Homeಕರ್ನಾಟಕತುಮಕೂರು: ಗ್ಯಾಸ್ ಸೋರಿಕೆ ಭಯದಿಂದ ಗ್ರಾಮ ತೊರೆಯುತ್ತಿರುವ ಜನರು

ತುಮಕೂರು: ಗ್ಯಾಸ್ ಸೋರಿಕೆ ಭಯದಿಂದ ಗ್ರಾಮ ತೊರೆಯುತ್ತಿರುವ ಜನರು

- Advertisement -
- Advertisement -

ಅಡುಗೆ ಅನಿಲ ತುಂಬಿಕೊಂಡು ಹೋಗುತ್ತಿದ್ದ ಗ್ಯಾಸ್ ಟ್ಯಾಂಕರ್ ಪಲ್ಟಿಯಾದ ಪರಿಣಾಮ ಸುಮಾರು 40 ಸಾವಿರ ಲೀಟರ್ ಗ್ಯಾಸ್ ಸೋರಿಕೆಯಾಗಿದೆ.

ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ಮುರರಾಯನಹಳ್ಳಿಯಲ್ಲಿ ಈ ಘಟನೆ ಸಂಭವಿಸಿದೆ. ಮಾಹಿತಿ ಗೊತ್ತಿಲ್ಲದ ಜನರು ತೀವ್ರ ಆತಂಕಗೊಂಡಿದ್ದು ಸ್ಥಳಕ್ಕೆ ಅಗ್ನಿಶಾಮಕದಳದ ಸಿಬ್ಬಂದಿ ತೆರಳಿ ಜನರಲ್ಲಿನ ಆತಂಕ ನಿವಾರಣೆಗೆ ಯತ್ನಿಸಿದರು. ಆದರೂ ಜನರು ಸ್ವಯಂಪ್ರೇರಿತರಾಗಿ ಗ್ರಾಮ ತೊರೆಯುತ್ತಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ದೊಮ್ಮತ್ತಮರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಮುರರಾಯನಹಳ್ಳಿ ಗ್ರಾಮದಲ್ಲಿ ಇಂದು ಮಧ್ಯಾಹ್ನ ಗ್ಯಾಸ್ ಟ್ಯಾಂಕರ್ ಪಲ್ಟಿ ಹೊಡೆಯಿತು. ಪರಿಣಾಮ ಗ್ಯಾಸ್ ಟ್ಯಾಂಕರ್ ಮುಚ್ಚಳ ಬಿಚ್ಚಿಕೊಂಡು ನೀರಿನಂತೆ ಹರಿಯತೊಡಗಿದ್ದು, ಸುಮಾರು ನಾಲ್ಕು ಗಂಟೆ ಕಾಲ ನೀರು ಧುಮಿಕ್ಕುವಂತೆ ಹರಿಯಿದೆ. ಗ್ಯಾಸ್ ಸುತ್ತಲಿನ ಪರಿಸರದಲ್ಲಿ ಹರಡಿದ್ದರಿಂದ ಜನರ ಕಣ್ಣು ಉರಿಯತೊಡಗಿದ್ದು  ಇದರಿಂದ ಮತ್ತಷ್ಟು ಭೀತಿಗೊಂಡಿದ್ದಾರೆ.

ಸ್ಥಳೀಯ ನಿವಾಸಿ ಈ. ಶಿವಣ್ಣ ಮಾತನಾಡಿ, ಅಗ್ನಿಶಾಮಕದಳದ ಸಿಬ್ಬಂದಿ ಬಂದಿದೆ. ಗ್ಯಾಸ್ ವ್ಯಾಪಿಸದಂತೆ ತಡೆಯುವ ಪ್ರಯತ್ನದಲ್ಲಿ ತೊಡಗಿದೆ. ಆದರೂ ಜನರು ಹೆದರಿಕೊಂಡಿದ್ದು ಒಬ್ಬೊಬ್ಬರೇ ಗ್ರಾಮ ತೊರೆಯುತ್ತಿದ್ದಾರೆ ಅಗ್ನಿಶಾಮಕ ದಳದ ಸಿಬ್ಬಂದಿ ಮನವರಿಕೆ ಮಾಡಿದರೂ ಒಂದು ವಾರದ ಮಟ್ಟಿಗೆ ಬೇರೆ ಕಡೆ ವಾಸ ಮಾಡಲು ತರೆಳುತ್ತಿದ್ದಾರೆ. ಮುಂದೆ ಏನಾದರೂ ಅಪಾಯ ಸಂಭವಿಸಬಹುದು ಎಂಬ ಆತಂಕ ಗ್ರಾಮಸ್ಥರದ್ದು ಎಂದು ನಾನುಗೌರಿ.ಕಾಮ್ ಗೆ ತಿಳಿಸಿದರು.

ಅಪಾರ ಪ್ರಮಾಣದ ಗ್ಯಾಸ್ ಸೋರಿಕೆಯಾಗಿರುವುದರಿಂದ ಪರಿಸರಕ್ಕೆ ಏನಾದರೂ ಅಪಾಯವಾಗಬಹುದೇ? ಜನರಿಗೆ ತೊಂದರೆಯಾಗಬಹುದೇ ಎಂಬುದನ್ನು ಅಧ್ಯಯನ ಮಾಡಲು ಬೆಂಗಳೂರಿನಿಂದ ತಜ್ಞರ ತಂಡವೊಂದು ಬರುತ್ತಿದೆ ಎಂದು ವರದಿಯಾಗಿದೆ. ನಂತರ ಸಂಫೂರ್ಣ ಮಾಹಿತಿ ಕಲೆಹಾಕಿ ಅಗತ್ಯ ಮಾಹಿತಿ ನೀಡಲಿದೆ ಎಂದು ತಿಳಿದುಬಂದಿದೆ. ವೆಲ್ಟಿಂಗ್ ಮಾಡುವ ಗ್ಯಾಸ್ ಇರಬಹುದು ಎಂದು ಅಗ್ನಿಶಾಮಕ ದಳ ಹೇಳುತ್ತಿದ್ದರೆ, ತಹಶೀಲ್ದಾರ್ ವರದರಾಜು ‘ಅದು ಎಚ್.ಪಿ. ಗ್ಯಾಸ್ ಸ್ಥಳಕ್ಕೆ ಅಗ್ನಿಶಾಮಕ ದಳ ತೆರಳಿದ್ದು ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಸ್ಪಷ್ಟೀಕರಣ ನೀಡಿದರು.

ಗ್ಯಾಸ್ ಸೋರಿಕೆಯು ಸುತ್ತಲ ಮೂರ್ನಾಲ್ಕು ಗ್ರಾಮಗಳಿಗೆ ಪರಿಣಾಮ ಬೀರಿದೆ. ಕೆಟ್ಟ ವಾಸನೆ ಬರುತ್ತಿದ್ದು, ಇದರಿಂದಾಗಿ ಗ್ಯಾಸ್ ಸೋರಿಕೆ ಅಪಾಯದಿಂದ ಗ್ರಾಮದ ಒಬ್ಬೊಬ್ಬರೇ ತೊರೆದು ಬೇರೆ ಕಡೆ ಹೋಗುತ್ತಿದ್ದಾರೆ. ಕೂಡಲೇ ಜಿಲ್ಲಾಡಳಿತ ಮಧ್ಯಪ್ರವೇಶ ಮಾಡಿ ಜನರಿಗೆ ಅಭಯ ನೀಡಬೇಕು ಹಾಗೂ ಜನರಲ್ಲಿರುವ ಆತಂಕ ದೂರಮಾಡುವ ಕೆಲಸ ಮಾಡಬೇಕಾಗಿದೆ ಜನರು ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಮಾಧ್ಯಮಗಳ ಸುಳ್ಳು : ರೇಬಿಸ್‍ನಂತಹ ಭಯಾನಕ ರೋಗ ಲಕ್ಷಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...