Homeಮುಖಪುಟಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ ಕೇರಳದ ಮಾಜಿ ಸಂಸದ ಪಿ.ಸಿ. ಚಾಕೊ

ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ ಕೇರಳದ ಮಾಜಿ ಸಂಸದ ಪಿ.ಸಿ. ಚಾಕೊ

- Advertisement -
- Advertisement -

ಭಾರತದ ಅತ್ಯಂತ ಹಳೆಯ ಪಕ್ಷದಲ್ಲಿ ಯಾವುದೇ ಪ್ರಜಾಪ್ರಭುತ್ವ ಉಳಿದಿಲ್ಲ ಎಂದು ಹೇಳಿರುವ ಕೇರಳದ ಕಾಂಗ್ರೆಸ್ ನಾಯಕ ಪಿ.ಸಿ. ಚಾಕೊ ಬುಧವಾರ ತಮ್ಮ ರಾಜೀನಾಮೆಯನ್ನು ಪ್ರಕಟಿಸಿದ್ದಾರೆ.

ನಾನು ಕಳೆದ ಹಲವು ದಿನಗಳಿಂದ ಈ ನಿರ್ಧಾರದ ಬಗ್ಗೆ ಚರ್ಚಿಸುತ್ತಿದ್ದೇನೆ. ನಾನು ಕೇರಳದವನಾಗಿದ್ದು, ಅಲ್ಲಿ ಯಾವುದೇ ಕಾಂಗ್ರೆಸ್ ಪಕ್ಷಗಳಿಲ್ಲ. ಕಾಂಗ್ರೆಸ್ (ಐ) ಮತ್ತು ಕಾಂಗ್ರೆಸ್ (ಎ) ಎಂಬ 2 ಪಕ್ಷಗಳಿವೆ. ಇದು ಕೆಪಿಸಿಸಿಯಾಗಿ ಕಾರ್ಯನಿರ್ವಹಿಸುತ್ತಿರುವ ಎರಡು ಪಕ್ಷಗಳ ಸಮನ್ವಯ ಸಮಿತಿಯಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ತಮ್ಮ ರಾಜೀನಾಮೆ ಪತ್ರವನ್ನು ಕಳುಹಿಸಿದ ನಂತರ ಚಾಕೊ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ‘ನಾವು ಮನುಷ್ಯರಲ್ಲವೇ?’- ಬೆಂಗಳೂರಿನಲ್ಲಿ ಲೈಂಗಿಕ ಕಾರ್ಯಕರ್ತರ ಪ್ರತಿಭಟನೆ

“ಕೇರಳವು ನಿರ್ಣಾಯಕ ಚುನಾವಣೆಯನ್ನು ಎದುರಿಸುತ್ತಿದೆ. ಕಾಂಗ್ರೆಸ್ ಮರಳಿ ಬರಬೇಕೆಂದು ಜನರು ಬಯಸುತ್ತಿದ್ದಾರೆ ಆದರೆ ಕಾಂಗ್ರೆಸ್‌ನ ಉನ್ನತ ನಾಯಕರು ಗುಂಪುಗಾರಿಕೆ ಮಾಡುತ್ತಿದ್ದಾರೆ. ಇದನ್ನು ಕೊನೆಗೊಳಿಸಬೇಕು ಎಂದು ನಾನು ಹೈಕಮಾಂಡ್‌‌ನೊಂದಿಗೆ ಕೇಳಿಕೊಂಡಿದ್ದೇನೆ. ಆದರೆ ಹೈಕಮಾಂಡ್ ಸಹ ಎರಡು ಗುಂಪುಗಳು ನೀಡಿದ ಪ್ರಸ್ತಾಪಕ್ಕೆ ಸಮ್ಮತಿಸುತ್ತಿದೆ” ಎಂದು ಅವರು ಹೇಳಿದ್ದಾರೆ.

ಪಿ.ಸಿ. ಚಾಕೊ ಕೇರಳದ ತ್ರಿಶೂರ್ ಲೋಕಸಭಾ ಕ್ಷೇತ್ರದ ಮಾಜಿ ಸಂಸತ್ ಸದಸ್ಯರಾಗಿದ್ದಾರೆ.

140 ಸದಸ್ಯ ಬಲವಿರುವ ಕೇರಳ ವಿಧಾನಸಭಾ ಚುನಾವಣೆ ಏಪ್ರಿಲ್ 6 ರಂದು ನಡೆಯಲಿದೆ ಎಂದು ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿತ್ತು.

ಇದನ್ನೂ ಓದಿ: ಇಂದು ನಂದಿಗ್ರಾಮದಿಂದ ನಾಮಪತ್ರ ಸಲ್ಲಿಸಲಿರುವ ಮಮತಾ ಬ್ಯಾನರ್ಜಿ; ಅವರು ಹೇಳಿದ್ದೇನು?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ದೌರ್ಜನ್ಯ ಪ್ರಕರಣ : ಶಾಸಕ ಹೆಚ್‌.ಡಿ ರೇವಣ್ಣ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಆರೋಪಕ್ಕೆ ಹೊಂದಿಕೊಂಡಿರುವ ಮಹಿಳೆಯೊಬ್ಬರ ಅಪಹರಣ ಪ್ರಕರಣದಲ್ಲಿ ನ್ಯಾಯಾಲಯ ನಿರೀಕ್ಷಣಾ ಜಾಮೀನು ನಿರಾಕರಿಸಿದ ಬೆನ್ನಲ್ಲೇ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ಪಡೆದಿದೆ. ಲೈಂಗಿಕ ದೌರ್ಜನ್ಯ ಪ್ರಕರಣದ...