Homeಕರ್ನಾಟಕ84 ವರ್ಷದ ನಂದಿಪಾಪಯ್ಯರಿಗೆ ಕಳೆದ 65 ವರ್ಷಗಳಿಂದ ಸಾಗುವಳಿ ಮಾಡಿದರೂ ಸಿಗದ ಭೂಮಿ! ವಿಡಿಯೋ ನೋಡಿ

84 ವರ್ಷದ ನಂದಿಪಾಪಯ್ಯರಿಗೆ ಕಳೆದ 65 ವರ್ಷಗಳಿಂದ ಸಾಗುವಳಿ ಮಾಡಿದರೂ ಸಿಗದ ಭೂಮಿ! ವಿಡಿಯೋ ನೋಡಿ

ನಾನು ಬಡ್ವ ಎಲ್ಡ್ ಎಕರೆ ಭೂಮಿ ಇರ್ಬೇಕೊ ಬ್ಯಾಡ್ವೋ ... ನಾನು ಕೇಳುವುದರಲ್ಲಿ ನ್ಯಾಯ ಐತೋ ಇಲ್ವೋ

- Advertisement -
- Advertisement -

84 ವರ್ಷದ ನಂದಿಪಾಪಯ್ಯ, ಕಳೆದ 65 ವರ್ಷಗಳಿಂದ ಮೊಳಕಾಲ್ಮೂರು ತಾಲ್ಲೂಕು ತುಮಕೂರ್ಲಹಳ್ಳಿ ಗ್ರಾಮದ ಸರ್ವೆ‌ ನಂ. 78 ರಲ್ಲಿ 3 ಎಕರೆ ಭೂಮಿಯಲ್ಲಿ ಸಾಗುವಳಿ ಮಾಡುತ್ತಾ ಬಂದಿದ್ದರೂ ಭೂಮಿ ಅವರದ್ದಾಗಿಲ್ಲ. ಅರಣ್ಯ ಹಕ್ಕು ಕಾಯ್ದೆಯನ್ವಯ ಭೂಮಿ ತನ್ನ ಹೆಸರಿಗೆ ಮಾಡಿಕೊಡಬೇಕೆಂದು ಅರ್ಜಿ‌ಸಲ್ಲಿಸಿದ್ದಾರೆ.
ಈ ವಯೋವೃದ್ದ ಪಾಪಯ್ಯ ಬದುಕಿಗಾಗಿ ಭೂಮಿಯನ್ನು ಪಡೆಯಬೇಕೆಂಬ ಛಲದಿಂದ ಹಲವಾರು ವರ್ಷಗಳಿಂದ ನಡೆಸುತ್ತಿರುವ ಪ್ರತಿಭಟನೆ, ಧರಣಿಯಿಂದ ಹಿಂದೆ ಸರಿದಿಲ್ಲ. “ನಾನು ಬಡ್ವ ಎಲ್ಡ್ ಎಕರೆ ಭೂಮಿ ಇರ್ಬೇಕೊ ಬ್ಯಾಡ್ವೋ … ನಾನು ಕೇಳುವುದರಲ್ಲಿ ನ್ಯಾಯ ಐತೋ ಇಲ್ವೋ” ಎಂಬ ಇವರ ಮಾತಿಗೆ ಯಾವ ಅಧಿಕಾರಿಯೂ ಉತ್ತರ ನೀಡಲು ತಬ್ಬಿಬ್ಬಾಗುತ್ತಾರೆ.

Posted by Kumar Samathala on Tuesday, June 25, 2019

ಆ ಊರಿನಲ್ಲಿ ಅರಣ್ಯ ಇಲಾಖೆಯವರು 38 ಕುಟುಂಬಗಳನ್ನು ಹೊರಹಾಕಿ ಜನರನ್ನು ಬೀದಿಗೆ ತಳ್ಳಿದ್ದಾರೆ. ಊರುಗೋಲ ಆಸರೆಯಲ್ಲೇ ಕಛೇರಿ ಕಛೇರಿಗಳನ್ನು ಅಲೆಯುತ್ತಿದ್ದರೂ ಪರಿಹಾರ ಸಿಕ್ಕಿಲ್ಲ. ಇವರು ಪ್ರತಿಭಟನೆಯು ಆರಂಭದಿಂದಲೂ ಪ್ರತಿದಿನ ತಪ್ಪದೇ ಭಾಗವಹಿಸುವ, ರಾತ್ರಿಯು ಪ್ರತಿಭಟನೆಯ ಜಾಗ ಬಿಟ್ಟು ಕದಲದ ವ್ಯಕ್ತಿ ನಂದಿಪಾಪಯ್ಯ.

ಅದೇ ರೀತಿ ಹೊಳಲ್ಕೆರೆ ತಾಲ್ಲೂಕಿನ ನೇರಲಕಟ್ಟೆ ಗ್ರಾಮದಲ್ಲಿ ಒಂದೇ ಸಮುದಾಯದ 70 ಕುಟುಂಬಗಳು ಭೂಮಿಗಾಗಿ ಹೋರಾಡಿ ಕೇಸು ಹಾಕಿಸಿಕೊಂಡು ಜೈಲಿಗೂ ಹೋಗಿದ್ದಾರೆ. ಇಂತಹ ಸಾವಿರಾರು ಪ್ರಕರಣಗಳು, ಘಟನೆಗಳು ಕಳೆದ ಐದಾರು ದಶಕಗಳಿಂದಲೂ ನಡೆಯುತ್ತಲೇ ಇವೆ. ಕಂದಾಯ, ಅರಣ್ಯ ಭೂಮಿಗಳಲ್ಲಿ ಸಾಗುವಳಿ‌ ಮಾಡುತ್ತಾ ಹಕ್ಕುಪತ್ರಕ್ಕಾಗಿ ಒಂದು ಲಕ್ಷಕ್ಕೂ ಅಧಿಕ ಕುಟುಂಬಗಳು ಕಾಯುತ್ತಿವೆ ಆದರೆ ಅವರಿಗೆ ಸಿಕ್ಕಿರುವುದು ತೀವ್ರ ನಿರಾಶೆ ಮಾತ್ರ ಎನ್ನುತ್ತಾರೆ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ನೇತೃತ್ವ ವಹಿಸಿರುವ ಕುಮಾರ್ ಸಮತಳ.

ಚಿತ್ರದುರ್ಗದ ಜಿಲ್ಲಾಡಳಿತ ಜನರ ಸಮಸ್ಯೆಗಳನ್ನು ಬಗೆ ಹರಿಸದೆ, ನಿಷ್ಕಾಳಜಿ, ಬೇಜವಾಬ್ದಾರಿಯಿಂದ ನಡೆದುಕೊಳ್ಳುತ್ತಿದೆ. ಕಳೆದ 10 ದಿನಗಳಿಂದ ಜಿಲ್ಲಾಧಿಕಾರಿ ಕಛೇರಿ ಮುಂಭಾಗ ಹಗಲು ರಾತ್ರಿ ಪ್ರತಿಭಟನೆ ನಡೆಸುತ್ತಿದ್ದರೂ, ನಿಮ್ಮ ಸಮಸ್ಯೆ ಏನೆಂದು ಕೇಳುವ ಕನಿಷ್ಠ ವ್ಯವಧಾನವೂ ಅವರಿಗಿಲ್ಲ. ಜನಪ್ರತಿನಿಧಿಗಳಿಗೂ ಇಲ್ಲ. ಜನರು ಚುನಾವಣೆಯ ಸಂದರ್ಭದಲ್ಲಿ ಮಾತ್ರ ಕಣ್ಣಿಗೆ ಕಾಣುತ್ತಾರೆ ಬಿಟ್ಟರೆ ಬಾಕಿ‌ ಸಮಯದಲ್ಲಿ ಕಾಣುವುದಿಲ್ಲ. ಅಂದರೆ ಅಧಿಕಾರಿಗಳು, ಕಾನೂನು ಜಾರಿ ಮಾಡಬೇಕಿರುವವರು, ಇದೇ ಜನರು ಬೆಳೆದ ಅನ್ನ ತಿನ್ನುತ್ತಿಲ್ಲವೇ? ಎಂದು ಕುಮಾರ್ ಸಮತಳ ಪ್ರಶ್ನಿಸಿದ್ದಾರೆ.

ಭೂಮಿ ವಸತಿಗಾಗಿ ಬಡವರು ನಡೆಸುತ್ತಿರುವ ಹೋರಾಟಕ್ಕೆ ಜಿಲ್ಲೆಯ ಜನತೆ, ನಾಡಿನ ಪ್ರಜ್ಞಾವಂತರು, ಹೋರಾಟಗಾರರು ಬಡ ಜನರ ಕೂಗಿಗೆ ದ್ವನಿಗೂಡಿಸಬೇಕೆಂದು ಅವರು ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಈ ಮೂಲಕ ಮನವಿ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...