Homeಕರ್ನಾಟಕಹರ್ಯಾಣದ ಜನತೆ ಬದಲಾವಣೆ ಬಯಸಿದ್ದಾರೆ: ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ

ಹರ್ಯಾಣದ ಜನತೆ ಬದಲಾವಣೆ ಬಯಸಿದ್ದಾರೆ: ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ

- Advertisement -
- Advertisement -

ಹರ್ಯಾಣ ವಿಧಾನಸಭೆ ಚುನಾವಣೆ ಸಾಕಷ್ಟು ಕುತೂಹಲ ಕೆರಳಿಸಿತ್ತು. ಆ ಎಲ್ಲ ಕುತೂಹಲಕ್ಕೆ ಫಲಿತಾಂಶ ಉತ್ತರದಾಯಿಯಾಗಿದೆ. ಹರ್ಯಾಣದಲ್ಲಿ ಗೆಲ್ಲುವ ಹಮ್ಮಿನಲ್ಲಿದ್ದ ಬಿಜೆಪಿ ಮಕಾಡೆ ಮಲಗಿದೆ. ಇತ್ತ ಕಾಂಗ್ರೆಸ್‌, ಜೆಜೆಪಿ ಪಕ್ಷಗಳಿಗೂ ಬಹುಮತ ಸಿಕ್ಕಿಲ್ಲ. ಒಟ್ಟು ೯೦ ವಿಧಾನಸಭಾ ಸ್ಥಾನ ಹೊಂದಿರುವ ಹರ್ಯಾಣದಲ್ಲಿ ಮತದಾರರು ಯಾರಿಗೂ ಸ್ಪಷ್ಟ ಬಹುಮತ ನೀಡಿಲ್ಲ. ಯಾವುದೇ ಪಕ್ಷ ಅಧಿಕಾರಕ್ಕೆ ಬರಲು ೪೬ ಸ್ಥಾನಗಳು ಬೇಕು.

ಕಾಂಗ್ರೆಸ್‌ ೩೦ ಸ್ಥಾನ, ಬಿಜೆಪಿ ೪೦ ಸ್ಥಾನ, ಜೆಜೆಪಿ ೧೦, ಇತರರು ೧೦ ಸ್ಥಾನ ಗೆದ್ದಿದ್ದಾರೆ. ಹರ್ಯಾಣ ಫಲಿತಾಂಶವನ್ನು ಮಾಜಿ ಸಿಎಂ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸ್ವಾಗತಿಸಿದ್ದಾರೆ. ’ ಹರಿಯಾಣದ ಜನ ಬದಲಾವಣೆ ಬಯಸಿದ್ದಾರೆ ಎಂಬುದು ಚುನಾವಣಾ ಫಲಿತಾಂಶದಿಂದ ಸ್ಪಷ್ಟವಾಗಿದೆ. ಹರಿಯಾಣದಲ್ಲಿ ಯಾವೊಂದು ಪಕ್ಷವೂ ಸ್ಪಷ್ಟ ಬಹುಮತ ಗಳಿಸದ ಕಾರಣ ಕಾಂಗ್ರೆಸ್ ಪಕ್ಷವು ಇತರ ಪಕ್ಷಗಳೊಂದಿಗೆ ಸೇರಿ ಸರ್ಕಾರ ರಚಿಸುವ ಸಾಧ್ಯತೆಗಳು ಹೆಚ್ಚಿದೆ’ ಎಂದು ಫೇಸ್‌ಬುಕ್‌ನಲ್ಲಿ ವಿಷಯ ಹಂಚಿಕೊಂಡಿದ್ದಾರೆ.

ಎರಡೂ ರಾಜ್ಯಗಳಲ್ಲಿ ಅಧಿಕಾರದಲ್ಲಿದ್ದ ಮುಖ್ಯಮಂತ್ರಿಗಳಾಗಲಿ, ಪ್ರಧಾನಿ ನರೇಂದ್ರ ಮೋದಿಯವರಾಗಲಿ ತಮ್ಮ ಸರ್ಕಾರಗಳ ಸಾಧನೆ ಬಗ್ಗೆ ಮಾತಾಡಲೇ ಇಲ್ಲ. ಭಾವನಾತ್ಮಕ ವಿಚಾರಗಳಾದ ಕಾಶ್ಮೀರ ವಿವಾದ ಮತ್ತು ಪಾಕಿಸ್ತಾನವನ್ನೇ ಮುಂದಿಟ್ಟುಕೊಂಡು ಚುನಾವಣೆ ಎದುರಿಸಿದರೂ ಸಹ ಜನ ಅವರನ್ನು ತಿರಸ್ಕರಿಸಿದ್ದಾರೆ. ಹರಿಯಾಣ ಮತ್ತು ಮಹಾರಾಷ್ಟ್ರಗಳೆರಡೂ ರಾಜ್ಯಗಳಲ್ಲಿ ಚುನಾವಣಾ ಪೂರ್ವದಲ್ಲಿ ನಡೆದ ಪಕ್ಷಾಂತರ, ಸಂಘಟನೆಯಲ್ಲಿನ ಲೋಪಗಳು ಮತ್ತು ಸಂಪನ್ಮೂಲದ ಕೊರತೆಯಿಂದಾಗಿ ಕಾಂಗ್ರೆಸ್‌ಗೆ ಕೊಂಚ ಹಿನ್ನಡೆಯಾಯಿತು. ಇಲ್ಲದೆ ಇದ್ದಿದ್ದರೆ ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆಯುವ ಎಲ್ಲ ಅವಕಾಶಗಳು ಇತ್ತು. ಕಳೆದ ಬಾರಿಯ ಚುನಾವಣಾ ಫಲಿತಾಂಶಕ್ಕೆ ಹೋಲಿಕೆ ಮಾಡಿದರೆ ಬಿಜೆಪಿ ಎರಡೂ ರಾಜ್ಯಗಳಲ್ಲಿ ಹಿನ್ನಡೆ ಅನುಭವಿಸಿದೆ, ಮಹಾರಾಷ್ಟ್ರದಲ್ಲಿ 120 ಸ್ಥಾನದಿಂದ ನೂರರ ಆಸುಪಾಸಿಗೆ ಬಂದಿದೆ. ಹರ್ಯಾಣದಲ್ಲಿ 47 ರಿಂದ 41ಕ್ಕೆ ಇಳಿದಿದೆ. ಬಿಜೆಪಿ ಭಾರೀ ಬಹುಮತ ಗಳಿಸಲಿದೆ ಎಂದು ಹೇಳುತ್ತಿದ್ದ ಸಮೀಕ್ಷೆಗಳೆಲ್ಲ ಹುಸಿಯಾಗಿವೆ.

ಎರಡು ರಾಜ್ಯಗಳ ಚುನಾವಣಾ ಫಲಿತಾಂಶ ನರೇಂದ್ರ ಮೋದಿಯವರ ಕುಸಿಯುತ್ತಿರುವ ಜನಪ್ರಿಯತೆಯ ದಿಕ್ಸೂಚಿ.‌ ಎರಡೂ ಕಡೆ ಮೋದಿ-ಶಾ ಜೋಡಿ ಹಲವಾರು ರ್‍ಯಾಲಿಗಳನ್ನು ಮಾಡಿದ ಹೊರತಾಗಿಯೂ ಬಿಜೆಪಿ ಸ್ಪಷ್ಟ ಬಹುಮತ ಗಳಿಸಲು ವಿಫಲವಾಗಿರುವುದು ಅವರ ಕ್ಷೀಣಿಸುತ್ತಿರುವ ಜನಪ್ರಿಯತೆಗೆ ಸಾಕ್ಷಿ. ಹರಿಯಾಣದಲ್ಲಿ ಐದು ತಿಂಗಳ ಹಿಂದೆ‌ ನಡೆದಿದ್ದ ಲೋಕಸಭಾ ಚುನಾವಣೆಯಲ್ಲಿ 10ಕ್ಕೆ 10 ಕ್ಷೇತ್ರಗಳನ್ನು ಬಿಜೆಪಿ ಗೆದ್ದಿತ್ತು, ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಬಹುಮತ ಪಡೆಯಲು ವಿಫಲವಾಗಿದೆ.‌ ಇದು ಮೋದಿಯವರ ಜನಪ್ರಿಯತೆ ಕುಸಿದಿರುವುದಕ್ಕೆ ಇನ್ನೊಂದು ಸಾಕ್ಷಿ. ನಾನು ಪ್ರಚಾರಕ್ಕೆ ಹೋಗಿದ್ದ ಮಹಾರಾಷ್ಟ್ರದ ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆದ್ದಿದೆ, ಕೇರಳದ ಮಂಜೇಶ್ವರದಲ್ಲಿ ಮುಸ್ಲಿಂ ಲೀಗ್ ಗೆದ್ದಿರುವುದು ಸಂತಸ ಉಂಟು ಮಾಡಿದೆ.

ಈ ಬಾರಿಯ ಚುನಾವಣೆಯಲ್ಲಿ ಪಕ್ಷಾಂತರಿಗಳನ್ನು ಜನ ತಿರಸ್ಕರಿಸಿದ್ದಾರೆ, ಗುಜರಾತ್ ಉಪಚುನಾವಣೆಯಲ್ಲಿ ಸಹ ಪಕ್ಷಾಂತರಿಗಳು ಸೋತಿದ್ದಾರೆ. ಕರ್ನಾಟಕದಲ್ಲಿ ಕೂಡಾ ಹದಿನೈದು ಸ್ಥಾನಗಳ ಪೈಕಿ ಬಹುಪಾಲು ಸ್ಥಾನಗಳು ಕಾಂಗ್ರೆಸ್ ಪಾಲಾಗಿ, ಯಡಿಯೂರಪ್ಪನವರು ರಾಜೀನಾಮೆ ನೀಡುವ ಪರಿಸ್ಥಿತಿ ನಿರ್ಮಾಣವಾಗಲಿದೆ. ಇವಿಎಂ ಅನ್ನು ದುರ್ಬಳಕೆ ಮಾಡಿಕೊಳ್ಳಲು ಅವಕಾಶವಿದೆ ಎಂದು ಇಂದು ಪತ್ರಿಕೆಯೊಂದು ವರದಿ ಮಾಡಿದೆ. ಇಷ್ಟಾದರೂ ಬಿಜೆಪಿಯವರಿಗೆ ಚುನಾವಣೆಯಲ್ಲಿ ಇವಿಎಂ ಬಳಕೆ ನಿಲ್ಲಿಸಿ ಮತ ಚೀಟಿ ಪದ್ದತಿಯನ್ನು ಜಾರಿಗೆ ತರಲು ಮನಸಿಲ್ಲ. ಬಿಜೆಪಿಯವರಿಗೆ ಏಕೆ ಇವಿಎಂ ಮೇಲೆ ಅತಿಯಾದ ವ್ಯಾಮೋಹವೋ ಅರ್ಥವಾಗುತ್ತಿಲ್ಲ. ಎಂದು ಪ್ರಶ್ನಿಸಿದ್ದಾರೆ.

ಒಟ್ಟಿನಲ್ಲಿ ಹರ್ಯಾಣದ ಜನತೆ ಬಿಜೆಪಿಗೆ ತಕ್ಕ ಪಾಠ ಕಲಿಸಿದ್ದಾರೆ. ಅಭಿವೃದ್ಧಿ, ಆರ್ಥಿಕ ಕುಸಿತ, ನಿರುದ್ಯೋಗದಿಂದ ಜನತೆ ಕಂಗೆಟ್ಟು ಹೋಗಿದ್ದಾರೆ. ಇನ್ನು ರಾಜ್ಯದಲ್ಲಿ ಬಿಜೆಪಿ ಹಿನ್ನಡೆ ಅನುಭವಿಸಿದ್ದರ ನೈತಿಕ ಹೊಣೆ ಹೊತ್ತು ಬಿಜೆಪಿ ರಾಜ್ಯಾಧ್ಯಕ್ಷ ಸುಭಾಷ್‌ ಬರಾಲಾ, ಈಗಾಗಲೇ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಚುನಾವಣೆ ಫಲಿತಾಂಶ ಪ್ರಕಟವಾದ ಮರುಕ್ಷಣವೇ ಬಿಜೆಪಿಯ ಒಂದು ವಿಕೆಟ್‌ ಪತನವಾಗಿದೆ. ಹರ್ಯಾಣದಲ್ಲಿ ಬಿಜೆಪಿ ಆಡಳಿತದಲ್ಲಿದ್ದರೂ ಸಹ ಗೆಲ್ಲಲು ಸಾಧ್ಯವಾಗಿಲ್ಲ. ಸ್ವತಃ ಸುಭಾಷ್‌ ಬರಾಲಾ ಸ್ಪರ್ಧಿಸಿದ್ದ ತೋಹಾನಾ ಕ್ಷೇತ್ರದಲ್ಲಿ ಸೋಲುಂಡಿದ್ದಾರೆ. ಈಗ ಹರ್ಯಾಣದಲ್ಲಿ ಯಾವ ಪಕ್ಷ ಸರ್ಕಾರ ರಚನೆ ಮಾಡುತ್ತದೆ ಎಂಬುದು ಕುತೂಹಲ ಮೂಡಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...