Homeಮುಖಪುಟಸೊರೇನ್‌ಗೆ ಆದ ಅನ್ಯಾಯಕ್ಕೆ ಜಾರ್ಖಂಡ್‌ ಜನತೆ ಉತ್ತರ ಕೊಡುತ್ತಾರೆ: ತೇಜಸ್ವಿ ಯಾದವ್

ಸೊರೇನ್‌ಗೆ ಆದ ಅನ್ಯಾಯಕ್ಕೆ ಜಾರ್ಖಂಡ್‌ ಜನತೆ ಉತ್ತರ ಕೊಡುತ್ತಾರೆ: ತೇಜಸ್ವಿ ಯಾದವ್

- Advertisement -
- Advertisement -

ಮಾಜಿ ಮುಖ್ಯಮಂತ್ರಿ ಹೇಮಂತ್ ಸೋರೆನ್‌ಗೆ ಮಾಡಿದ ಅನ್ಯಾಯದ ಬಗ್ಗೆ ಜಾರ್ಖಂಡ್‌ನ ಜನರು ಬಿಜೆಪಿಗೆ “ತಕ್ಕ ಉತ್ತರ” ನೀಡಲಿದ್ದಾರೆ ಎಂದು ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಭಾನುವಾರ ಹೇಳಿದ್ದಾರೆ.

ಇಂಡಿಯಾ ಬಣದ ‘ಉಲುಗುಲನ್ ನ್ಯಾಯ್’ ರ್ಯಾಲಿಯಲ್ಲಿ ಭಾಗವಹಿಸಲು ರಾಂಚಿಗೆ ಆಗಮಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶ ಮತ್ತು ಸಂವಿಧಾನವನ್ನು ಉಳಿಸಲು ಬಿಜೆಪಿಯನ್ನು ಬೇರುಸಹಿತ ಕಿತ್ತೊಗೆಯುವುದು ವಿಪಕ್ಷಗಳ ಒಕ್ಕೂಟದ ಉದ್ದೇಶವಾಗಿದೆ ಎಂದರು.

ಮಾಜಿ ಸಿಎಂ ಹೇಮಂತ್ ಸೊರೇನ್‌ಗೆ ಆಗಿರುವ ಅನ್ಯಾಯದ ಬಗ್ಗೆ ಜಾರ್ಖಂಡ್‌ನ ಜನರು ಬಿಜೆಪಿಗೆ ತಕ್ಕ ಉತ್ತರ ನೀಡಲಿದ್ದಾರೆ. ದೇಶ, ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಉಳಿಸಲು ಬಿಜೆಪಿಯನ್ನು ಬೇರುಸಹಿತ ಕಿತ್ತೊಗೆಯುವುದು ನಮ್ಮ ಉದ್ದೇಶವಾಗಿದೆ ಎಂದು ಅವರು ಹೇಳಿದರು.

ಇಂಡಿಯಾ ಬಣದ ಪಕ್ಷಗಳು ಒಗ್ಗಟ್ಟಾಗಿವೆ ಎಂದು ಹೇಳಿರುವ ಯಾದವ್, “ಲೋಕಸಭಾ ಚುನಾವಣೆಯ ಮೊದಲ, ಈ ಹಂತದಲ್ಲೇ 400 ಸ್ಥಾನಗಳ ಚಿತ್ರ ಫ್ಲಾಪ್ ಆಗಿದೆ” ಎಂದು ಹೇಳಿದರು.

ಯಾದವ್ ಸೆಋಇದಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಪತ್ನಿ ಸುನೀತಾ ಮತ್ತು ಹೇಮಂತ್ ಸೊರೆನ್ ಅವರ ಪತ್ನಿ ಕಲ್ಪನಾ ಅವರು ರ್ಯಾಲಿಯನ್ನು ಉದ್ದೇಶಿಸಿ ಮಾತನಾಡುವ ನಿರೀಕ್ಷೆಯಿದೆ, ಇದು ವಿಪಕ್ಷ ಬಣದ ಮೆಗಾ ಶಕ್ತಿ ಪ್ರದರ್ಶನವಾಗಿದೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಮಾವೇಶದಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಕಡಿಮೆ ಎಂದು ಪಕ್ಷದ ರಾಜ್ಯ ನಾಯಕರು ತಿಳಿಸಿದ್ದಾರೆ. ಪಂಜಾಬ್ ಸಿಎಂ ಭಗವಂತ್ ಮಾನ್ ಕೂಡ ರಾಂಚಿಗೆ ಆಗಮಿಸಿದ್ದಾರೆ. ಪ್ರಭಾತ್ ತಾರಾ ಮೈದಾನದಲ್ಲಿ ನಡೆಯಲಿರುವ ರ್ಯಾಲಿಯಲ್ಲಿ ಒಟ್ಟು 28 ರಾಜಕೀಯ ಪಕ್ಷಗಳು ಭಾಗವಹಿಸಲಿವೆ.

‘ಉಲುಗುಲನ್’, ಅಂದರೆ ಕ್ರಾಂತಿ; ಆದಿವಾಸಿಗಳ ಹಕ್ಕುಗಳಿಗಾಗಿ ಬ್ರಿಟಿಷರ ವಿರುದ್ಧ ಬಿರ್ಸಾ ಮುಂಡಾ ನಡೆಸಿದ ಹೋರಾಟದ ಸಮಯದಲ್ಲಿ ಈ ಪದ ಹುಟ್ಟಿಕೊಂಡಿತು.

ಇದೇ ವೇಳೆ, ಚುನಾವಣಾ ಆಯೋಗಕ್ಕೆ ರಾಜ್ಯ ಬಿಜೆಪಿ ದೂರು ದಾಖಲಿಸಿದ್ದು, ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ರ್ಯಾಲಿ ವಿರುದ್ಧ ದೂರು ದಾಖಲಿಸಿದೆ.

“ಇಂಡಿಯಾ ಬ್ಲಾಕ್ ಪಾಲುದಾರರು ಬಹಿರಂಗವಾಗಿ ವಾಹನಗಳ ಮೇಲೆ ಧ್ವಜಗಳು ಮತ್ತು ಬ್ಯಾನರ್‌ಗಳನ್ನು ಪ್ರದರ್ಶಿಸುತ್ತಿರುವ ರೀತಿ, ರ್ಯಾಲಿಗಾಗಿ ಪೋಸ್ಟರ್‌ಗಳು ಮತ್ತು ಹೋರ್ಡಿಂಗ್‌ಗಳನ್ನು ಹಾಕುವುದು, ರಾಂಚಿ ಲೋಕಸಭಾ ಸ್ಥಾನಕ್ಕೆ ಚುನಾವಣೆಗೆ ಅಧಿಸೂಚನೆಯನ್ನು ಇನ್ನೂ ಹೊರಡಿಸದ ಕಾರಣ ಇದು ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ” ಎಂದು ಬಿಜೆಪಿ ದೂರಿದೆ.

ಇದನ್ನೂ ಓದಿ; ನಿರುದ್ಯೋಗ ಯುವಜನರ ಅತಿ ದೊಡ್ಡ ಸಮಸ್ಯೆ, INDIA ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಉದ್ಯೋಗ ಕ್ರಾಂತಿ: ಮಲ್ಲಿಕಾರ್ಜುನ ಖರ್ಗೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಉತ್ತರಪ್ರದೇಶ: ಬಿಜೆಪಿ ಅಭ್ಯರ್ಥಿಯ ಬೆಂಗಾವಲು ವಾಹನ ಢಿಕ್ಕಿ: ಇಬ್ಬರು ಮೃತ್ಯು

0
ಕುಸ್ತಿಪಟುಗಳಿಗೆ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಬ್ರಿಜ್‌ ಭೂಷಣ್‌ ಶರಣ್‌ ಸಿಂಗ್‌ ಅವರ ಪುತ್ರ ಕೈಸರ್‌ಗಂಜ್‌ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕರಣ್‌ ಭೂಷಣ್‌ ಸಿಂಗ್‌ ಅವರ ಬೆಂಗಾವಲು ವಾಹನ ಡಿಕ್ಕಿ ಹೊಡೆದ ಪರಿಣಾಮ...