Homeಕರ್ನಾಟಕಪೆದ್ದನಹಳ್ಳಿಯಲ್ಲಿ ದಲಿತರ ಕೊಲೆ: ಲಿಂಗಾಯತ ಜಾತಿಯ ಆರೋಪಿ ಸೇರಿ ಕೆಲವರ ಬಂಧನ

ಪೆದ್ದನಹಳ್ಳಿಯಲ್ಲಿ ದಲಿತರ ಕೊಲೆ: ಲಿಂಗಾಯತ ಜಾತಿಯ ಆರೋಪಿ ಸೇರಿ ಕೆಲವರ ಬಂಧನ

- Advertisement -
- Advertisement -

ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಪೆದ್ದನಹಳ್ಳಿಯಲ್ಲಿ ಇಬ್ಬರು ದಲಿತ ಯುವಕರ ಕೊಲೆಯಾಗಿದ್ದು ಲಿಂಗಾಯತ ಸಮುದಾಯದ ಆರೋಪಿ ಸೇರಿದಂತೆ ಕೆಲವರನ್ನು ಗುಬ್ಬಿ ಪೊಲೀಸರು ಬಂಧಿಸಿದ್ದಾರೆ.

ಪೆದ್ದನಹಳ್ಳಿಯ ಪರಿಶಿಷ್ಟ ಜಾತಿ ಮಾದಿಗ ಸಮುದಾಯಕ್ಕೆ ಸೇರಿದ ಪಿ.ಎಂ.ಗಿರೀಶ್‌ (32), ಮಂಚಲದೊರೆ ಗ್ರಾಮದ ಪರಿಶಿಷ್ಟ ಪಂಗಡ ನಾಯಕ ಸಮುದಾಯಕ್ಕೆ ಸೇರಿದ ಗಿರೀಶ್‌ ಅವರನ್ನು ಕೊಲೆ ಮಾಡಿರುವ ಸಂಬಂಧ ದೂರು ಸಲ್ಲಿಕೆಯಾಗಿದ್ದು, ಪೆದ್ದನಹಳ್ಳಿ ಗ್ರಾಮದ ಲಿಂಗಾಯತ ಜಾತಿಗೆ ಸೇರಿದ ನಂದೀಶ್‌ ಮತ್ತು ಇತರ ಕೆಲವರ ವಿರುದ್ಧ ಪ್ರಕರಣ ದಾಖಲಾಗಿದೆ. ಎಫ್‌ಐಆರ್‌ನಲ್ಲಿ ನಂದೀಶ್ ಹೆಸರು ಮಾತ್ರ ಉಲ್ಲೇಖವಾಗಿದ್ದು, ಇತರರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಐಪಿಸಿ ಸೆಕ್ಷನ್‌ 302, 201 ಹಾಗೂ ಎಸ್‌ಸಿ, ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಘಟನೆಯ ಹಿಂದಿನ ರಾತ್ರಿ ಆರೋಪಿ ನಂದೀಶ್‌, ಪೆದ್ದನಹಳ್ಳಿಯ ಪಿ.ಎಂ.ಗಿರೀಶ್‌ ಮನೆಗೆ ಬಂದು ಅವರನ್ನು ಕರೆದುಕೊಂಡು ಹೋಗಿದ್ದಾನೆ. ಆದರೆ ಶುಕ್ರವಾರ ಬೆಳಿಗ್ಗೆ ಗ್ರಾಮದ ನೀರಿನ ಕಟ್ಟೆಯಲ್ಲಿ ಗಿರೀಶ್ ಶವ ಪತ್ತೆಯಾಗಿದ್ದು, ದಾರಿಹೋಕರು ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದಾರೆ. ಸ್ವಲ್ಪ ದೂರದಲ್ಲಿ ಹಾಗಲವಾಡಿ ಹೋಬಳಿಯ ಮಂಚಲದೊರೆ ಗ್ರಾಮದ ಮತ್ತೊಬ್ಬ ಯುವಕ ಗಿರೀಶ್‌ ಶವ ದೊರೆತಿದೆ. ಇಬ್ಬರ ದೇಹದ ಮೇಲೂ ಗಾಯದ ಗುರುತುಗಳು ಕಂಡು ಬಂದಿವೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

ಪೆದ್ದನಹಳ್ಳಿಯ ಗಿರೀಶ್ ಸಹೋದರ ಪಿ.ಎಂ.ಶ್ರೀಧರ್‌ ದೂರು ನೀಡಿದ್ದು, “ನಂದೀಶ್‌ ಹಾಗೂ ಇತರರು ಸೇರಿಕೊಂಡು ಈ ಇಬ್ಬರನ್ನೂ ಕೊಂದಿದ್ದಾರೆ” ಎಂದು ಉಲ್ಲೇಖಿಸಿದ್ದಾರೆ.

ಲೇಟ್‌ ಮೂಡ್ಲಗಿರಿಯಪ್ಪ ದಂಪತಿಗೆ ಐವರು ಮಕ್ಕಳಿದ್ದು, ಮೊದಲನೆಯವರು ಶ್ರೀಧರ್‌ ಪಿ.ಎಂ., ಕೊಲೆಯಾಗಿರುವ ಗಿರೀಶ್ ಅವಿವಾಹಿತರಾಗಿದ್ದರು. ತಾಯಿ ಗೌರಮ್ಮ ಕೂಲಿ ಮಾಡಿಕೊಂಡು ಊರಿನಲ್ಲಿ ವಾಸವಿದ್ದಾರೆ.

ನಿಟ್ಟೂರು ಹೋಬಳಿ ಅದಲಗೆರೆ ಗ್ರಾಮದಲ್ಲಿ ಅಜ್ಜಿಯ ಮನೆಯಲ್ಲಿ ಸಂಸಾರ ಸಮೇತ ಪಿ.ಎಂ.ಶ್ರೀಧರ್‌ ವಾಸವಿದ್ದು, ದಿನಾಂಕ 22.04.2022ರಂದು ತಾಯಿ ಗೌರಮ್ಮನವರು ಬೆಳಿಗ್ಗೆ 6 ಗಂಟೆ ಸುಮಾರಿಗೆ ಶ್ರೀಧರ್‌ಗೆ ಕರೆ ವಿಷಯ ತಿಳಿಸಿದ್ದಾರೆ.

“ದಿನಾಂಕ 21.04.2022ರಂದು ರಾತ್ರಿ 8.30ರಿಂದ 9 ಗಂಟೆ ಸಮಯದಲ್ಲಿ ಮನೆಯ ಬಳಿ ಬಂದ ಪೆದ್ದನಹಳ್ಳಿ ನಿವಾಸಿ, ಲಿಂಗಾಯತ ಜಾತಿಗೆ ಸೇರಿದ ಪರಮೇಶ್ವರಪ್ಪನವರ ಮಗ ನಂದೀಶ್‌ ಮತ್ತು ಇತರರು ಗಿರೀಶ್‌ ಅವರನ್ನು ಮನೆಯಿಂದ ಕರೆದುಕೊಂಡು ಹೋಗಿದ್ದಾರೆ. ವಾಪಸ್ ಮನೆಗೆ ಬಂದಿರಲಿಲ್ಲ. ಸಹೋದರ ಗಿರೀಶ್‌ ಶವ ಶಿರಾ- ನೆಲ್ಲಿಗೆರೆ ರಸ್ತೆಯಲ್ಲಿನ ಪೆದ್ದನಹಳ್ಳಿ ಗ್ರಾಮ ಸಮೀಪದ ಗುಂಡಿಯ ನೀರಿನಲ್ಲಿ ಪತ್ತೆಯಾದರೆ, ಇಲ್ಲಿಂದ ಸುಮಾರು ದೂರದಲ್ಲಿ ಮತ್ತೊಬ್ಬರನ್ನು ಕೊಲೆ ಮಾಡಿ ಕಾಲುವೆ ದಂಡೆಗೆ ಹೋಗುವ ಮಣ್ಣಿನ ರಸ್ತೆಯಲ್ಲಿ ಹಾಕಿದ್ದಾರೆ” ಎಂದು ಎಫ್‌ಆರ್‌ಐನಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿರಿ: ಗುಬ್ಬಿ: ಇಬ್ಬರು ದಲಿತ ಯುವಕರ ಭೀಕರ ಹತ್ಯೆ; ಖೈರ್ಲಾಂಜಿ ಮಾದರಿ ಪ್ರಕರಣ?

“ಈ ಇಬ್ಬರನ್ನು ನಂದೀಶ್‌ ಮತ್ತು ಇತರರು ದಿನಾಂಕ 21.04.2022ರಂದು ರಾತ್ರಿ ಯಾವುದೋ ಸಮಯದಲ್ಲಿ ಯಾವುದೋ ಉದ್ದೇಶದಿಂದ ಯಾವುದೋ ಆಯುಧಗಳಿಂದ ಎಲ್ಲಿಯೋ ಹೊಡೆದು ಕೊಲೆ ಮಾಡಿ ಸತ್ಯ ಸಂಗತಿಯನ್ನು ಮರೆಮಾಚಲು ಪಿ.ಎಂ.ಗಿರೀಶ್ ಅವರ ಶವವನ್ನು ಮಟ್ಟದ ಗುಂಡಿಯ ನೀರಿನ ಅಂಚಿಗೆ ಹಾಕಿರುತ್ತಾರೆ. ಮಂಚಲಗೆರೆ ಗಿರೀಶ್‌ ಅವರನ್ನು ಮಟ್ಟದ ಗುಂಡಿಯಿಂದ ಸುಮಾರು 150 ಅಡಿ ದೂರದ ಬಂಡಿ ರಸ್ತೆಯ ಮೇಲೆ ಕೊಲೆ ಮಾಡಿ ಹಾಕಿರುತ್ತಾರೆ” ಎಂದು ಎಫ್‌ಐಆರ್‌ನಲ್ಲಿ ತಿಳಿಸಲಾಗಿದೆ.

ಗ್ರಾಮಕ್ಕೆ ಶ್ವಾನದಳ ಕರೆಸಿದ್ದಾಗ, ಶ್ವಾನಗಳು ಹಲವು ಮನೆಗಳ ಬಳಿ ಹೋಗಿದ್ದವು. ಇದರಿಂದ ಕೆಲವರು ಪರಾರಿಯಾಗಿದ್ದಾರೆ. ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಕೊಲೆಯಾದವರ ಮೇಲೆ ಕಳ್ಳತನದ ಆರೋಪ ಹೊರಿಸಿ ಪ್ರಕರಣವನ್ನು ತಿರುಚುವ ಯತ್ನ ಮಾಡಲಾಗುತ್ತಿದೆ ಎಂಬ ಆರೋಪಗಳು ಬಂದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...