Homeಮುಖಪುಟದೆಹಲಿ ವಾಯುಮಾಲಿನ್ಯ: 5 ಸ್ಟಾರ್‌ ಹೋಟೆಲ್‌ನಲ್ಲಿ ಕುಳಿತ‍ ಜನ ರೈತರನ್ನು ದೂಷಿಸುತ್ತಿದ್ದಾರೆ- ಸುಪ್ರೀಂ ತರಾಟೆ

ದೆಹಲಿ ವಾಯುಮಾಲಿನ್ಯ: 5 ಸ್ಟಾರ್‌ ಹೋಟೆಲ್‌ನಲ್ಲಿ ಕುಳಿತ‍ ಜನ ರೈತರನ್ನು ದೂಷಿಸುತ್ತಿದ್ದಾರೆ- ಸುಪ್ರೀಂ ತರಾಟೆ

- Advertisement -
- Advertisement -

ದೆಹಲಿ ಮತ್ತು ನೆರೆಹೊರೆಯ ನಗರಗಳಲ್ಲಿ ಹೆಚ್ಚುತ್ತಿರುವ ವಾಯುಮಾಲಿನ್ಯಕ್ಕೆ ರೈತರನ್ನು ಶಿಕ್ಷಿಸಲಾಗದು ಎಂದು ಸುಪ್ರೀಂಕೋರ್ಟ್ ಹೇಳಿದೆ. ಕೃಷಿ ತ್ಯಾಜ್ಯ ಸುಡುವುದರ ವಿರುದ್ಧ ಸರ್ಕಾರಗಳು ರೈತರ ಮನವೊಲಿಸಬೇಕು ಎಂದು ಸರ್ಕಾರಕ್ಕೆ ಸೂಚನೆ ನೀಡಿದೆ.

“ನಾವು ರೈತರಿಗೆ ದಂಡ ವಿಧಿಸಲು ಬಯಸುವುದಿಲ್ಲ. ನಾವು ಈಗಾಗಲೇ ಕೇಂದ್ರ ಸರ್ಕಾರಕ್ಕೆ ಕನಿಷ್ಠ ಒಂದು ವಾರದವರೆಗೆ ಕೃಷಿ ತ್ಯಾಜ್ಯ ಸುಡದಂತೆ ರೈತರಲ್ಲಿ ಮನವಿ ಮಾಡಿಕೊಳ್ಳುವಂತೆ ಹೇಳಿದ್ದೇವೆ” ಎಂದು ಮುಖ್ಯ ನ್ಯಾಯಮೂರ್ತಿ ಎನ್‌.ವಿ ರಮಣ ಹೇಳಿದ್ದಾರೆ.

ತ್ಯಾಜ್ಯ ಸುಡುವುದಕ್ಕೆ ಪರ್ಯಾಯಗಳನ್ನು ಹುಡುಕಲು ರೈತರಿಗೆ ಪ್ರೋತ್ಸಾಹ ಬೇಕು ಎಂದು ಈ ಹಿಂದೆಯೇ ಒತ್ತಾಯಿಸಿದ್ದ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತೊಮ್ಮೆ ಅದೇ ಮಾತನ್ನು ಒತ್ತಿ ಹೇಳಿದ್ದಾರೆ.

“ಅಫಿಡವಿಟ್‌ಗಳಲ್ಲಿನ ಅಂಕಿ-ಅಂಶಗಳನ್ನು ಲೆಕ್ಕಿಸದೆ, ನಾವು ರೈತರ ಸಂಕಷ್ಟವನ್ನು ಪರಿಗಣಿಸಬೇಕಾಗಿದೆ. ರೈತರು ಏಕೆ ಕೃಷಿ ತ್ಯಾಜ್ಯ (stubble) ಸುಡುತ್ತಾರೆ ಎಂಬ ಬಗ್ಗೆ ತಿಳಿಯಬೇಕು. ಯಾರೂ ಅದರ ಬಗ್ಗೆ ಕಾಳಜಿ ವಹಿಸುವುದಿಲ್ಲ. ದೆಹಲಿಯ ಪಂಚತಾರಾ ಹೋಟೆಲ್‌ಗಳಲ್ಲಿ ಮಲಗುವ ಜನರು ರೈತರನ್ನು ದೂಷಿಸುತ್ತಾರೆ. ಅಲ್ಲಿನ ಸಣ್ಣ ಸಣ್ಣ ಜಮೀನುದಾರರನ್ನು ನೋಡಿ… ನೀವೆಲ್ಲರೂ ಮಾತನಾಡುವ ಯಂತ್ರಗಳನ್ನು ಅವರು ಖರೀದಿಸಬಹುದೇ..?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಟಿವಿ ಡಿಬೇಟ್‌‌ಗಳು ಎಲ್ಲಕ್ಕಿಂತ ಹೆಚ್ಚು ಮಾಲಿನ್ಯ ಉಂಟು ಮಾಡುತ್ತವೆ: ಸುಪ್ರೀಂಕೋರ್ಟ್

ವಾಯುಮಾಲಿನ್ಯಕ್ಕೆ ಕೃಷಿ ತ್ಯಾಜ್ಯದ ಸುಡುವಿಕೆ ಹೆಚ್ಚು ಕಾರಣ ಎನ್ನುವ ಆರೋಪಕ್ಕೆ ಮುಖ್ಯ ನ್ಯಾಯಾಧೀಶರು ಸಂಬಂಧಪಟ್ಟ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
“ಟಿವಿಯಲ್ಲಿನ ಚರ್ಚೆಗಳು ಎಲ್ಲಕ್ಕಿಂತ ಹೆಚ್ಚು ಮಾಲಿನ್ಯವನ್ನು ಸೃಷ್ಟಿಸುತ್ತಿವೆ. ಏನಾಗುತ್ತಿದೆ ಮತ್ತು ಸಮಸ್ಯೆ ಏನೆಂದು ಅವರು ಅರ್ಥ ಮಾಡಿಕೊಳ್ಳಲ್ಲ. ಪ್ರತಿಯೊಬ್ಬರೂ ತಮ್ಮದೇ ಆದ ಕಾರ್ಯಸೂಚಿಯನ್ನು ಹೊಂದಿದ್ದಾರೆ. ನಾವು ಇಲ್ಲಿ ಪರಿಹಾರವನ್ನು ರೂಪಿಸಲು ಪ್ರಯತ್ನಿಸುತ್ತಿದ್ದೇವೆ” ಎಂದು ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ನೇತೃತ್ವದ ಪೀಠ ಹೇಳಿದೆ.
ರಾಷ್ಟ್ರ ರಾಜಧಾನಿಯ ತೀವ್ರ ಮಾಲಿನ್ಯದಲ್ಲಿ ಕೇವಲ 10 ಪ್ರತಿಶತದಷ್ಟು ಪಾಲನ್ನು ಕೃಷಿ ತ್ಯಾಜ್ಯ ನೀಡುತ್ತಿದೆ ಎಂದು ಸೋಮವಾರ ಕೇಂದ್ರ ಸರ್ಕಾರವು ನ್ಯಾಯಾಲಯಕ್ಕೆ ತಿಳಿಸಿತ್ತು.

ಇದನ್ನೂ ಓದಿ: ‘ಬಾಡು ಸಪ್ತಾಹ’: ಸಾಮಾಜಿಕ ಜಾಲತಾಣದಲ್ಲಿ #ಬಾಡೇ_ನಮ್_ಗಾಡು ಅಭಿಯಾನ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಸಿದ್ದರಾಮಯ್ಯ ಸರ್ಕಾರ ಮುಸ್ಲಿಮರನ್ನು ಒಬಿಸಿ ಪಟ್ಟಿಗೆ ಸೇರಿಸಿದ್ದು ನಿಜಾನಾ?

0
ಕರ್ನಾಟಕದಲ್ಲಿ ಮುಸ್ಲಿಮರನ್ನು ಹಿಂದುಳಿದ ವರ್ಗಕ್ಕೆ ಸೇರಿಸುವ ಮೂಲಕ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಿಂದುಳಿದ ವರ್ಗಗಳ 36 ಜಾತಿಗಳಿಗೆ ಅನ್ಯಾಯ ಮಾಡಿದೆ ಎಂದು ಬಿಜೆಪಿ ಆರೋಪಿಸಿದೆ. ಸಿದ್ದರಾಮಯ್ಯ ಸರ್ಕಾರ ಹಿಂದುಳಿದ ವರ್ಗಗಳಿಗೆ...