HomeಮುಖಪುಟED, CBI ರಾಜಕೀಯವನ್ನು ರಾಜಸ್ಥಾನದ ಜನರು ತಿರಸ್ಕರಿಸುತ್ತಾರೆ: ಜೈರಾಮ್ ರಮೇಶ್

ED, CBI ರಾಜಕೀಯವನ್ನು ರಾಜಸ್ಥಾನದ ಜನರು ತಿರಸ್ಕರಿಸುತ್ತಾರೆ: ಜೈರಾಮ್ ರಮೇಶ್

- Advertisement -
- Advertisement -

ಕಳೆದ ಐದು ವರ್ಷಗಳಲ್ಲಿ ರಾಜಸ್ಥಾನದಲ್ಲಿ ತನ್ನ ಸರ್ಕಾರ ಮಾಡಿದ ಕೆಲಸಗಳ ಆಧಾರದ ಮೇಲೆ ಪಕ್ಷವು ಜನಾದೇಶವನ್ನು ಬಯಸುತ್ತಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಶನಿವಾರ ಹೇಳಿದ್ದಾರೆ.

ಬಿಜೆಪಿಯ ವಿಷಯಗಳೆಂದರೆ ಧ್ರುವೀಕರಣ, ಇಡಿ ಮತ್ತು ಸಿಬಿಐ ಮಾತ್ರ.. ಏಕೆಂದರೆ ಬಿಜೆಪಿಗೆ ಇದಕ್ಕಿಂತ ಬೇರೆ ಯಾವುದೇ ತಂತ್ರವಿಲ್ಲ. ಪ್ರಧಾನಿ ಭಯದಿಂದ ರಾಜಸ್ಥಾನ ಸರ್ಕಾರದ ವಿರುದ್ಧ ಆರೋಪಗಳನ್ನು ಮಾಡುತ್ತಿದ್ದಾರೆ” ಎಂದು ವಾಗ್ದಾಳಿ ನಡೆಸಿದರು.

ಪ್ರಧಾನಿ ಮೋದಿ ಅವರ ಆರೋಪಗಳು ಸಂಪೂರ್ಣವಾಗಿ ಆಧಾರರಹಿತ ಎಂದು ರಮೇಶ್ ಬಣ್ಣಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಉದಯಪುರದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಕಾಂಗ್ರೆಸ್ ಸರ್ಕಾರವು ಭಯೋತ್ಪಾದಕರ ಬಗ್ಗೆ ಸಹಾನುಭೂತಿ ಹೊಂದಿದೆ ಎಂದು ಆರೋಪಿಸಿದ್ದರು.

”ಕಳೆದ ಐದು ವರ್ಷಗಳಲ್ಲಿ ರಾಜಸ್ಥಾನವು ಮಾದರಿ ರಾಜ್ಯವಾಗಿದೆ ಹಾಗಾಗಿ ಇದು ಪ್ರಧಾನಿಗೆ ಭಯ ಉಂಟುಮಾಡಿದೆ ಮತ್ತು ತೊಂದರೆಯಾಗಿದೆ. ಪ್ರಧಾನಿಗೆ ಜನರ ಮುಂದೆ ಹೋಗಲು ಬೇರೆ ಯಾವುದೇ ವಿಚಾರಗಳು ಇಲ್ಲವಾದ್ದರಿಂದ, ಇಡಿ ಮತ್ತು ಸಿಬಿಐ ಕಳುಹಿಸಲಾಗಿದೆ. ಮತ್ತೆ ಮತ್ತೆ ಪ್ರಧಾನಿ ಮತ್ತು ಅವರ ಸಹಚರರು ಧ್ರುವೀಕರಣದ ಭಾಷೆ ಮಾತನಾಡುತ್ತಾರೆ” ರಮೇಶ್ ಜೈಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

”ಬಿಜೆಪಿಯವರು ಕಾಂಗ್ರೆಸ್ ಸರ್ಕಾರದ ಯೋಜನೆಗಳ ಬಗ್ಗೆ ಮಾತನಾಡಲು ಸಾಧ್ಯವಿಲ್ಲ” ಎಂದು ಅವರು ಹೇಳಿದರು.

”ಬಿಜೆಪಿಯವರು ಹೆದರುತ್ತಿದ್ದಾರೆ, ನಮ್ಮ ಸರ್ಕಾರದಿಂದ ಯಾವುದೇ ಸಮಸ್ಯೆ ಇಲ್ಲ. ಅದಕ್ಕಾಗಿಯೇ ಅವರು ಮಹಿಳಾ ದೌರ್ಜನ್ಯ ಪ್ರಕರಣಗಳಲ್ಲಿ ಕಾಂಗ್ರೆಸ್ ತುಷ್ಟೀಕರಣ ಮತ್ತು ನಿಷ್ಕ್ರಿಯತೆ ಆರೋಪ ಮಾಡುತ್ತಿದ್ದಾರೆ. ಇದು ಆಧಾರರಹಿತವಾಗಿದೆ, ಇದು ತಪ್ಪು ಮಾತ್ರವಲ್ಲ, ಇದು ಸುಳ್ಳು” ಎಂದು ಅವರು ಹೇಳಿದರು.

”ಈಗಾಗಲೇ ಕರ್ನಾಟಕದ ಜನರು ಧ್ರುವೀಕರಣವನ್ನು ತಿರಸ್ಕರಿಸಿದ್ದಾರೆ ಮತ್ತು ರಾಜಸ್ಥಾನದ ಜನರು ಹಣದುಬ್ಬರ, ನಿರುದ್ಯೋಗ ಮತ್ತು ಸೇಡಿನ ರಾಜಕೀಯದಿಂದ ಬೇಸತ್ತಿರುವ ಕಾರಣ ಮುಂಬರುವ ಚುನಾವಣೆಯಲ್ಲಿ ಇಡಿ ಮತ್ತು ಸಿಬಿಐ ಮತ್ತು ಧ್ರುವೀಕರಣದ ರಾಜಕೀಯವನ್ನು ತಿರಸ್ಕರಿಸುತ್ತಾರೆ” ಎಂದು ಅವರು ಹೇಳಿದರು.

”ಬಂದರುಗಳು, ವಿಮಾನ ನಿಲ್ದಾಣಗಳು ಮತ್ತು ಕೈಗಾರಿಕೆಗಳ ಖಾಸಗೀಕರಣವು ದೇಶದ ಹಿತಾಸಕ್ತಿಯಿಂದ ಕೂಡಿಲ್ಲ, ಇದು ಉದ್ಯೋಗ ಕುಸಿತಕ್ಕೆ ಕಾರಣವಾಗಿದೆ” ಎಂದು ಅವರು ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದರು.

”ಕೇಂದ್ರದ ನೀತಿಗಳಿಂದ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು ಬಾಧಿತವಾಗಿವೆ” ಎಂದರು.

”ರಾಜ್ಯ ಸರ್ಕಾರದ ವಿರುದ್ಧ ಯಾವುದೇ ಆಡಳಿತ ವಿರೋಧಿ ಮತ್ತು ಅಸಮಾಧಾನ ಇಲ್ಲದ ಕಾರಣ ಕಾಂಗ್ರೆಸ್ ಮತ್ತೊಮ್ಮೆ ಜನಾದೇಶ ಪಡೆಯಲಿದೆ” ಎಂದು ರಮೇಶ್ ವಿಶ್ವಾಸ ವ್ಯಕ್ತಪಡಿಸಿದರು.

ನವೆಂಬರ್ 25 ರಂದು ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಡಿಸೆಂಬರ್ 3 ರಂದು ಮತ ಎಣಿಕೆ ನಡೆಯಲಿದೆ.

ಇದನ್ನೂ ಓದಿ: ಉದಯಪುರ ಟೈಲರ್ ಹಂತಕರು ಬಿಜೆಪಿಯೊಂದಿಗೆ ನಂಟು ಹೊಂದಿದ್ದಾರೆ: ಗೆಹ್ಲೋಟ್ ಆರೋಪ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ರಾಹುಲ್ ಗಾಂಧಿಯನ್ನು ರಾಯ್ ಬರೇಲಿ ಜನರಿಗೆ ಕೊಡುತ್ತಿದ್ದೇನೆ; ಅವನು ನಿಮ್ಮನ್ನು ನಿರಾಸೆಗೊಳಿಸುವುದಿಲ್ಲ: ಸೋನಿಯಾ ಗಾಂಧಿ

0
'ನನ್ನ ಮಗನನ್ನು ರಾಯ್ ಬರೇಲಿಯ ಜನರಿಗೆ ನೀಡುತ್ತಿದ್ದೇನೆ; ರಾಹುಲ್ ಗಾಂಧಿ ನಿಮ್ಮನ್ನು ನಿರಾಶೆಗೊಳಿಸುವುದಿಲ್ಲ' ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಶುಕ್ರವಾರ ಹೇಳಿದ್ದಾರೆ. 20 ವರ್ಷಗಳ ಕಾಲ ಸಂಸದರಾಗಿ ಸೇವೆ ಸಲ್ಲಿಸಲು ಅವಕಾಶ ನೀಡಿದ...