Homeಮುಖಪುಟಅ.23ರಂದು ದೇಶವ್ಯಾಪಿ ಪ್ರತಿಭಟನೆಗೆ 'ಪೀಪಲ್ ಅಗೆನ್ಸ್ಟ್ ಎಸ್‌ಐಆರ್' ಕರೆ : ದೆಹಲಿಯಲ್ಲಿ ಜಂಟಿ ವೇದಿಕೆ ರಚನೆ

ಅ.23ರಂದು ದೇಶವ್ಯಾಪಿ ಪ್ರತಿಭಟನೆಗೆ ‘ಪೀಪಲ್ ಅಗೆನ್ಸ್ಟ್ ಎಸ್‌ಐಆರ್’ ಕರೆ : ದೆಹಲಿಯಲ್ಲಿ ಜಂಟಿ ವೇದಿಕೆ ರಚನೆ

- Advertisement -
- Advertisement -

ಚುನಾವಣಾ ಪ್ರಜಾಪ್ರಭುತ್ವದ ಸಮಗ್ರತೆಯನ್ನು ಮರುಸ್ಥಾಪಿಸಲು ಮತ್ತು ನಾಗರಿಕರ ಪ್ರಜಾಸತ್ತಾತ್ಮಕ ಹಕ್ಕುಗಳನ್ನು ರಕ್ಷಿಸಲು ರೈತರು, ಕಾರ್ಮಿಕರು, ಮಹಿಳೆಯರು, ಯುವಜನರು, ವಿದ್ಯಾರ್ಥಿಗಳು, ಆದಿವಾಸಿಗಳು, ದಲಿತರು ಮತ್ತು ಅಲ್ಪಸಂಖ್ಯಾತರು ಸೇರಿದಂತೆ ವಿವಿಧ ಜನಪರ ಸಂಘಟನೆಗಳ ಒಕ್ಕೂಟವಾದ ‘ಪೀಪಲ್ ಅಗೆನ್ಸ್ಟ್ ಎಸ್‌ಐಆರ್’ ಎಂಬ ಅಖಿಲ ಭಾರತ ಜಂಟಿ ವೇದಿಕೆಯನ್ನು ನವದೆಹಲಿಯ ಸುರ್ಜೀತ್ ಭವನದಲ್ಲಿ ಬುಧವಾರ (ಅಕ್ಟೋಬರ್ 14) ರಚಿಸಲಾಗಿದೆ.

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವ್ಯವಸ್ಥೆಯಲ್ಲಿ ಯಾವುದೇ ಸುಧಾರಣೆಗಳನ್ನು ಒಪ್ಪದೆ, ಅದನ್ನು ಸಂಪೂರ್ಣವಾಗಿ ರದ್ದುಗೊಳಿಸಬೇಕು ಎಂದು ಆಗ್ರಹಿಸಿರುವ ಈ ವೇದಿಕೆಯು, ತನ್ನ ಮೊದಲ ಹಂತದ ಹೋರಾಟವಾಗಿ ಅ. 23ರಂದು ದೇಶವ್ಯಾಪಿ ಪ್ರತಿಭಟನೆಗೆ ಕರೆ ನೀಡಿದೆ.

ವೇದಿಕೆಯ ಪ್ರಮುಖ ಬೇಡಿಕೆಗಳು ಮತ್ತು ನಿಲುವುಗಳು:

  • ಗ್ಯಾನೇಶ್ ಉಚ್ಚಾಟನೆಗೆ ಆಗ್ರಹ: ದೇಶದ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರನ್ನು ತಕ್ಷಣವೇ ಹುದ್ದೆಯಿಂದ ತೆಗೆದುಹಾಕಿ, ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಮತ್ತು ಭಾರತೀಯ ಚುನಾವಣಾ ಆಯೋಗದ (ಇಸಿಐ) ಕಾನೂನು ವಿನಾಯಿತಿಯನ್ನು ರದ್ದುಗೊಳಿಸಬೇಕು ಎಂಬುವುದು ವೇದಿಕೆಯ ಪ್ರಮುಖ ಬೇಡಿಕೆಯಾಗಿದೆ.
  • ಮತದಾರರ ಪಟ್ಟಿ ಮರುಸ್ಥಾಪನೆ: 2024ಕ್ಕಿಂತ ಮುಂಚಿನ ಮತದಾರರ ಪಟ್ಟಿಯನ್ನು ಮರುಸ್ಥಾಪಿಸಬೇಕು. ಸೋಶಿಯಲ್ ಆಡಿಟ್ ಮತ್ತು ಸಿಎಜಿ ಮಾರ್ಗಸೂಚಿಗಳ ಅನ್ವಯ ಮತದಾರರ ಪಟ್ಟಿಯನ್ನು ನವೀಕರಿಸಬೇಕು ಎಂದು ವೇದಿಕೆ ಆಗ್ರಹಿಸಿದೆ.
  • ಚುನಾವಣೆಗಳ ರದ್ದತಿ: ಎಸ್‌ಐಆರ್ ಮತದಾರರ ಪಟ್ಟಿ ಆಧಾರದ ಮೇಲೆ ನಡೆದ ಎಲ್ಲಾ ರಾಜ್ಯಗಳ ಚುನಾವಣೆಗಳನ್ನು ರದ್ದುಗೊಳಿಸಬೇಕು. ಮುಂಬರುವ ಉತ್ತರ ಪ್ರದೇಶ, ಪಂಜಾಬ್, ಉತ್ತರಾಖಂಡ, ಗೋವಾ, ಮಣಿಪುರ, ಗುಜರಾತ್ ಮತ್ತು ಹಿಮಾಚಲ ಪ್ರದೇಶದ ಚುನಾವಣೆಗಳನ್ನು ಎಸ್‌ಐಆರ್ ಪಟ್ಟಿ ಮೂಲಕ ನಡೆಸಬಾರದು ಎಂದು ಒತ್ತಾಯಿಸಿದೆ.
  • ಮುಕ್ತ ಆಡಿಟ್: ‘ಇಸಿಐನೆಟ್’ (ECINET) ಆ್ಯಪ್ ಅನ್ನು ಸಾರ್ವಜನಿಕ ತಪಾಸಣೆಗೆ ಮುಕ್ತಗೊಳಿಸಲು ಅದನ್ನು ಓಪನ್ ಸೋರ್ಸ್ ಮಾಡಬೇಕು. ನಾಗರಿಕರ ಪೌರತ್ವದ ಬಗ್ಗೆ ಚುನಾವಣಾ ಆಯೋಗವು ಯಾವುದೇ ಪ್ರಶ್ನೆಗಳನ್ನು ಕೇಳಬಾರದು ಎಂದು ಆಗ್ರಹಿಸಿದೆ.
  • ಕ್ಷೇತ್ರ ಮರುವಿಂಗಡಣೆ (Delimitation) ವಿರೋಧ: ಜನಸಂಖ್ಯೆಯ ಆಧಾರದ ಮೇಲೆ ಸಂಸತ್ ಮತ್ತು ವಿಧಾನಸಭಾ ಕ್ಷೇತ್ರಗಳ ಗಡಿಗಳನ್ನು ಬದಲಾಯಿಸುವ ಪ್ರಕ್ರಿಯೆಯನ್ನು ವೇದಿಕೆ ವಿರೋಧಿಸಿದೆ.
  • ಜಾತಿ ಗಣತಿ ಮತ್ತು ಜನಸಂಖ್ಯಾ ಸಮೀಕ್ಷೆ ಬೇಡ: ದೇಶದಲ್ಲಿ ಜಾತಿ ಆಧಾರಿತ ಜನಗಣತಿ (Caste Census) ಮತ್ತು ಜನಸಂಖ್ಯಾ ಸಮೀಕ್ಷೆಗಳನ್ನು (Demographic Survey) ನಡೆಸಬಾರದು ಎಂದು ಒತ್ತಾಯಿಸಿದೆ.
  • ಒಂದು ದೇಶ, ಒಂದು ಚುನಾವಣೆ’ಗೆ ಪ್ರತಿರೋಧ: ಇಡೀ ದೇಶಕ್ಕೆ ಏಕಕಾಲದಲ್ಲಿ ಚುನಾವಣೆ ನಡೆಸುವ (One-Nation-One-Election) ಪ್ರಸ್ತಾವನೆಯನ್ನು ಒಕ್ಕೂಟ ವ್ಯವಸ್ಥೆಗೆ ಮಾರಕ ಎಂದು ವೇದಿಕೆ ಬಲವಾಗಿ ವಿರೋಧಿಸಿದೆ.

    ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳ ಎಂಬುವುದರ ಡಿ-ನೋಟಿಫಿಕೇಶನ್ ಅನ್ನು ಖಂಡಿಸಿರುವ ವೇದಿಕೆಯು, ಪೊಲೀಸ್ ದೌರ್ಜನ್ಯವನ್ನು ನಿಲ್ಲಿಸುವಂತೆ ಮತ್ತು ಬಂಧಿತರಾಗಿರುವ ಸಿಜೆಪಿ ನಾಯಕರಾದ ಆಶುತೋಷ್ ರಂಕಾ ಹಾಗೂ ಸೌರವ್ ದಾಸ್ ಅವರನ್ನು ತಕ್ಷಣವೇ ಬೇಷರತ್ತಾಗಿ ಬಿಡುಗಡೆ ಮಾಡುವಂತೆ ಒತ್ತಾಯಿಸಿದೆ.

ಅಕ್ಟೋಬರ್ 23ರಂದು ದೇಶದಾದ್ಯಂತ ‘ಪ್ರತಿ ಗಲ್ಲಿಯೂ ಜಂತರ್ ಮಂತರ್, ಪ್ರತಿ ಹಳ್ಳಿಯೂ ಜಂತರ್ ಮಂತರ್, ನನ್ನ ಮನೆಯೂ ಜಂತರ್ ಮಂತರ್” (Har Galli Jantar Mantar, Har Gaon Jantar Mantar, Mera Ghar Jantar Mantar) ಎಂಬ ಘೋಷಣೆಯೊಂದಿಗೆ ಬೀದಿಗಿಳಿದು ಪ್ರತಿಭಟಿಸಲು ಸಾರ್ವಜನಿಕರಿಗೆ ಕರೆ ನೀಡಲಾಗಿದೆ.

ಎಸ್‌ಐಆರ್ ವ್ಯವಸ್ಥೆಯ ಕಾನೂನುಬಾಹಿರತೆಯನ್ನು ಪ್ರಶ್ನಿಸಿ ರಾಷ್ಟ್ರಪತಿಗಳಿಗೆ ಬಹಿರಂಗ ಪತ್ರ ಬರೆಯಲಾಗುವುದು. ಎಸ್‌ಐಆರ್ ವ್ಯವಸ್ಥೆಯು ಹೇಗೆ ಕಾನೂನುಬಾಹಿರ ಮತ್ತು ಸಂವಿಧಾನ ವಿರೋಧಿಯಾಗಿದೆ ಎಂಬುದನ್ನು ಸಾಮಾನ್ಯ ಜನರಿಗೆ ವಿವರಿಸಲು ವ್ಯಾಪಕ ಜನಸಂಪರ್ಕ ಅಭಿಯಾನ ನಡೆಸಲಾಗುವುದು ಎಂದು ವೇದಿಕೆ ತಿಳಿಸಿದೆ.

‘ನೋ ಎಸ್‌ಐಆರ್’ ಮತ್ತು ಚುನಾವಣಾ ಸಮಗ್ರತೆಯ ಕುರಿತು ದೇಶದ ಎಲ್ಲಾ ರಾಜ್ಯಗಳಲ್ಲಿ ಸರಣಿ ಸಮಾವೇಶಗಳನ್ನು ಮುಂದುವರಿಸಲಾಗುವುದು. ಈಗಾಗಲೇ ಹಲವು ರಾಜ್ಯಗಳಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ಸಾರ್ವಜನಿಕ ತಪಾಸಣೆಯನ್ನು ಮತ್ತಷ್ಟು ರಾಜ್ಯಗಳಿಗೆ ವಿಸ್ತರಿಸಲಾಗುವುದು. ಇದಕ್ಕಾಗಿ ಯುವಕರನ್ನು ಹೆಚ್ಚಿನ ಸಂಖ್ಯೆಯಲ್ಲಿ ಒಳಗೊಂಡ ಬೃಹತ್ ತಪಾಸಣಾ ವ್ಯವಸ್ಥೆಯನ್ನು ರೂಪಿಸಲಾಗುವುದು. ಸಾರ್ವಜನಿಕ ತಪಾಸಣೆಯಿಂದ ದೊರೆಯುವ ಲೋಪದೋಷಗಳ ಸಂಶೋಧನಾ ವರದಿಯನ್ನು ಎಸ್‌ಐಆರ್ ಕುರಿತಾದ ‘5-ಸದಸ್ಯರ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಾಧೀಶರ ಸ್ವತಂತ್ರ ಆಯೋಗ’ಕ್ಕೆ ಸಲ್ಲಿಸಲಾಗುವುದು ಎಂದು ಹೇಳಿದೆ.

ಈ ಹೋರಾಟವನ್ನು ಮುನ್ನಡೆಸಲು ಅಖಿಲ ಭಾರತ ಸಮನ್ವಯ ಸಮಿತಿಯನ್ನು (All India Coordination Committee) ರಚಿಸಲಾಗಿದ್ದು, ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ರಕ್ಷಿಸಲು ಎಲ್ಲಾ ರಾಜಕೀಯ ಪಕ್ಷಗಳು ಈ ಜನಪರ ಹೋರಾಟದಲ್ಲಿ ಕೈಜೋಡಿಸಬೇಕೆಂದು ವೇದಿಕೆ ಮನವಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಇಸಿ ವಿರುದ್ಧದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ನಟ ಇಮ್ರಾನ್ ಖಾನ್‌ಗೆ ಭಾರತ ತೊರೆಯುವಂತೆ ನೋಟಿಸ್: ಅಕ್ಟೋಬರ್ 28ರ ಗಡುವು

ಮುಂಬೈ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಮುಂಬೈನ ಆಗಸ್ಟ್ ಕ್ರಾಂತಿ ಮೈದಾನದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ನಟ ಇಮ್ರಾನ್ ಖಾನ್ ಅವರಿಗೆ ಅಕ್ಟೋಬರ್ 28ರೊಳಗೆ ಭಾರತ ತೊರೆಯುವಂತೆ...

2018ರ ‘ಬಿಜೆಪಿ ಐಟಿ ಸೆಲ್’ ವೀಡಿಯೊ ವಿವಾದ: ಯೂಟ್ಯೂಬರ್ ಧ್ರುವ್ ರಾಠಿಗೆ ಹೊಸ ಸಮನ್ಸ್ ಜಾರಿ ಮಾಡಿದ ದೆಹಲಿ ಕೋರ್ಟ್!

ಡಿಜಿಟಲ್ ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಗ್ರಾಸವಾಗಿದ್ದ 2018ರ ಕ್ರಿಮಿನಲ್ ಮಾನಹಾನಿ ದೂರಿಗೆ (Criminal Defamation Case) ಸಂಬಂಧಿಸಿದಂತೆ, ಪ್ರಸಿದ್ಧ ಯೂಟ್ಯೂಬರ್ ಧ್ರುವ್ ರಾಠಿ ಅವರಿಗೆ ದೆಹಲಿಯ ಸಾಕೇತ್ ನ್ಯಾಯಾಲಯವು ಹೊಸದಾಗಿ...

ದೆಹಲಿ | ಅಂಕಿತಾ ಭಂಡಾರಿ ನ್ಯಾಯಕ್ಕಾಗಿ ಪೋಷಕರಿಂದ ಆಹೋರಾತ್ರಿ ಧರಣಿ, ಕಾಂಗ್ರೆಸ್ ನಾಯಕರ ಸಾಥ್

ಅಂಕಿತಾ ಭಂಡಾರಿ ಕೊಲೆ ಪ್ರಕರಣದಲ್ಲಿ ಹೆಸರು ತಳುಕು ಹಾಕಿಕೊಂಡಿದ್ದ ಬಿಜೆಪಿ ನಾಯಕ ದುಷ್ಯಂತ್ ಕುಮಾರ್ ಗೌತಮ್ ಅವರನ್ನು ಸಿಕ್ಕಿಂ ರಾಜ್ಯಪಾಲರನ್ನಾಗಿ ನೇಮಕ ಮಾಡಿರುವುದನ್ನು ವಿರೋಧಿಸಿ, ಅಂಕಿತಾ ಪೋಷಕರೊಂದಿಗೆ ಕಾಂಗ್ರೆಸ್ ನಾಯಕರು ದೆಹಲಿಯ ಇಂಡಿಯಾ...

ಶಾಂತಿಯುತ ಪ್ರತಿಭಟನಾಕಾರರು ಮತ್ತು ವಕೀಲರ ಮೇಲಿನ ಪೊಲೀಸ್ ದೌರ್ಜನ್ಯ: ಬಾಂಬೆ ಬಾರ್ ಅಸೋಸಿಯೇಷನ್‌ನಿಂದ ತೀವ್ರ ಖಂಡನೆ

ಅಕ್ಟೋಬರ್ 10, 2026 ರಂದು ನವದೆಹಲಿ ಮತ್ತು ಮುಂಬೈ ಸೇರಿದಂತೆ ವಿವಿಧ ನಗರಗಳಲ್ಲಿ ಶಾಂತಿಯುತ ಪ್ರತಿಭಟನಾಕಾರರು ಹಾಗೂ ವಕೀಲರ ಮೇಲೆ ನಡೆದಿರುವ ಪೊಲೀಸ್ ದೌರ್ಜನ್ಯ, ದೈಹಿಕ ಹಲ್ಲೆ ಮತ್ತು ಕಾನೂನುಬಾಹಿರ ಬಂಧನಗಳನ್ನು 'ಬಾಂಬೆ...

‘ದೇಶವನ್ನು ದಾರಿ ತಪ್ಪಿಸಬೇಡಿ’: ಸಿಜೆಪಿ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಮಾಧ್ಯಮ ಸಂಚಾಲಕ ಆಶಿಶ್ ಉಷಾ ಆಕ್ರೋಶ

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದ ಕಾಕ್ರೋಚ್ ಜನತಾ...

ಎಸ್‌ಐಆರ್ ವಿರೋಧಿ ಹೋರಾಟಗಾರರ ಮೇಲೆ ಪೊಲೀಸರ ಕ್ರೌರ್ಯ: ವಿದ್ಯಾರ್ಥಿನಿಯ ಒಂದು ಕಿವಿಯ ಶ್ರವಣಶಕ್ತಿ ನಷ್ಟ, ರಾಹುಲ್ ಗಾಂಧಿ ಆರೋಪ

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮತ್ತು ಮತದಾರರ ಪಟ್ಟಿಯಲ್ಲಿನ ಅಕ್ರಮಗಳನ್ನು ವಿರೋಧಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ದೆಹಲಿ ಪೊಲೀಸರು ಯುವ ಕಾಂಗ್ರೆಸ್ ಹಾಗೂ ವಿದ್ಯಾರ್ಥಿ ಸಂಘಟನೆಗಳ ಕಾರ್ಯಕರ್ತರ ಮೇಲೆ...

SIR ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಸಂಸದ ಅಸಾದುದ್ದೀನ್ ಓವೈಸಿ

ಲೋಕಸಭಾ ಸಂಸದ ಹಾಗೂ ಎಐಎಂಐಎಂ ಪಕ್ಷದ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಅವರು, ಚುನಾವಣಾ ಆಯೋಗದ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್) ಪ್ರಕ್ರಿಯೆಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಇದೇ ರೀತಿಯ ಬಾಕಿ...

SIR ಫಾರಂ-6 ವಿವಾದ : ವಿಚಾರಣೆ ದಿನಾಂಕ ಬದಲಾಯಿಸಿದ ಸುಪ್ರೀಂ ಕೋರ್ಟ್

ದೆಹಲಿ ಎಸ್‌ಐಆರ್ ಪ್ರಕ್ರಿಯೆಯ ಭಾಗವಾಗಿ ಯಾರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆಯೋ, ಆ ಮತದಾರರ ಹೆಸರುಗಳನ್ನು ಮರುಸೇರ್ಪಡೆ ಮಾಡಲು ಫಾರಂ 6 ಅನ್ನು ಭರ್ತಿ ಮಾಡುವಂತೆ ಕೇಳಲಾಗುತ್ತಿರುವ ಹಿನ್ನೆಲೆ, ಸುಪ್ರೀಂ ಕೋರ್ಟ್ ಇಂದು...

ನಮ್ಮನ್ನು ಪರಸ್ಪರ ಅನುಮಾನಿಸುವಂತೆ ಮಾಡುವುದು ಮೋದಿ ಸರ್ಕಾರದ ಉದ್ದೇಶ: ಸಿಇಸಿ ವಿರುದ್ಧದ ಹೋರಾಟದಲ್ಲಿ ಒಗ್ಗಟ್ಟಿಗೆ ಅಭಿಜೀತ್ ದೀಪ್ಕೆ ಕರೆ

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಗಳಲ್ಲಿ ಭಾಗಿಯಾಗಿರುವವರನ್ನು ಪರಸ್ಪರ ಅನುಮಾನಿಸುವಂತೆ ಮಾಡಿ, ಹೋರಾಟವನ್ನು ದುರ್ಬಲಗೊಳಿಸುವುದು ಮೋದಿ ಸರ್ಕಾರದ ತಂತ್ರವಾಗಿದೆ ಎಂದು ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ)...

SIR ವಿವಾದ: ಸುಪ್ರೀಂ ಕೋರ್ಟ್ ಮಾಜಿ ನ್ಯಾಯಮೂರ್ತಿ ಮದನ್ ಲೋಕೂರ್ ನೇತೃತ್ವದಲ್ಲಿ ಅಕ್ಟೋಬರ್ 15ರಂದು ಸಾರ್ವಜನಿಕ ವಿಚಾರಣೆ!

ಭಾರತೀಯ ಚುನಾವಣಾ ಆಯೋಗವು ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (Special Intensive Revision - SIR) ಪ್ರಕ್ರಿಯೆಯು ತೀವ್ರ ವಿವಾದಕ್ಕೆ ಹಾಗೂ ವಿರೋಧಕ್ಕೆ ಗುರಿಯಾಗಿರುವ ಬೆನ್ನಲ್ಲೇ, ಈ ಕುರಿತು...