Homeಮುಖಪುಟಪೆಗಾಸಸ್ ಪ್ರಾಜೆಕ್ಟ್: ಶೀಘ್ರದಲ್ಲೇ ನ್ಯಾಯಾಧೀಶರ ಹೆಸರು ಬಹಿರಂಗ!

ಪೆಗಾಸಸ್ ಪ್ರಾಜೆಕ್ಟ್: ಶೀಘ್ರದಲ್ಲೇ ನ್ಯಾಯಾಧೀಶರ ಹೆಸರು ಬಹಿರಂಗ!

- Advertisement -
- Advertisement -

‘ಪೆಗಾಸಸ್’ ತಂತ್ರಾಂಶವನ್ನು ಬಳಸಿಕೊಂಡು ಭಾರತದ ವಿರೋಧ ಪಕ್ಷಗಳ ನಾಯಕರು, ಪತ್ರಕರ್ತರು, ಸಚಿವರ ಫೋನ್‌ಗಳನ್ನು ಟ್ಯಾಪ್‌ ಮಾಡಲಾಗುತ್ತಿದೆ ಎಂದು ಪ್ಯಾರಿಸ್ ಮೂಲದ ಪಾರ್ಬಿಡನ್ ಸ್ಟೋರಿಸ್ ತನಿಖಾ ವರದಿ ಬಹಿರಂಗ ಪಡಿಸಿದೆ. ಈಗಾಗಲೆ ಹ್ಯಾಕ್ ಮಾಡಲಾಗಿರುವ ಕೆಲವು ಪತ್ರಕರ್ತರ ಹೆಸರನ್ನು ವರದಿಯು ಬಿಡುಗಡೆ ಮಾಡಿದೆ. ಜೊತೆಗೆ ಪೆಗಾಸಸ್‌ ಹ್ಯಾಕ್‌ ಮಾಡಿರುವ ನ್ಯಾಯಾಧೀಶರ ಮತ್ತು ಇತರ ಹೆಸರುಗಳು ಶೀಘ್ರವೇ ಬಿಡುಗಡೆಯಾಗಲಿದೆ ಎಂದು ‘ದಿ ವೈರ್‌’ ಸುದ್ದಿ ಸಂಸ್ಥೆಯ ಸಂಪಾದಕ ಎಂಕೆ ವೇಣು ಸೋಮವಾರ ಹೇಳಿದ್ದಾರೆ.

ವಿಶ್ವದಾದ್ಯಂತ 50,000 ಫೋನ್‌ಗಳನ್ನು ಪೆಗಾಸಸ್‌‌ ತಂತ್ರಾಂಶವು ಟ್ಯಾಪ್‌ ಮಾಡಿದೆ ಎನ್ನಲಾಗಿದ್ದು, ತನಿಖಾ ವರದಿಗೆ ‘ಪೆಗಾಸಸ್‌ ಪ್ರಾಜೆಕ್ಟ್‌’ ಎಂದು ಕರೆಯಲಾಗಿದೆ. ತನಿಖಾ ವರದಿಯನ್ನು ಪ್ಯಾರಿಸ್‌ ಮೂಲದ ಲಾಭರಹಿತ ಮಾಧ್ಯಮ ಸಂಸ್ಥೆ ‘ಫಾರ್ಬಿಡೆನ್‌ ಸ್ಟೋರಿಸ್‌’, ಅಮ್ನೆಸ್ಟಿ ಇಂಟರ್‌ನ್ಯಾಷನಲ್‌, ಲೆ ಮಾಂಡೆ, ದಿ ಗಾರ್ಡಿಯನ್‌, ವಾಷಿಂಗ್ಟನ್‌ ಪೋಸ್ಟ್‌ ಸೇರಿದಂತೆ ಒಟ್ಟು 16 ಮೆಕ್ಸಿಕನ್‌, ಅರಬ್‌ ಮತ್ತು ಯುರೋಪಿನ ಸುದ್ದಿ ಸಂಸ್ಥೆಗಳು ಜಂಟಿಯಾಗಿ ನಡೆಸಿದೆ. ಈ ಜಂಟಿ ತನಿಖೆಯಲ್ಲಿ ಭಾರತದ ಆನ್‌ಲೈನ್‌ ಸುದ್ದಿ ಸಂಸ್ಥೆ ದಿ ವೈರ್‌ ಕೂಡಾ ಸೇರಿದೆ.

ಇದನ್ನೂ ಓದಿ: ಅವರು ಏನನ್ನು ಓದುತ್ತಿದ್ದಾರೆ ಎಂದು ನಮಗೆ ಗೊತ್ತು!: ‘ಪೆಗಾಸಸ್‌ ಪ್ರಾಜೆಕ್ಟ್‌’ಗೆ ರಾಹುಲ್ ಗಾಂಧಿ

‘ಪೆಗಾಸಸ್’ ಇಸ್ರೇಲಿ ಕಂಪನಿ ಎನ್‌ಎಸ್‌ಒ ಗ್ರೂಪ್‌ನ ಗೂಢಚರ್ಯೆ ತಂತ್ರಾಂಶವಾಗಿದೆ. ಈ ತಂತ್ರಾಂಶವನ್ನು ಪರವಾನಗಿ ಪಡೆದಿರುವ ಅಧಿಕೃತ ಸರಕಾರಿ ಏಜೆನ್ಸಿಗಳಿಗೆ ಅಥವಾ ಗುಪ್ತಚರ ಸಂಸ್ಥೆಗಳಿಗೆ ಮಾತ್ರವೇ ಮಾರುತ್ತೇವೆ ಎಂದು ಎನ್‌ಎಸ್‌ಒ ಹೇಳಿತ್ತು. ಪೆಗಾಸಸ್ ತಂತ್ರಾಂಗಳನ್ನು ಬಳಸಿಕೊಂಡು ಫೋನ್‌‌ಗಳನ್ನು ಹ್ಯಾಕ್ ಮಾಡಲಾಗಿದೆ ಎಂದು 2019 ರಲ್ಲಿ ಕೂಡಾ ವರದಿಯಾಗಿತ್ತು.

ತಮ್ಮ ತನಿಖಾ ವರದಿಯ ಬಗ್ಗೆ ಎನ್‌ಡಿಟಿವಿ ಜೊತೆ ಮಾತನಾಡಿದ ದಿವೈರ್‌ ಸಂಸ್ಥಾಪಕ ಸಂಪಾದಕ ಎಂಕೆ ವೇಣು, “ಪೆಗಾಸಸ್ ಹ್ಯಾಕ್ ಮಾಡಿರುವ ನ್ಯಾಯಾಧೀಶರ ಮತ್ತು ಇತರರ ಹೆಸರನ್ನು ಶೀಘ್ರವೇ ಬಹಿರಂಗಪಡಿಸಲಾಗುವುದು. ಇದು 2019 ರಲ್ಲಿ ಬಿಡುಗಡೆಯಾದ ಪಟ್ಟಿಗಿಂತ ಉದ್ದವಾಗಿದೆ. ಈ ಜನರನ್ನು ಕಣ್ಗಾವಲು ಯಾಕೆ ಮಾಡುತ್ತಿದ್ದೇವೆ ಎಂದು ಸರ್ಕಾರ ವಿವರಿಸಬೇಕು” ಎಂದು ಹೇಳಿದ್ದಾರೆ.

ಆದರೆ ಒಕ್ಕೂಟ ಸರ್ಕಾವು, ತನಿಖಾ ವರದಿಯನ್ನು ನಿರಾಕರಿಸಿದ್ದು, ನಿರ್ದಿಷ್ಟ ಜನರ ಮೇಲೆ ಸರ್ಕಾರ ಕಣ್ಗಾವಲು ಇಟ್ಟಿದೆ ಎಂಬುವುದಕ್ಕೆ ಯಾವುದೇ ದೃಡವಾದ ಆಧಾರವಿಲ್ಲ ಎಂದು ಹೇಳಿದೆ.

ತನಿಖಾ ವರದಿಯಲ್ಲಿ, ನರೇಂದ್ರ ಮೋದಿ ಸರ್ಕಾರದ ಇಬ್ಬರು ಸಚಿವರು, ಮೂವರು ವಿರೋಧ ಪಕ್ಷದ ನಾಯಕರು, ಒಬ್ಬ ನ್ಯಾಯಾಂಗದ ವ್ಯಕ್ತಿ, 40 ಪತ್ರಕರ್ತರು, ವಿಜ್ಞಾನಿಗಳು ಹಾಗೂ ಮಾನವ ಹಕ್ಕುಗಳ ಹೋರಾಟಗಾರರು ಸೇರಿದಂತೆ ಹಲವು ಉದ್ಯಮಿಗಳ ಫೋನ್‌‌ಗಳನ್ನು ಹ್ಯಾಕ್ ಮಾಡಲಾಗಿದೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ಇಸ್ರೇಲ್ ಮೂಲದ ಕಂಪೆನಿಯಿಂದ ಭಾರತದ 300 ಗಣ್ಯರ ಫೋನ್‌ಗಳು ಹ್ಯಾಕ್‌!

2019 ರ ಲೋಕಸಭಾ ಸಾರ್ವತ್ರಿಕ ಚುನಾವಣೆಯ ಸಮಯದಲ್ಲಿ, ಸುಪ್ರೀಂ ಕೋರ್ಟ್ ನ್ಯಾಯಾಧೀಶರು, ನರೇಂದ್ರ ಮೋದಿ ಸರ್ಕಾರದಲ್ಲಿ ಸೇವೆ ಸಲ್ಲಿಸುತ್ತಿದ್ದ ಮಂತ್ರಿಗಳು ಸೇರಿದಂತೆ 2018 ಮತ್ತು 2019 ರ ನಡುವೆ ಹೆಚ್ಚಿನ ಜನರನ್ನು ಗುರಿಯಾಗಿಸಲಾಗಿತ್ತು ಎಂದು ದಿ ವೈರ್‌ ವರದಿ ಹೇಳಿದೆ.

ಇಷ್ಟೇ ಅಲ್ಲದೆ, ಭೀಮಾ ಕೋರೆಗಾಂವ್‌ ಪ್ರಕರಣದ ಆರೋಪಿಗಳಾದ 12 ಹೋರಾಟಗಾರರ ಫೋನ್‌ಗಳನ್ನು ಹ್ಯಾಕ್‌ ಮಾಡಲಾಗಿದ್ದು ಅವರ ಮೇಲೆ ಕಣ್ಗಾವಲು ಇಡಲಾಗಿದೆ ಎಂಬ ತನಿಖಾ ವರದಿಯು ಹೇಳಿದೆ. ವರದಿಯು ‘ಜಾಗತಿಕ ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಉಲ್ಲೇಖಿಸಿದೆ.

ಫೋನ್‌ ಹ್ಯಾಕ್ ಮಾಡಲಾಗಿರುವ ಭಾರತೀಯ ಪತ್ರಕರ್ತರಲ್ಲಿ ಸುಶಾಂತ್ ಸಿಂಗ್, ಜೆ. ಗೋಪಿಕೃಷ್ಣನ್‌, ಶಿಶಿರ್‌ ಗುಪ್ತಾ, ರಿತಿಕಾ ಚೋಪ್ರಾ, ಪ್ರಶಾಂತ್‌ ಝಾ, ಪ್ರೇಮ್‌ ಶಂಕರ್‌ ಝಾ, ಸ್ವಾತಿ ಚತುರ್ವೇದಿ, ರಾಹುಲ್‌ ಸಿಂಗ್‌, ಮುಜಮ್ಮಿಲ್‌ ಜಲೀಲ್‌, ಇಫ್ತಿಕಾರ್‌ ಗೀಲಾನಿ, ಸಂದೀಪ್‌ ಉನ್ನಿತಾನ್‌, ದಿ ವೈರ್‌ನ ಸಂಸ್ಥಾಪಕ ಸಂಪಾದಕ ಸಿದ್ಧಾರ್ಥ್ ವರದರಾಜನ್ ಮತ್ತು ಎಂ.ಕೆ.ವೇಣು ಮುಂತಾದವರು ಸೇರಿದ್ದಾರೆ.

ಇದನ್ನೂ ಓದಿ: ಬಿಜೆಪಿ ಮುಗಿಸಲು ನಳಿನ್ ಕುಮಾರ್ ಕಟೀಲ್ ಒಬ್ಬರೇ ಸಾಕು: ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...

ಮುಂಬೈ: 2 ದಿನಗಳಿಂದ ಹೊತ್ತಿ ಉರಿಯುತ್ತಿರುವ ಪೊವೈ ಬೆಟ್ಟಗಳು: ನಿವಾಸಿಗಳಿಂದ ಅಧಿಕಾರಿಗಳ ನಿಷ್ಕ್ರಿಯತೆಯ ಆರೋಪ 

ಮುಂಬೈನ ಪೊವೈ ಬೆಟ್ಟಗಳ ಪ್ರದೇಶದಲ್ಲಿ ಸಂಭವಿಸಿದ ಬೆಂಕಿ ಕಳೆದ ಎರಡು ದಿನಗಳಿಂದ ಉರಿಯುತ್ತಿದೆ ಎಂದು ವರದಿಯಾಗಿದೆ. ನಿವಾಸಿಗಳು ಬೆಂಕಿಯ ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ ಮತ್ತು ನಾಗರಿಕ ಅಧಿಕಾರಿಗಳಿಂದ ಯಾವುದೇ ಪ್ರತಿಕ್ರಿಯೆಯು ಸಿಕ್ಕಿಲ್ಲ...