Homeಮುಖಪುಟಪೆಗಾಸಸ್: ಐಟಿ ಮತ್ತು ಗೃಹ ಸಚಿವಾಲಯದ ಅಧಿಕಾರಿಗಳನ್ನು ಪ್ರಶ್ನಿಸಲಿರುವ ಶಶಿ ತರೂರ್‌ ನೇತೃತ್ವದ ಸ್ಥಾಯಿ ಸಮಿತಿ

ಪೆಗಾಸಸ್: ಐಟಿ ಮತ್ತು ಗೃಹ ಸಚಿವಾಲಯದ ಅಧಿಕಾರಿಗಳನ್ನು ಪ್ರಶ್ನಿಸಲಿರುವ ಶಶಿ ತರೂರ್‌ ನೇತೃತ್ವದ ಸ್ಥಾಯಿ ಸಮಿತಿ

- Advertisement -
- Advertisement -

ಪೆಗಾಸಸ್ ಗೂಢಚಾರ ತಂತ್ರಾಂಶ ಬಳಸಿ ರಾಜಕಾರಣಿಗಳು, ಪತ್ರಕರ್ತರು ಮತ್ತು ಇತರರ ಫೋನ್ ಟ್ಯಾಪಿಂಗ್‌‌ ಸಂಬಂಧಿಸಿದ ಆರೋಪಗಳ ಬಗ್ಗೆ ಮಾಹಿತಿ ತಂತ್ರಜ್ಞಾನದ ಸಂಸದೀಯ ಸಮಿತಿಯು ಸರ್ಕಾರಿ ಅಧಿಕಾರಿಗಳನ್ನು ಪ್ರಶ್ನಿಸಲಿದೆ ಎಂದು ಸಮಿತಿಯ ಅಧ್ಯಕ್ಷ, ಹಿರಿಯ ಕಾಂಗ್ರೆಸ್ ಮುಖಂಡ ಶಶಿ ತರೂರ್ ಮಂಗಳವಾರ ಹೇಳಿದ್ದಾರೆ. ಇದು ಅನೇಕ ಸದಸ್ಯರಿಗೆ ಪ್ರಮುಖ ವಿಷಯ ಎಂದು ಅವರು ಪ್ರತಿಪಾದಿಸಿದ್ದಾರೆ.

ನಾಗರಿಕರ ಮಾಹಿತಿ ಮತ್ತು ಗೌಪ್ಯತೆಯ ಕಾರ್ಯಸೂಚಿಯನ್ನು ಇಟ್ಟುಕೊಂಡು 32 ಸದಸ್ಯರ ಐಟಿ ಸಂಸದೀಯ ಸ್ಥಾಯಿ ಸಮಿತಿ ಬುಧವಾರ ಸಭೆ ಸೇರಲಿದೆ ಎಂದು ಲೋಕಸಭಾ ಸಚಿವಾಲಯ ಹೊರಡಿಸಿದ ಅಧಿಸೂಚನೆಯು ಹೇಳಿದೆ.

ಆಡಳಿತಾರೂಢ ಬಿಜೆಪಿಯ ಗರಿಷ್ಠ ಸದಸ್ಯರನ್ನು ಹೊಂದಿರುವ ಸಮಿತಿಯು ಎಲೆಕ್ಟ್ರಾನಿಕ್ಸ್, ಮಾಹಿತಿ ಮತ್ತು ತಂತ್ರಜ್ಞಾನ ಸಚಿವಾಲಯ ಮತ್ತು ಗೃಹ ವ್ಯವಹಾರಗಳ ಸಚಿವಾಲಯದ ಅಧಿಕಾರಿಗಳಿಗೆ ಸಮನ್ಸ್‌ ನೀಡಿದೆ.

ಇದನ್ನೂ ಓದಿ: ಪೆಗಾಸಸ್ ಹಗರಣ: ನ್ಯಾಯಾಂಗ ತನಿಖೆಗೆ ಒತ್ತಾಯಿಸಿ ಸುಪ್ರೀಂ ಮೆಟ್ಟಿಲೇರಿದ ಹಿರಿಯ ಪತ್ರಕರ್ತರು

ಇಸ್ರೇಲ್ ಮೂಲದ ಸಂಸ್ಥೆ ಎನ್‌ಎಸ್‌ಒನ ತಂತ್ರಾಶವಾಗಿರುವ ‘ಪೆಗಾಸಸ್’ ಬಳಸಿ ವಿಶ್ವದಾದ್ಯಂತ ಸಾವಿರಾರು ಜನರನ್ನು ಕಣ್ಗಾವಲು ಮಾಡಲಾಗಿದ್ದು, ಸಂಭವನೀಯ ಗುರಿಗಳ ಪಟ್ಟಿಯಲ್ಲಿ 300 ಕ್ಕೂ ಹೆಚ್ಚು ಪರಿಶೀಲಿಸಿದ ಭಾರತೀಯ ಮೊಬೈಲ್ ಫೋನ್ ಸಂಖ್ಯೆಗಳಿವೆ ಎಂದು ಕಳೆದ ವಾರ ಅಂತರರಾಷ್ಟ್ರೀಯ ಮಾಧ್ಯಮ ಒಕ್ಕೂಟವೊಂದು ವರದಿ ಮಾಡಿತ್ತು.

ಈ ಪಟ್ಟಿಯಲ್ಲಿ ರಾಹುಲ್ ಗಾಂಧಿ, ಇಬ್ಬರು ಒಕ್ಕೂಟ ಸರ್ಕಾರದ ಸಚಿವರಾದ ಪ್ರಹ್ಲಾದ್ ಸಿಂಗ್ ಪಟೇಲ್ ಮತ್ತು ರೈಲ್ವೆ ಮತ್ತು ಐಟಿ ಸಚಿವ ಅಶ್ವಿನಿ ವೈಷ್ಣವ್, ಮಾಜಿ ಸಿಬಿಐ ಮುಖ್ಯಸ್ಥ, ಉದ್ಯಮಿ ಅನಿಲ್ ಅಂಬಾನಿ ಮತ್ತು ಕನಿಷ್ಠ 40 ಪತ್ರಕರ್ತರು ಸೇರಿದಂತೆ ಪ್ರತಿಪಕ್ಷ ನಾಯಕರು ಇದ್ದಾರೆ.

ಈ ಮಧ್ಯೆ, ಪಶ್ಚಿಮ ಬಂಗಾಳದ ಟಿಎಂಸಿ ನೇತೃತ್ವದ ಸರ್ಕಾರವು ಪ್ರಕರಣದ ತನಿಖೆಗೆ ಆಯೋಗವೊಂದನ್ನು ಸ್ಥಾಪಿಸಿದೆ. ಪ್ರಕರಣದ ಬಗ್ಗೆ ಸಂಸತ್ತಿನಲ್ಲಿ ಚರ್ಚೆಯಾಗಬೇಕು ಎಂದು ಎಲ್ಲಾ ಪಕ್ಷಗಳ ನಾಯಕರು ಬಯಸಿದ್ದಾರೆ.

ಅದಾಗ್ಯೂ ಐಟಿ ಸಂಸದೀಯ ಸ್ಥಾಯಿ ಸಮಿತಿಯ ಅಧ್ಯಕ್ಷರು ಕರೆದಿದ್ದ ಸಭೆಯನ್ನು ಬಿಜೆಪಿ ಸಂಸದರು ಬಹಿಷ್ಕರಿಸಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಪೆಗಾಸಸ್ ಹಗರಣ: ಕೇಜ್ರಿವಾಲ್ ಸಹಾಯಕ, ಜಾರಿ ನಿರ್ದೇಶನಾಲಯದ ಅಧಿಕಾರಿ ಮೇಲೂ ಗೂಢಚರ್ಯೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಚುನಾವಣಾ ಆಯೋಗ ಪಕ್ಷಾತೀತವಾಗಿ ನಡೆದುಕೊಳ್ಳುತ್ತಿಲ್ಲ: ಪಿಣರಾಯಿ ವಿಜಯನ್

0
ಪ್ರಧಾನಮಂತ್ರಿ ನರೇಂದ್ರ ಮೋದಿ ಇತ್ತೀಚೆಗೆ ಮುಸ್ಲಿಮರ ವಿರುದ್ಧ ನೀಡಿದ್ದ ಹೇಳಿಕೆಗಳಿಗೆ ಸಂಬಂಧಿಸಿದಂತೆ ತಕ್ಷಣ ಕ್ರಮ ಕೈಗೊಳ್ಳುವ ಮೂಲಕ ಚುನಾವಣಾ ಆಯೋಗವು ಪಕ್ಷಾತೀತವಾಗಿ ವರ್ತಿಸದಿರುವುದು ದುರದೃಷ್ಟಕರ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ. ಮೋದಿಯ...