Homeಕರ್ನಾಟಕ'ಪೇಮೆಂಟ್ ಸೀಟ್ ಅಧ್ಯಕ್ಷ' | ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಬಗ್ಗೆ ಸಿಎಂ ಸಿದ್ದರಾಮಯ್ಯ ವ್ಯಂಗ್ಯ

‘ಪೇಮೆಂಟ್ ಸೀಟ್ ಅಧ್ಯಕ್ಷ’ | ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಬಗ್ಗೆ ಸಿಎಂ ಸಿದ್ದರಾಮಯ್ಯ ವ್ಯಂಗ್ಯ

- Advertisement -
- Advertisement -

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ‘ಪೇಮೆಂಟ್ ಸೀಟ್ ಅಧ್ಯಕ್ಷ’ ಎಂದು ವ್ಯಂಗ್ಯವಾಡಿದ್ದಾರೆ. ನನ್ನ ಜೊತೆಗೆ ಚರ್ಚೆ ನಡೆಸುವ ಮೊದಲು ನಿಮ್ಮದೇ ಪಕ್ಷದ ನಾಯಕರಾಗಿರುವ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ರಮೇಶ್ ಜಾರಕಿಹೊಳಿ ಅವರ ಜೊತೆ ಒಂದು ಸುತ್ತು ಚರ್ಚೆ ಮಾಡಿಕೊಂಡು ಬನ್ನಿ ಎಂದು ಅವರಿಗೆ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.

ಈ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ‘ಪೇಮೆಂಟ್ ಸೀಟ್ ಅಧ್ಯಕ್ಷ’ ಎಂಬ ಹ್ಯಾಷ್‌ಟ್ಯಾಗ್‌ನೊಂದಿಗೆ ಪೋಸ್ಟ್ ಹಾಕಿರುವ ಸಿಎಂ ಸಿದ್ದರಾಮಯ್ಯ, “ಮಾನ್ಯ ವಿಜಯೇಂದ್ರ ಅವರೆ, ಪ್ರಧಾನಿ ನರೇಂದ್ರ ಮೋದಿ ಅವರ ಬದಲಿಗೆ ತಾವೇ ಬಹಿರಂಗ ಚರ್ಚೆಗೆ ಸಿದ್ಧ ಎಂದು ನೀವು ಹಾಕಿರುವ ಸವಾಲನ್ನು ಗಮನಿಸಿದೆ. ನನ್ನ ಜೊತೆ ಚರ್ಚೆ ನಡೆಸುವ ಮೊದಲು ನಿಮ್ಮದೇ ಪಕ್ಷದ ನಾಯಕರಾಗಿರುವ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ರಮೇಶ್ ಜಾರಕಿಹೊಳಿ ಅವರ ಜೊತೆ ಒಂದು ಸುತ್ತು ಚರ್ಚೆ ಮಾಡಿಕೊಂಡು ಬನ್ನಿ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ನಿಮ್ಮ ಪೂಜ್ಯ ತಂದೆಯವರನ್ನು ಮುಖ್ಯಮಂತ್ರಿ ಮಾಡಲು ನೀವು ಬಿಜೆಪಿ ಹೈಕಮಾಂಡ್ ಗೆ ಎರಡು ಸಾವಿರ ಕೋಟಿ ರೂಪಾಯಿ ನೀಡಿದ್ದೀರಿ..!! ನಿಮ್ಮನ್ನು ಪಕ್ಷದ ಅಧ್ಯಕ್ಷರನ್ನಾಗಿ ಮಾಡಲು ಇನ್ನೂ ಒಂದಷ್ಟು ಕೋಟಿ ರೂಪಾಯಿ ನೀಡಿದ್ದೀರಿ..!! ಎಂದು ನಿಮ್ಮ ನಾಯಕರೇ ಆರೋಪಿಸಿದ್ದಾರೆ. ಮೊದಲು ಅವರ ಜೊತೆ ಚರ್ಚೆ ಮಾಡಿ ಮುಗಿಸಿ ಬನ್ನಿ.” ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

“ನೀವು ಕಮಿಷನ್ ಹೊಡೆಯುವುದರಲ್ಲಷ್ಟೇ ಪರಿಣತರು ಎಂದು ನಿಮ್ಮದೇ ಪಕ್ಷದ ನಾಯಕರಾದ ಯತ್ನಾಳ್, ಜಾರಕಿಹೊಳಿ, ಹೆಚ್.ವಿಶ್ವನಾಥ್ ಅವರು ಹೇಳುತ್ತಲೇ ಇದ್ದಾರೆ. ಇಲ್ಲಿಯ ವರೆಗೆ ಅವರ ಆರೋಪಗಳಿಗೆ ನೀವು ಪ್ರತಿಕ್ರಿಯೆ ನೀಡದಿರುವುದು ಮತ್ತು ಇಂತಹ ಆರೋಪ ಮಾಡುತ್ತಿರುವವರ ವಿರುದ್ಧ ನಿಮ್ಮ ಪಕ್ಷದ ಹೈಕಮಾಂಡ್ ಕೂಡಾ ಕ್ರಮ ಕೈಗೊಳ್ಳದಿರುವುದನ್ನು ನೋಡಿದರೆ ಈ ಆರೋಪಗಳನ್ನು ನೀವು ಒಪ್ಪಿಕೊಂಡಂತೆ ಕಾಣಿಸುತ್ತಿದೆ, ಇದು ನಿಜವೇ?” ಎಂದು ಅವರು ಕೇಳಿದ್ದಾರೆ.

“ಈ ಎಲ್ಲ ಬೆಳವಣಿಗೆಗಳನ್ನು ನೋಡಿದರೆ ನಿಮ್ಮ ಪದಚ್ಯುತಿಗೆ ಬಸನಗೌಡ ಪಾಟೀಲ್ ಯತ್ನಾಳ್ ಅವರು ನೀಡಿರುವ ಡಿಸೆಂಬರ್ ತಿಂಗಳ ಗಡುವು ನಿಜವಾಗುತ್ತಿರುವಂತೆ ಕಾಣುತ್ತಿದೆ. ನಮ್ಮ ಸರ್ಕಾರದ ಬಗ್ಗೆ ಚಿಂತಿಸುವ ಬದಲಿಗೆ ಮೊದಲು ನಿಮ್ಮ ಕುರ್ಚಿ ಭದ್ರ ಪಡಿಸಿಕೊಳ್ಳುವ ಯೋಚನೆ ಮಾಡಿ.” ಎಂದು ಅವರಿಗೆ ಸಲಹೆ ನೀಡಿದ್ದಾರೆ.

“ನೀವಿನ್ನೂ ಆಡಳಿತಕ್ಕೆ ಹೊಸಬರು, ತೆರಿಗೆ – ಅನುದಾನ – ಜಿಎಸ್‌ಟಿ ಇತ್ಯಾದಿ ವಿಚಾರಗಳೆಲ್ಲ ನಿಮ್ಮ ಪೂಜ್ಯ ತಂದೆಯವರಾದ ಬಿ.ಎಸ್.ಯಡಿಯೂರಪ್ಪನವರಿಗೇ ಅರ್ಥವಾಗಿಲ್ಲ, ನಿಮಗೆಷ್ಟು ಅರ್ಥವಾಗಬಹುದು? ಕೇಂದ್ರದಲ್ಲಿ ಅಧಿಕಾರದಲ್ಲಿರುವ ನಿಮ್ಮದೇ ಪಕ್ಷದ ಸರ್ಕಾರ ತೆರಿಗೆ ಹಂಚಿಕೆಯಲ್ಲಿ ಕರ್ನಾಟಕಕ್ಕೆ ಮಾಡುತ್ತಿರುವ ಅನ್ಯಾಯ ರಾಷ್ಟ್ರಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಇತ್ತೀಚೆಗಷ್ಟೇ 28 ರಾಜ್ಯಗಳಿಗೆ ಒಟ್ಟು 1,78,193 ಕೋಟಿ ರೂಪಾಯಿ ತೆರಿಗೆ ಪಾಲನ್ನು ಬಿಡುಗಡೆಗೊಳಿಸಿರುವ ಕೇಂದ್ರ ಸರ್ಕಾರ, ಕರ್ನಾಟಕಕ್ಕೆ ನೀಡಿರುವುದು ಕೇವಲ ರೂ.6,498 ಕೋಟಿ ಮಾತ್ರ” ಎಂದು ಸಿದ್ದಾರಾಮಯ್ಯ ಹೇಳಿದ್ದಾರೆ.

“ದೇಶದ ಒಟ್ಟು ತೆರಿಗೆ ಸಂಗ್ರಹಕ್ಕೆ ಕರ್ನಾಟಕ ರೂ.4 ಲಕ್ಷ ಕೋಟಿ ರೂಪಾಯಿಗಳನ್ನು ನೀಡುತ್ತಿದ್ದರೂ ತೆರಿಗೆ ಹಂಚಿಕೆ ರೂಪದಲ್ಲಿ ನಮಗೆ ಸಿಗುತ್ತಿರುವ ಪಾಲು ರೂ.45,000 ಕೋಟಿ ಮಾತ್ರ. ಕರ್ನಾಟಕದ ಜನತೆ, ಕೇಂದ್ರ ಸರ್ಕಾರಕ್ಕೆ ನೀಡುತ್ತಿರುವ ಪ್ರತಿಯೊಂದು ರೂಪಾಯಿಗೆ ಹಿಂದಿರುಗಿ ಬರುತ್ತಿರುವುದು ಕೇವಲ 15 ಪೈಸೆ ಮಾತ್ರ. ಏಳು ಕೋಟಿ ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ದನಿ ಎತ್ತುವ ದಮ್-ತಾಖತ್ ನಿಮಗಾಗಲಿ ನಿಮ್ಮ ಹದಿನೇಳು ಎಂಪಿಗಳಿಗಾಗಲಿ ಎಲ್ಲಿದೆ?” ಎಂದು ಅವರು ಪ್ರಶ್ನಿಸಿದ್ದಾರೆ.

“ನಮ್ಮ ಸರ್ಕಾರದ ಅವಧಿಯಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯದ ಪ್ರಕರಣಗಳು ಹೆಚ್ಚಾಗಿವೆ ಎಂದು ಆರೋಪಿಸುವಾಗ ಕನಿಷ್ಠ ನಿಮ್ಮ ಆತ್ಮಸಾಕ್ಷಿಯೂ ಚುಚ್ಚಲಿಲ್ಲವೇ? ನಿಮ್ಮ ಪಕ್ಷ ಅಧಿಕಾರದಲ್ಲಿದ್ದಾಗ ನಿಮ್ಮದೇ ಶಾಸಕರು ಹೇಗೆ ದುರ್ಯೋಧನ – ದುಶ್ಯಾಸನರ ರೀತಿಯಲ್ಲಿ ನಡೆದುಕೊಂಡಿದ್ದರು ಎನ್ನುವ ಇತಿಹಾಸವನ್ನು ನಾನು ಕೆದಕಲು ಹೋಗುವುದಿಲ್ಲ. ಆದರೆ ಪೋಕ್ಸೋ ಕಾಯ್ದೆಯಡಿ ಆರೋಪಿಯಾಗಿ ಜಾಮೀನಿನ ಮೇಲೆ ಹೊರಗಿರುವ ನಿಮ್ಮ ಪೂಜ್ಯ ತಂದೆಯವರನ್ನು ಮನೆಯಲ್ಲಿಟ್ಟುಕೊಂಡು ನಮಗೆ ಹೆಣ್ಣುಮಕ್ಕಳ ರಕ್ಷಣೆಯ ಪಾಠ ಮಾಡಲು ಕನಿಷ್ಠ ನಿಮಗೆ ನಾಚಿಕೆ ಆಗುವುದಿಲ್ಲವೇ?” ಎಂದು ಅವರು ಹೇಳಿದ್ದಾರೆ.

‘‘ಬೇಟಿ ಬಚಾವೋ ಬೇಟಿ ಪಡಾವೋ’’ ಎಂದು ಆಗಾಗ ಘೋಷಣೆ ಕೂಗುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರು ಈ ಘೋಷಣೆಗೆ ಬದ್ಧರಾಗಿದ್ದರೆ ಪೋಕ್ಸೋ ಆರೋಪಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಪಕ್ಷದ ರಾಷ್ಟ್ರೀಯ ಸಂಸದೀಯ ಮಂಡಳಿಯ ಸದಸ್ಯ ಸ್ಥಾನದಿಂದ ಮತ್ತು ಅವರನ್ನು ರಕ್ಷಿಸುತ್ತಿರುವ ನಿಮ್ಮನ್ನು ಪಕ್ಷದ ಅಧ್ಯಕ್ಷ ಸ್ಥಾನದಿಂದ ಕಿತ್ತುಹಾಕಬೇಕು ಎಂದು ಅವರು ಆಗ್ರಹಿಸಿದ್ದಾರೆ.

“ನನ್ನ ವಿರುದ್ದ ಭ್ರಷ್ಟಾಚಾರದ ಆರೋಪ ಹೊರಿಸುವ ನೈತಿಕತೆ ಈ ಜನ್ಮದಲ್ಲಿ ನೀವು ಪಡೆದುಕೊಂಡಿಲ್ಲ. ಅದನ್ನು ಮುಂದಿನ ಜನ್ಮದಲ್ಲಿ ಗಳಿಸಿಕೊಳ್ಳುವ ಪ್ರಯತ್ನ ಮಾಡಬಹುದು ಅಷ್ಟೆ. ಸಿಬಿಐ ಮತ್ತು ಇಡಿ ಸಂಸ್ಥೆಗಳು ರಾಜಕೀಯ ಒತ್ತಡಕ್ಕೆ ಮಣಿಯದೆ ನಿಷ್ಪಕ್ಷಪಾತವಾಗಿ ಕೆಲಸ ಮಾಡಿದರೆ, ಡಿನೋಟಿಪೀಕೇಷನ್, ಅಕ್ರಮ ಗಣಿಗಾರಿಕೆ, ಮನಿ ಲಾಂಡ್ರಿಂಗ್ ಹೀಗೆ ಸಾಲು ಸಾಲು ಭ್ರಷ್ಟಾಚಾರದ ಹಗರಣಗಳ ಕಿಂಗ್ ಪಿನ್ ಆಗಿರುವ ನಿಮ್ಮ ಜಾಗ ಎಲ್ಲಿರಬಹುದು ಎನ್ನುವುದನ್ನು ಒಮ್ಮೆ ಯೋಚಿಸಿ. ಗಾಜಿನ ಮನೆಯಲ್ಲಿ ಕೂತು ಕಲ್ಲು ಹೊಡೆಯುವ ದುಸ್ಸಾಹಸ ಮಾಡಬೇಡಿ.” ಎಂದು ಅವರು ಹೇಳಿದ್ದಾರೆ.

“ವಕ್ಪ್ ಆಸ್ತಿ ವಿಚಾರದಲ್ಲಿ ಸುಬಗರ ಸೋಗು ಹಾಕುವುದೇನು ಬೇಡ. ನಿಮ್ಮದೇ ಪಕ್ಷದ ಬಿ.ಎಸ್.ಯಡಿಯೂರಪ್ಪ, ಡಿ.ವಿ.ಸದಾನಂದ ಗೌಡ, ಜಗದೀಶ್ ಶೆಟ್ಟರ್ ಮತ್ತು ಈಗಿನ ನಿಮ್ಮ ಮಿತ್ರ ಪಕ್ಷವಾದ ಜೆಡಿಎಸ್ ನ ಹೆಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಗಳಾಗಿದ್ದಾಗ ನೂರಾರು ರೈತ ಕುಟುಂಬಗಳ ಆಸ್ತಿಗಳನ್ನು ವಕ್ಪ್ ಬೋರ್ಡ್ ಗೆ ಖಾತೆ ಬದಲಾಯಿಸಿದ ದಾಖಲೆಗಳನ್ನು ಶೀಘ್ರದಲ್ಲಿ ನಾವು ಬಿಡುಗಡೆ ಮಾಡುತ್ತೇವೆ. ಆಗ ನಿಮ್ಮ ಪಾಪದ ಫಲವನ್ನು ನೀವೇ ಉಣ್ಣಬೇಕಾಗುವ ಸಂದರ್ಭ ಬರಬಹುದು..!! ಅದಕ್ಕೆ ಸಿದ್ಧರಾಗಿರಿ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಚರಿಸಿದ್ದಾರೆ.

ಇದನ್ನೂ ಓದಿ: ಅತ್ಯಾಚಾರ ಸಂತ್ರಸ್ತೆಯ ಉಡುಪಿನಲ್ಲಿ ಪ್ರಜ್ವಲ್ ರೇವಣ್ಣನ ಡಿಎನ್‌ಎ ಪತ್ತೆ: ಎಸ್‌ಐಟಿ

ಅತ್ಯಾಚಾರ ಸಂತ್ರಸ್ತೆಯ ಉಡುಪಿನಲ್ಲಿ ಪ್ರಜ್ವಲ್ ರೇವಣ್ಣನ ಡಿಎನ್‌ಎ ಪತ್ತೆ: ಎಸ್‌ಐಟಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...

ನಾಗಾಲ್ಯಾಂಡ್‌| ಕೇಂದ್ರದ ‘ವಂದೇ ಮಾತರಂ’ ಕಡ್ಡಾಯ ನಿರ್ದೇಶನ ವಿರೋಧಿಸಿ ನಾಗಾ ವಿದ್ಯಾರ್ಥಿ ಒಕ್ಕೂಟದಿಂದ ಪ್ರತಿಭಟನೆ

ಸರ್ಕಾರದ ಅಧಿಕೃತ ಕಾರ್ಯಕ್ರಮಗಳ ಸಮಯದಲ್ಲಿ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ವಂದೇ ಮಾತರಂ ಹಾಡುವುದನ್ನು ಕಡ್ಡಾಯಗೊಳಿಸುವ ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರ ನೀಡಿರುವ ನಿರ್ದೇಶನವನ್ನು ವಿರೋಧಿಸಿ ಸೋಮವಾರ ನಾಗಾ ವಿದ್ಯಾರ್ಥಿ ಒಕ್ಕೂಟದ (ಎನ್‌ಎಸ್‌ಎಫ್) ಬ್ಯಾನರ್...

‘ಹೇಡಿತನದ, ಅವಿವೇಕದ ಹಿಂಸಾಚಾರ’: 400 ಜನರನ್ನು ಬಲಿತೆಗೆದುಕೊಂಡ ಕಾಬೂಲ್ ಆಸ್ಪತ್ರೆಯ ಮೇಲಿನ ಪಾಕ್ ದಾಳಿ ಖಂಡಿಸಿದ ಭಾರತ 

ಕಾಬೂಲ್‌ನ ಆಸ್ಪತ್ರೆಯ ಮೇಲೆ ಪಾಕಿಸ್ತಾನ ನಡೆಸಿದ ವಾಯುದಾಳಿಯನ್ನು ಭಾರತ ಮಂಗಳವಾರ ಖಂಡಿಸಿದೆ. ಈ ದಾಳಿಯಲ್ಲಿ ಕನಿಷ್ಠ 400 ಜನರು ಅಸ್ವಸ್ಥರಾಗಿ 250 ಜನರು ಗಾಯಗೊಂಡಿದ್ದರು. ಈ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA)...

ಮೂಡುಬಿದಿರೆ ಠಾಣೆ ಇನ್‌ಸ್ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ: ತನಿಖೆಗೆ ಕಮಿಷನರ್ ಆದೇಶ

ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಸಂದೇಶ್ ಬಿ.ಜಿ ವಿರುದ್ಧ ಮಹಿಳೆಯರಿಗೆ ಲೈಂಗಿಕ, ಮಾನಸಿಕ ಕಿರುಕುಳ ನೀಡಿದ್ದಲ್ಲದೆ, ಹಣ ಕೊಡುವಂತೆ ಪೀಡಿಸಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದ್ದು, ಈ...

ಅಸ್ಸಾಂ: ರಂಜಾನ್ ಆಹಾರ ವ್ಯವಸ್ಥೆಗಾಗಿ ಮೀನು ಹಿಡಿಯುತ್ತಿದ್ದ ಮುಸ್ಲಿಂ ಸಹೋದರರ ಮೇಲೆ ಬಿಎಸ್‌ಎಫ್ ಗುಂಡಿನ ದಾಳಿ: ಗಂಭೀರ ಗಾಯ

ಅಸ್ಸಾಂನ ದಕ್ಷಿಣ ಸಲ್ಮಾರಾ–ಮಂಕಚಾರ್ ಜಿಲ್ಲೆಯ ಇಬ್ಬರು ಸಹೋದರರು ಭಾರತದ ಭೂಪ್ರದೇಶದೊಳಗಿನ ನದಿನೀರಿನಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸಿಬ್ಬಂದಿ ಗುಂಡು ಹಾರಿಸಿ ಪ್ರಾಣಕ್ಕಾಗಿ ಹೋರಾಡುತ್ತಿದ್ದಾರೆ. ಈ ಘಟನೆ ಮಾರ್ಚ್ 8-9, 2026...

ಊನಾ ದಲಿತ ದೌರ್ಜನ್ಯ ಪ್ರಕರಣ: ಐವರು ದೋಷಿಗಳೆಂದು ತೀರ್ಪು ನೀಡಿದ ನ್ಯಾಯಾಲಯ; 37 ಆರೋಪಿಗಳು ಖುಲಾಸೆ

ದೇಶದಲ್ಲಿ ನಡೆಯುತ್ತಿರುವ ದಲಿತ ದೌರ್ಜನ್ಯ ಪ್ರಕರಣಗಳಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದ ಗುಜರಾತ್‌ನ ಊನಾ ದಲಿತರ ಮೇಲೆ ಹಲ್ಲೆ ಪ್ರಕರಣದಲ್ಲಿ, ಗಿರ್ ಸೋಮನಾಥ್ ಜಿಲ್ಲೆಯ ವೆರಾವಲ್ ನ್ಯಾಯಾಲಯವು ಸೋಮವಾರ ತನ್ನ ತೀರ್ಪು ನೀಡಿದ್ದು,...

ರಾಜ್ಯಸಭೆ ಚುನಾವಣೆ : ಬಿಹಾರದ ಎಲ್ಲಾ ಐದು ಸ್ಥಾನಗಳು ಎನ್‌ಡಿಎ ಪಾಲು; ಒಡಿಶಾದ ಮೂರು ಸ್ಥಾನಗಳಲ್ಲಿ ಗೆಲುವು

ರಾಜ್ಯಸಭೆಯ 37 ಸ್ಥಾನಗಳಿಗೆ ಸೋಮವಾರ (ಮಾ.16) ನಡೆದ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ 21 ಸ್ಥಾನಗಳನ್ನು ಗೆದ್ದುಕೊಂಡಿದೆ. ಈ ಪೈಕಿ ಬಿಜೆಪಿ ಮಾತ್ರ 11 ಸ್ಥಾನಗಳನ್ನು ಪಡೆದಿದೆ. ವಿಪಕ್ಷಗಳ ಇಂಡಿಯಾ ಮೈತ್ರಿಕೂಟ ಒಟ್ಟು 11 ಸ್ಥಾನಗಳನ್ನು...