Homeಮುಖಪುಟಪೆಗಾಸಸ್ ಪ್ರಾಜೆಕ್ಟ್: ಜಂಟಿ ಸಂಸದೀಯ ಸಮಿತಿಯ ತನಿಖೆಗೆ ಕಾಂಗ್ರೆಸ್ ಒತ್ತಾಯ

ಪೆಗಾಸಸ್ ಪ್ರಾಜೆಕ್ಟ್: ಜಂಟಿ ಸಂಸದೀಯ ಸಮಿತಿಯ ತನಿಖೆಗೆ ಕಾಂಗ್ರೆಸ್ ಒತ್ತಾಯ

- Advertisement -
- Advertisement -

ಪೆಗಾಸಸ್ ಗೂಢಚರ್ಯೆ ವಿವಾದಕ್ಕೆ ಸಂಬಂಧಿಸಿದಂತೆ ಮಂಗಳವಾರ ಪ್ರತಿಪಕ್ಷ ಕಾಂಗ್ರೆಸ್ ಒಕ್ಕೂಟ ಸರ್ಕಾರದ ಮೇಲೆ ವಾಗ್ದಾಳಿ ನಡೆಸಿದೆ. ಜಂಟಿ ಸಂಸದೀಯ ಸಮಿತಿಯ ತನಿಖೆಗೆ ವಹಿಸಬೇಕೆಂದು ಕಾಂಗ್ರೆಸ್ ಒತ್ತಾಯಿಸಿದೆ. ವಿಪಕ್ಷಗಳು ಉಭಯ ಸದನಗಳಲ್ಲಿ ಪೆಗಾಸಸ್ ಪ್ರಾಜೆಕ್ಟ್‌ ಬಗ್ಗೆ ಚರ್ಚೆಗೆ ಒತ್ತಾಯಿಸಿದವು.

ಪ್ರತಿಪಕ್ಷದ ಸದಸ್ಯರು ಉಭಯ ಸದನಗಳಲ್ಲಿ ಪೆಗಾಸಸ್ ಪ್ರಾಜೆಕ್ಟ್‌ ಬಗ್ಗೆ ಗದ್ದಲ ನಡೆಸಿದ್ದಾರೆ. ಇಸ್ರೇಲಿ ಪೆಗಾಸಸ್ ಸ್ಪೈವೇರ್ ಬಳಸಿ ಪತ್ರಕರ್ತರು, ರಾಜಕಾರಣಿಗಳು, ಮಂತ್ರಿಗಳು, ನ್ಯಾಯಾಧೀಶರು ಮತ್ತು ಇತರರ ಮೇಲೆ  ಗೂಢಚರ್ಯೆ ನಡೆಸಿರುವ ಆರೋಪಗಳ ಬಗ್ಗೆ ಸಮಗ್ರ ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ.

ಸಂಸತ್ತಿನ ಉಭಯ ಸದನಗಳಲ್ಲಿ ಚರ್ಚೆಯನ್ನು ಪ್ರಾರಂಭಿಸುವ ಮೊದಲು ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಸಭೆ ಸೇರಿ ಈ ವಿಷಯದ ಬಗ್ಗೆ ತಮ್ಮ ಯೋಜನೆಯನ್ನು ನಿರ್ಧರಿಸಿದ್ದರು. ಈ ಬಗ್ಗೆ ಚರ್ಚಿಸಲು ಒತ್ತಾಯಿಸಿ ಹಲವರು ಉಭಯ ಸದನಗಳಲ್ಲಿ ಮುಂದೂಡಿಕೆ ನೋಟಿಸ್ ನೀಡಿದ್ದರು.

ಇದನ್ನೂ ಓದಿ: ಅವರು ಏನನ್ನು ಓದುತ್ತಿದ್ದಾರೆ ಎಂದು ನಮಗೆ ಗೊತ್ತು!: ‘ಪೆಗಾಸಸ್‌ ಪ್ರಾಜೆಕ್ಟ್‌’ಗೆ ರಾಹುಲ್ ಗಾಂಧಿ

ಕಾಂಗ್ರೆಸ್ ವಕ್ತಾರ ಶಕ್ತಿಸಿನ್ಹಾ ಗೋಹಿಲ್, “ಪೆಗಾಸಸ್ ಸ್ಪೈವೇರ್ ಖರೀದಿಸಿದ್ದಾರೋ ಇಲ್ಲವೋ ಎಂಬುದನ್ನು ಸರ್ಕಾರ ಸ್ಪಷ್ಟವಾಗಿ ಹೇಳಬೇಕು ಮತ್ತು ಜಂಟಿ ಸಂಸದೀಯ ತನಿಖೆ ನಡೆಸಬೇಕು. ಗೂಢಚರ್ಯೆ ಮತ್ತು ಫೋನ್ ಟ್ಯಾಪಿಂಗ್ ವಿಷಯದ ಬಗ್ಗೆ ಜಂಟಿ ಸಂಸದೀಯ ಸಮಿತಿಯ ತನಿಖೆಗೆ ಸರ್ಕಾರ ಆದೇಶಿಸಬೇಕು ಎಂಬುದು ಪಕ್ಷದ ಬೇಡಿಕೆಯಾಗಿದೆ” ಎಂದು ಹೇಳಿದ್ದಾರೆ.

ಫೋನ್ ಟ್ಯಾಪಿಂಗ್ ವಿಷಯದಲ್ಲಿ ರಾಷ್ಟ್ರೀಯ ಭದ್ರತೆ ಮತ್ತು ಸಂವಿಧಾನದ ಅಡಿಯಲ್ಲಿರುವ ಮೂಲಭೂತ ಹಕ್ಕುಗಳ ಉಲ್ಲಂಘನೆ ಕುರಿತು ಚರ್ಚೆ ನಡೆಸಲು ರಾಜ್ಯಸಭೆ ಮತ್ತು ಲೋಕಸಭೆಯಲ್ಲಿ ಮುಂದೂಡಿಕೆ ನೋಟಿಸ್ ನೀಡಿದ್ದೇವೆ ಎಂದು ಶಕ್ತಿಸಿನ್ಹಾ ಗೋಹಿಲ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಪೆಗಾಸಸ್ ಸಾಫ್ಟ್‌ವೇರ್ ಬಳಸಿ ರಾಜಕಾರಣಿಗಳು, ಪತ್ರಕರ್ತರು ಮತ್ತು ಇತರರ ಮೇಲೆ ಗೂಢಚರ್ಯೆ ನಡೆಸಿರುವ ಆರೋಪಗಳನ್ನು ಒಕ್ಕೂಟ ಸರ್ಕಾರ ಸೋಮವಾರ ಸ್ಪಷ್ಟವಾಗಿ ತಿರಸ್ಕರಿಸಿದೆ ಎಂದು ಆರೋಪಿಸಿದ್ದಾರೆ.

ಇಸ್ರೇಲಿ ಕಂಪನಿ ಎನ್‌ಎಸ್‌ಒ ಗ್ರೂಪ್‌ನ ಪೆಗಾಸಸ್ ಗೂಢಚರ್ಯೆ ತಂತ್ರಾಂಶ ಬಳಸಿಕೊಂಡು ಪ್ರಸ್ತುತ ಸಂಪುಟದಲ್ಲಿರುವ ಇಬ್ಬರು ಮಂತ್ರಿಗಳು, 40 ಕ್ಕೂ ಹೆಚ್ಚು ಪತ್ರಕರ್ತರು, ಮೂವರು ವಿರೋಧ ಪಕ್ಷದ ನಾಯಕರು ಮತ್ತು ಒಬ್ಬ ನ್ಯಾಯಾಧೀಶರು, ಹಲವಾರು ಉದ್ಯಮಿಗಳು ಮತ್ತು  ಹೋರಾಟಗಾರರು ಸೇರಿದಂತೆ 300 ಕ್ಕೂ ಹೆಚ್ಚು ಜನರ ಮೊಬೈಲ್ ಫೋನ್ ಸಂಖ್ಯೆಗಳನ್ನು ಹ್ಯಾಕ್ ಮಾಡಲಾಗಿದೆ ಎಂದು ಪ್ಯಾರಿಸ್ ಮೂಲದ ಫಾರ್ಬಿಡನ್ ಸ್ಟೋರೀಸ್‌ ಸಂಸ್ಥೆ ನಡೆಸಿದ ತನಿಖೆಯಿಂದ ಬಹಿರಂಗಗೊಂಡಿದೆ.


ಇದನ್ನೂ ಓದಿ: ನ್ಯಾ. ರಂಜನ್ ಗೊಗೊಯ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ್ದಾಕೆಯ ಇಡೀ ಕುಟುಂಬದ ಮೇಲೆ ಪೆಗಾಸಸ್ ಕಣ್ಗಾವಲು!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

‘ಇವಿಎಂ’ ತಿರುಚಲು ಶಿವಸೇನಾ ನಾಯಕನಿಗೆ 2.5 ಕೋಟಿ ರೂ.ಬೇಡಿಕೆ ಇಟ್ಟ ಯೋಧ!

0
ವಿದ್ಯುನ್ಮಾನ ಮತಯಂತ್ರಗಳನ್ನು(ಇವಿಎಂ) ತಿರುಚಲು ಶಿವಸೇನಾ ಉದ್ಧವ್‌ ಬಣದ ನಾಯಕ ಅಂಬಾದಾಸ್ ದನ್ವೆ ಅವರಿಂದ 2.5 ಕೋಟಿ ರೂಪಾಯಿಗೆ ಬೇಡಿಕೆಯಿಟ್ಟಿದ್ದಕ್ಕಾಗಿ ಮಹಾರಾಷ್ಟ್ರ ಪೊಲೀಸರು ಛತ್ರಪತಿ ಸಂಭಾಜಿನಗರದಲ್ಲಿ ಸೇನಾ ಯೋಧನೋರ್ವನನ್ನು ಬಂಧಿಸಿದ್ದಾರೆ. ಮಾರುತಿ ಧಕ್ನೆ(42) ವಿರುದ್ಧ ದೂರು...