“ರಾಜ್ಯದ ಜನತೆ ಪ್ರಧಾನಿ ಮೋದಿ ಅವರ ಆಶೀರ್ವಾದದಿಂದ ವಂಚಿತರಾಗಬಾರದು. ಹಾಗಾಗಿ ವಿಕಾಸಕ್ಕಾಗಿ ಬಿಜೆಪಿಗೆ ಮತ ಹಾಕಿ” ಎಂಬ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ಭಾಷಣವನ್ನು ಬೆದರಿಕೆ ಎಂದು ಕಾಂಗ್ರೆಸ್ ಆರೋಪಿಸಿದೆ. ಒಕ್ಕೂಟ ವ್ಯವಸ್ಥೆ ಮತ್ತು ಪ್ರಜಾಪ್ರಭುತ್ವದ ಮೇಲೆ ಬಿಜೆಪಿಗೆ ಕಿಂಚಿತ್ ಗೌರವವಿಲ್ಲ ಎಂದು ಕಾಂಗ್ರೆಸ್ ತಿರುಗೇಟು ನೀಡಿದೆ.
ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಶಿಗ್ಗಾಂವಿಯಲ್ಲಿ ಮಾತನಾಡಿದ್ದ ಜೆ.ಪಿ ನಡ್ಡಾ, “ರಾಜ್ಯದ ಜನತೆ ಪ್ರಧಾನಿ ಮೋದಿ ಅವರ ಆಶೀರ್ವಾದದಿಂದ ವಂಚಿತರಾಗಬಾರದು” ಎಂದು ಹೇಳಿಕೆ ನೀಡಿದ್ದರು. ಅಂದರೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಾರದಿದ್ದರೆ ಕೇಂದ್ರದಿಂದ ಅನುದಾನ ನೀಡುವುದಿಲ್ಲ ಎಂಬ ಅರ್ಥವೇ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
“ಮೋದಿಯ ಆಶೀರ್ವಾದ ಬೇಕೆಂದರೆ ಬಿಜೆಪಿಗೆ ಮತ ಹಾಕಿ” ಇದು ಜೆ.ಪಿ ನಡ್ಡಾ ಅವರು ಕನ್ನಡಿಗರಿಗೆ ಹಾಕುತ್ತಿರುವ ಬೆದರಿಕೆ. ಬಿಜೆಪಿ ಸರ್ವಾಧಿಕಾರವನ್ನು ಜಾರಿಗೊಳಿಸುತ್ತಿರುವುದಕ್ಕೆ ಈ ಮಾತುಗಳೇ ನಿದರ್ಶನ. ಆಶೀರ್ವಾದ ಮಾಡಬೇಕಿರುವುದು ಜನರೇ ಹೊರತು, ಮೋದಿಯಲ್ಲ. ಒಕ್ಕೂಟ ವ್ಯವಸ್ಥೆ & ಪ್ರಜಾಪ್ರಭುತ್ವದ ಮೇಲೆ ಬಿಜೆಪಿಗೆ ಕಿಂಚಿತ್ ಗೌರವವಿಲ್ಲ ಎಂದು ಕಾಂಗ್ರೆಸ್ ಟೀಕಿಸಿದೆ.
"ಮೋದಿಯ ಆಶೀರ್ವಾದ ಬೇಕೆಂದರೆ ಬಿಜೆಪಿಗೆ ಮತ ಹಾಕಿ"
ಇದು ಜೆ.ಪಿ ನಡ್ಡಾ ಅವರು ಕನ್ನಡಿಗರಿಗೆ ಹಾಕುತ್ತಿರುವ ಬೆದರಿಕೆ.ಬಿಜೆಪಿ ಸರ್ವಾಧಿಕಾರವನ್ನು ಜಾರಿಗೊಳಿಸುತ್ತಿರುವುದಕ್ಕೆ ಈ ಮಾತುಗಳೇ ನಿದರ್ಶನ.
ಆಶೀರ್ವಾದ ಮಾಡಬೇಕಿರುವುದು ಜನರೇ ಹೊರತು, ಮೋದಿಯಲ್ಲ.ಒಕ್ಕೂಟ ವ್ಯವಸ್ಥೆ & ಪ್ರಜಾಪ್ರಭುತ್ವದ ಮೇಲೆ ಬಿಜೆಪಿಗೆ ಕಿಂಚಿತ್ ಗೌರವವಿಲ್ಲ. pic.twitter.com/AZQyrNTnts
— Karnataka Congress (@INCKarnataka) April 20, 2023
ಮಾನ್ಯ ನಡ್ಡಾ ಅವರೇ, “ಮೋದಿ ಬರುವುದಕ್ಕೂ ಮುನ್ನ ದೇಶವೂ ಇತ್ತು, ಕರ್ನಾಟಕವೂ ಇತ್ತು. ಮೋದಿಗೂ ಮುನ್ನವೇ ಕರ್ನಾಟಕ ಆರ್ಥಿಕವಾಗಿ ಸಬಲವಾಗಿತ್ತು, ಸಂಪದ್ಭರಿತವಾಗಿತ್ತು. ಕನ್ನಡಿಗರನ್ನು ಬೆದರಿಸಿ ಅವಮಾನಿಸುವುದನ್ನು ನಿಲ್ಲಿಸಿ. ಕನ್ನಡಿಗರ ‘ತೆರಿಗೆ ಆಶೀರ್ವಾದ’ದಿಂದ ನಿಮ್ಮ ಮೋದಿಯ ಆಟ ನಡೆಯುತ್ತಿರುವುದು ಎಂಬುದನ್ನು ಮರೆಯದಿರಿ” ಎಂದು ಕಾಂಗ್ರೆಸ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದೆ.
ರಾಜ್ಯದಲ್ಲೂ, ಕೇಂದ್ರದಲ್ಲೂ ಬಿಜೆಪಿ ಅಧಿಕಾರದಲ್ಲಿತ್ತು. ನೆರೆ ಪರಿಹಾರದಲ್ಲಿ, ಬರ ಪರಿಹಾರದಲ್ಲಿ, GST ಪಾಲಿನಲ್ಲಿ, ಲಸಿಕೆ ಹಂಚಿಕೆಯಲ್ಲಿ, ಆಕ್ಸಿಜನ್ ನೀಡಿಕೆಯಲ್ಲಿ ಕರ್ನಾಟಕಕ್ಕೆ ಅನ್ಯಾಯವಾಯಿತು. ಜೊತಗೆ ಕರ್ನಾಟಕದ ಸರ್ಕಾರಿ ಸಂಸ್ಥೆಯನ್ನು ಮುಚ್ಚುವಲ್ಲಿ ಮತ್ತು ಮಹಾರಾಷ್ಟ್ರದ ಗಡಿ ತಂಟೆಯಲ್ಲಿ ಕನ್ನಡಿಗರಿಗೆ ಮೋದಿಯ ಆಶೀರ್ವಾದದ ಬದಲು ಶಾಪ ಸಿಕ್ಕಿದ್ದೇಕೆ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
ಪ್ರಜಾಪ್ರಭುತ್ವದಲ್ಲಿ ಜನರೇ ಜನಾರ್ಧನರು, ಆಶೀರ್ವಾದ ನೀಡಲು ನರೇಂದ್ರ ಮೋದಿಯವರು ದೇವರಲ್ಲ, ಜನರ ಸೇವೆ ಮಾಡಲು ಜನರಿಂದ ಆಯ್ಕೆಯಾಗಿರುವ ಪ್ರತಿನಿಧಿ ಎನ್ನುವುದು ನೆನಪಿರಲಿ ಜೆ.ಪಿ ನಡ್ಡಾರವರೆ ಎಂದು ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.
ಕರ್ನಾಟಕದ ಜನತೆ @narendramodi ಅವರ ಆಶೀರ್ವಾದದಿಂದ ವಂಚಿತರಾಗಬಾರದು ಎನ್ನುವ ನಿಮ್ಮ ಹೇಳಿಕೆ ಬೆದರಿಕೆ ಎಂದಾದರೆ ಅದಕ್ಕೆ ನನ್ನ ಧಿಕ್ಕಾರ ಇದೆ. ಇದು ನಿಮ್ಮ ಅಜ್ಞಾನ ಎಂದಾದರೆ ನಿಮಗೆ ದೇವರು ಸದ್ಬುದ್ಧಿಯ ಆಶೀರ್ವಾದವನ್ನು ಮಾಡಲಿ ಎಂದು ಹಾರೈಸುತ್ತೇನೆ @JPNadda.
2/3 pic.twitter.com/txCmf39aTr— Siddaramaiah (@siddaramaiah) April 19, 2023
ಕರ್ನಾಟಕದ ಜನತೆ ನರೇಂದ್ರ ಮೋದಿಯವರ ಆಶೀರ್ವಾದದಿಂದ ವಂಚಿತರಾಗಬಾರದು ಎನ್ನುವ ನಿಮ್ಮ ಹೇಳಿಕೆ ಬೆದರಿಕೆ ಎಂದಾದರೆ ಅದಕ್ಕೆ ನನ್ನ ಧಿಕ್ಕಾರ ಇದೆ. ಇದು ನಿಮ್ಮ ಅಜ್ಞಾನ ಎಂದಾದರೆ ನಿಮಗೆ ದೇವರು ಸದ್ಬುದ್ಧಿಯ ಆಶೀರ್ವಾದವನ್ನು ಮಾಡಲಿ ಎಂದು ಹಾರೈಸುತ್ತೇನೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಒಕ್ಕೂಟ ವ್ಯವಸ್ಥೆಯಲ್ಲಿ ರಾಜ್ಯಗಳು ಸಂವಿಧಾನದತ್ತವಾದ ಸಮಾನ ಸ್ಥಾನಮಾನ, ಗೌರವ ಮತ್ತು ಹಕ್ಕುಗಳನ್ನು ಹೊಂದಿರುತ್ತವೆ ಎಂಬುದು ನೆನಪಿರಲಿ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಿಮ್ಮ ಸರ್ವಾಧಿಕಾರಿ ಧೋರಣೆಗೆ ಅವಕಾಶ ಇಲ್ಲ ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ: ಸುಡಾನ್ ಸಂಘರ್ಷ: ಕರ್ನಾಟಕದ ಹಕ್ಕಿಪಿಕ್ಕಿ ಜನರ ರಕ್ಷಣೆಗಾಗಿ ಕೇಂದ್ರದ ವಿರುದ್ಧ ಕಿಡಿಕಾರಿದ ಕಾಂಗ್ರೆಸ್


