Homeಕರೋನಾ ತಲ್ಲಣವ್ಯಾಕ್ಸಿನೇಷನ್‌ ಕೇಂದ್ರಗಳಲ್ಲಿ ಜನ ಲಸಿಕೆಯಿಲ್ಲದೆ ಹಿಂತಿರುಗುತ್ತಿದ್ದಾರೆ : ಮಹಾರಾಷ್ಟ್ರ ಆರೋಗ್ಯ ಸಚಿವ

ವ್ಯಾಕ್ಸಿನೇಷನ್‌ ಕೇಂದ್ರಗಳಲ್ಲಿ ಜನ ಲಸಿಕೆಯಿಲ್ಲದೆ ಹಿಂತಿರುಗುತ್ತಿದ್ದಾರೆ : ಮಹಾರಾಷ್ಟ್ರ ಆರೋಗ್ಯ ಸಚಿವ

- Advertisement -
- Advertisement -

ದೇಶದಲ್ಲೇ ಅತ್ಯಂತ ಹೆಚ್ಚು ಕೊರೊನಾ ಸೋಂಕಿರುವ ರಾಜ್ಯವಾದ ಮಹಾರಾಷ್ಟ್ರದ ಹಲವಾರು ವ್ಯಾಕ್ಸಿನೇಷನ್ ಕೇಂದ್ರಗಳು ಲಸಿಕೆಗಳ ಕೊರತೆಯನ್ನು ಅನುಭವಿಸುತ್ತಿವೆ ಎಂದು ಮಹಾರಾಷ್ಟ್ರ ಆರೋಗ್ಯ ಸಚಿವ ರಾಜೇಶ್ ಟೊಪೆ ಬುಧವಾರ ಹೇಳಿದ್ದಾರೆ. ಲಸಿಕೆಯ ಕೊರತೆಯಿಂದಾಗಿ ಜನರನ್ನು ಹಿಂತಿರುಗುವಂತೆ ಹೇಳಲಾಗುತ್ತಿದೆ ಎಂದು ಹೇಳಿದ್ದಾರೆ.

“ಡೋಸೇಜ್ ಕೊರತೆಯಿಂದಾಗಿ ಜನರನ್ನು ವಾಪಸ್ ಕಳುಹಿಸಬೇಕಾಗಿದೆ. ಕೇಂದ್ರವು ಲಸಿಕೆ ಪ್ರಮಾಣವನ್ನು ಪೂರೈಸುವ ವೇಗವನ್ನು ಹೆಚ್ಚಿಸಬೇಕಾಗಿದೆ” ಎಂದು ಅವರು ಕೇಂದ್ರ ಸರ್ಕಾರವನ್ನು ಕೇಳಿಕೊಂಡಿದ್ದಾರೆ.

ಕೊರೊನಾ ಸೋಂಕಿಗೆ ಯುವಜನರು ಹೆಚ್ಚು ಪೀಡಿತರಾಗಿದ್ದಾರೆ ಎಂದು ಹೇಳಿರುವ ಅವರು, “20 ರಿಂದ 40 ವರ್ಷದೊಳಗಿನ ಜನರಿಗೆ ಆದ್ಯತೆಯ ಮೇರೆಗೆ ಲಸಿಕೆ ಹಾಕಬೇಕು ಎಂದು ನಾವು ಕೇಂದ್ರದಿಂದ ಒತ್ತಾಯಿಸಿದ್ದೇವೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಉದ್ಯೋಗ ಖಾತ್ರಿ ಯೋಜನೆ: ಜಿಗ್ನೇಶ್ ಮೇವಾನಿ ಪ್ರತಿನಿಧಿಸುವ ವಡಗಾವ್ ತಾಲೂಕಿಗೆ ಮೊದಲ ಸ್ಥಾನ

ಕಡಿಮೆ ಅವಧಿಯಲ್ಲಿ ಹೆಚ್ಚು ಜನರ ಮೇಲೆ ಪರಿಣಾಮ ಬೀರುವ ರೂಪಾಂತರಿ ಕೊರೊನಾ ವೈರಸ್‌ ಹರಡುತ್ತಿರುವ ಬಗ್ಗೆ ಆರೋಗ್ಯ ಇಲಾಖೆಯು ಶಂಕಿಸಿದೆ. ಇದನ್ನು ಕಂಡುಹಿಡಿಯಲು ಹಲವು ಮಾದರಿಗಳನ್ನು ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರಕ್ಕೆ ಕಳುಹಿಸಲಾಗಿದೆ ಎಂದು ಹೇಳಿದ್ದಾರೆ.

ಈ ಹಿಂದೆ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಪ್ರದೀಪ್ ವ್ಯಾಸ್ ಕೂಡ ಮಹಾರಾಷ್ಟ್ರದ ಅನೇಕ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ದಿನಗಳಲ್ಲಿ ಲಸಿಕೆ ದಾಸ್ತಾನು ಮುಗಿಯುತ್ತವೆ ಎಂದು ಹೇಳಿದ್ದರು. “ಕೇಂದ್ರವು ಪರಿಸ್ಥಿತಿಯ ಬಗ್ಗೆ ತಿಳಿದಿದೆ ಮತ್ತು ನಾವು ಅದನ್ನು ಲಿಖಿತವಾಗಿ ತಿಳಿಸಿದ್ದೇವೆ” ಎಂದು ಹೇಳಿದ್ದಾರೆ.

ಕೊರೊನಾ ಲಸಿಕೆಯ ಪ್ರಕ್ರಿಯೆ ಪ್ರಾರಂಭವಾದಾಗಿನಿಂದ 80 ಲಕ್ಷ ಡೋಸ್‌‌ ಲಸಿಕೆಗಳನ್ನು ನೀಡಿದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಮಹಾರಾಷ್ಟ್ರ ಪಾತ್ರವಾಗಿದೆ.


 

ಇದನ್ನೂ ಓದಿ: ಅಸ್ಸಾಂನಲ್ಲಿ ಕೊರೊನಾ ಇಲ್ಲ, ಮಾಸ್ಕ್ ಬೇಡ ಹೇಳಿಕೆ ನೀಡಿ ಟ್ರೋಲ್ ಆದ ಬಿಜೆಪಿ ಸಚಿವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...