Homeಮುಖಪುಟಕೇಂದ್ರ ಜನರಿಗಿಂತ ಸಾಮಾಜಿಕ ಜಾಲತಾಣಗಳನ್ನು ಆದ್ಯತೆಯಾಗಿ ಪರಿಗಣಿಸಿದೆ: ರಾಹುಲ್ ಗಾಂಧಿ

ಕೇಂದ್ರ ಜನರಿಗಿಂತ ಸಾಮಾಜಿಕ ಜಾಲತಾಣಗಳನ್ನು ಆದ್ಯತೆಯಾಗಿ ಪರಿಗಣಿಸಿದೆ: ರಾಹುಲ್ ಗಾಂಧಿ

- Advertisement -
- Advertisement -

ದಾಖಲೆಯ ಬೆಲೆ ಏರಿಕೆ ಮತ್ತು ಕೊರೊನಾ ಲಸಿಕೆಯ ಬಗ್ಗೆ ಜನರು ಕೇಳುತ್ತಿದ್ದರೆ, ಕೇಂದ್ರ ಸರ್ಕಾರ ಮಾತ್ರ ಸಾಮಾಜಿಕ ಜಾಲತಾಣ ಹಾಗೂ ತನ್ನ ಸುಳ್ಳು ವರ್ಚಸ್ಸನ್ನು ಆದ್ಯತೆಯಾಗಿ ಪರಿಗಣಿಸಿದೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಗುರುವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಸೋಂಕಿನಿಂದ ಸಾವು ಹೆಚ್ಚುತ್ತಿದೆ; ಕೇಂದ್ರ ಜನರ ಗಮನ ಬೇರೆಡೆ ಸೆಳೆಯುತ್ತಿದೆ: ರಾಹುಲ್ ಗಾಂಧಿ ಆಕ್ರೋಶ

ಈ ಹಿನ್ನಲೆಯಲ್ಲಿ ಹಿಂದಿಯಲ್ಲಿ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, “ಕೇಂದ್ರ ಸರ್ಕಾರವು ಸಾಮಾಜಿಕ ಜಾಲತಾಣ, ಸುಳ್ಳು ವರ್ಚಸ್ಸಿನ ಬಗ್ಗೆ ಆದ್ಯತೆಯಾಗಿ ತೆಗೆದುಕೊಂಡಿದೆ. ಆದರೆ ಸಾರ್ವಜನಿಕರ ಆದ್ಯತೆಯು ದಾಖಲೆ ಮುರಿಯುತ್ತಿರುವ ಬೆಲೆ ಏರಿಕೆ ಮತ್ತು ಕೊರೊನಾ ಲಸಿಕೆಯಾಗಿದೆ. ಇದು ಯಾವ ಅಚ್ಚೇ ದಿನ್‌?” ಎಂದು ಪ್ರಶ್ನಿಸಿದ್ದಾರೆ.

ದೇಶದಲ್ಲಿ ಕೊರೊನಾ ಎರಡನೆ ಅಲೆಯು ಗ್ರಾಮೀಣ ಭಾಗದಲ್ಲಿ ತೀವ್ರವಾಗಿ ಹರಡುತ್ತಿರುವುದರ ಬಗ್ಗೆ ತಜ್ಞರು ಆಂತಕ ವ್ಯಕ್ತಪಡಿಸುತ್ತಿದ್ದಾರೆ. ಕೊರೊನಾ ಲಸಿಕೆಯ ಪ್ರಕ್ರಿಯೆಯು ನಿಧಾನವಾಗುತ್ತಿದ್ದು, ದೆಹಲಿಯು ಇತ್ತೀಚೆಗೆ ಯುವಕರಿಗೆ ಲಸಿಕೆಯನ್ನು ನೀಡುವುದನ್ನು ನಿಲ್ಲಿಸಲಿದ್ದೇವೆ ಎಂದು ಹೇಳಿದೆ. ಆದರೆ ಕೇಂದ್ರ ಸರ್ಕಾರ ಮಾತ್ರ ಸಾಮಾಜಿಕ ಜಾಲತಾಣಗಳಾದ ವಾಟ್ಸಪ್‌, ಟ್ವಿಟರ್‌, ಫೇಸ್‌ಬುಕ್ ಮುಂತಾದ ಸಾಮಾಜಿಕ ಜಾಲತಾಣಗಳ ಹಿಂದೆ ಬಿದ್ದಿದ್ದು, ಹೊಸ ನಿಯಮಗಳನ್ನು ಹೇರಲು ಪ್ರಯತ್ನಿಸುತ್ತಿದೆ.

ಇದನ್ನೂ ಓದಿ: ವೆಂಟಿಲೇಟರ್ ಮತ್ತು ಪ್ರಧಾನಿ ಇಬ್ಬರೂ ವಿಫಲರಾಗಿದ್ದಾರೆ ಎಂದ ರಾಹುಲ್ ಗಾಂಧಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...