Homeಚಳವಳಿರೈತ ಹೋರಾಟ ತೀವ್ರ: 1 ಲಕ್ಷಕ್ಕೂ ಹೆಚ್ಚು ಗ್ರಾಮಗಳಲ್ಲಿ ನಾಳೆ 'ಶ್ರದ್ಧಾಂಜಲಿ ದಿವಸ್' - ...

ರೈತ ಹೋರಾಟ ತೀವ್ರ: 1 ಲಕ್ಷಕ್ಕೂ ಹೆಚ್ಚು ಗ್ರಾಮಗಳಲ್ಲಿ ನಾಳೆ ‘ಶ್ರದ್ಧಾಂಜಲಿ ದಿವಸ್’ – AIKSCC

"ಪ್ರಧಾನಿ ನರೇಂದ್ರ ಮೋದಿ ರೈತರ ಸಮಸ್ಯೆಗಳನ್ನು ಪರಿಹರಿಸುವ ಬದಲು 'ಬಿಜೆಪಿ ಮತ್ತು ವಿರೋಧ ಪಕ್ಷ' ಎಂದು ರಾಜಕೀಯದ ಆಟ ಆಡುತ್ತಿದ್ದಾರೆ"

- Advertisement -
- Advertisement -

ರೈತ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸಿ ಸರ್ಕಾರದ ಮೇಲೆ ಹೆಚ್ಚಿನ ಒತ್ತಡ ಹೇರಲು ಅಖಿಲ ಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿ (AIKSCC) ಯೋಜಿಸುತ್ತಿದ್ದು, ಡಿಸಂಬರ್ 20 ರಂದು ಸುಮಾರು 1 ಲಕ್ಷಕ್ಕೂ ಹೆಚ್ಚು ಗ್ರಾಮಗಳಲ್ಲಿ “ಶ್ರದ್ಧಾಂಜಲಿ ದಿವಸ್” ಆಚರಣೆಗೆ ಮುಂದಾಗಿದೆ.

ಪ್ರತಿಭಟನೆಯ ನಡುವೆ ಮರಣ ಹೊಂದಿದ ರೈತರಿಗೆ ಗೌರವ ಸಲ್ಲಿಸುವ ಸಲುವಾಗಿ ಈ ಕಾಯ್ರಕರ್ಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ರೈತ ಮುಖಂಡರು ಹೇಳಿದ್ದಾರೆ.

ಪ್ರತಿಭಟನಾ ನಿರತ ರೈತರು ವಿರೋಧ ಪಕ್ಷಗಳೊಂದಿಗೆ ಸಂಬಂಧ ಹೊಂದಿದ್ದಾರೆ ಎನ್ನುತ್ತಿರುವ ಕೇಂದ್ರ ಸರ್ಕಾರಕ್ಕೆ ತಿರುಗೇಟು ನೀಡಿದ AIKSCC, “ಡಿಸೆಂಬರ್ 22 ರಂದು ಮುಂಬೈನ ಅಂಬಾನಿ ಮತ್ತು ಅದಾನಿ ಗುಂಪುಗಳ ಕಚೇರಿಗಳ ಬಳಿ ರ್ಯಾಲಿ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ರೈತರ ಸಮಸ್ಯೆಗಳನ್ನು ಪರಿಹರಿಸುವ ಬದಲು ‘ಬಿಜೆಪಿ ಮತ್ತು ವಿರೋಧ ಪಕ್ಷ’ ಎಂದು ರಾಜಕೀಯದ ಆಟ ಆಡುತ್ತಿದ್ದಾರೆ” ಎಂದು ಆರೋಪಿಸಿದೆ.

ಇದನ್ನೂ ಓದಿ: BJP ಮತ್ತು RSS ಸಿಖ್ ಜನಾಂಗವನ್ನು ಮುಗಿಸಲು ಪ್ರಯತ್ನಿಸುತ್ತಿದೆ: ಸಿಖ್ ಧರ್ಮಗುರುವಿನ ಆತ್ಮಹತ್ಯಾ ಟಿಪ್ಪಣಿ

“ದೊಡ್ಡ ಉದ್ಯಮಗಳಿಗೆ ಅನುಕೂಲಕರವಾದ ಈ ಕಾನೂನಗಳನ್ನು ರದ್ದುಗೊಳಿಸುವ ಬದಲು ಅವರಿಗೇ ಸಹಕಾರಿಯಾಗಿರುವ ನರೇಂದ್ರ ಮೋದಿ ತಮ್ಮ ಪಾತ್ರವನ್ನು ದುರ್ಬಲಗೊಳಿಸಿಕೊಳ್ಳುತ್ತಿದ್ದಾರೆ. ರೈತರಿಗೆ ಸಹಕಾರಿಯಾಗಲು ಹಣವಿಲ್ಲ ಎನ್ನುತ್ತಿರುವ ಮೋದಿ ಸರ್ಕಾರ, ಕಾರ್ಪೊರೇಟ್‌ಗಳು ಕೃಷಿ ವಲಯದಲ್ಲಿ ಹೂಡಿಕೆ ಮಾಡಲು ಒಂದು ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ನಿಜಕ್ಕೂ ಖಂಡನೀಯ”

ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ರೈತರಿಗೆ ಬರೆದ ಪತ್ರವನ್ನು ಉಲ್ಲೇಖಿಸಿದ AIKSCC, “ರೈತರು ತಮ್ಮ ಭೂಮಿಯನ್ನು ಕಳೆದುಕೊಳ್ಳುವುದಿಲ್ಲ ಎಂದು ಕಾಲ್ಪನಿಕ ಹೇಳಿಕೆ ನೀಡಿದ್ದಾರೆ. ಆದರೆ ಈ ಕಾಯಿದೆಯು ರೈತರ ಭೂಮಿಯನ್ನು ಅಡಮಾನ ಇಡಲು ಪ್ರಚೋದಿಸುತ್ತದೆ” ಎಂದು ಹೇಳಿದೆ.

ಇದನ್ನೂ ಓದಿ: ಸೈನಿಕರ ವೇತನ ಲೂಟಿ ಮಾಡಿ ಕೋಟ್ಯಾಂತರ ರೂ.ಗಳನ್ನು ಸಂಗ್ರಹಿಸಿದ PM-CARES?

ಕೃಷಿ ಕಾನೂನಗಳಿಗೆ ಸಂಬಂಧಿಸಿದಂತೆ ರೈತರು ಮತ್ತು ಕೇಂದ್ರ ಸರ್ಕಾರದ ನಡುವೆ ಹಲವು ಸುತ್ತಿನ ಮಾತುಕತೆಗಳು ನಡೆದಿದ್ದರೂ ಅವುಗಳೆಲ್ಲಾ ವಿಫಲವಾಗಿವೆ. ನಿನ್ನೆ ಈ ವಿಷಯವನ್ನು ಕೈಗೆತ್ತಿಕೊಂಡು ಸುಪ್ರೀಂ ಕೋರ್ಟ್, ಈ ಕುರಿತು ಶೋಧನೆ ಮಾಡಲು ಒಂದು ಸ್ವತಂತ್ರ ಸಮಿತಿಯನ್ನು ರಚಿಸುವಂತೆ ಕೇಂದ್ರಕ್ಕೆ ಸಲಹೆ ನೀಡಿತ್ತು.

ಜೊತೆಗೆ ರೈತರು ತಮ್ಮ ಹೋರಾಟವನ್ನು ಹಿಂತೆಗೆದುಕೊಳ್ಳಬೇಕಾಗಿಲ್ಲ. ಹೋರಾಟ ಮಾಡುವುದು ಅವರ ಹಕ್ಕು ಎಂದು ಸುಪ್ರೀಂ ನಿನ್ನೆ ಹೇಳಿತ್ತು. ಆದರೆ ಸಾರ್ವಜನಿಕ ಜೀವನಕ್ಕೆ ತೊಂದರೆಯಾಗದಂತೆ, ಶಾಂತಿಯುತವಾಗಿ ಪ್ರತಿಭಟಿಸುವಂತೆ ಹೇಳಿತ್ತು.


ಇದನ್ನೂ ಓದಿ: ರೈತರು ನಡುಕ ಹುಟ್ಟಿಸುವ ಚಳಿಯಲ್ಲಿ ಕುಳಿತಿದ್ದಾರೆ; ಇನ್ನೆಷ್ಟು ದಿನ ಇದನ್ನು ನೋಡುತ್ತಿರಬೇಕು: ಸೋನು ಸೂದ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಸಿಲಿನ ತಾಪವಿದ್ದರೂ ಬಿಜೆಪಿ ಒತ್ತಡದಿಂದ ಬಂಗಾಳದಲ್ಲಿ 7 ಹಂತದ ಚುನಾವಣೆ: ಅಭಿಷೇಕ್ ಬ್ಯಾನರ್ಜಿ

0
ಪಶ್ಚಿಮ ಬಂಗಾಳದಲ್ಲಿ ಸಾಕಷ್ಟು ಬಿಸಿಲಿನ ತಾಪವಿದ್ದರೂ, ಏಳು ಹಂತಗಳಲ್ಲಿ ಲೋಕಸಭೆ ಚುನಾವಣೆ ಆಯೋಜಿಸುವಂತೆ ಬಿಜೆಪಿ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ ಎಂದು ಟಿಎಂಸಿಯ ನಾಯಕ ಅಭಿಷೇಕ್ ಬ್ಯಾನರ್ಜಿ ಮಂಗಳವಾರ ಆರೋಪಿಸಿದ್ದಾರೆ. ಟಿಎಂಸಿಯ ಡಾರ್ಜಿಲಿಂಗ್ ಅಭ್ಯರ್ಥಿ ಗೋಪಾಲ್...