Homeಮುಖಪುಟಪೆಗಾಸಸ್ ಹಗರಣ: ನ್ಯಾಯಾಂಗ ತನಿಖೆಗೆ ಒತ್ತಾಯಿಸಿ ಸುಪ್ರೀಂ ಮೆಟ್ಟಿಲೇರಿದ ಹಿರಿಯ ಪತ್ರಕರ್ತರು

ಪೆಗಾಸಸ್ ಹಗರಣ: ನ್ಯಾಯಾಂಗ ತನಿಖೆಗೆ ಒತ್ತಾಯಿಸಿ ಸುಪ್ರೀಂ ಮೆಟ್ಟಿಲೇರಿದ ಹಿರಿಯ ಪತ್ರಕರ್ತರು

ಸರ್ಕಾರ ಪೆಗಾಸಸ್ ಬಳಸಿ ಜನರ ಮೇಲೆ ಯಾವುದೇ ರೀತಿಯಲ್ಲಿ ಕಣ್ಗಾವಲು ನಡೆಸಲು ಲೈಸೆನ್ಸ್ ಪಡೆದಿದೆಯೇ ಎಂಬುದನ್ನು ಬಹಿರಂಗಪಡಿಸುವಂತೆ ಒತ್ತಾಯಿಸಿದ್ದಾರೆ.

- Advertisement -
- Advertisement -

ದಿ ಹಿಂದು ಪತ್ರಿಕೆಯ ಸಂಪಾದಕರಾದ ಎನ್ ರಾಮ್ ಮತ್ತು ಏಷ್ಯಾನೆಟ್‌ನ ಸಂಸ್ಥಾಪಕರಾದ ಶಶಿಕುಮಾರ್‌ರವರು ಪೆಗಾಸಸ್ ಸ್ಪೈವೇರ್ ಹಗರಣದ ಕುರಿತು ಸುಪ್ರೀಂ ಕೋರ್ಟ್‌ನ ಹಾಲಿ ಅಥವಾ ಮಾಜಿ ನ್ಯಾಯಾಧೀಶರಿಂದ ತನಿಖೆಗೆ ಒತ್ತಾಯಿಸಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಜೊತೆಗೆ ವಕೀಲರಾದ ಎಂ ಎಲ್ ಶರ್ಮಾ, ರಾಜ್ಯಸಭಾ ಸದಸ್ಯ ಜಾನ್ ಬ್ರಿಟ್ಟಾಸ್ ಅವರೂ ಸಹ ಅರ್ಜಿ ಸಲ್ಲಿಸಿದ್ದಾರೆ.

ಪೆಗಾಸಸ್ ಬಳಸಿ 142 ಕ್ಕೂ ಹೆಚ್ಚು ಪತ್ರಕರ್ತರು ಮತ್ತು ಪ್ರಕಾಶಕರ ಮೇಲೆ ಕಣ್ಗಾವಲು ನಡೆಸಲು ಗುರಿ ಮಾಡಲಾಗಿತ್ತು ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ಸರ್ಕಾರ ಈ ಪೆಗಾಸಸ್ ಸ್ಪೈವೇರ್ ಬಳಸಿ ಜನರ ಮೇಲೆ ಯಾವುದೇ ರೀತಿಯಲ್ಲಿ ಕಣ್ಗಾವಲು ನಡೆಸಲು ನೇರವಾಗಿ ಅಥವಾ ಪರೋಕ್ಷವಾಗಿ ಲೈಸೆನ್ಸ್ ಪಡೆದಿದೆಯೇ ಎಂಬುದನ್ನು ಬಹಿರಂಗಪಡಿಸುವಂತೆ ಸರ್ಕಾರಕ್ಕೆ ಸುಪ್ರೀಂ ನಿರ್ದೇಶನ ನೀಡಬೇಕು ಎಂದು ಹಿರಿಯ ಪತ್ರಕರ್ತರು ತಮ್ಮ ಅರ್ಜಿಯಲ್ಲಿ ಒತ್ತಾಯಿಸಿದ್ದಾರೆ.

ಅಮ್ನೆಸ್ಟಿ ಇಂಟರ್‌ನ್ಯಾಷನಲ್‌ನ ಸೆಕ್ಯುರಿಟಿ ಲ್ಯಾಬ್‌ ಫೋರೆನ್ಸಿಕ್ ವಿಶ್ಲೇಷಣೆಯು ಹಲವಾರು ಜನರ ಮೊಬೈಲ್ ಅನ್ನು ಟ್ಯಾಪ್ ಮಾಡಲು ಗುರಿಯಾಗಿಸಿ ಭದ್ರತಾ ಉಲ್ಲಂಘನೆಯನ್ನು ದೃಢಪಡಿಸಿದೆ ಎಂದು ಅರ್ಜಿದಾರರು ವಾದಿಸಿದ್ದಾರೆ.

ಪತ್ರಕರ್ತರು, ಸಾಮಾಜಿಕ ಹೋರಾಟಗಾರರು, ರಾಜಕಾರಣಿಗಳು ಸೇರಿ ದೇಶದ 300 ಕ್ಕೂ ಹೆಚ್ಚು ಜನರನ್ನು ಇಸ್ರೇಲಿ ಸ್ಪೈವೇರ್ ಪೆಗಾಸಸ್ ಅನ್ನು ಬಳಸಿ ಸರ್ಕಾರಿ ಸಂಸ್ಥೆಗಳು ಬೇಹುಗಾರಿಕೆ ನಡೆಸಿದ್ದಾರೆ ಎಂಬ ಆರೋಪದ ಬಗ್ಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕೆಂದು ಕೋರಿ ಸುಪ್ರೀಂ ಕೋರ್ಟ್‌ಗೆ ಮೊನ್ನೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿತ್ತು.

ದಿನ ದಿನಕ್ಕೂ ಪೆಗಾಸಸ್ ಕಣ್ಗಾವಲು ಪಟ್ಟಿಯಲ್ಲಿರುವವ ಹೆಸರು ಬಯಲಾಗುತ್ತಲೇ ಇದೆ. ಈಗ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಸಹಾಯಕ ಮತ್ತು ಉನ್ನತ ಮಟ್ಟದ ತನಿಖೆಯ ನೇತೃತ್ವ ವಹಿಸಿದ್ದ ಜಾರಿ ನಿರ್ದೇಶನಾಲಯದ ಅಧಿಕಾರಿಯೊಬ್ಬರ ಹೆಸರು ಕಂಡುಬಂದಿದೆ.

ಇನ್ನು ಪೆಗಾಸಸ್ ವಿವಾದ ಭುಗಿಲೆದ್ದ ನಂತರ ಈ ಕುರಿತು ತನಿಖೆ ನಡೆಸಲು ತಮ್ಮ ಸರ್ಕಾರದ ಇಬ್ಬರು ಪ್ರತಿನಿಧಿಗಳ ವಿಶೇಷ ತನಿಖಾ ತಂಡ ತಂಡ ರಚಿಸಲಾಗಿದೆ. ಅದರಲ್ಲಿ ನಿವೃತ್ತ ನ್ಯಾಯಾಧೀಶರು ಇರಲಿದ್ದಾರೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿನ್ನೆ ತಿಳಿಸಿದ್ದಾರೆ.


ಇದನ್ನೂ ಓದಿ; ಪೆಗಾಸಸ್ ಹಗರಣ: ಎಸ್‌ಐಟಿ ತನಿಖೆ ಕೋರಿ ಸುಪ್ರೀಂಗೆ ಅರ್ಜಿ ಸಲ್ಲಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...