Homeಕರ್ನಾಟಕಪೆನ್‌ಡ್ರೈವ್‌ ಬಿಡುಗಡೆಯಲ್ಲಿ ಕುಮಾರಸ್ವಾಮಿ, ಬಿಜೆಪಿ ನಾಯಕರ ಕೈವಾಡ: ಡಿ.ಕೆ.ಸುರೇಶ್

ಪೆನ್‌ಡ್ರೈವ್‌ ಬಿಡುಗಡೆಯಲ್ಲಿ ಕುಮಾರಸ್ವಾಮಿ, ಬಿಜೆಪಿ ನಾಯಕರ ಕೈವಾಡ: ಡಿ.ಕೆ.ಸುರೇಶ್

- Advertisement -
- Advertisement -

ಪೆನ್ ಡ್ರೈವ್ ವಿಚಾರ ಎಲ್ಲರಿಗಿಂತ ಮೊದಲೇ ಕುಮಾರಸ್ವಾಮಿ ಹಾಗೂ ಬಿಜೆಪಿ ನಾಯಕರಿಗೆ ತಿಳಿದಿತ್ತು. ಈ ಪ್ರಕರಣದಿಂದ ನುಣುಚಿಕೊಳ್ಳಲು ಕಾಂಗ್ರೆಸ್ ಹಾಗೂ ಶಿವಕುಮಾರ್ ಅವರ ಮೇಲೆ ಆರೋಪ ಮಾಡುತ್ತಿದ್ದಾರೆ. ಪೆನ್‌ ಡ್ರೈವ್‌ ಬಿಡುಗಡೆಯಲ್ಲಿ ಮೈತ್ರಿ ಬಿಜೆಪಿ ನಾಯಕರು ಮತ್ತು ಕುಮಾರಸ್ವಾಮಿಯವರ ಕೈವಾಡ ಇದೆ ಎಂದು ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ.ಸುರೇಶ್ ಆರೋಪಿಸಿದ್ದಾರೆ.

ಪ್ರಜ್ವಲ್ ರೇವಣ್ಣ ಅವರ ಪೆನ್ ಡ್ರೈವ್ ಬಹಿರಂಗಗೊಳಿಸಿರುವುದು ಮಹಾನ್ ನಾಯಕ ಡಿ.ಕೆ. ಶಿವಕುಮಾರ್ ಎಂಬ ಕುಮಾರಸ್ವಾಮಿ ಅವರ ಆರೋಪದ ಬಗ್ಗೆ ಸದಾಶಿವನಗರ ನಿವಾಸದಲ್ಲಿ ಪ್ರತಿಕ್ರಿಯಿಸಿದ್ದ ಡಿಕೆ ಸುರೇಶ್‌, ಮಾಜಿ ಸಿಎಂ ಕುಮಾರಸ್ವಾಮಿ ಅವರಿಗೆ ಶಿವಕುಮಾರ್ ಅವರನ್ನು ಸ್ಮರಿಸದಿದ್ದರೆ ತಿಂದ ಅನ್ನ ಜೀರ್ಣವಾಗುವುದಿಲ್ಲ, ನಿದ್ದೆ ಬರುವುದಿಲ್ಲ. ನಾವು ಪೆನ್ ಡ್ರೈವ್ ಬಿಡುಗಡೆ ಮಾಡುವುದಾಗಿದ್ದರೆ ಚುನಾವಣೆಗೆ ವಾರ ಅಥವಾ ಹತ್ತು ದಿನ ಮುಂಚಿತವಾಗಿಯೇ ಬಿಡುಗಡೆ ಮಾಡಬಹುದಾಗಿತ್ತಲ್ಲವೇ? ಈ ವಿಚಾರದಲ್ಲಿ ಎಲ್ಲರಿಗಿಂತ ಮುಂಚಿತವಾಗಿ ಕುಮಾರಸ್ವಾಮಿ ಹಾಗೂ ಬಿಜೆಪಿ ನಾಯಕರಿಗೆ ಗೊತ್ತಿತ್ತು. ಅವರು ಈಗ ಕಾಂಗ್ರೆಸ್ ಮೇಲೆ ಆರೋಪ ಮಾಡಿ ನುಣುಚಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಅವರು ತಮ್ಮ ಹುಳುಕು ಮುಚ್ಚಿಕೊಳ್ಳಲು ದಿನಾ ಒಂದೊಂದು ಹೇಳಿಕೆ ನೀಡುತ್ತಲೇ ಇರುತ್ತಾರೆ. ಅನ್ಯಾಯಕ್ಕೆ ಒಳಗಾಗಿರುವವರ ಬಗ್ಗೆ ನಾವು ಚಿಂತನೆ ಮಾಡಬೇಕು. ಕುಮಾರಸ್ವಾಮಿ ಅವರು ಯಾವ ವಿಚಾರದಲ್ಲಿ ಶಿವಕುಮಾರ್ ಅವರ ವಿರುದ್ಧ ಟೀಕೆ ಮಾಡದೆ ಇದ್ದಾರೆ ಹೇಳಿ? ಎಲ್ಲಿ ಏನೇ ಆದರೂ ಅದಕ್ಕೆ ಶಿವಕುಮಾರ್ ಅವರೇ ಕಾರಣ ಎನ್ನುತ್ತಾರೆ. ಶಿವಕುಮಾರ್ ಅವರ ವಿರುದ್ಧ ಆರೋಪ ಮಾಡದೆ ಇರಲು ಅವರಿಗೆ ಆಗುವುದಿಲ್ಲ ಎಂದು ಹೇಳಿದ್ದಾರೆ.

ದೇವರಾಜೇಗೌಡ ತಮ್ಮ ಉಳಿವಿಗಾಗಿ ಡಿ.ಕೆ. ಶಿವಕುಮಾರ್ ಅವರ ಹೆಸರು ಬಳಸಿಕೊಳ್ಳುತ್ತಿದ್ದಾರೆ. ಶಿವಕುಮಾರ್ ಅವರ ಬಳಿ ಪೆನ್ ಡ್ರೈವ್ ಇದ್ದಿದ್ದರೆ ಇದಕ್ಕೆ ಮುಂಚಿತವಾಗಿ ರಿಲೀಸ್ ಮಾಡಬಹುದಿತ್ತಲ್ಲವೇ? ಇದು ಬಿಡುಗಡೆ ಆಗಿರುವುದು ಹಾಸನ ಜಿಲ್ಲೆಯಲ್ಲಿ, ಹಾಸನ ಜಿಲ್ಲೆಯ ನಾಯಕರ ಕೈವಾಡ ಇದರಲ್ಲಿದೆ. ಅವರ ಮೈತ್ರಿ ನಾಯಕರು ಹಾಗೂ ಕುಮಾರಸ್ವಾಮಿ ಅವರ ಕೈವಾಡವಿದೆ. ಕುಮಾರಸ್ವಾಮಿ ಅವರಿಗೆ ಈ ಬಗ್ಗೆ ಮುಂಚಿತವಾಗಿಯೇ ಗೊತ್ತಿತ್ತು, ಇನ್ನು ಈ ವಿಡಿಯೋಗಳು ನಾಲ್ಕು ವರ್ಷಗಳ ಹಳೆಯದು ಎಂದು ರೇವಣ್ಣನವರೇ ಒಪ್ಪಿಕೊಂಡಿದ್ದಾರೆ. ಅವರ ಕುಟುಂಬದವರೇ ಈ ವಿಚಾರವಾಗಿ ಒಬ್ಬೊಬ್ಬರು ಒಂದೊಂದು ಹೇಳಿಕೆ ನೀಡಿದ್ದು, ಬೇರೆಯವರ ಮೇಲೆ ಯಾಕೆ ಆರೋಪ ಮಾಡಬೇಕು ಎಂದು ಕೇಳಿದ್ದಾರೆ.

ನನ್ನ ಬಳಿ ಪೆನ್ ಡ್ರೈವ್ ಬರುವ ಮುನ್ನ ಡಿ.ಕೆ.ಶಿವಕುಮಾರ್ ಅವರ ಬಳಿ ಈ ಪೆನ್ ಡ್ರೈವ್ ಹೋಗಿತ್ತು ಎಂಬ ದೇವರಾಜೇಗೌಡರ ಹೇಳಿಕೆ ಬಗ್ಗೆ ಕೇಳಿದಾಗ, ಈ ಬಗ್ಗೆ ನನಗೆ ಮಾಹಿತಿ ಇಲ್ಲ. ಹಾಸನ ಜಿಲ್ಲೆಯಲ್ಲಿ ಕೇವಲ ಗುಸು ಗುಸು ಇತ್ತು. ಅವರು ಕೋರ್ಟ್‌ನಲ್ಲಿ ತಡೆಯಾಜ್ಞೆ ಕೂಡ ತಂದಿದ್ದರು. ಪೆನ್ ಡ್ರೈವ್ ಹರಿದಾಡಿದ ನಂತರ ಈಗ  ಈ ವಿಚಾರ ಚರ್ಚೆಯಾಗುತ್ತಿದೆ ಎಂದು ಹೇಳಿದ್ದಾರೆ.

ಪ್ರಕರಣದ ಪಾರದರ್ಶಕ ತನಿಖೆ ಸರ್ಕಾರದ ಕೆಲಸ, ಈಗಾಗಲೇ ಎಸ್ಐಟಿ ತನಿಖೆಗೆ ಆದೇಶಿಸಲಾಗಿದೆ. ಇದರಲ್ಲಿ ನಮ್ಮ ಮಾತೇನಿದೆ. ಅಲ್ಲಿರುವ ಮಹಿಳೆಯರಿಗೆ ರಕ್ಷಣೆ ನೀಡಬೇಕು ಎನ್ನುವುದಷ್ಟೇ ನನ್ನ ಒತ್ತಾಯ ಎಂದು ತಿಳಿಸಿದ್ದಾರೆ.

ವಿಚಾರಣೆಗೆ ಹಾಜರಾಗಲು ಕಾಲಾವಕಾಶ ಕೋರಿದ ಪ್ರಜ್ವಲ್‌ ರೇವಣ್ಣ

ಲೈಂಗಿಕ ದೌರ್ಜನ್ಯದ ದೂರಿನ ಹಿನ್ನೆಲೆಯಲ್ಲಿ ವಿಶೇಷ ತನಿಖಾ ತಂಡದ ಮುಂದೆ ಹಾಜರಾಗಲು ಒಂದು ವಾರದ ಕಾಲಾವಕಾಶ ನೀಡುವಂತೆ ಹಾಸನದ NDA ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಕೋರಿದ್ದಾರೆ. ವಿಚಾರಣೆಗೆ ಹಾಜರಾಗಲು ನಾನು ಬೆಂಗಳೂರಿನಲ್ಲಿ‌ ಇಲ್ಲದ ಕಾರಣ, ಕಾಲಾವಕಾಶ ಕೋರಿ ನಾನು ನನ್ನ ವಕೀಲರ ಮೂಲಕ ಮನವಿ ಸಲ್ಲಿಸಿದ್ದೇನೆ ಎಂದು ಪ್ರಜ್ವಲ್ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ಹಾಜರಾಗಲು ಆರೋಪಿಗಳಾದ ಹೆಚ್‌.ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣಗೆ ಎಸ್ಐಟಿ ಅಧಿಕಾರಿಗಳು ಈ ಮೊದಲು ನೊಟೀಸ್‌ ನೀಡಿದ್ದರು. ನೋಟಿಸ್ ತಲುಪಿದ 24 ಗಂಟೆಯೊಳಗೆ ವಿಚಾರಣೆಗೆ ಹಾಜರಾಗಬೇಕೆಂದು ಎಸ್‌ಐಟಿ ಸೂಚಿಸಿತ್ತು.

ಇದನ್ನು ಓದಿ: ಬಿಜೆಪಿ ಭದ್ರಕೋಟೆ ಮಥುರಾದಲ್ಲಿ ಮುಸ್ಲಿಮರಿಗೆ ಮತದಾನ ನಿರಾಕರಣೆ?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಯ ಲೋಕಸಭಾ ಅಭ್ಯರ್ಥಿಗಳ ಪೈಕಿ ಶೇ. 25ರಷ್ಟು ಮಂದಿ ಇತರ ಪಕ್ಷಗಳಿಂದ ವಲಸೆ ಬಂದವರು

0
ಈ ಬಾರಿಯ ಲೋಕಸಭಾ ಚುನಾವಣೆಗಳಲ್ಲಿ ಬಿಜೆಪಿಯಿಂದ ಸ್ಪರ್ಧಿಸುತ್ತಿರುವ ಅಭ್ಯರ್ಥಿಗಳ ಪೈಕಿ ಶೇ 25ರಷ್ಟು ಮಂದಿ ಬೇರೆ ಪಕ್ಷಗಳಿಂದ ವಲಸೆ ಬಂದವರು ಎಂದು ವರದಿಗಳು ಹೇಳಿವೆ. ಬಿಜೆಪಿ ಕಣಕ್ಕಿಳಿಸಿರುವ 435 ಅಭ್ಯರ್ಥಿಗಳ ಪೈಕಿ 106 ಮಂದಿ...