Homeಚಳವಳಿರೈತ ಹೋರಾಟ - ಒಕ್ಕೂಟ ಸರ್ಕಾರಕ್ಕೆ ಪ್ರಜಾಪ್ರಭುತ್ವದ ಪಾಠ ಮಾಡಿದ ಸೋನಿಯ ಗಾಂಧಿ

ರೈತ ಹೋರಾಟ – ಒಕ್ಕೂಟ ಸರ್ಕಾರಕ್ಕೆ ಪ್ರಜಾಪ್ರಭುತ್ವದ ಪಾಠ ಮಾಡಿದ ಸೋನಿಯ ಗಾಂಧಿ

ಸ್ವಾತಂತ್ರ್ಯ ಬಂದ ನಂತರ, ಅಧಿಕಾರಕ್ಕೆ ಬಂದ ಮೊದಲ ಸೊಕ್ಕಿನ ಸರ್ಕಾರ ಇದಾಗಿದೆ. ಅನ್ನ ನೀಡುವ ರೈತರ ಬಗ್ಗೆ ಈ ಸರ್ಕಾರಕ್ಕೆ ಕಾಳಜಿಯಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

- Advertisement -
- Advertisement -

ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ಹೊಸ ಕೃಷಿ ಕಾನೂನುಗಳ ವಿರುದ್ದ ರೈತರು ನಡೆಸುತ್ತಿರುವ ಆಂದೋಲನ ಇಂದಿಗೆ 39 ನೇ ದಿನಕ್ಕೆ ಕಾಲಿಟ್ಟಿದೆ. ಹೋರಾಟಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಭಾನುವಾರ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ವಿರುದ್ದ ತೀವ್ರ ವಾಗ್ದಾಳಿ ನಡೆಸಿದರು. ಸರ್ಕಾರಕ್ಕೆ ಪ್ರಜಾಪ್ರಭುತ್ವದ ಬಗ್ಗೆ ಪಾಠ ಮಾಡಿದ ಅವರು, ವ್ಯಾಪಕ ಪ್ರತಿಭಟನೆಗೆ ಕಾರಣವಾದ ಕೃಷಿ ಕಾನೂನುಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿದರು.

“ಪ್ರತಿಭಟನೆಗಳ ಬಗ್ಗೆ ಸರ್ಕಾರ ತಳೆದ ಕಠಿಣ ಮನೋಭಾವದಿಂದಾಗಿ 50 ಕ್ಕೂ ಹೆಚ್ಚು ರೈತರು ಪ್ರಾಣ ಕಳೆದುಕೊಂಡಿದ್ದಾರೆ. ಕೆಲವರು ಆತ್ಮಹತ್ಯೆ ಮಾಡಿಕೊಂಡಿದ್ದು, ಆದರೂ ಮೋದಿ ಸರ್ಕಾರವನ್ನು ಅಥವಾ ಅದರ ಯಾವುದೇ ಮಂತ್ರಿಗಳನ್ನು ಕದಲಿಸಿಲ್ಲ. ಅವರ ಬಗ್ಗೆ ಅನುಕಂಪದ ಮಾತುಗಳನ್ನೂ ಹೇಳಿಲ್ಲ. ನಿಧನರಾದವರಿಗೆ ನನ್ನ ನಮನ ಸಲ್ಲಿಸುತ್ತೇನೆ. ಈ ದುಃಖವನ್ನು ತಡೆಕೊಳ್ಳುವ ಶಕ್ತಿ ಅವರ ಕುಟುಂಬಕ್ಕೆ ಸಿಗಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಅವರು ಹೇಳಿದರು.

ಇದನ್ನೂ ಓದಿ: ಅಟಲ್ ಸುರಂಗದಿಂದ ಸೋನಿಯಾ ಗಾಂಧಿ ಹೆಸರು ನಾಪತ್ತೆ: ಪ್ರತಿಭಟನೆ ಎಚ್ಚರಿಕೆ

ಸರ್ಕಾರದ ನಿಲುವು ದುರಹಂಕಾರಕ್ಕೆ ಸಮಾನವಾಗಿದೆ. ರೈತರು ಸೇರಿದಂತೆ ಕಾರ್ಮಿಕರ ಹಕ್ಕುಗಳನ್ನು ಮತ್ತು ಹಿತಾಸಕ್ತಿಗಳನ್ನು ರಕ್ಷಿಸುವುದು ಪ್ರಜಾಪ್ರಭುತ್ವದ ನಿಜವಾದ ಅರ್ಥ ಎಂದು ಸೋನಿಯಾ ಗಾಂಧಿ ಹೇಳಿದರು.

“ಸ್ವಾತಂತ್ರ್ಯ ಬಂದ ನಂತರ, ಅಧಿಕಾರಕ್ಕೆ ಬಂದ ಮೊದಲ ಸೊಕ್ಕಿನ ಸರ್ಕಾರ ಇದಾಗಿದೆ. ಅನ್ನ ನೀಡುವ ರೈತರ ಬಗ್ಗೆ ಈ ಸರ್ಕಾರಕ್ಕೆ ಕಾಳಜಿಯಿಲ್ಲ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

“ಸರ್ಕಾರವು ರೈತರನ್ನು ಸುಸ್ತಾಗುವಂತೆ ಮಾಡಿ, ಅವರನ್ನು ಓಡಿಸುವ ತಂತ್ರವನ್ನು ಮಾಡುತ್ತಿರುವುದು ಸ್ಪಷ್ಟವಾಗಿದೆ. ಆದರೆ ನಮ್ಮ ರೈತರು ಅದರ ಮುಂದೆ ಬಾಗುವುದಿಲ್ಲ. ಸರ್ಕಾರ ತನ್ನ ಅಹಂಕಾರವನ್ನು ಬಿಡಬೇಕು ಮತ್ತು ಮೂರು ಕೃಷಿ ಕಾನೂನುಗಳನ್ನು ರದ್ದುಪಡಿಸಿ, ಪ್ರತಿಭಟನೆಗಳನ್ನು ಕೊನೆಗೊಳಿಸಬೇಕು. ಪ್ರಜಾಪ್ರಭುತ್ವದ ನಿಜವಾದ ಅರ್ಥ ರೈತರು ಮತ್ತು ಕಾರ್ಮಿಕರ ಹಿತಾಸಕ್ತಿಗಳನ್ನು ಕಾಪಾಡುವುದಾಗಿದೆ. ಮೋದಿ ಸರ್ಕಾರ ಅದನ್ನು ಕಲಿಯಬೇಕು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕಂಗನಾ v/s ಶಿವಸೇನೆ: ಸೋನಿಯಾ ಗಾಂಧಿ ಹೆಸರನ್ನೇಕೆ ಎಳೆದು ತರಲಾಯಿತು?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಹಾಸನ ಪೆನ್‌ಡ್ರೈವ್ ಪ್ರಕರಣ: ಎಸ್‌ಐಟಿ ರಚಿಸಲು ಕೋರಿ ಮಹಿಳಾ ಆಯೋಗದಿಂದ ಸಿಎಂಗೆ ಪತ್ರ

0
ಹಾಸನ ಜಿಲ್ಲೆಯಲ್ಲಿ ಹರಿದಾಡುತ್ತಿರುವ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ವಿಶೇಷ ತಂಡ ರಚನೆ ಮಾಡುವಂತೆ ಕೋರಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ ಅವರು ಸಿಎಂ ಸಿದ್ದರಾಮಯ್ಯ, ಗೃಹ ಸಚಿವ...