Homeಮುಖಪುಟ‘ಕೊರೊನಾ ದುರಾಡಳಿತಕ್ಕಾಗಿ ರಾಜೀನಾಮೆ ನೀಡಿದ್ದರೆ ಗುಜರಾತಿನ ಜನ ಮೆಚ್ಚುತ್ತಿದ್ದರು’ - ಜಿಗ್ನೇಶ್ ಮೇವಾನಿ

‘ಕೊರೊನಾ ದುರಾಡಳಿತಕ್ಕಾಗಿ ರಾಜೀನಾಮೆ ನೀಡಿದ್ದರೆ ಗುಜರಾತಿನ ಜನ ಮೆಚ್ಚುತ್ತಿದ್ದರು’ – ಜಿಗ್ನೇಶ್ ಮೇವಾನಿ

- Advertisement -
- Advertisement -

ಗುಜರಾತ್‌ ಮುಖ್ಯಮಂತ್ರಿ ಬಿಜೆಪಿಯ ವಿಜಯ್ ರೂಪಾನಿ ಅವರು ಶನಿವಾರ ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜ್ಯದಲ್ಲಿ ಚುವಾವಣೆ ನಡೆಯಲು ಇನ್ನೂ ಒಂದು ವರ್ಷ ಬಾಕಿಯಿರುವಾಗ ಈ ಧಿಡೀರ್‌ ರಾಜೀನಾಮೆ ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದೆ. “ಹೊಸ ಶಕ್ತಿಯೊಂದಿಗೆ ರಾಜ್ಯವನ್ನು ಮತ್ತಷ್ಟು ಅಭಿವೃದ್ಧಿಪಡಿಸಲು, ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ” ಎಂದು ರೂಪಾನಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದರು.

ಊನಾ ಚಳವಳಿಯ ನಾಯಕ, ಗುಜರಾತ್‌ ಶಾಸಕ ಜಿಗ್ನೇಶ್ ಮೇವಾನಿ ಅವರು ಮುಖ್ಯಮಂತ್ರಿಯ ಕೋವಿಡ್ ದುರಾಡಳಿತವನ್ನು ಟೀಕಿಸಿದ್ದಾರೆ. “ಕೋವಿಡ್ ಬಿಕ್ಕಟ್ಟಿನ ಸಮಯದಲ್ಲಿ ದುರಾಡಳಿತ ನೀಡಿದ್ದಕ್ಕಾಗಿ ರೂಪಾನಿ ರಾಜೀನಾಮೆ ನೀಡಿದ್ದರೆ ಗುಜರಾತಿನ ಜನರು ಮೆಚ್ಚುತ್ತಿದ್ದರು” ಎಂದು ಜಿಗ್ನೇಶ್‌‌ ಹೇಳಿದ್ದಾರೆ.

ಇದನ್ನೂ ಓದಿ: ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ರಾಜೀನಾಮೆ

ಟ್ವಿಟರ್‌ನಲ್ಲಿ ಬರೆದಿರುವ ಅವರು,“ಗುಜರಾತ್ ಸಿಎಂ ವಿಜಯ್ ರೂಪಾನಿ ರಾಜೀನಾಮೆ. ಕೋವಿಡ್ ಬಿಕ್ಕಟ್ಟಿನ ನಿರ್ವಹಣೆಗಾಗಿ ರೂಪಾನಿ ರಾಜೀನಾಮೆ ನೀಡಿದ್ದರೆ ಗುಜರಾತಿನ ಜನರು ಮೆಚ್ಚುತ್ತಿದ್ದರು. 2022 ವಿಧಾನಸಭಾ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಚುನಾವಣಾ ಲೆಕ್ಕಾಚಾರಕ್ಕಾಗಿ ಈ ರಾಜೀನಾಮೆ ನೀಡಲಾಗಿದೆ” ಎಂದು ಅವರು ಹೇಳಿದ್ದಾರೆ.

ಬಿಜೆಪಿ ಕೇಂದ್ರ ನಾಯಕತ್ವವು ಮುಖ್ಯಮಂತ್ರಿಯ ಕಾರ್ಯವೈಖರಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ನಂತರ ರೂಪಾನಿ ರಾಜೀನಾಮೆ ನೀಡಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ.

ಬಿಜೆಪಿಯು ರಾಜ್ಯದ ನಾಯಕತ್ವವನ್ನು ಬದಲಾಯಿಸುತ್ತಿರುವುದು ಇದುವೆ ಮೊದಲೇನಲ್ಲ. ಇತ್ತೀಚೆಗೆ ಉತ್ತರಾಖಂಡ ಮತ್ತು ಕರ್ನಾಟಕದಲ್ಲಿ ಮುಖ್ಯಮಂತ್ರಿಯನ್ನು ಬಿಜೆಪಿ ಬದಲಿಸಿತ್ತು.

ರಾಜ್ಯದ ಮುಖ್ಯಮಂತ್ರಿಯನ್ನು ಬದಲಾಯಿಸಿದ್ದಕ್ಕಾಗಿ ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷ ಇನ್ನೂ ಪ್ರತಿಕ್ರಿಯಿಸಿಲ್ಲ.

ಇದನ್ನೂ ಓದಿ: ‘ಜನರು ಉಗಿಯುವುದೊಂದೆ ಬಾಕಿ’ – ರಾಜೀನಾಮೆ ಪತ್ರದಲ್ಲಿ ಬಿಜೆಪಿ ಅಧ್ಯಕ್ಷ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...