Homeಮುಖಪುಟಕಾರ್ಟೂನಿಸ್ಟ್‌ಗಳ ಕಣ್ಣಲ್ಲಿ ರೈತ ಹೋರಾಟ: ವೈರಲ್ ಆದ ಹೋರಾಟದ ಚಿತ್ರಗಳು

ಕಾರ್ಟೂನಿಸ್ಟ್‌ಗಳ ಕಣ್ಣಲ್ಲಿ ರೈತ ಹೋರಾಟ: ವೈರಲ್ ಆದ ಹೋರಾಟದ ಚಿತ್ರಗಳು

ಈ ರೀತಿಯ ಪರಿಣಾಮಕಾರಿ ರೈತ ಹೋರಾಟದ ಚಿತ್ರಗಳು ನಿಮ್ಮ ಗಮನಕ್ಕೆ ಬಂದಿದ್ದರೆ ಅದನ್ನು ಕಮೆಂಟ್ ಮಾಡಿ.

- Advertisement -
- Advertisement -

ದೆಹಲಿಯಲ್ಲಿ ಅನ್ನದಾತ ರೈತರು ನಡೆಸುತ್ತಿರುವ ಧಿರೋಧಾತ್ತ ಹೋರಾಟ ಸತತ 12 ನೇ ದಿನಕ್ಕೆ ಕಾಲಿಟ್ಟಿದೆ. ವಿವಾದಾತ್ಮಕ ಕೃಷಿ ಕಾಯ್ದೆಗಳು ರೈತರನ್ನು ಬೀದಿಗೆ ತಳ್ಳಲ್ಲಿದ್ದು ಅವುಗಳನ್ನು ಸರ್ಕಾರ ಹಿಂಪಡೆಯದಿದ್ದರೆ ಹೋರಾಟ ನಿಲ್ಲಿಸುವ ಪ್ರಶ್ನೆಯೇ ಇಲ್ಲ ಎಂದು ರೈತರು ಪಣ ತೊಟ್ಟಿದ್ದಾರೆ. ಇನ್ನೊಂದೆಡೆ ಸರ್ಕಾರ ಕಾಯ್ದೆಗಳಲ್ಲಿ ಬದಲಾವಣೆ ತರುತ್ತೇವೆಯೇ ಹೊರತು ಹಿಂಪಡೆಯುವುದಿಲ್ಲ ಎಂದು ಹಠ ಹಿಡಿದಿದೆ ಮಾತ್ರವಲ್ಲ ರೈತರ ಮೇಲೆ ತೀವ್ರ ಹಲ್ಲೆ ನಡೆಸಿ ಹೋರಾಟ ದಮನಗೊಳಿಸಲು ಮುಂದಾಗಿದೆ.

ರೈತರು ನಡೆಸುತ್ತಿರುವ ಹೋರಾಟಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ದೆಹಲಿಯಲ್ಲಿ ಹೋರಾಟನಿರತ ರೈತರನ್ನು ಬೆಂಬಲಿಸಿ ದೇಶ ವಿದೇಶಗಳಲ್ಲಿ ಸಾವಿರಾರು ಪ್ರತಿಭಟನೆಗಳು ದಾಖಲಾಗಿವೆ. ಸಾಮಾಜಿಕ ಜಾಲತಾಣದಲ್ಲಿ ನಿತ್ಯ ನಿರಂತರ ಬೆಂಬಲ ಹರಿದು ಬರುತ್ತಿದೆ. ಎಲೆಕ್ಟ್ರಾನಿಕ್ ಮಾಧ್ಯಮಗಳು ಸರ್ಕಾರದ ಪರ ಇದ್ದಾವೆ ಎಂಬ ಆರೋಪ ದಟ್ಟವಾಗಿ ಕೇಳಿಬಂದಿದೆ. ಆದರೆ ಮುದ್ರಣ ಮಾಧ್ಯಮಗಳು ರೈತರ ಹೋರಾಟವನ್ನು ಜನರಿಗೆ ಮುಟ್ಟಿಸಿವೆ. ಕಾರ್ಟೂನಿಸ್ಟ್‌ಗಳ ರೈತರ ಸಂಕಷ್ಟಗಳನ್ನು ಚಿತ್ರರೂಪದಲ್ಲಿ ವ್ಯಕ್ತಪಡಿಸಿದ್ದಾರೆ. ಕೆಲವು ಫೋಟೊ ಜರ್ನಲಿಸ್ಟ್‌ಗಳು ಹೋರಾಟದ ಕಿಚ್ಚಿನ ಫೋಟೊಗಳನ್ನು ಸೆರೆಹಿಡಿದಿದ್ದಾರೆ. ವೈರಲ್ ಆದ ಚಿತ್ರಗಳು, ಟ್ವೀಟ್‌ಗಳು ಇಲ್ಲಿವೆ ನೋಡಿ.

ಗಂಧಾಮದನ್ ಎಂಬುವವರು ಬಿಡಿಸಿರುವ ಚಿತ್ರ ಹೇಗೆ ಮೋದಿ ಸರ್ಕಾರ ರೈತರನ್ನು ಒದೆಯುತ್ತಿದೆ ಮತ್ತು ಆ ಮೂಲಕ ತಾನೂ ಪ್ರಪಾತಕ್ಕೆ ಬೀಳಲಿದೆ ಎಂಬುದನ್ನು ಪರಿಣಾಮಕಾರಿಯಾಗಿ ತಿಳಿಸುತ್ತದೆ. ಇದು ನಿನ್ನೆ ಮತ್ತು ಇಂದು ಲಕ್ಷಾಂತರ ಸಂಖ್ಯೆಯಲ್ಲಿ ಷೇರ್ ಆಗಿದೆ.

ಮಿರ್ ಸುಹೈಲ್ ಎಂಬುವವರು ಹೇಗೆ ಭಾರತೀಯ ಮಾಧ್ಯಮಗಳು ಹೋರಾಟನಿರತ ರೈತರನ್ನು ಭಯೋತ್ಪಾದಕರಂತೆ ಬಿಂಬಿಸುತ್ತಿವೆ ಎಂದು ಈ ಚಿತ್ರದ ಮೂಲಕ ತಿಳಿಸಿಕೊಟ್ಟಿದ್ದಾರೆ. ಕೆಲ ಬಿಜೆಪಿ ನಾಯಕರು ರೈತರನ್ನು ಖಲಿಸ್ತಾನಿಗಳು, ಭಯೋತ್ಪಾದಕರು ಎಂದು ಕರೆದಿದ್ದನ್ನೇ ಈ ಮಾಧ್ಯಮಗಳು ಹೇಗೆ ದಿನವಿಡೀ ತೋರಿಸಿ ರೈತರಿಗೆ ದ್ರೋಹ ಬಗೆದರು ಎಂಬುದಕ್ಕೆ ಈ ಚಿತ್ರಕ್ಕಿಂತ ಮತ್ತೊಂದು ಉದಾಹರಣೆ ಬೇಕಿಲ್ಲ. ವಾಸ್ತವದಲ್ಲಿ ಹೆಗಲ ಮೇಲೆ ನೇಗಿಲ ಹೊತ್ತ ರೈತರನ್ನು ಮಾಧ್ಯಮಗಳು ಹೆಗಲಮೇಲೆ ಬಂದೂಕು ಹೊತ್ತಿರುವಂತೆ ಚಿತ್ರಿಸುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಲಾಗಿದೆ.

ದೇಶ-ವಿದೇಶಗಳಲ್ಲಿ ಹೆಸರು ಗಳಿಸಿರುವ ಕರ್ನಾಟಕದ ಖ್ಯಾತ ವ್ಯಂಗ್ಯಚಿತ್ರಕಾರ ಸತೀಶ್ ಆಚಾರ್ಯ ಮನ ಮಿಡಿಯುವ ಹತ್ತಾರು ಕಾರ್ಟೂನ್‌ಗಳನ್ನು ರಚಿಸಿದ್ದಾರೆ. ಅದರಲ್ಲಿ ಚಳಿಯಲ್ಲಿ ನಡುಗುತ್ತಾ ಹೋರಾಟದಲ್ಲಿ ತೊಡಗಿರುವ ರೈತರ ಬಗೆ ಇಡೀ ಭಾರತ ಹೇಗೆ ಕಾಳಜಿವಹಿಸುತ್ತದೆ ಎಂದು ಬಿಂಬಿಸುವ ಚಿತ್ರವನ್ನು ಸಾವಿರಾರು ಜನ ಹಂಚಿಕೊಂಡಿದ್ದಾರೆ.

ಹೋರಾಟನಿರತ ರೈತರ ಮೇಲೆ ಪೊಲೀಸರು ಕ್ರೂರವಾಗಿ ಥಳಿಸಿ, ಜಲಫಿರಂಗಿ, ಅಶ್ರವಾಯು ಸಿಡಿಸಿದರೂ ರೈತರ ಹೃದಯ ಮಾತ್ರ ವಿಶಾಲವಾದುದು. ರೈತರು ಪೊಲೀಸರಿಗೂ ಅನ್ನ-ನೀರು ನೀಡಿ ಮಾನವೀಯತೆ ಮೆರದಿದ್ದಾರೆ ಎಂದು ತಿಳಿಸುವ ಸತೀಶ್ ಆಚಾರ್ಯರವರ ಚಿತ್ರ ಇದು.

ಕನ್ನಡದ ಪ್ರತಿಭಾವಂತ ವ್ಯಂಗ್ಯಚಿತ್ರಕಾರ ಪಿ ಮಹಮ್ಮದ್‌ರವರು ರೈತರ ಮೇಲೆ ದಾಳಿ ನಡೆಯುತ್ತಿದ್ದಾಗ ಮೋದಿ ಏನು ಮಾಡುತ್ತಿದ್ದರು ಎಂದು ಚಿತ್ರಿಸಿದ್ದಾರೆ.

ಮುಸ್ಲಿಂ ರೈತರು ನಮಾಜ್ ಮಾಡುವಾಗ ಸಿಖ್ ಯುವಕರು ಗೋಡೆಯಾಗಿ ಅವರಿಗೆ ರಕ್ಷಣೆ ನೀಡಿದ್ದು.

ಗಾಯಗೊಂಡ ಸಿಂಹದ ರೀತಿ ರೈತರನ್ನು ಚಿತ್ರಸಿರುವುದು..

ದಿ ಹಿಂದೂ ಪತ್ರಿಕೆಗಾಗಿ ಸುರೇಂದ್ರರವರು ರಚಿಸಿದ ಈ ಚಿತ್ರ ಸರ್ಕಾರದ ಕಾರ್ಯವೈಖರಿಯನ್ನು ಸಮಗ್ರವಾಗಿ ವಿಶ್ಲೇಷಿಸುತ್ತದೆ.

ಈ ರೀತಿಯ ಪರಿಣಾಮಕಾರಿ ರೈತ ಹೋರಾಟದ ಚಿತ್ರಗಳು ನಿಮ್ಮ ಗಮನಕ್ಕೆ ಬಂದಿದ್ದರೆ ಅದನ್ನು ಕಮೆಂಟ್ ಮಾಡಿ.


ಇದನ್ನೂ ಓದಿ; ರೈತರ ಹೋರಾಟವನ್ನು ಬೆಂಬಲಿಸಿದ ನಟಿ ಪ್ರಿಯಾಂಕಾ ಚೋಪ್ರಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...