Homeಮುಖಪುಟಹರಿಯಾಣದ ಹಳ್ಳಿ ಹಳ್ಳಿಯಿಂದ ತೀರ್ಮಾನ: ರಾತ್ರಿಯೇ ದೆಹಲಿ ಗಡಿಗಳಿಗೆ ಹೋಗಿ ಹೋರಾಟದಲ್ಲಿ ಭಾಗಿಯಾಗಲು ನಿರ್ಧಾರ

ಹರಿಯಾಣದ ಹಳ್ಳಿ ಹಳ್ಳಿಯಿಂದ ತೀರ್ಮಾನ: ರಾತ್ರಿಯೇ ದೆಹಲಿ ಗಡಿಗಳಿಗೆ ಹೋಗಿ ಹೋರಾಟದಲ್ಲಿ ಭಾಗಿಯಾಗಲು ನಿರ್ಧಾರ

- Advertisement -
- Advertisement -

ದೆಹಲಿಯಲ್ಲಿ ಮೂರು ಕೃಷಿ ಕಾಯ್ದೆಗಳ ವಿರುದ್ಧ ನಡೆಯುತ್ತಿರುವ ರೈತ ಹೋರಾಟಕ್ಕೆ ಮತ್ತೊಂದು ಮಹತ್ವದ ತಿರುವು ದೊರಕುತ್ತಿದೆ. ಕೇಂದ್ರ ಸರ್ಕಾರ ದೆಹಲಿ ಪೊಲೀಸರನ್ನು ಬಳಸಿಕೊಂಡು ಹೋರಾಟ ಹತ್ತಿಕ್ಕಲು ಮುಂದಾಗಿದೆ ಎಂಬ ವರದಿಗಳ ಬಂದ ಹಿನ್ನೆಲೆಯಲ್ಲಿ ಹರಿಯಾಣದ ಬಹುತೇಕ ಹಳ್ಳಿಗಳಿಂದ ರೈತ ಹೋರಾಟದಲ್ಲಿ ಭಾಗಿಯಾಗಲು ಜನ ತಂಡೋಪತಂಡವಾಗಿ ಹೊರಟಿದ್ದಾರೆ. ದೆಹಲಿ ಗಡಿಗಳಿಗೆ ತೆರಳು ಬೆಂಬಲ ಸೂಚಿಸುವ ಮೂಲಕ ಹೋರಾಟ ನಿರಂತರವಾಗಿಡಲು ಮುಂದಾಗಿದ್ದಾರೆ.

ಗಣರಾಜ್ಯೋತ್ಸವದಂದು ಕೆಂಪು ಕೋಟೆಯಲ್ಲಿ ನಡೆದ ಅಹಿತಕರ ಬೆಳವಣಿಗೆಗಳನ್ನು ಬಳಸಿಕೊಂಡು ದೆಹಲಿ ಪೊಲೀಸರು ಗಾಜಿಪುರ ಗಡಿಯಲ್ಲಿ ರೈತರ ಮೇಲೆ ಲಾಠಿ ಚಾರ್ಜ್‌ ಮಾಡಿದ್ದರು. ಇಂದು ಇಪ್ಪತ್ತಕ್ಕೂ ಹೆಚ್ಚು ರೈತ ಮುಖಂಡರ ಮೇಲೆ ದೇಶದ್ರೋಹದ ಪ್ರಕರಣ ದಾಖಲಿಸಿದ್ದರು. ಅಲ್ಲದೆ ಟಿಕ್ರಿ ಮತ್ತು ಸಿಂಘು ಗಡಿಯಲ್ಲಿ ಸಾವಿರಾರು ಪೊಲೀಸರನ್ನು ನಿಯೋಜಿಸಿ ಲಾಠೀ ಚಾರ್ಜ್‌ಗೆ ಮುಂದಾಗಿದ್ದರು. ಇದನ್ನರಿತ ರೈತರು ದೆಹಲಿ ಗಡಿಗಳಿಗೆ ಹೋಗಿ ಬೆಂಬಲ ನೀಡಲು ಮುಂದಾಗಿದ್ದಾರೆ.

ಹರಿಯಾಣದ ಖಾಪ್‌ ಪಂಚಾಯಿತಿಗಳು ಸಭೆ ಸೇರಿ ತೀರ್ಮಾನ ತೆಗೆದುಕೊಂಡಿದ್ದು, ಇಂದು ರಾತ್ರಿ ಮತ್ತು ಬೆಳಗಿನ ಜಾವದಿಂದಲೇ ರೈತರು ಹೆಚ್ಚಿನ ಸಂಖ್ಯೆಯಲ್ಲಿ ದೆಹಲಿ ಗಡಿಗಳಿಗೆ ಮುಖ್ಯವಾಗಿ ಸಿಂಘು ಮತ್ತು ಟಿಕ್ರಿ ಗಡಿಗಳಿಗೆ ತೆರಳಲು ಸಿದ್ದತೆ ನಡೆಸಿದ್ದಾರೆ.

ಬಾಲಿಯಾನ್‌ ಖಾಪ್‌ ಪಂಚಾಯತ್‌ನಲ್ಲಿ ಸುತ್ತಮುತ್ತಲಿನ ಹತ್ತು ಸಾವಿರ ಟ್ರ್ಯಾಕ್ಟರ್‌ಗಳು ಗಡಿಗಳಿಗೆ ಹೋಗಬೇಕೆಂದು ತೀರ್ಮಾನಿಸಲಾಗಿದೆ. ಹಿಸಾರ್ ಗ್ರಾಮದಲ್ಲಿ ನಡೆದ ಸಭೆಯಲ್ಲಿ ಖಾಪ್ ಪಂಚಾಯತ್, ಜನವರಿ 30 ರಂದು 100 ಟ್ರಾಕ್ಟರುಗಳು ರೈತರ ಬೆಂಗಾವಲು ಕಾಯಲು ಹೋಗಲಿದ್ದು, ಅದರಲ್ಲಿ 50 ಟ್ರಾಲಿಗಳು ಜೊತೆಯಾಗಲಿವೆ. ಜಿಂದ್ ಮಹಾಪಂಚಾಯತ್‌ನಲ್ಲಿ ಪ್ರತಿ ಮನೆಯಿಂದ ಒಬ್ಬರು ರೈತ ಚಳವಳಿಗೆ ಹೋಗಬೇಕು ಎಂದು ನಿರ್ಧರಿಸಲಾಗಿದೆ. ಭಿವಾನಿಯ ಕುಂಗಡ್ ಗ್ರಾಮದ ರೈತರು ರಾತ್ರಿಯಲ್ಲಿಯೇ ತೆರಳಲು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ.


ಇದನ್ನೂ ಓದಿ: ದೆಹಲಿ ಹೋರಾಟದ ಕೆಲವು ಅಸಲೀ ಸಂಗತಿಗಳು, ಕಿಸಾನ್ ಮೋರ್ಚಾ ಏನು ಹೇಳುತ್ತಿದೆ?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...