Homeಮುಖಪುಟದೇವಾಲಯದ ಹೆಸರಿನ ರಾಜಕೀಯ ಹೇಗೆ ಸರಿಪಡಿಸಬಹುದು ಎಂದು ಅಯೋಧ್ಯೆ ಜನ ತೋರಿಸಿಕೊಟ್ಟಿದ್ದಾರೆ: ಶರದ್ ಪವಾರ್

ದೇವಾಲಯದ ಹೆಸರಿನ ರಾಜಕೀಯ ಹೇಗೆ ಸರಿಪಡಿಸಬಹುದು ಎಂದು ಅಯೋಧ್ಯೆ ಜನ ತೋರಿಸಿಕೊಟ್ಟಿದ್ದಾರೆ: ಶರದ್ ಪವಾರ್

- Advertisement -
- Advertisement -

ಬಿಜೆಪಿಯ ಅಭ್ಯರ್ಥಿಯನ್ನು ಸೋಲಿಸುವ ಮೂಲಕ ದೇವಾಲಯದ ರಾಜಕೀಯವನ್ನು  ಹೇಗೆ ಸರಿಪಡಿಸಬಹುದು ಎಂದು ಅಯೋಧ್ಯೆಯ ಜನರು ಸಂದೇಶವನ್ನು ಕಳುಹಿಸಿದ್ದಾರೆ ಎಂದು ಎನ್‌ಸಿಪಿ(ಎಸ್‌ಪಿ) ನಾಯಕ ಶರದ್ ಪವಾರ್ ಹೇಳಿದ್ದಾರೆ.

ಬಾರಾಮತಿಯಲ್ಲಿ ನಡೆದ ವರ್ತಕರ ಸಮಾವೇಶದಲ್ಲಿ ಮಾತನಾಡಿದ ಪವಾರ್, ಐದು ವರ್ಷಗಳ ಹಿಂದೆ ಬಿಜೆಪಿ 300ಕ್ಕೂ ಹೆಚ್ಚು ಸ್ಥಾನಗಳನ್ನು ಗಳಿಸಿದ್ದರೆ, ಈ ಬಾರಿ ಅವರ ಸಂಖ್ಯೆ 240ಕ್ಕೆ ಇಳಿದಿದೆ, ಲೋಕಸಭೆಯಲ್ಲಿ ಬಿಜೆಪಿಗೆ ಬಹುಮತದ ಕೊರತೆಯಿದೆ. ಚುನಾವಣಾ ಫಲಿತಾಂಶವು ಬಿಜೆಪಿಗೆ 60 ಸ್ಥಾನಗಳು ಕಡಿಮೆಯಾಗಿರುವುದನ್ನು ಸೂಚಿಸುತ್ತದೆ. ಬಿಜೆಪಿಗೆ ಉತ್ತರಪ್ರದೇಶದ ಜನರು ದೊಡ್ಡ ಹೊಡೆತವನ್ನು ನೀಡಿದ್ದಾರೆ. ಅಲ್ಲಿನ ಜನರು ವಿಭಿನ್ನ ರೀತಿಯ ತೀರ್ಪು ನೀಡಿದ್ದಾರೆ ಎಂದು ಹೇಳಿದ್ದಾರೆ ಎಂದು ಹೇಳಿದ್ದಾರೆ.

ರಾಮಮಂದಿರ ಚುನಾವಣಾ ಅಜೆಂಡಾ ಆಗಿರುತ್ತದೆ ಮತ್ತು ಆಡಳಿತ ಪಕ್ಷವು ಮತಗಳನ್ನು ಪಡೆಯುತ್ತದೆ ಎಂದು ಅವರು ನಿರೀಕ್ಷಿಸಿದ್ದರು, ಆದರೆ ನಮ್ಮ ದೇಶದ ಜನರು ಸಾಕಷ್ಟು ಬುದ್ಧಿವಂತರಾಗಿದ್ದಾರೆ. ದೇವಸ್ಥಾನದ ಹೆಸರಿನಲ್ಲಿ ಮತ ಕೇಳಲಾಗುತ್ತಿದೆ ಎಂದು ಅವರು ಅರಿತುಕೊಂಡಾಗ ಅವರು ವಿಭಿನ್ನ ನಿಲುವು ತೆಗೆದುಕೊಳ್ಳಲು ನಿರ್ಧರಿಸಿದರು ಮತ್ತು ಬಿಜೆಪಿ ಸೋಲನ್ನು ಎದುರಿಸಬೇಕಾಯಿತು ಎಂದು ಶರದ್‌ ಪವಾರ್‌ ಹೇಳಿದ್ದಾರೆ.

ಅಯೋಧ್ಯೆ ದೇವಾಲಯವಿರುವ ಫೈಜಾಬಾದ್ ಸಂಸದೀಯ ಕ್ಷೇತ್ರದಲ್ಲಿ ಸಮಾಜವಾದಿ ಪಕ್ಷದ ಅಭ್ಯರ್ಥಿ ಅವಧೇಶ್ ಪ್ರಸಾದ್ ಹಾಲಿ ಬಿಜೆಪಿ ಸಂಸದ ಲಲ್ಲು ಸಿಂಗ್ ಅವರನ್ನು 54,567 ಮತಗಳ ಅಂತರದಿಂದ ಸೋಲಿಸಿದ್ದರು. ದೇವಸ್ಥಾನವನ್ನು ಚುನಾವಣಾ ಅಜೆಂಡಾವಾಗಿ ಬಳಸಿಕೊಳ್ಳುವ ಬಗ್ಗೆ ವಿರೋಧ ಪಕ್ಷಗಳು ಆತಂಕ ವ್ಯಕ್ತಪಡಿಸುತ್ತಿರುವಾಗ ಜನರು ವಿಭಿನ್ನ ನಿಲುವು ತಳೆದಿದ್ದಾರೆ. ಅಯೋಧ್ಯೆಯ ಜನರು ದೇವಸ್ಥಾನದ ಹೆಸರಿನಲ್ಲಿ ಮಾಡುತ್ತಿರುವ ರಾಜಕೀಯವನ್ನು ಹೇಗೆ ಸರಿಪಡಿಸಬಹುದು ಎಂಬುದನ್ನು ತೋರಿಸಿದ್ದಾರೆ ಎಂದು ಶರದ್‌ ಪವಾರ್‌ ಹೇಳಿದ್ದಾರೆ.

ಭಾರತದಲ್ಲಿ ಪ್ರಜಾಪ್ರಭುತ್ವವು ಅಖಂಡವಾಗಿದೆ. ಅದು ರಾಜಕೀಯದಿಂದಲ್ಲ, ಜನರ ಸಾಮೂಹಿಕ ಆತ್ಮಸಾಕ್ಷಿಯಿಂದ, ಕಳೆದ 10 ವರ್ಷಗಳಿಂದ, ಅಧಿಕಾರದಲ್ಲಿರುವವರು ತೀವ್ರ ನಿಲುವುಗಳನ್ನು ತೆಗೆದುಕೊಂಡಿದ್ದಾರೆ, ಆದರೆ ಜನರು ಅವರನ್ನು ಮತ್ತೆ ಹಿಂದಕ್ಕೆ ಕಳುಹಿಸಿದ್ದಾರೆ. ನರೇಂದ್ರ ಮೋದಿ ಅವರು ಸರ್ಕಾರವನ್ನು ರಚಿಸಿದ್ದರೂ, ಸ್ವಂತವಾಗಿ ಅಲ್ಲ, ಚಂದ್ರಬಾಬು ನಾಯ್ಡು (ಟಿಡಿಪಿ) ಮತ್ತು ನಿತೀಶ್ ಕುಮಾರ್ (ಜೆಡಿಯು) ಅವರ ಸಹಕಾರದಿಂದ ಎಂದು ಹೇಳಿದ್ದಾರೆ.

ಸತತ ಮೂರನೇ ಅವಧಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ಮೋದಿಗೆ ದೇಶವನ್ನು ಮುನ್ನಡೆಸುವ ಜನಾದೇಶವಿದೆಯೇ ಎಂದು ಶರದ್‌ ಪವಾರ್‌ ಪ್ರಶ್ನಿಸಿದ್ದಾರೆ.

ಇದನ್ನು ಓದಿ: ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಚಂದ್ರಬಾಬು ನಾಯ್ಡು ಪ್ರಮಾಣವಚನ ಸ್ವೀಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...