Homeಮುಖಪುಟಕೇರಳದ ಜನರು ಮೋದಿಯ ಕಲ್ಯಾಣ ಕ್ರಮಗಳನ್ನು ಒಪ್ಪಿಕೊಂಡಿದ್ದಾರೆ: ರಾಜ್ಯ ಬಿಜೆಪಿ ಮುಖಂಡ

ಕೇರಳದ ಜನರು ಮೋದಿಯ ಕಲ್ಯಾಣ ಕ್ರಮಗಳನ್ನು ಒಪ್ಪಿಕೊಂಡಿದ್ದಾರೆ: ರಾಜ್ಯ ಬಿಜೆಪಿ ಮುಖಂಡ

"ಕೇರಳ ಸ್ಥಳೀಯ ಸಂಸ್ಥೆಯ ಚುನಾವಣೆಯಲ್ಲಿ ಬಿಜೆಪಿ ಪಾಲಿನ ಕ್ಷೇತ್ರಗಳು ಹೆಚ್ಚಾಗಿವೆ. ಈಗ ಪೈಪೋಟಿ ಇರುವುದು ಸಿಪಿಐ(ಎಂ) ವರ್ಸಸ್ ಕೇರಳ ಬಿಜೆಪಿಯ ನಡುವೆ"

- Advertisement -
- Advertisement -

ಕೇರಳದ ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆಯ ಫಲಿತಾಂಶ ಇಂದು ಘೊಷಣೆಯಾಗಿದ್ದು, ಎಡ ಪಕ್ಷಗಳಿಗೆ ಭಾರಿ ಮುನ್ನಡೆಯಾಗಿದೆ. ಈ ನಡುವೆ ಕಳೆದ ಬಾರಿಗಿಂತ ಈ ಬಾರಿ ರಾಜ್ಯದಲ್ಲಿ ಬಿಜೆಪಿಗೆ ಹೆಚ್ಚಿನ ಸ್ಥಾನಗಳು ಲಭಿಸಿದ್ದು, ಈ ಕುರಿತು ಪ್ರತಿಕ್ರಿಯಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಕೆ.ಸುರೇಂದ್ರನ್, “ನರೇಂದ್ರ ಮೋದಿಯ ಕಲ್ಯಾಣ ಕ್ರಮಗಳನ್ನು ಕೇರಳದ ಜನತೆ ಒಪ್ಪಿಕೊಂಡಿದ್ದಾರೆ” ಎಂದು ಹೇಳಿದ್ದಾರೆ.

ಎಡಪಕ್ಷಗಳಿಗೆ ಮುನ್ನಡೆಯಿದ್ದರೂ ಸಹ, ಕಳೆದ ಬಾರಿಗಿಂತ ಈ ಬಾರಿ ಕಮ್ಯುನಿಸ್ಟ್ ಪಕ್ಷ ಸೇರಿದಂತೆ ಕಾಂಗ್ರೆಸ್ ಪಡೆದುಕೊಂಡ ಮತ ಮತ್ತು ಕ್ಷೇತ್ರಗಳ ಸಂಖ್ಯೆಯಲ್ಲಿ ಇಳಿಮುಖವಾಗಿವೆ.

ಈ ಕುರಿತು ಸುರೇಂದ್ರನ್ ಹೇಳಿಕೆಯನ್ನು ಟ್ವೀಟ್ ಮಾಡಿರುವ ಎಎನ್‌ಐ, “ಕೇರಳ ಸ್ಥಳೀಯ ಸಂಸ್ಥೆಯ ಚುನಾವಣೆಯಲ್ಲಿ ಬಿಜೆಪಿ ಪಾಲಿನ ಕ್ಷೇತ್ರಗಳು ಹೆಚ್ಚಾಗಿವೆ. ಜನರು ಮೋದಿಯ ಕಲ್ಯಾಣ ಕ್ರಮಗಳನ್ನು ಒಪ್ಪಿಕೊಂಡಿದ್ದಾರೆ. ತಿರುವನಂತಪುರದಲ್ಲಿ ಕಾಂಗ್ರೆಸ್ ಕಳೆದ ಬಾರಿ 21 ಸ್ಥಾನಗಳನ್ನು ಗೆದ್ದಿತ್ತು. ಆದರೆ ಈ ಬಾರಿ ಕೇವಲ 8 ಸ್ಥಾನಗಳನ್ನು ಪಡೆದುಕೊಂಡಿದೆ. ಈಗ ಪೈಪೋಟಿ ಇರುವುದು ಸಿಪಿಐ(ಎಂ) ವರ್ಸಸ್ ಕೇರಳ ಬಿಜೆಪಿಯ ನಡುವೆ” ಎಂದು ಹೇಳಿದ್ದಾರೆ ಎಂಬುದಾಗಿ ವರದಿ ಮಾಡಿದೆ.

ಇದನ್ನೂ ಓದಿ: ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಅರಳದ ಕಮಲ, ಭಾರಿ ಗೆಲುವಿನತ್ತ ಎಡಪಕ್ಷಗಳ ಒಕ್ಕೂಟ

ಮುಂದಿನ ವರ್ಷ ನಡೆಯಲಿರುವ ಕೇರಳ ವಿಧಾನಸಭಾ ಚುನಾವಣೆಗೆ ಮುನ್ನ ರಾಜಕೀಯ ಪಕ್ಷಗಳಿಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ಫಲಿತಾಂಶ ಪೂರ್ವಭಾವಿ ಪರೀಕ್ಷೆಯ ಫಲಿತಾಂಶವೆಂದೇ ಪರಿಗಣಿಸಲಾಗಿದೆ.

ಇದನ್ನೂ ಓದಿ: ‘PM-CARES’ ಖಾಸಗಿ ನಿಧಿ- ದಾಖಲೆಗಳು ಬಿಚ್ಚಿಟ್ಟ ವೈರುಧ್ಯ!, ದೇಶಕ್ಕೆ ಇಷ್ಟು ದೊಡ್ಡ ಸುಳ್ಳು ಹೇಳಿದರೇ…

ಕಾಂಗ್ರೆಸ್‌ ನೇತೃತ್ವದ ಯುನೈಟೆಡ್‌ ಡೆಮಾಕ್ರಟಿಕ್‌ ಫ್ರಂಟ್‌ (ಯುಡಿಎಫ್‌) ಎರಡನೇ ಸ್ಥಾನದಲ್ಲಿದ್ದರೆ, ಬಿಜೆಪಿ ನೇತೃತ್ವದ ಎನ್‌ಡಿಎ ಎರಡು ಮುನ್ಸಿಪಲ್‌ಗಳಲ್ಲಿ ಮಾತ್ರ ಮುನ್ನಡೆ ಕಾಯ್ದುಕೊಂಡಿದೆ.

ಕೇರಳದ 941 ಗ್ರಾಮ ಪಂಚಾಯಿತಿಗಳು, 152 ಬ್ಲಾಕ್ ಪಂಚಾಯಿತಿಗಳು, 14 ಜಿಲ್ಲಾ ಪಂಚಾಯಿತಿಗಳು, 86 ಪುರಸಭೆಗಳು ಮತ್ತು 6 ನಿಗಮಗಳ ಸ್ಥಾನಗಳಿಗೆ ನಿನ್ನೆ ಚುನಾವಣೆ ನಡೆದಿದ್ದು, ಇಂದು ಮತ ಎಣಿಕೆ ನಡೆಸಲಾಗುತ್ತಿದೆ.


ಇದನ್ನೂ ಓದಿ: ಸಮಯ ವ್ಯರ್ಥ ಎಂದು ರಕ್ಷಣಾ ಸಂಸದೀಯ ಸಮಿತಿ ಸಭೆಯಿಂದ ಹೊರನಡೆದ ರಾಹುಲ್

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪತಂಜಲಿಯ ಪತನ ಶುರು: ಸೋನ್ ಪಾಪ್ಡಿಯಿಂದ ಮೂವರಿಗೆ ಜೈಲು ಶಿಕ್ಷೆ

0
ಪತಂಜಲಿ ನವರತ್ನ ಎಲೈಚಿ ಸೋನ್ ಪಾಪ್ಡಿ(ಸಾಂಪ್ರದಾಯಿಕ ಸಿಹಿತಿಂಡಿ) ಗುಣಮಟ್ಟದ ಪರೀಕ್ಷೆಯಲ್ಲಿ ವಿಫಲವಾದ ಹಿನ್ನೆಲೆ ಉತ್ತರಾಖಂಡದ ನ್ಯಾಯಾಲಯವು ಪತಂಜಲಿ ಆಯರ್ವೇದ ಲಿಮಿಟೆಡ್‍ನ ಸಹಾಯಕ ವ್ಯವಸ್ಥಾಪಕ ಸೇರಿದಂತೆ ಮೂರು ಮಂದಿಗೆ ಆರು ತಿಂಗಳ ಜೈಲು ಶಿಕ್ಷೆ...