟಿ ಗುಂಡಿಕ್ಕಿ ಹತ್ಯೆ; ವಿಡಿಯೊ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...