HomeUncategorizedಮಹಾರಾಷ್ಟ್ರ ಜನರು ಪ್ರಜಾಪ್ರಭುತ್ವ ವಿರೋಧಿ ಶಕ್ತಿಗಳಿಗೆ ಶರಣಾಗುವುದಿಲ್ಲ: ಕರಾದ್‌ನಲ್ಲಿ ಶರದ್ ಪವಾರ್ ಶಕ್ತಿಪ್ರದರ್ಶನ

ಮಹಾರಾಷ್ಟ್ರ ಜನರು ಪ್ರಜಾಪ್ರಭುತ್ವ ವಿರೋಧಿ ಶಕ್ತಿಗಳಿಗೆ ಶರಣಾಗುವುದಿಲ್ಲ: ಕರಾದ್‌ನಲ್ಲಿ ಶರದ್ ಪವಾರ್ ಶಕ್ತಿಪ್ರದರ್ಶನ

- Advertisement -
- Advertisement -

ಶಿವಸೇನೆ ನಾಯಕ, ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಬಿಜೆಪಿ ನಾಯಕ, ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರೊಂದಿಗೆ ಕೈಜೋಡಿಸಿ ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪ್ರಮಾಣವಚನ ಸ್ವೀಕರಿಸಿದರು. ಈ ಬೆಳವಣಿಗೆಯಾದ ಮರುದಿನ ಸೋಮವಾರ ಎನ್‌ಸಿಪಿ ಸಂಸ್ಥಾಪಕ ಶರದ್ ಪವಾರ್ ಅವರು ಕರಾದ್‌ನಲ್ಲಿ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿ, ”ಮಹಾರಾಷ್ಟ್ರದ ಜನರು ಪ್ರಜಾಪ್ರಭುತ್ವ ವಿರೋಧಿ ಶಕ್ತಿಗಳಿಗೆ ಬಲಿಯಾಗುವುದಿಲ್ಲ” ಎಂದು ಹೇಳಿದ್ದಾರೆ.

ಪೂರ್ಣಿಮೆಯ ಸಂದರ್ಭದಲ್ಲಿ ಸತಾರಾ ಜಿಲ್ಲೆಯ ಕರಾದ್‌ನಲ್ಲಿರುವ ಮಹಾರಾಷ್ಟ್ರದ ಮೊದಲ ಮುಖ್ಯಮಂತ್ರಿ ಯಶವಂತರಾವ್ ಚವಾಣ್ ಅವರ ಸ್ಮಾರಕಕ್ಕೆ ಶ್ರದ್ಧಾಂಜಲಿ ಸಲ್ಲಿಸಿದರು. ಈ ವೇಳೆ ಸಾರ್ವಜನಿಕ ಸಭೆಯಲ್ಲಿ ಶರದ್ ಪವಾರ್ ಅವರು ಶಕ್ತಿ ಪ್ರದರ್ಶನವನ್ನು ಪ್ರದರ್ಶಿಸಿದರು.

Maha NCP rebellion: Need to fight forces creating communal divide, says Sharad Pawar- The New Indian Express

”ಈ ದೇಶದ ಪ್ರಜಾಪ್ರಭುತ್ವ ಪ್ರಕ್ರಿಯೆಯಲ್ಲಿ ಸಾಮಾನ್ಯ ನಾಗರಿಕರನ್ನು ಸೇರಿಸಿಕೊಳ್ಳಬೇಕು ಎಂದು ವೈ ಬಿ ಚವಾಣ್ ಯಾವಾಗಲೂ ನಂಬಿದ್ದರು. ಅವರು ಹೊಸ ತಂಡವನ್ನು ರಚಿಸಿದರು ಮತ್ತು ಯುವ ತಂಡವನ್ನು ತಮ್ಮೊಂದಿಗೆ ಕರೆದೊಯ್ದರು. ಈ ತಂಡವು ದೇಶದ ಅಭಿವೃದ್ಧಿಗೆ ಕಾರಣವಾಗುವಂತೆ ಅವರು ನೋಡಿಕೊಂಡರು. ಅವರು ಈಗ ನಮ್ಮ ಜೊತೆಯಲ್ಲಿಲ್ಲದಿದ್ದರೂ, ಅವರ ಆಲೋಚನೆಗಳು ನಮ್ಮೊಂದಿಗಿವೆ” ಎಂದು ಎನ್‌ಸಿಪಿ ಮುಖ್ಯಸ್ಥರು ಹೇಳಿದರು.

ಸಾರ್ವಜನಿಕ ಸಭೆಯಲ್ಲಿ ಎನ್‌ಸಿಪಿ ಮುಖ್ಯಸ್ಥರು, ”ನಾವು ಉದ್ಧವ್ ಠಾಕ್ರೆ ನೇತೃತ್ವದಲ್ಲಿ ಮಹಾರಾಷ್ಟ್ರಕ್ಕೆ ಸೇವೆ ಸಲ್ಲಿಸುತ್ತಿದ್ದೆವು ಆದರೆ ನಮ್ಮ ಸರ್ಕಾರವನ್ನು ಕೆಲವರು ಉರುಳಿಸಿದರು. ದೇಶದ ಇತರ ಕೆಲವು ಭಾಗಗಳಲ್ಲಿ ದೆಹಲಿ, ಪಂಜಾಬ್ ಮತ್ತು ಪಶ್ಚಿಮ ಬಂಗಾಳದಲ್ಲಿ ಸರ್ಕಾರಗಳು ಪ್ರಜಾಸತ್ತಾತ್ಮಕವಾಗಿ ಕೆಲಸ ಮಾಡುತ್ತಿವೆ. ಅವರ ಮೇಲೆ ದಾಳಿ ಮಾಡಲಾಗುತ್ತಿದೆ” ಎಂದು ಬಿಜೆಪಿ ವಿರುದ್ಧ ಕಿಡಿಕಾರಿದರು.

”ಇಂದು ಮಹಾರಾಷ್ಟ್ರ ಮತ್ತು ದೇಶದಲ್ಲಿ ಕೆಲವು ಗುಂಪುಗಳಿಂದ ಸಮಾಜದಲ್ಲಿ ಜಾತಿ ಮತ್ತು ಧರ್ಮದ ಹೆಸರಿನಲ್ಲಿ ಬಿರುಕು ಮೂಡಿಸಲಾಗುತ್ತಿದೆ, ನಾವು ಬಿಜೆಪಿ ವಿರುದ್ಧ ನಿಲ್ಲಲು ಪ್ರಯತ್ನಿಸಿದ್ದೇವೆ, ಆದರೆ ದುರದೃಷ್ಟವಶಾತ್ ನಮ್ಮಲ್ಲಿ ಕೆಲವರು ಅವರಿಗೆ ಬಲಿಯಾದರು. ಸಾರ್ವಜನಿಕರ ಬೆಂಬಲದೊಂದಿಗೆ ಮತ್ತೆ ನಾವು ಶಕ್ತಿಯುತವಾಗಿ ಎದ್ದುನಿಲ್ಲುತ್ತೇವೆ. ಅದೇನೇ ಇದ್ದರೂ, ಮಹಾರಾಷ್ಟ್ರದ ಜನರು ಈ ಪ್ರಜಾಪ್ರಭುತ್ವ ವಿರೋಧಿ ಶಕ್ತಿಗಳಿಗೆ ಶರಣಾಗುವುದಿಲ್ಲ, ಮಹಾರಾಷ್ಟ್ರ ಮತ್ತೆ ಪ್ರಗತಿಯ ಹಾದಿಯಲ್ಲಿ ಸಾಗುತ್ತದೆ” ಎಂದು ಶರದ್ ಪವಾರ್ ಗುಡುಗಿದರು.

ಅವರ ಸಾರ್ವಜನಿಕ ಭಾಷಣಕ್ಕೂ ಮುನ್ನ, ಪವಾರ್ ಅವರು ತಮ್ಮ ರಾಜಕೀಯ ಮಾರ್ಗದರ್ಶಕ ಮತ್ತು ಮಹಾರಾಷ್ಟ್ರದ ಮೊದಲ ಮುಖ್ಯಮಂತ್ರಿ ಯಶವಂತರಾವ್ ಚವಾಣ್ ಅವರ ಪ್ರೀತಿ-ಸಂಗಮ್ ಸ್ಮಾರಕಕ್ಕೆ ಭೇಟಿ ನೀಡಿ ಅವರಿಗೆ ಪುಷ್ಪ ನಮನ ಸಲ್ಲಿಸಿದರು.

ಇದನ್ನೂ ಓದಿ: ‘ಮೊದಲು ಭಷ್ಟರ ಮೇಲೆ ದಾಳಿ ನಂತರ…’: ಪವಾರ್ ಸೇರ್ಪಡೆ ಬಳಿಕ ಬಿಜೆಪಿ ವಿರುದ್ಧ ಸಿಬಲ್ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...