Homeಕರೋನಾ ತಲ್ಲಣಕೋವಿಡ್ ಬಿಕ್ಕಟ್ಟಿನಲ್ಲಿ ಜನರಿಗೆ ನೆರವು ನೀಡಲಾಗುತ್ತಿಲ್ಲ, ರಾಷ್ಟ್ರಪತಿ ಆಡಳಿತ ತನ್ನಿ: ಆಪ್ ಹಿರಿಯ ಶಾಸಕನ ಅಳಲು

ಕೋವಿಡ್ ಬಿಕ್ಕಟ್ಟಿನಲ್ಲಿ ಜನರಿಗೆ ನೆರವು ನೀಡಲಾಗುತ್ತಿಲ್ಲ, ರಾಷ್ಟ್ರಪತಿ ಆಡಳಿತ ತನ್ನಿ: ಆಪ್ ಹಿರಿಯ ಶಾಸಕನ ಅಳಲು

- Advertisement -
- Advertisement -

‘ನಾನು ಆರು ಬಾರಿ ಶಾಸಕ, ದೆಹಲಿಯ ಹಿರಿಯ ಶಾಸಕ. ಆದರೆ ಇದರ ಹೊರತಾಗಿಯೂ, ಯಾರೂ ಪ್ರತಿಕ್ರಿಯಿಸುತ್ತಿಲ್ಲ, ಜನರಿಗೆ ನೆರವು ನೀಡಲಾಗುತ್ತಿಲ್ಲ. ನೀವು ಯಾವುದೇ ನೋಡಲ್ ಅಧಿಕಾರಿಯನ್ನು ಸಂಪರ್ಕಿಸಲು ಸಾಧ್ಯವಿಲ್ಲ. ಈ ಪರಿಸ್ಥಿತಿಯಲ್ಲಿ ದೆಹಲಿಯಲ್ಲಿ ರಾಷ್ಟ್ರಪತಿ ಆಡಳಿತವನ್ನು ವಿಧಿಸುವಂತೆ ನಾನು ದೆಹಲಿ ಹೈಕೋರ್ಟ್‌ಗೆ ಮನವಿ ಮಾಡಲು ಬಯಸುತ್ತೇನೆ, ಇಲ್ಲದಿದ್ದರೆ ರಸ್ತೆಯಲ್ಲಿ ಮೃತ ದೇಹಗಳು ಇರುತ್ತವೆ” ಎಂದು ಆಮ್ ಆದ್ಮಿ ಪಕ್ಷದ ಶಾಸಕ ಶೋಯೆಬ್ ಇಕ್ಬಾಲ್ ಅಳಲು ತೋಡಿಕೊಂಡಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಮಾತಿಯಾ ಮಹಲ್‌ನ ಶಾಸಕ ಶೋಯೆಬ್ ಇಕ್ಬಾಲ್, ಕೋವಿಡ್ ಸಾಂಕ್ರಾಮಿಕದ ತೀವ್ರತೆಗೆ ನಲುಗಿರುವ ಜನತೆಗೆ ನೆರವು ನೀಡಲೂ ಆಗುತ್ತಿಲ್ಲ. ಪರಿಸ್ಥಿತಿ ಕೈ ಮೀರಿದೆ. ದೆಹಲಿಯಲ್ಲಿ ರಾಷ್ಟ್ರಪತಿ ಆಳ್ವಿಕೆ ತನ್ನಿ ಎಂದು ಅಸಹಾಯಕತೆಯಲ್ಲಿ ನ್ಯಾಯಾಲಯವನ್ನು ಕೋರಿದ್ದಾರೆ.

2020ರ ವಿಧಾನಸಭಾ ಚುನಾವಣೆಗೆ ಒಂದು ತಿಂಗಳ ಹಿಂದಿನ ತನಕ ಕಾಂಗ್ರೆಸ್ ಜೊತೆಗಿದ್ದ ಇಕ್ಬಾಲ್ ಅವರು ನಂತರ ಆಮ್ ಆದ್ಮಿ ಪಕ್ಷ ಸೇರಿ ಶಾಸಕರಾಗಿದ್ದಾರೆ. ಅವರ ವೀಡಿಯೊ ಸಂದೇಶದಲ್ಲಿ, “ದೆಹಲಿಯ ಸ್ಥಿತಿಯಿಂದ ನನಗೆ ನೋವಾಗಿದೆ.. ನಾನು ತುಂಬಾ ಚಿಂತಿತನಾಗಿದ್ದೇನೆ. ನನಗೆ ನಿದ್ರೆ ಬರುತ್ತಿಲ್ಲ. ಜನರಿಗೆ ಆಮ್ಲಜನಕ ಮತ್ತು ಔಷಧಿಗಳು ಸಿಗುತ್ತಿಲ್ಲ. ನನ್ನ ಸ್ನೇಹಿತ ಬಳಲುತ್ತಿದ್ದಾನೆ, ಆಸ್ಪತ್ರೆಯಲ್ಲಿದ್ದಾನೆ. ಆದರೆ ಆಮ್ಲಜನಕ ಅಥವಾ ವೆಂಟಿಲೇಟರ್ ಸಿಗುತ್ತಿಲ್ಲ. ರಿಮೆಡೆಸಿವಿರ್‌ಗಾಗಿ ಅವರ ಪ್ರಿಸ್ಕಿಪ್ಸನ್ ನನ್ನ ಬಳಿ ಇದೆ. ಆದರೆ ನಾನು ಅದನ್ನು ಎಲ್ಲಿಂದ ಪಡೆಯಲಿ? ಎಲ್ಲೂ ಸಿಗುತ್ತಿಲ್ಲ. ಸ್ನೇಹಿತನ ಮಕ್ಕಳು ಗಾಬರಿಯಲ್ಲಿ ಔಷಧಿಗಾಗಿ ಅಲೆಯುತ್ತಿದ್ದಾರೆ. ಇಂದು, ನಾವು ಶಾಸಕರಾಗಿದ್ದಕ್ಕೆ ನಾಚಿಕೆ ಪಡಬೇಕಾಗಿದೆ. ಏಕೆಂದರೆ ನಮಗೆ ಸಹಾಯ ಮಾಡಲು ಸಾಧ್ಯವಾಗುತ್ತಿಲ್ಲ. ಸರ್ಕಾರಕ್ಕೂ ಸಹಾಯ ಮಾಡಲು ಸಾಧ್ಯವಾಗುತ್ತಿಲ್ಲ’ ಎಂದು ತಮ್ಮ ನೋವನ್ನು ತೋಡಿಕೊಂಡಿದ್ದಾರೆ.

ಇಕ್ಬಾಲ್ 1993ರಿಂದ ದೆಹಲಿ ವಿಧಾನಸಭೆಯ ಮಾತಿಯಾ ಮಹಲ್ ಕ್ಷೇತ್ರವನ್ನು ಆರನೇ ಸಲ ಪ್ರತಿನಿಧಿಸುತ್ತಿದ್ದಾರೆ.

ಇಕ್ಬಾಲ್ ಈ ಹಿಂದೆ ಕಾಂಗ್ರೆಸ್, ಲೋಕ ಜನಶಕ್ತಿ ಪಕ್ಷ (ಜೆಎಲ್‌ಪಿ) ಮತ್ತು ಜನತಾದಳದ ಮೂರು ಅವತಾರಗಳಾದ ಜನತಾದಳ, ಜನತಾದಳ (ಜಾತ್ಯತೀತ) ಮತ್ತು ಜನತಾದಳ (ಯುನೈಟೆಡ್) ಜೊತೆಗಿದ್ದರು. ಆಪ್ 2015ರಲ್ಲಿ ಅವರ ಗೆಲುವಿಗೆ ಬ್ರೇಕ್ ಹಾಕಿತ್ತು. ಈ ಸಲ ಆಪ್‌ನಿಂದ ಶಾಸಕರಾಗಿದ್ದಾರೆ.

ಇಕ್ಬಾಲ್ ಅವರ ಈ ಹೇಳಿಕೆಯ ಬಗ್ಗೆ ಎಎಪಿ ರಾಜ್ಯ ಸಮಿತಿ ಈವರೆಗೆ ಪ್ರತಿಕ್ರಿಯಿಸಿಲ್ಲ. ಇಕ್ಬಾಲ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ದೆಹಲಿ ಬಿಜೆಪಿ ವಕ್ತಾರ ಹರೀಶ್ ಖುರಾನಾ, “ಇಕ್ಬಾಲ್ ಕೇವಲ ಎಎಪಿ ಶಾಸಕರಲ್ಲ, ದೆಹಲಿ ವಿಧಾನಸಭೆಯಲ್ಲಿ ಹೆಚ್ಚು ಅನುಭವ ಹೊಂದಿರುವವರು. ಪರಿಸ್ಥಿತಿ ಹತೋಟಿಯಲ್ಲಿಲ್ಲ ಮತ್ತು ಜನರು ತೊಂದರೆ ಅನುಭವಿಸುತ್ತಿದ್ದಾರೆ ಎಂದು ಅವರು ಹೇಳುತ್ತಿದ್ದಾರೆಂದರೆ ಅದು ಸರಿಯಾಗಿದೆ. ಹಾಗಾಗಿ, ರಾಷ್ಟ್ರಪತಿ ಆಡಳಿತವನ್ನು ಹೇರಬೇಕು, ದೆಹಲಿ ಈಗ ಕೇಂದ್ರದ ನಿಯಂತ್ರಣದಲ್ಲಿರಬೇಕು. ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಪರಿಸ್ಥಿತಿಯನ್ನು ನಿರ್ವಹಿಸಲು ಸಾಧ್ಯವಾಗದ ಕಾರಣ ರಾಷ್ಟ್ರಪತಿ ಆಡಳಿತವಿರಬೇಕು ಎಂದು ನಾವು ನಂಬುತ್ತೇವೆ’ ಎಂದಿದ್ದಾರೆ.

ದೆಹಲಿ ಕಾಂಗ್ರೆಸ್ ಉಪಾಧ್ಯಕ್ಷ ಅಭಿಷೇಕ್ ದತ್, ನಗರದಲ್ಲಿ ಕೋವಿಡ್ ಹರಡುವಿಕೆ ಮತ್ತು ಸಂಬಂಧಿತ ಸಾವುಗಳನ್ನು ಕೊನೆಗೊಳಿಸಲು ಸೇನೆಯು ದೆಹಲಿಯನ್ನು ಸ್ವಾಧೀನಪಡಿಸಿಕೊಳ್ಳಬೇಕು ಮತ್ತು ಆರೋಗ್ಯ ಮೂಲಸೌಕರ್ಯಗಳನ್ನು ನಿರ್ವಹಿಸಬೇಕು ಎಂದು ಹೇಳಿದರು. ರಾಜ್ಯದಲ್ಲಿ ಆರ್‌ಟಿ-ಪಿಸಿಆರ್ ಪರೀಕ್ಷೆಯನ್ನು ಸರ್ಕಾರ ನಿಧಾನಗೊಳಿಸಿದೆ ಮತ್ತು ಕೋವಿಡ್ ಸಾವಿನ ಅಂಕಿಅಂಶಗಳು ಸರಿಯಾಗಿ ವರದಿಯಾಗಿಲ್ಲ ಎಂದು ಅವರು ಆರೋಪಿಸಿದ್ದಾರೆ.


ಇದನ್ನೂ ಓದಿ: ದೆಹಲಿಯಾದ್ಯಂತ ಬೆಂಕಿಯೇ ಕಾಣುವಾಗ ಇಲ್ಲಿನ ಬಿಜೆಪಿ ಎಲ್ಲಿ?: ಆರ್‌ಎಸ್‌ಎಸ್ ಮುಖಂಡರೊಬ್ಬರ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...