HomeಅಂಕಣಗಳುKarnataka against SIRಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

- Advertisement -
- Advertisement -

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ ‘ಎಸ್‌ಐಆರ್ (SIR) ವಿರೋಧಿ ಕರ್ನಾಟಕ’ ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌.

ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ ಪ್ರೊ. ಎಂ.ವಿ. ಕೃಷ್ಣ ಅವರು, “ನಮ್ಮ ಮುಂದೆ ಬಹುದೊಡ್ಡ ಸವಾಲಿದೆ. ತುಂಬಾ ಜನರಿಗೆ ಎಸ್‌ಐಆರ್ ಬಗ್ಗೆ ಸರಿಯಾದ ಮಾಹಿತಿಯಿಲ್ಲ. ಆದರೆ, ಇದರಿಂದ ಲಕ್ಷಾಂತರ ಜನ ತಮ್ಮ ಮತದಾನದ ಹಕ್ಕನ್ನು ಕಳೆದುಕೊಳ್ಳುತ್ತಿದ್ದಾರೆ. ಇಂತಹ ಅನ್ಯಾಯವನ್ನು ನಾವು ಖಂಡಿಸಲೇಬೇಕು ಹಾಗೂ ಜನಸಾಮಾನ್ಯರ ಬದುಕಿನ ಹಕ್ಕಿನ ಮೇಲೆ ದಾಳಿ ಮಾಡುವ ಈ ಹುನ್ನಾರವನ್ನು ಒಗ್ಗಟ್ಟಿನಿಂದ ತಡೆಯಬೇಕು,” ಎಂದು ಎಸ್‌ಐಆರ್‌ನಿಂದ ಆಗುತ್ತಿರುವ ಅನ್ಯಾಯಗಳನ್ನು ವಿವರಿಸುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸಿದರು.

ಸಾಮಾಜಿಕ ಕಾರ್ಯಕರ್ತ ಹಾಗೂ ಲೇಖಕ ನಂದಕುಮಾರ್ ಕುಂಬ್ರಿಉಬ್ಬು ಮಾತನಾಡಿ, “ಎಸ್‌ಐಆರ್ ಎನ್ನುವುದು ಕೇವಲ ‘ಮತದಾರರ ತೀವ್ರ ಪರಿಷ್ಕರಣೆ’ ಅಲ್ಲ, ಅದು ನೇರವಾದ ‘ಮತದಾನದ ನಿರಾಕರಣೆ’. ಇದರ ಮೂಲಕ ಕೇಂದ್ರ ಸರ್ಕಾರವು ಸಂವಿಧಾನ ಮತ್ತು ಚುನಾವಣಾ ಆಯೋಗವನ್ನು ಮುಂದಿಟ್ಟುಕೊಂಡೇ ಜನರನ್ನು ವಂಚಿಸುತ್ತಿದೆ,” ಎಂದು ಗಂಭೀರವಾಗಿ ಆರೋಪಿಸಿದರು.

ಈ ಸಂದರ್ಭದಲ್ಲಿ ಪ್ರಗತಿಪರ ಚಿಂತಕರಾದ ಪೂರ್ಣಚಂದ್ರ, ಸಾಮಾಜಿಕ ಹೋರಾಟಗಾರ್ತಿ ಕಿರಣ ಪಿ.ಆರ್., ಶಿವಕುಮಾರ್, ಪ್ರೊ. ಎಂ.ವಿ. ಕೃಷ್ಣ, ಲಿಂಗರಾಜು, ನಸ್ರೀನ್ ಮಿಠಾಯಿ, ಮಹಿಳಾ ಮುನ್ನಡೆಯ ಶಿಲ್ಪಾ, ಕರ್ನಾಟಕ ಜನಶಕ್ತಿ ಸಂಘಟನೆಯ ಮಂಡ್ಯ ಜಿಲ್ಲಾ ಕಾರ್ಯದರ್ಶಿ ಸಿದ್ಧರಾಜು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಮದ್ದೂರಿನಲ್ಲಿ ಜಾಗೃತಿ ಸಂವಾದ:

ತದನಂತರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಮದ್ದೂರಿನ ಅಂಬೇಡ್ಕರ್ ಭವನದಲ್ಲಿ ಎಸ್‌ಐಆರ್ ಅನಾಹುತಗಳ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಸಾರ್ವಜನಿಕರೊಡನೆ ಸಂವಾದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಈ ಸಂವಾದದಲ್ಲಿ ಪಾಲ್ಗೊಂಡಿದ್ದ ಮಾಜಿ ಸಂಸದೆ ಹಾಗೂ ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್ ಅವರು, ಪ್ರಜಾಪ್ರಭುತ್ವದಲ್ಲಿ ಮತದಾನದ ಹಕ್ಕು ಮತ್ತು ಪ್ರಸ್ತುತ ಎಸ್‌ಐಆರ್‌ನಿಂದ ಜನಸಾಮಾನ್ಯರಿಗೆ ಆಗುತ್ತಿರುವ ಅನ್ಯಾಯಗಳ ಕುರಿತು ಎಳೆಎಳೆಯಾಗಿ ವಿವರಿಸುವ ಮೂಲಕ ಅರಿವು ಮೂಡಿಸಿದರು.
ಹಾಗೆಯೇ, ಮಂಡ್ಯದ ಕರ್ನಾಟಕ ಜನಶಕ್ತಿ ಕಚೇರಿಯಲ್ಲೂ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ಜಾಥಾದ ಭಾಗವಾಗಿ ಮಹತ್ವದ ಸಭೆ ನಡೆಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...