Homeಮುಖಪುಟಭಾರತ ಚುನಾವಣಾ ವ್ಯವಸ್ಥೆಯನ್ನು ಹೊಗಳಿದ ಟ್ರಂಪ್: ಜ್ಞಾನೇಶ್ ಕುಮಾರ್ ಜೊತೆಗೆ EVMಅನ್ನು ತೆಗೆದುಕೊಂಡು ಹೊಗಿ ಎಂದು...

ಭಾರತ ಚುನಾವಣಾ ವ್ಯವಸ್ಥೆಯನ್ನು ಹೊಗಳಿದ ಟ್ರಂಪ್: ಜ್ಞಾನೇಶ್ ಕುಮಾರ್ ಜೊತೆಗೆ EVMಅನ್ನು ತೆಗೆದುಕೊಂಡು ಹೊಗಿ ಎಂದು ಕಾಲೆಳೆದ ಕಾಂಗ್ರೆಸ್

- Advertisement -
- Advertisement -

ಭಾರತದ ಚುನಾವಣಾ ವ್ಯವಸ್ಥೆ ಹಾಗೂ ಮತದಾರರ ಫೋಟೋ ಗುರುತಿನ ಚೀಟಿ (Voter ID) ಕಡ್ಡಾಯ ನಿಯಮವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಆದರೆ, ಟ್ರಂಪ್ ಅವರ ಈ ಹೇಳಿಕೆಯನ್ನು ಇಟ್ಟುಕೊಂಡು ಕಾಂಗ್ರೆಸ್ ವಕ್ತಾರ ಪವನ್ ಖೇರಾ ಕೇಂದ್ರ ಸರ್ಕಾರ ಹಾಗೂ ಚುನಾವಣಾ ಆಯೋಗದ ವಿರುದ್ಧ ವ್ಯಂಗ್ಯವಾಡಿದ್ದಾರೆ.

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ‘ಟ್ರೂತ್ ಸೋಶಿಯಲ್’ (Truth Social) ಖಾತೆಯಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದು, ಭಾರತದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರೊಂದಿಗಿನ ಇತ್ತೀಚಿನ ಸಂಭಾಷಣೆಯನ್ನು ಉಲ್ಲೇಖಿಸಿದ್ದಾರೆ.

ಟ್ರಂಪ್ ಪೋಸ್ಟ್‌ನಲ್ಲೇನಿತ್ತು?

“ಭಾರತದ ಇತ್ತೀಚಿನ ಚುನಾವಣೆಯಲ್ಲಿ ಬೃಹತ್ ಪ್ರಮಾಣದ ಮತದಾರರು ಭಾಗವಹಿಸಿದ್ದರು. ಈ ಪೈಕಿ ಶೇಕಡಾ 1ಕ್ಕಿಂತಲೂ ಕಡಿಮೆ ಮಂದಿ ಅಂಚೆ ಮತಪತ್ರ (Postal Ballot) ಬಳಸಿದ್ದು, ಉಳಿದೆಲ್ಲಾ ಮತದಾರರೂ ಮಾನ್ಯ ಫೋಟೋ ಗುರುತಿನ ದಾಖಲೆಯನ್ನು ಹಾಜರುಪಡಿಸುವುದು ಕಡ್ಡಾಯವಾಗಿತ್ತು. ‘ಮಾನ್ಯ ಫೋಟೋ ಐಡಿ ಇಲ್ಲದೆ ಅಮೆರಿಕದಲ್ಲಿ ಚುನಾವಣೆಗಳನ್ನು ಹೇಗೆ ನಡೆಸುತ್ತೀರಿ?’ ಎಂದು ಭಾರತದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ನನ್ನನ್ನು ಕೇಳಿದ್ದರು. ಅಮೆರಿಕದಲ್ಲೂ ಈಗಲೇ ‘ದಿ ಸೇವ್ ಅಮೆರಿಕ ಕಾಯ್ದೆ’ಯನ್ನು (Save America Act) ಅಂಗೀಕರಿಸುವ ಅಗತ್ಯವಿದೆ” ಎಂದು ಟ್ರಂಪ್ ಬರೆದುಕೊಂಡಿದ್ದರು.

ಪವನ್ ಖೇರಾ ಕೌಂಟರ್:

ಟ್ರಂಪ್ ಅವರ ಈ ಪೋಸ್ಟ್‌ಗೆ ತಕ್ಷಣವೇ ಪ್ರತಿಕ್ರಿಯಿಸಿದ ಕಾಂಗ್ರೆಸ್‌ ನಾಯಕ ಪವನ್ ಖೇರಾ, “ಆತ್ಮೀಯ ಡೊನಾಲ್ಡ್ ಟ್ರಂಪ್‌ ಅವರೇ, ದಯವಿಟ್ಟು ಜ್ಞಾನೇಶ್ ಕುಮಾರ್ ಅವರನ್ನು ಅಮೆರಿಕಕ್ಕೆ ಕರೆದುಕೊಂಡು ಹೋಗಿ ಅಲ್ಲೇ ಇರಿಸಿಕೊಳ್ಳಿ. ಅಷ್ಟೇ ಅಲ್ಲ, ಲಭ್ಯವಿರುವ ಮುಂದಿನ ವಿಮಾನದಲ್ಲೇ ನಮ್ಮ ಇವಿಎಂ (EVM) ಯಂತ್ರಗಳನ್ನು ಕೂಡ ನಿಮಗಾಗಿ ಕಳುಹಿಸಿಕೊಡುತ್ತೇವೆ. ನೀವು ನಮಗೆ ಮಾಡಿರುವ ಎಲ್ಲಾ ಅವಮಾನಗಳು ಮತ್ತು ಬೆದರಿಕೆಗಳಿಗೆ ಪ್ರತಿಯಾಗಿ ನಾವು ಮಾಡಬಹುದಾದ ಕನಿಷ್ಠ ಕೆಲಸ ಇದಾಗಿದೆ” ಎಂದು ಟಾಂಗ್ ನೀಡಿದ್ದಾರೆ.

ಭಾರತದಲ್ಲಿ ಇವಿಎಂ ಬಳಕೆಯ ಕುರಿತು ಪ್ರತಿಪಕ್ಷಗಳು ನಿರಂತರವಾಗಿ ಅನುಮಾನ ವ್ಯಕ್ತಪಡಿಸುತ್ತಿರುವ ಬೆನ್ನಲ್ಲೇ, ಟ್ರಂಪ್ ಅವರ ಹೇಳಿಕೆಯನ್ನು ಬಳಸಿಕೊಂಡು ಕಾಂಗ್ರೆಸ್ ಈ ರೀತಿ ಟೀಕಿಸಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎನ್‌ಎಎಲ್‌ಎಸ್‌ಎಆರ್‌ ಘಟಿಕೋತ್ಸವದ ಆಹ್ವಾನವನ್ನು ನಾನು ಸ್ವೀಕರಿಸಿರಲೇ ಇಲ್ಲ: ಸಿಜೆಐ ಸೂರ್ಯ ಕಾಂತ್

ಎನ್‌ಎಎಲ್‌ಎಸ್‌ಎಆರ್‌ ಕಾನೂನು ವಿಶ್ವವಿದ್ಯಾಲಯದ ಮುಂಬರುವ ಘಟಿಕೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲು ನಾನು ಎಂದಿಗೂ ಒಪ್ಪಿಗೆ ನೀಡಿರಲಿಲ್ಲ ಎಂದು ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರು ಹೇಳಿದ್ದಾರೆ. ವಿದ್ಯಾರ್ಥಿಗಳ ವಿರೋಧದ ನಡುವೆಯೂ...

ಎರಡು ವರ್ಷಗಳ ವಿಳಂಬದ ನಂತರ ಹಣಕಾಸು ವರದಿ ಬಿಡುಗಡೆ ಮಾಡಿದ ಪಿಎಂ ಕೇರ್ಸ್

ಎರಡು ವರ್ಷಗಳ ವಿಳಂಬದ ನಂತರ ಪಿಎಂ ಕೇರ್ಸ್ ನಿಧಿಯು ತನ್ನ 2023-24 ಮತ್ತು 2024-25ರ ಹಣಕಾಸು ವರ್ಷಗಳ ಆಡಿಟ್ ವರದಿಗಳನ್ನು (ಲೆಕ್ಕಪರಿಶೋಧನಾ ವರದಿ) ಆಗಸ್ಟ್ 17ರಂದು ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಿದೆ. ಪಿಎಂ...

ಬಿಜೆಪಿ ವಿರುದ್ಧ ಹೋರಾಟಕ್ಕೆ ಕರೆ ನೀಡಿದ ತ್ರಿಪುರ ಮಾಜಿ ಸಿಎಂ ಮಾಣಿಕ್ ಸರ್ಕಾರ್ ವಿರುದ್ಧ ಪ್ರಕರಣ ದಾಖಲು: ಬಿಜೆಪಿಯ ಕೀಳು ಮಟ್ಟದ ರಾಜಕೀಯ ಎಂದ ಸಿಪಿಐ(ಎಂ)

ತ್ರಿಪುರದ ಮಾಜಿ ಮುಖ್ಯಮಂತ್ರಿ ಹಾಗೂ ಸಿಪಿಐ(ಎಂ) ಪಾಲಿಟ್‌ಬ್ಯೂರೋ ಹಿರಿಯ ಸದಸ್ಯ ಮಾಣಿಕ್ ಸರ್ಕಾರ್ ಅವರು ಇತ್ತೀಚೆಗೆ ಸಾರ್ವಜನಿಕ ರ್ಯಾಲಿಯೊಂದರಲ್ಲಿ ನೀಡಿದ್ದ ಹೇಳಿಕೆಯನ್ನು ಆಧರಿಸಿ, ಅವರ ವಿರುದ್ಧ ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ಸರಣಿ...

ಮುಹಮ್ಮದ್ ದೀಪಕ್‌ಗೆ 2026 ನೇ ಸಾಲಿನ ‘ರೆಹಮತ್-ಎ-ಆಲಂ ಶಾಂತಿ ಪ್ರಶಸ್ತಿ’

ಆಲ್ ಇಂಡಿಯಾ ಬಾಜ್ಮ್-ಎ-ರೆಹಮತ್-ಎ-ಆಲಂ ಸಂಘಟನೆಯು, ಮುಹಮ್ಮದ್ ದೀಪಕ್ ಎಂದೇ ಜನಪ್ರಿಯರಾಗಿರುವ ದೀಪಕ್ ಕುಮಾರ್ ಅವರಿಗೆ 2026 ರ ರೆಹಮತ್-ಎ-ಆಲಂ ಶಾಂತಿ ಪ್ರಶಸ್ತಿಯನ್ನು ಘೋಷಿಸಿದೆ. ಪ್ರವಾದಿ ಮುಹಮ್ಮದ್ ಅವರ ಜನ್ಮ ದಿನಾಚರಣೆಯಾದ ಮಿಲಾದ್-ಉನ್-ನಬಿಯನ್ನು ಗುರುತಿಸಲು ಆಯೋಜಿಸಲಾದ...

ಸ್ವಾತಂತ್ರ್ಯ ದಿನಾಚರಣೆಯಲ್ಲಿ ದಲಿತರಿಗೆ ಅವಮಾನ; ಬಲವಂತವಾಗಿ ನೆಲದ ಮೇಲೆ ಕೂರಿಸಿದ ಐವರ ವಿರುದ್ಧ ಪ್ರಕರಣ ದಾಖಲು

ರಾಜಸ್ಥಾನದ ಭಿಲ್ವಾರಾ ಜಿಲ್ಲೆಯ ಸರ್ಕಾರಿ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ದಲಿತ ಸಮುದಾಯದ ಇಬ್ಬರಿಗೆ ಜಾತಿ ನಿಂದನೆ ಮಾಡಿದ್ದು, ಅವರು ಕುಳಿತಿದ್ದ ಕುರ್ಚಿಗಳನ್ನು ಖಾಲಿ ಮಾಡಿಸಿ ನೆಲದ ಮೇಲೆ ಕೂರಿಸಿದ್ದಾರೆ. ಈ ಬಗ್ಗೆ...

ಬಿಹಾರ NEET ಪ್ರತಿಭಟನೆ: ವಿದ್ಯಾರ್ಥಿಗಳ ವಿರುದ್ಧ AK-47 ಬಳಸಿದ್ದನ್ನು ಸುಪ್ರೀಂನಲ್ಲಿ ಒಪ್ಪಿಕೊಂಡ ಬಿಹಾರ ಸರ್ಕಾರ

ಬಿಹಾರದಲ್ಲಿ ನಡೆದ NEET-UG ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪೊಲೀಸ್ ಕಾನ್ಸ್ಟೇಬಲ್ ಒಬ್ಬರು AK-47 ರೈಫಲ್‌ನಿಂದ ಗಾಳಿಯಲ್ಲಿ ನಾಲ್ಕು ಸುತ್ತು ಗುಂಡು ಹಾರಿಸಿರುವುದಾಗಿ ಬಿಹಾರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ...

ಕರಿಯಪ್ಪ ಗುಡಿಮನಿ ಸೇರಿದಂತೆ ಮೂವರು ಹೋರಾಟಗಾರರಿಗೆ ಹಂಪಿ ವಿವಿ ಸನ್ಮಾನ

ಹಂಪಿ ಕನ್ನಡ ವಿಶ್ವವಿದ್ಯಾಲಯ ಆಗಸ್ಟ್‌ 15 ರಂದು ಹಿರಿಯ ದಲಿತ ಹೋರಾಟಗಾರರಾದ ಕರಿಯಪ್ಪ ಗುಡಿಮನೆ, ದೇಸಾಯಿ ಗುಂಡೂರಾವ್‌, ಹೆಚ್.‌ ಪಿ. ಶಿಕಾರಿ ಮತ್ತು ಶೇಖಪ್ಪರನ್ನು ಸಾಮಾಜಿಕ ಹೋರಾಟಕ್ಕೆ ತಮ್ಮ ಜೀವನವನ್ನು ಸವೆಸಿದ ಹಿನ್ನೆಲೆಯಲ್ಲಿ...

ಎಸ್‌ಐಆರ್ ಪ್ರಕ್ರಿಯೆಯಲ್ಲಿನ ಅನ್ಯಾಯ ತಡೆಯಲು ಸರ್ಕಾರ ಮಧ್ಯಪ್ರವೇಶಿಸಬೇಕು; ಮುಖ್ಯಮಂತ್ರಿಗಳಿಗೆ ನಾಗರಿಕ ಸಂಘಟನೆಗಳ ಮನವಿ

"ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯಿಂದ ಅರ್ಹ ಮತದಾರರಿಗೆ ಅನ್ಯಾಯವಾಗುತ್ತಿದ್ದು, ಈ ಕುರಿತು ತುರ್ತು ಕ್ರಮ ಕೈಗೊಳ್ಳಬೇಕು" ಎಂದು ನಾಗರಿಕ ಸಂಘಟನೆಗಳು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ...

SIR: ಕೊಪ್ಪಳದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ‘ಛತ್ರಪ್ಪ’ ಅವರ ಹೆಸರನ್ನೆ ಕೈಬಿಟ್ಟ ಚುನಾವಣಾ ಆಯೋಗ

ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳು ದಿಢೀರ್ ನಾಪತ್ತೆಯಾಗುತ್ತಿರುವ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಕಳೆದ 50ಕ್ಕೂ ಹೆಚ್ಚು ವರ್ಷಗಳಿಂದ ಗಂಗಾವತಿಯಲ್ಲಿ ಸಮಾಜಮುಖಿ ಕಾರ್ಯಗಳ ಮೂಲಕ ಚಿರಪರಿಚಿತರಾಗಿರುವ, ಗಂಗಾವತಿ ಬಸವ ಕೇಂದ್ರದ...

ಮಹಾರಾಷ್ಟ್ರದ ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿಯರ ವಿಚಿತ್ರ ವರ್ತನೆ, ಗೆಜ್ಜೆ ಸದ್ದು: ದೆವ್ವದ ಕಾಟವೆಂದು ಹಾಸ್ಟೆಲ್ ತೊರೆದ 600 ಬುಡಕಟ್ಟು ವಿದ್ಯಾರ್ಥಿಗಳು

ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯ ದೂರದ ಮೆಲ್ಘಾಟ್ ಬುಡಕಟ್ಟು ಪ್ರದೇಶದಲ್ಲಿ ಮೂಢನಂಬಿಕೆ ಮತ್ತು ಮಾನಸಿಕ ಭಯದ ವಾತಾವರಣವು ಗಂಭೀರ ಶೈಕ್ಷಣಿಕ ಬಿಕ್ಕಟ್ಟನ್ನು ಸೃಷ್ಟಿಸಿದೆ. ಚಿಕಲ್ದಾರಾ ತಾಲ್ಲೂಕಿನ ಡೋಮಾ ಗ್ರಾಮದಲ್ಲಿರುವ ಸರ್ಕಾರಿ ಬುಡಕಟ್ಟು ವಸತಿ ಶಾಲೆಯ...